× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೧೧ ಟಿಪ್ಪಣಿಗಳನ್ನು ಉಳಿಸಿ ೧ [1]ಭೂಜನರೆಲ್ಲರಿಗೂ ಇದ್ದುದು ಒಂದೇ ಭಾಷೆ, ಒಂದೇ ನುಡಿ.೨ [2]ಅವರು ಪೂರ್ವದಿಕ್ಕಿಗೆ ಪ್ರಯಾಣಮಾಡುತ್ತಾ ಇದ್ದಾಗ ಬಾಬಿಲೋನಿಯ ಕಾಡಿನ ಬಯಲು ಸೀಮೆ ಸಿಕ್ಕಿತು. ಅವರು ಅಲ್ಲೇ ನೆಲೆಸಲು ತೊಡಗಿದರು.೩ [3]“ಬನ್ನಿ, ಒಳ್ಳೊಳ್ಳೆ ಸುಟ್ಟ ಇಟ್ಟಿಗೆಗಳನ್ನು ಮಾಡೋಣ;೪ [4]ಒಂದು ಪಟ್ಟಣವನ್ನು ಕಟ್ಟೋಣ; ಆಕಾಶವನ್ನು ಮುಟ್ಟುವಂಥ ಗೋಪುರವನ್ನು ನಿರ್ಮಿಸಿ ಪ್ರಖ್ಯಾತಿ ಪಡೆಯೋಣ. ಹೀಗೆ ಮಾಡಿದರೆ ನಾವು ಜಗದಲ್ಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಿರುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಗಾರೆಗೆ (ಸುಣ್ಣಕ್ಕೆ) ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.೫ [5]ನರಮಾನವರು ಕಟ್ಟುತ್ತಿದ್ದ ಆ ಪಟ್ಟಣವನ್ನು ಹಾಗೂ ಗೋಪುರವನ್ನು ನೋಡಲು ಸರ್ವೇಶ್ವರ ಸ್ವಾಮಿ ಇಳಿದು ಬಂದರು.೬ [6]ನೋಡಿದ ಮೇಲೆ, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಇದು ಇವರು ಕೈಗೊಂಡಿರುವ ಕಾರ್ಯದ ಪ್ರಾರಂಭ ಮಾತ್ರ. ಮುಂದಕ್ಕೆ ಇವರು ಏನು ಬೇಕಾದರೂ ಮಾಡಿಯಾರು!೭ [7]ನಾವು ಹೋಗಿ ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿಗೊಳಿಸೋಣ,” ಎಂದರು.೮ [8]ಅಂತೆಯೇ ಮಾಡಿ ಅವರನ್ನು ಅಲ್ಲಿಂದ ಜಗದೆಲ್ಲೆಡೆಗೆ ಚದರಿಸಿಬಿಟ್ಟರು. ಜನರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು೯ [9]ಹೀಗೆ ಸರ್ವೇಶ್ವರ ಇಡೀ ಜಗತ್ತಿನ ಭಾಷೆಯನ್ನು ಗಲಿಬಿಲಿಗೊಳಿಸಿ ಅಲ್ಲಿಂದ ಜನರನ್ನು ಜಗದೆಲ್ಲೆಡೆಗೆ ಚದರಿಸಿದ ಕಾರಣ ಆ ಪಟ್ಟಣಕ್ಕೆ ‘ಬಾಬೆಲೋನ್’ ಎಂದು ಹೆಸರಾಯಿತು.೧೦ [10]ಶೇಮನ ವಂಶವೃಕ್ಷ; ಜಲಪ್ರಳಯ ಕಳೆದು ಎರಡು ವರ್ಷಗಳಾದ ಮೇಲೆ ಶೇಮನಿಗೆ ಅರ್ಪಕ್ಷದನು ಹುಟ್ಟಿದನು. ಆಗ ಶೇಮನಿಗೆ 100 ವರ್ಷ ವಯಸ್ಸು.೧೧ [11]ಅನಂತರ ಶೇಮನು ಗಂಡುಹೆಣ್ಣು ಮಕ್ಕಳನ್ನು ಪಡೆದು 500 ವರ್ಷ ಬದುಕಿದ್ದನು.೧೨ [12]ಮೂವತ್ತೈದು ವರ್ಷದವನಾಗಿದ್ದ ಅರ್ಪಕ್ಷದನಿಗೆ ಶೆಲಹನು ಹುಟ್ಟಿದನು.೧೩ [13]ಅನಂತರ ಅರ್ಪಕ್ಷದನು ಗಂಡುಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದ್ದನು.೧೪ [14]ಮೂವತ್ತು ವರ್ಷದವನಾಗಿದ್ದ ಶೆಲಹನಿಗೆ ಎಬರನು ಹುಟ್ಟಿದನು.೧೫ [15]ಅನಂತರ ಗಂಡುಹೆಣ್ಣು ಮಕ್ಕಳನ್ನು ಪಡೆದು 403 ವರ್ಷ ಬದುಕಿದ್ದನು.೧೬ [16]ಮೂವತ್ತನಾಲ್ಕು ವರ್ಷದವನಾಗಿದ್ದ ಎಬರನಿಗೆ ಪೆಲೆಗನು ಹುಟ್ಟಿದನು.೧೭ [17]ಅನಂತರ ಗಂಡುಹೆಣ್ಣು ಮಕ್ಕಳನ್ನು ಪಡೆದು 430 ವರ್ಷ ಬದುಕಿದ್ದನು.೧೮ [18]ಮೂವತ್ತು ವರ್ಷದವನಾಗಿದ್ದ ಪೆಲೆಗನಿಗೆ ರೆಗೂವನು ಹುಟ್ಟಿದನು.೧೯ [19]ಅನಂತರ ಪೆಲೆಗನು ಗಂಡುಹೆಣ್ಣು ಮಕ್ಕಳನ್ನು ಪಡೆದು 290 ವರ್ಷ ಬದುಕಿದ್ದನು.೨೦ [20]ಮೂವತ್ತೆರಡು ವರ್ಷದವನಾಗಿದ್ದ ರೆಗೂವನಿಗೆ ಸೆರೂಗನು ಹುಟ್ಟಿದನು.೨೧ [21]ಅನಂತರ ರೆಗೂವನು ಗಂಡುಹೆಣ್ಣು ಮಕ್ಕಳನ್ನು ಪಡೆದು 207 ವರ್ಷ ಬದುಕಿದ್ದನು.೨೨ [22]ಮೂವತ್ತು ವರ್ಷದವನಾಗಿದ್ದ ಸೆರೂಗನಿಗೆ ನಾಹೋರನು ಹುಟ್ಟಿದನು.೨೩ [23]ಅನಂತರ ಸೆರೂಗನು ಗಂಡುಹೆಣ್ಣು ಮಕ್ಕಳನ್ನು ಪಡೆದು 200 ವರ್ಷ ಬದುಕಿದ್ದನು.೨೪ [24]ಇಪ್ಪತ್ತೊಂಭತ್ತು ವರ್ಷದವನಾಗಿದ್ದ ನಾಹೋರನಿಗೆ ತೆರಹನು ಹುಟ್ಟಿದನು.೨೫ [25]ಅನಂತರ ನಾಹೋರನು ಗಂಡುಹೆಣ್ಣು ಮಕ್ಕಳನ್ನು ಪಡೆದು 190 ವರ್ಷ ಬದುಕಿದ್ದನು.೨೬ [26]ಎಪ್ಪತ್ತು ವರ್ಷದವನಾದ ತೆರಹನಿಗೆ ಅಬ್ರಾಮ, ನಾಹೋರ ಮತ್ತು ಹಾರಾನ ಎಂಬ ಮಕ್ಕಳು ಹುಟ್ಟಿದರು.೨೭ [27]ತೆರಹನ ವಂಶವೃಕ್ಷ: ತೆರಹನಿಗೆ ಅಬ್ರಾಮ, ನಾಹೋರ, ಹಾರಾನ ಇವರು ಹುಟ್ಟಿದರು. ಹಾರಾನನಿಗೆ ಲೋಟನು ಹುಟ್ಟಿದನು.೨೮ [28]ಹಾರಾನನು, ತನ್ನ ಜನ್ಮಭೂಮಿಯಲ್ಲಿ, ಬಾಬಿಲೋನಿನ ಊರ್ ಎಂಬ ಪಟ್ಟಣದಲ್ಲಿ, ತನ್ನ ತಂದೆಯಾದ ತೆರಹನು ಜೀವದಿಂದಿರುವಾಗಲೇ ಸತ್ತನು.೨೯ [29]ಅಬ್ರಾಮನು ಮತ್ತು ನಾಹೋರನು ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆ ಹಾರಾನನ ಮಗಳು; ಹಾರಾನನು ಮಿಲ್ಕಳಿಗು ಹಾಗೂ ಇಸ್ಕಳಿಗು ತಂದೆ.೩೦ [30]ಸಾರಯಳು ಬಂಜೆ, ಆಕೆಗೆ ಮಕ್ಕಳಿರಲಿಲ್ಲ.೩೧ [31]ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗು ತನಗೆ ಸೊಸಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಪಟ್ಟಣವನ್ನು ಬಿಟ್ಟು ಕಾನಾನ್ ನಾಡಿಗೆ ತೆರಳಿದನು. ಅವರು ಹಾರಾನ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ವಾಸಮಾಡಿಕೊಂಡರು.೩೨ [32]ತೆರಹನು ಅಲ್ಲಿ ಮೃತನಾದನು. ಆಗ ಅವನಿಗೆ ಇನ್ನೂರ ಐದು ವರ್ಷವಾಗಿತ್ತು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಆದಿಕಾಂಡ ೧೧ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/011.mp3 50 11