× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೪೫ ಟಿಪ್ಪಣಿಗಳನ್ನು ಉಳಿಸಿ ೧ [1]ಇದನ್ನು ಕೇಳಿದ ಮೇಲೆ ತನ್ನ ಪರಿವಾರದವರ ಮುಂದೆ, ತನ್ನನ್ನೇ ಇನ್ನು ತಡೆಹಿಡಿದುಕೊಳ್ಳಲು ಜೋಸೆಫನಿಂದ ಆಗಲಿಲ್ಲ. “ಇಲ್ಲಿಂದ ಎಲ್ಲರನ್ನು ಆಚೆ ಕಳಿಸಿರಿ,” ಎಂದು ಬಾಯ್ತೆರೆದು ಹೇಳಿದ. ಜೋಸೆಫನ ಅಣ್ಣತಮ್ಮಂದಿರಿಗೆ ತನ್ನ ಪರಿಚಯ ಸಿಗುವಂತೆ ಮಾಡುವಾಗ ಇತರರು ಯಾರೂ ಹತ್ತಿರ ಇರಲಿಲ್ಲ.೨ [2]ಅವನು ಗಟ್ಟಿಯಾಗಿ ಅತ್ತದ್ದು ಈಜಿಪ್ಟಿನವರಿಗೆ ಕೇಳಿಸಿತು; ಫರೋಹನ ಮನೆಯವರಿಗೂ ಆ ಸುದ್ದಿ ಮುಟ್ಟಿತು.೩ [3]ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನಾನೇ ಜೋಸೆಫ್! ನನ್ನ ತಂದೆ ಇನ್ನೂ ಇದ್ದಾರೋ?” ಎಂದು ಕೇಳಿದ. ಅವರು ತತ್ತರಗೊಂಡು ಉತ್ತರಿಸಲಾರದೆ ಹೋದರು.೪ [4]ಜೋಸೆಫನು, “ಹತ್ತಿರಕ್ಕೆ ಬನ್ನಿ” ಎನ್ನಲು, ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ, “ಈಜಿಪ್ಟ್ ದೇಶಕ್ಕೆ ಹೋಗಲಿ\ ಎಂದು ನೀವು ಮಾರಿಬಿಟ್ಟ ನಿಮ್ಮ ತಮ್ಮ ಜೋಸೆಫ್ ನಾನೇ.೫ [5]ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ವ್ಯಸನಪಡಬೇಡಿ, ನಿಮ್ಮನ್ನೇ ನಿಂದಿಸಿಕೊಳ್ಳಬೇಡಿ. ಏಕೆಂದರೆ ಜೀವರಕ್ಷಣೆಗಾಗಿಯೇ ದೇವರು ನನ್ನನ್ನು ನಿಮಗೆ ಮುಂಚಿತವಾಗಿ ಇಲ್ಲಿಗೆ ಕಳುಹಿಸಿದರು.೬ [6]ದೇಶಕ್ಕೆ ಬರಗಾಲ ಬಂದು ಈಗಾಗಲೇ ಎರಡು ವರ್ಷಗಳಾದವು. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ ಕೊಯ್ಯುವುದಕ್ಕಾಗಲಿ ಅವಕಾಶವಿಲ್ಲ.೭ [7]ನಿಮ್ಮ ಜನ ಧರೆಯಲ್ಲಿ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಅಭಿವೃದ್ಧಿಯಾಗುವಂತೆಯೂ ದೇವರು ನನ್ನನ್ನು ನಿಮಗೆ ಮುಂಚಿತವಾಗಿ ಕಳಿಸಿದರು.೮ [8]ನನ್ನನ್ನು ಇಲ್ಲಿಗೆ ಕಳಿಸಿದವರು ನೀವಲ್ಲ, ದೇವರೇ. ಅವರು ನನ್ನನ್ನು ಫರೋಹನಿಗೆ ಮಂತ್ರಿಯಾಗಿಯೂ ಅವರ ಆಸ್ಥಾನಕ್ಕೆ ಅಧಿಪತಿಯಾಗಿಯೂ ಈಜಿಪ್ಟ್ ದೇಶಕ್ಕೆ ಸರ್ವಾಧಿಕಾರಿಯಾಗಿಯೂ ಮಾಡಿದ್ದಾರೆ.೯ [9]“ನೀವು ನನ್ನ ತಂದೆಯ ಬಳಿಗೆ ಬೇಗನೆ ಹೋಗಿ ಅವರಿಗೆ, ‘ನಿಮ್ಮ ಮಗ ಜೋಸೆಫ್ ಹೀಗೆನ್ನುತ್ತಾನೆ; ‘ದೇವರು ನನ್ನನ್ನು ಈಜಿಪ್ಟ್ ದೇಶಕ್ಕೆ ಮುಖ್ಯಮಂತ್ರಿಯನ್ನಾಗಿ ನೇಮಿಸಿದ್ದಾರೆ. ನೀವು ತಡಮಾಡದೆ ನನ್ನ ಬಳಿಗೆ ಬರಬೇಕು.೧೦ [10]ಗೋಷೆನ್ ಪ್ರಾಂತ್ಯದಲ್ಲಿ ನನ್ನ ಬಳಿಯಲ್ಲೇ ನೀವೂ ನಿಮ್ಮ ಮಕ್ಕಳೂ ಮೊಮ್ಮಕ್ಕಳೂ ದನ, ಕುರಿ ಮೊದಲಾದ ಆಸ್ತಿಪಾಸ್ತಿಗಳ ಸಮೇತ ವಾಸಮಾಡಬಹುದು.೧೧ [11]ಬರಗಾಲ ತೀರುವುದಕ್ಕೆ ಇನ್ನೂ ಐದು ವರ್ಷ ಕಳೆಯಬೇಕಾಗಿದೆ. ಆದುದರಿಂದ ನಿಮಗೂ ನಿಮ್ಮ ಕುಟುಂಬಕ್ಕೂ ನಿಮಗಿರುವ ಸಮಸ್ತಕ್ಕೂ ಬಡತನ ತಟ್ಟದಂತೆ ನಾನು ನಿಮ್ಮನ್ನು ಪೋಷಿಸುತ್ತೇನೆ’, ಎಂದು ಹೇಳಿರುವುದಾಗಿ ತಿಳಿಸಿರಿ.೧೨ [12]“ನಾನೇ ಖುದ್ದಾಗಿ ನಿಮ್ಮ ಸಂಗಡ ಮಾತಾಡಿದ್ದೇನೆ; ಅದಕ್ಕೆ ನೀವೂ ಸಾಕ್ಷಿ: ನನ್ನ ಒಡಹುಟ್ಟಿದ ಬೆನ್ಯಾಮೀನನೂ ಸಾಕ್ಷಿ:೧೩ [13]ಈಜಿಪ್ಟ್ ದೇಶದಲ್ಲಿ ನನಗಿರುವ ಘನತೆ ಗೌರವವನ್ನೂ ನೀವು ಕಂಡದ್ದೆಲ್ಲವನ್ನೂ ತಂದೆಗೆ ತಿಳಿಸಿ, ಬೇಗನೆ ಅವರನ್ನು ಇಲ್ಲಿಗೆ ಕರೆದುಕೊಂಡು ಬನ್ನಿ,” ಎಂದು ಹೇಳಿದನು.೧೪ [14]ಬಳಿಕ ಜೋಸೆಫನು ತನ್ನ ತಮ್ಮ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು.೧೫ [15]ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಕಣ್ಣೀರಿಟ್ಟನು. ತರುವಾಯ ಅವರು ಅವನ ಸಂಗಡ ಮಾತನಾಡತೊಡಗಿದರು.೧೬ [16]ಜೋಸೆಫನ ಅಣ್ಣತಮ್ಮಂದಿರು ಬಂದಿರುವ ಸಮಾಚಾರ ಫರೋಹನ ಅರಮನೆಗೆ ತಲುಪಿತು. ಫರೋಹನೂ ಅವನ ಪರಿವಾರದವರೂ ಅದನ್ನು ಕೇಳಿ ಸಂತೋಷಪಟ್ಟರು.೧೭ [17]ಫರೋಹನು ಜೋಸೆಫನನ್ನು ಕರೆಸಿ, “ನೀನು ನಿನ್ನ ಸಹೋದರರಿಗೆ ತಿಳಿಸಬೇಕಾದ ನನ್ನ ಆಜ್ಞೆ ಇದು: ‘ನೀವು ನಿಮ್ಮ ವಾಹಕಪಶುಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ನಾಡಿಗೆ ಹೋಗಿ, ಅಲ್ಲಿಂದ೧೮ [18]ನಿಮ್ಮ ತಂದೆಯನ್ನೂ ಕುಟುಂಬದವರನ್ನೂ ನನ್ನ ಬಳಿಗೆ ಕರೆದುಕೊಂಡು ಬರತಕ್ಕದ್ದು. ಈಜಿಪ್ಟ್ ದೇಶದಲ್ಲಿ ನಿಮಗೆ ಅತ್ಯುತ್ತಮವಾದ ಭೂಮಿಯನ್ನು ಕೊಡುವೆನು. ನೀವು ಈ ದೇಶದ ಸುಖಸಂಪತ್ತನ್ನು ಅನುಭವಿಸಬಹುದು.”೧೯ [19]ನಿನ್ನ ಸಹೋದರರಿಗೆ ಈ ಆಜ್ಞೆಯನ್ನೂ ತಿಳಿಸು: ‘ನೀವು ನಿಮ್ಮ ಮಡದಿ ಮಕ್ಕಳನ್ನು ಕರೆದುತರಲು ಈಜಿಪ್ಟ್ ದೇಶದ ಬಂಡಿಗಳನ್ನು ತೆಗೆದುಕೊಂಡುಹೋಗಿರಿ: ನಿಮ್ಮ ತಂದೆಯನ್ನು ತಂದು ಸೇರಿಸಿರಿ.೨೦ [20]ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಚಿಂತಿಸಬೇಕಾಗಿಲ್ಲ. ಈಜಿಪ್ಟ್ ದೇಶದ ಅತ್ಯುತ್ತಮವಾದುವುಗಳು ನಿಮ್ಮದಾಗುವುವು'.\೨೧ [21]ಯಕೋಬನ ಮಕ್ಕಳು ಅದೇ ಮೇರೆಗೆ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಜೋಸೆಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.೨೨ [22]ಅದೂ ಅಲ್ಲದೆ, ಪ್ರತಿಯೊಬ್ಬನಿಗೂ ಶ್ರೇಷ್ಠವಾದ ಹೊಸ ಬಟ್ಟೆಗಳನ್ನು ಕೊಟ್ಟನು. ಬೆನ್ಯಾಮೀನನಿಗಾದರೋ ಮುನ್ನೂರು ಬೆಳ್ಳಿನಾಣ್ಯಗಳನ್ನು ಹಾಗು ಐದು ಶ್ರೇಷ್ಠವಾದ ಹೊಸಬಟ್ಟೆಗಳನ್ನು ಕೊಟ್ಟನು.೨೩ [23]ತನ್ನ ತಂದೆಗೆ ಈಜಿಪ್ಟ್ ದೇಶದ ಒಳ್ಳೊಳ್ಳೆಯ ವಸ್ತುಗಳನ್ನೂ ಹತ್ತು ಗಂಡು ಕತ್ತೆಗಳ ಮೇಲೆ ಹೇರಿಸಿದನು. ಅವನ ಪ್ರಯಾಣಕ್ಕೆ ಹತ್ತು ಹೆಣ್ಣು ಕತ್ತೆಗಳ ಮೇಲೆ ದವಸಧಾನ್ಯಗಳನ್ನೂ ಇತರ ಆಹಾರಪದಾರ್ಥಗಳನ್ನೂ ಕಳಿಸಿಕೊಟ್ಟನು.೨೪ [24]ತನ್ನ ಅಣ್ಣತಮ್ಮಂದಿರಿಗೆ, “ದಾರಿಯಲ್ಲಿ ಜಗಳವಾಡಬೇಡಿ” ಎಂದು ಬುದ್ಧಿ ಹೇಳಿ, ಅವರನ್ನು ಬೀಳ್ಕೊಟ್ಟನು. ಅವರು ಹೊರಟುಹೋದರು.೨೫ [25]ಅವರು ಈಜಿಪ್ಟ್ ದೇಶವನ್ನು ಬಿಟ್ಟು ಕಾನಾನ್ ನಾಡನ್ನು ಸೇರಿದರು.೨೬ [26]ತಂದೆ ಯಕೋಬನ ಬಳಿಗೆ ಬಂದು, “ಜೋಸೆಫನು ಇನ್ನೂ ಜೀವದಿಂದಿದ್ದಾನೆ; ಅವನೇ ಈಜಿಪ್ಟ್ ದೇಶದ ಪ್ರಧಾನಮಂತ್ರಿ” ಎಂದು ಅರುಹಿದರು. ಅವನು ಅದನ್ನು ಕೇಳಿ ಸ್ತಬ್ಧನಾದ; ಅವರನ್ನು ನಂಬಲೇ ಇಲ್ಲ.೨೭ [27]ಆದರೆ ಜೋಸೆಫನು ಹೇಳಿಕಳಿಸಿದ ಎಲ್ಲ ಮಾತುಗಳನ್ನು ಕೇಳಿ, ತನ್ನ ಪ್ರಯಾಣಕ್ಕಾಗಿ ಅವನಿಂದ ಬಂದಿದ್ದ ಬಂಡಿಗಳನ್ನು ನೋಡಿ ಅವರ ತಂದೆ ಯಕೋಬನಿಗೆ ಹೊಸ ಜೀವ ಬಂದಿತು.೨೮ [28]ಕೊನೆಗೆ ಯಕೋಬನು, “ನನ್ನ ಮಗ ಜೋಸೆಫ್ ಜೀವದಿಂದಿದ್ದಾನೆ, ನನಗೆ ಅಷ್ಟೇ ಸಾಕು! ನಾನು ಸಾಯುವುದಕ್ಕೆ ಮುಂಚೆ ಹೋಗಿ ಅವನನ್ನು ನೋಡುತ್ತೇನೆ,” ಎಂದನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಆದಿಕಾಂಡ ೪೫ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/045.mp3 50 45