× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೪ ಟಿಪ್ಪಣಿಗಳನ್ನು ಉಳಿಸಿ ೧ [1]ಆದಾಮನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತಳು. “ಸರ್ವೇಶ್ವರ ಸ್ವಾಮಿಯ ಅನುಗ್ರಹದಿಂದ ಒಂದು ಗಂಡುಮಗುವನ್ನು ಪಡೆದಿದ್ದೇನೆ” ಎಂದಳು.೨ [2]ತರುವಾಯ ಅವನ ತಮ್ಮನಾದ ಹೇಬೆಲನಿಗೆ ಜನ್ಮವಿತ್ತಳು. ಹೇಬೆಲನು ಕುರಿಗಾಹಿಯಾದನು; ಕಾಯಿನನು ವ್ಯವಸಾಯಗಾರನಾದನು.೩ [3]ಕ್ರಮೇಣ ಕಾಯಿನನು ತಾನು ಬೆಳೆಸಿದ ಫಸಲಲ್ಲಿ ಕೆಲವನ್ನು ತಂದು ಸರ್ವೇಶ್ವರ ಸ್ವಾಮಿಗೆ ಕಾಣಿಕೆಯಾಗಿ ಸಮರ್ಪಿಸಿದನು.೪ [4]ಅಂತೆಯೇ, ಹೇಬೆಲನು ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಸಮರ್ಪಿಸಿದನು.೫ [5]ಸರ್ವೇಶ್ವರ ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು; ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಇದರಿಂದ ಕಾಯಿನನು ಕಡುಗೋಪಗೊಂಡನು; ಅವನ ಮುಖ ಸಿಂಡರಿಸಿತು.೬ [6]ಆಗ ಸರ್ವೇಶ್ವರ ಕಾಯಿನನಿಗೆ, “ಕೋಪವೇಕೆ? ಮುಖ ಸಿಂಡರಿಸಿದೆ ಏಕೆ?೭ [7]ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು.೮ [8]ಬಳಿಕ ಕಾಯಿನನು ತಮ್ಮ ಹೇಬೆಲನಿಗೆ, “ಹೊಲಕ್ಕೆ ಹೋಗೋಣ ಬಾ”, ಎಂದು ಕರೆದನು. ಅವರಿಬ್ಬರೂ ಅಲ್ಲಿಗೆ ಬಂದಾಗ ಕಾಯಿನನು ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.೯ [9]“ನಿನ್ನ ತಮ್ಮನೆಲ್ಲಿ?\ ಎಂದು ಸರ್ವೇಶ್ವರ ಕೇಳಿದಾಗ “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ” ಎಂದು ಕಾಯಿನನು ಉತ್ತರ ಕೊಟ್ಟನು.೧೦ [10]ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು.೧೧ [11]ನಿನ್ನ ಕೈ ಸುರಿಸಿದ ನಿನ್ನ ತಮ್ಮನ ರಕ್ತವನ್ನು ಕುಡಿದ ಈ ನೆಲದಿಂದಾಗಿ ನೀನು ಶಾಪಗ್ರಸ್ತನು; ತಿರಸ್ಕೃತನು.೧೨ [12]ಇದನ್ನು ನೀನು ವ್ಯವಸಾಯ ಮಾಡಿದರೂ ಇನ್ನು ಮುಂದೆ ಇದು ಫಲಕೊಡುವುದಿಲ್ಲ. ನೆಲೆಯಿಲ್ಲದೆ ನೀನು ಲೋಕದಲ್ಲಿ ಅಲೆಮಾರಿಯಾಗಿರಬೇಕು,” ಎಂದರು.೧೩ [13]ಅದಕ್ಕೆ ಕಾಯಿನನು, “ಸರ್ವೇಶ್ವರಾ, ಈ ಶಿಕ್ಷೆ ನನ್ನಿಂದ ಸಹಿಸಲಾಗದಷ್ಟು ಕಠಿಣ.೧೪ [14]ಈ ನಾಡಿನಿಂದ ನನ್ನನ್ನು ಹೊರದೂಡುತ್ತಿರುವಿರಿ, ತಮ್ಮ ಸಾನ್ನಿಧ್ಯ ನನಗಿನ್ನು ದೊರಕದು; ನೆಲೆ ಇಲ್ಲದ ನಾನು ಲೋಕದಲ್ಲಿ ಅಲೆಮಾರಿಯಾಗಿರಬೇಕು; ಕಂಡಕಂಡವರೆಲ್ಲರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.೧೫ [15]ಅದಕ್ಕೆ ಸರ್ವೇಶ್ವರ, “ಇಲ್ಲ, ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳ್ಮಡಿ ದಂಡನೆ ಆಗುವುದು,\ಎಂದು ಹೇಳಿ, ಅವನನ್ನು ಕಂಡವರು ಕೊಲ್ಲದಂತೆ ಅವನ ಮೇಲೆ ಒಂದು ಗುರುತನ್ನು ಇಟ್ಟರು.೧೬ [16]ಕಾಯಿನನು ಸರ್ವೇಶ್ವರ ಸ್ವಾಮಿಯ ಸಾನ್ನಿಧ್ಯದಿಂದ ಹೊರಟುಹೋಗಿ ಏದೆನ್ ನಾಡಿಗೆ ಪೂರ್ವಕ್ಕಿರುವ “ಅಲೆನಾಡು\ ಎಂಬ ನಾಡಿನಲ್ಲಿ ವಾಸಮಾಡಿದನು.೧೭ [17]ಕಾಯಿನನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ತಾನು ಕಟ್ಟಿದ ಊರಿಗೆ ಕಾಯಿನನು ‘ಹನೋಕ’ ಎಂದು ತನ್ನ ಮಗನ ಹೆಸರನ್ನೇ ಇಟ್ಟನು.೧೮ [18]ಹನೋಕನಿಗೆ ಈರಾದನು ಹುಟ್ಟಿದನು. ಈರಾದನಿಗೆ ಮೆಹೂಯಾಯೇಲನು ಹುಟ್ಟಿದನು. ಮೆಹೂಯಾಯೇಲನಿಗೆ ಮೆತೂಷಾಯೇಲನು, ಮೆತೂಷಾಯೇಲನಿಗೆ ಲೆಮೆಕನು ಹುಟ್ಟಿದರು.೧೯ [19]ಲೆಮೆಕನಿಗೆ ‘ಆದಾ’ ಹಾಗು ‘ಚಿಲ್ಲಾ’ ಎಂಬ ಇಬ್ಬರು ಹೆಂಡಿರು.೨೦ [20]ಆದಾಳು ಯಾಬಾಲನನ್ನು ಹೆತ್ತಳು. ಗುಡಾರಗಳಲ್ಲಿದ್ದು ದನಕರುಗಳನ್ನು ಸಾಕುವವರಿಗೆ ಇವನೇ ಮೂಲಪುರುಷ.೨೧ [21]ಇವನ ತಮ್ಮನ ಹೆಸರು ಯೂಬಾಲ, ಇವನು ಕಿನ್ನರಿ ಕೊಳಲುಗಳನ್ನು ನುಡಿಸುವವರಿಗೆ ಮೂಲಪುರುಷ.೨೨ [22]ಚಿಲ್ಲಾ ಎಂಬುವಳು ತೂಬಲ್ ಕಾಯಿನನಿಗೆ ಜನ್ಮವಿತ್ತಳು. ಇವನು ಕಬ್ಬಿಣ, ಹಿತ್ತಾಳೆ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.೨೩ [23]ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: ಆದಾ, ಚಿಲ್ಲಾ, ಕೇಳಿ ನಾನು ಹೇಳುವುದನ್ನು ಲೆಮೆಕನ ಸತಿಯರೇ, ಆಲಿಸಿ ನನ್ನ ಮಾತನ್ನು ನಾ ಹತಮಾಡಿದೆ ನನಗೆ ಗಾಯ ಮಾಡಿದವನನ್ನು ನಾ ಕೊಂದೆ ನನ್ನನ್ನು ಹೊಡೆದಾ ಪ್ರಾಯದವನನ್ನು.೨೪ [24]ಕಾಯಿನನನ್ನು ಕೊಂದವನಿಗೆ ಆಗುವುದಾದರೆ ಪ್ರತೀಕಾರ ಏಳ್ಮಡಿ ಲೆಮೆಕನನ್ನು ಕೊಂದವನಿಗೆ ಆಗುವುದು ಪ್ರತೀಕಾರ ಎಪ್ಪತ್ತೇಳ್ಮಡಿ.೨೫ [25]ಆದಾಮ್ ಮತ್ತು ಅವನ ಹೆಂಡತಿಗೆ ಮತ್ತೊಂದು ಗಂಡುಮಗು ಆಯಿತು. ಅಕೆ, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತಾನವನ್ನು ಅನುಗ್ರಹಿಸಿದ್ದಾರೆ,” ಎಂದುಕೊಂಡು ಅವನಿಗೆ “ಸೇತ್\ ಎಂದು ನಾಮಕರಣ ಮಾಡಿದಳು.೨೬ [26]ತರುವಾಯ ಸೇತನು ಸಹ ಒಬ್ಬ ಮಗನನ್ನು ಪಡೆದು ಅವನಿಗೆ “ಏನೋಷ್” ಎಂದು ಹೆಸರಿಟ್ಟನು. ಜನರು “ಸರ್ವೇಶ್ವರ” ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದ್ದು ಆ ಕಾಲದಲ್ಲಿಯೇ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಆದಿಕಾಂಡ ೪ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/004.mp3 50 4