× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೩೮ ಟಿಪ್ಪಣಿಗಳನ್ನು ಉಳಿಸಿ ೧ [1]ಇತ್ತ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಅದುಲ್ಲಾಮ್ ಊರಿನವನಾದ ಹೀರಾ ಎಂಬವನ ಬಳಿ ವಾಸಮಾಡಲು ಹೋದನು.೨ [2]ಅಲ್ಲಿ ಕಾನಾನ್ಯಳಾದ ಒಬ್ಬ ಮಹಿಳೆಯನ್ನು ಕಂಡು ಮದುವೆಯಾದನು. ಅವಳ ತಂದೆಯ ಹೆಸರು ಶೂಗ.೩ [3]ಆಕೆ ಯೆಹೂದನಿಗೆ ಒಂದು ಗಂಡು ಮಗುವನ್ನು ಹೆತ್ತಳು. ಅದಕ್ಕೆ ‘ಏರ’ ಎಂದು ಹೆಸರಿಡಲಾಯಿತು.೪ [4]ಆಕೆ ಗರ್ಭಧರಿಸಿ ಎರಡನೆಯ ಗಂಡು ಮಗುವನ್ನು ಹೆರಲು ಅದಕ್ಕೆ ‘ಓನಾನ’ ಎಂದು ಹೆಸರಿಡಲಾಯಿತು.೫ [5]ಮತ್ತೊಮ್ಮೆ ಆಕೆ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದಕ್ಕೆ ‘ಶೇಲಹ’ ಎಂದು ಹೆಸರಿಟ್ಟಳು. ಆಕೆ ಈ ಮಗುವನ್ನು ಹೆರುವಾಗ ಯೆಹೂದನು ಕೆಜೀಬ್ ಊರಿನಲ್ಲಿದ್ದನು.೬ [6]ಯೆಹೂದನು ತನ್ನ ಜೇಷ್ಠಪುತ್ರ ಏರನಿಗೆ ‘ತಾಮಾರ್’ ಎಂಬ ಹೆಣ್ಣನ್ನು ತಂದು ಮದುವೆಮಾಡಿದನು.೭ [7]ಆದರೆ ಯೆಹೂದನ ಈ ಹಿರಿಯ ಮಗ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟವನಾಗಿದ್ದನು. ಆದ್ದರಿಂದ ಸರ್ವೇಶ್ವರ ಅವನನ್ನು ಸಾವಿಗೀಡುಮಾಡಿದರು.೮ [8]ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅತ್ತಿಗೆಯನ್ನು ಮದುವೆ ಮಾಡಿಕೊಂಡು ಮೈದುನ ಧರ್ಮಕ್ಕನುಸಾರ ನಿನ್ನ ಅಣ್ಣನಿಗೆ ಸಂತತಿಯನ್ನು ಹುಟ್ಟಿಸು,” ಎಂದನು.೯ [9]ಆದರೆ ಓನಾನನು, ಹೀಗೆ ಆಗುವ ಸಂತಾನ ತನ್ನದಾಗುವುದಿಲ್ಲವೆಂದು ತಿಳಿದುಕೊಂಡನು. ಅಣ್ಣನಿಗೆ ಸಂತತಿ ಹುಟ್ಟಿಸಲು ಅವನು ಒಪ್ಪಲಿಲ್ಲ. ತನ್ನ ಅತ್ತಿಗೆಯಲ್ಲಿ ಸಂಭೋಗ ಮಾಡುವಾಗಲೆ ತನ್ನ ವೀರ್ಯವನ್ನು ಹಾಸಿಗೆಪಾಲು ಮಾಡುತ್ತಿದ್ದನು.೧೦ [10]ಈ ನಡತೆ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟದಾಗಿತ್ತು. ಆದ್ದರಿಂದ ಸರ್ವೇಶ್ವರ ಅವನನ್ನೂ ಸಾವಿಗೀಡುಮಾಡಿದರು.೧೧ [11]ಅನಂತರ ಯೆಹೂದನು, ಬಹುಶಃ ಶೇಲಹನು ಕೂಡ ತನ್ನ ಅಣ್ಣಂದಿರಂತೆ ಸತ್ತಾನೆಂದು ಆಲೋಚಿಸಿ, ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿ ತೌರುಮನೆಯಲ್ಲಿರು,” ಎಂದು ನೆವಹೇಳಿದನು. ಅಂತೆಯೇ ಅವಳು ತೌರುಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.೧೨ [12]ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಹೋದಳು. ದುಃಖಶಮನವಾದ ಮೇಲೆ ಯೆಹೂದನು, ತನ್ನ ಕುರಿಗಳಿಗೆ ಉಣ್ಣೇ ಕತ್ತರಿಸುವವರಿದ್ದ ತಿಮ್ನಾ ಊರಿಗೆ ಹೋದನು. ಅದುಲ್ಲಾಮ್ಯದ ತನ್ನ ಗೆಳೆಯ ಹೀರಾ ಅವನ ಜೊತೆಯಲ್ಲಿ ಹೋದನು.೧೩ [13]ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವುದಕ್ಕಾಗಿ ತಿಮ್ನಾ ಊರಿಗೆ ಹೊರಟಿದ್ದಾರೆಂಬ ಸಮಾಚಾರ ತಾಮಾರಳಿಗೆ ಮುಟ್ಟಿತು.೧೪ [14]ಆಗ ಆಕೆ, ‘ಶೇಲಹನು ಪ್ರಾಯಸ್ಥನಾಗಿದ್ದರೂ ನನ್ನನ್ನು ಅವನಿಗೆ ಮದುವೆ ಮಾಡಿಕೊಡಲಿಲ್ಲವಲ್ಲಾ’ ಎಂದುಕೊಂಡು ತನ್ನ ವಿಧವೆ ವಸ್ತ್ರಗಳನ್ನು ತೆಗೆದಿಟ್ಟಳು. ಮುಸುಕನ್ನು ಹಾಕಿಕೊಂಡು ತನ್ನನ್ನೇ ಮರೆಸಿಕೊಂಡಳು. ತಿಮ್ನಾ ಊರಿನ ದಾರಿಯಲ್ಲಿ ಇರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲೆ ಕುಳಿತುಕೊಂಡಳು.೧೫ [15]ಯೆಹೂದನು ಆಕೆಯನ್ನು ನೋಡಿದಾಗ ಆಕೆಯ ಮುಖದ ಮೇಲೆ ಮುಸುಕು ಇತ್ತು; ಸೊಸೆ ಎಂದು ತಿಳಿಯದೆ ಹೋಯಿತು.೧೬ [16]ಆಕೆ ವೇಶ್ಯೆ ಎಂದೇ ಭಾವಿಸಿ, ದಾರಿಯಿಂದ ಓರೆಯಾಗಿ, ಆಕೆಯ ಬಳಿಗೆ ಹೋಗಿ, “ಸಂಭೋಗಕ್ಕೆ ಬರುತ್ತೀಯಾ?\ ಎಂದು ಕರೆದನು. “ಬರಬೇಕಾದರೆ ಏನು ಕೊಡುತ್ತೀಯಾ?\ ಎಂದಳು ಆಕೆ.೧೭ [17]“ಹಿಂಡಿನಿಂದ ಒಂದು ಹೋತಮರಿಯನ್ನು ಕಳಿಸುತ್ತೇನೆ,” ಎಂದ ಆತ. ಆಗ ಆಕೆ, \ಅದನ್ನು ಕಳಿಸುವ ತನಕ ನನ್ನಲ್ಲಿ ಏನಾದರು ಒತ್ತೆಯಿಡಬೇಕು,” ಎಂದಳು.೧೮ [18]“ಏನು ಒತ್ತೆಯಿಡಬೇಕು?” ಎಂದು ಅವನು ಕೇಳಲು ಆಕೆ, “ನಿನ್ನ ಮುದ್ರೆ ಉಂಗುರ, ಅದರ ದಾರ ಮತ್ತು ನಿನ್ನ ಕೈಕೋಲು, ಈ ಮೂರನ್ನೂ ಇಡು,” ಎಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಭೋಗಿಸಿದನು. ಆಕೆ ಅವನಿಗೆ ಗರ್ಭವತಿ ಆದಳು.೧೯ [19]ಮನೆಗೆ ಬಂದ ಮೇಲೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ವಿಧವೆಯ ವಸ್ತ್ರಗಳನ್ನು ಮತ್ತೆ ಉಟ್ಟುಕೊಂಡಳು.೨೦ [20]ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನಿಂದ ಬಿಡಿಸಿಕೊಳ್ಳುವ ಸಲುವಾಗಿ ತನ್ನ ಗೆಳೆಯ ಆ ಅದುಲ್ಲಾಮ್ಯನ ಸಂಗಡ ಹೋತಮರಿಯನ್ನು ಕಳಿಸಿದನು. ಆಕೆ ಅವನಿಗೆ ಸಿಕ್ಕಲಿಲ್ಲ.೨೧ [21]ಅವನು ಅವಳ ಊರಿನವರನ್ನು, “ಏನಯಿಮ್ ಬಳಿ ದಾರಿಪಕ್ಕದಲ್ಲಿ ಕುಳಿತಿದ್ದ ವೇಶ್ಯೆ ಎಲ್ಲಿ?” ಎಂದು ವಿಚಾರಿಸಿದನು. ಅವರು, “ಇಲ್ಲಿ ಯಾವ ವೇಶ್ಯೆಯೂ ಇಲ್ಲ,” ಎಂದು ಉತ್ತರಕೊಟ್ಟರು.೨೨ [22]ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, “ನಾನು ಅವಳನ್ನು ಕಾಣಲಿಲ್ಲ; ವಿಚಾರಿಸಿದಾಗ ಆ ಊರಿನವರು ಇಲ್ಲಿ ಯಾವ ವೇಶ್ಯೆಯೂ ಇಲ್ಲವೆಂದರು,” ಎಂದು ವರದಿಮಾಡಿದನು.೨೩ [23]ಅದಕ್ಕೆ ಯೆಹೂದನು, “ಇನ್ನು ನಾವು ಪರಿಹಾಸ್ಯಕ್ಕೆ ಗುರಿಯಾದೇವು; ನಾನಿಟ್ಟ ಒತ್ತೆಯನ್ನು ಅವಳೇ ಇಟ್ಟುಕೊಳ್ಳಲಿ; ನಾನಂತೂ ಹೋತಮರಿಯನ್ನು ಕಳಿಸಿದ್ದಾಯಿತು; ನಿನ್ನಿಂದಲು ಅವಳನ್ನು ಕಂಡುಹಿಡಿಯಲಾಗಲಿಲ್ಲ,” ಎಂದು ಸುಮ್ಮನಾದನು.೨೪ [24]ಸುಮಾರು ಮೂರು ತಿಂಗಳಾದ ಬಳಿಕ, ಯೆಹೂದನಿಗೆ ತನ್ನ ಸೊಸೆ ತಾಮಾರಳು ವ್ಯಭಿಚಾರದಿಂದ ಗರ್ಭವತಿಯಾಗಿದ್ದಾಳೆಂಬ ಸಮಾಚಾರ ಬಂದಿತು. ಅವನು, “ಅವಳನ್ನು ಎಳೆದು ತನ್ನಿ; ಸುಟ್ಟುಹಾಕಬೇಕು,” ಎಂದನು.೨೫ [25]ಅಂತೆಯೇ ಎಳೆದು ತರುವಾಗ ಆಕೆ ತನ್ನ ಮಾವನಿಗೆ ಒತ್ತೆಯ ವಸ್ತುಗಳನ್ನು ಕಳುಹಿಸುತ್ತಾ, “ಇವು ಯಾವನವೊ ಅವನಿಂದಲೇ ನಾನು ಗರ್ಭಿಣಿಯಾದುದು; ಮುದ್ರೆಯುಂಗುರ, ಅದರ ದಾರ ಮತ್ತು ಕೈಗೋಲು ಇವುಗಳನ್ನು ಗುರುತಿಸಿ ತಿಳಿದುಕೊಳ್ಳಬಹುದು,” ಎಂದು ಹೇಳಿಕಳಿಸಿದಳು.೨೬ [26]ಯೆಹೂದನು ಅವುಗಳ ಗುರುತುಹಚ್ಚಿದನು. “ನಾನು ನನ್ನ ಮಗ ಶೇಲಹನನ್ನು ಆಕೆಗೆ ಮದುವೆ ಮಾಡದೆಹೋದೆ. ಈ ಕಾರಣ ನನಗಿಂತ ಆಕೆಯೇ ನೀತಿವಂತಳು,” ಎಂದುಕೊಂಡನು. ಇದಾದ ಬಳಿಕ ಅವನು ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.೨೭ [27]ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿಜವಳಿ ಮಕ್ಕಳಿರುವುದು ಕಂಡುಬಂದಿತು.೨೮ [28]ಆಕೆ ಹೆರುವಾಗ ಒಂದು ಮಗು ಕೈಚಾಚಿತು. ಸೂಲಗಿತ್ತಿ, “ಇದು ಮೊದಲು ಬಂದದ್ದು,” ಎಂದು ಹೇಳಿ ಅದರ ಕೈಗೆ ಕೆಂಪು ನೂಲನ್ನು ಕಟ್ಟಿದಳು.೨೯ [29]ಆದರೆ ಅದು ಕೈಯನ್ನು ಹಿಂದಕ್ಕೆ ತೆಗೆದುಕೊಂಡಿತು. ಅದರೊಡನೆ ಇದ್ದ ಇನ್ನೊಂದು ಕೂಸು ಹೊರಗೆ ಬಂದಿತು. ಇದನ್ನು ಕಂಡ ಸೂಲಗಿತ್ತಿ, “ನೀನು ಕಿತ್ತುಕೊಂಡು ಬಂದಿರುತ್ತೀಯಲ್ಲಾ,” ಎಂದಳು. ಈ ಕಾರಣ ಆ ಮಗುವಿಗೆ ‘ಪೆರೆಚ್’ ಎಂದು ಹೆಸರಾಯಿತು.೩೦ [30]ತರುವಾಯ ಕೈಗೆ ಕೆಂಪುನೂಲು ಕಟ್ಟಿಸಿಕೊಂಡ ಕೂಸು ಹುಟ್ಟಿತು. ಅದಕ್ಕೆ ‘ಜೆರಹ’ ಎಂದು ಹೆಸರಾಯಿತು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಆದಿಕಾಂಡ ೩೮ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/038.mp3 50 38