× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಆದಿಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಆದಿಕಾಂಡ ೪೮ ಟಿಪ್ಪಣಿಗಳನ್ನು ಉಳಿಸಿ ೧ [1]ಕೆಲವು ಕಾಲವಾದ ಮೇಲೆ, “ತಂದೆ ಬಹಳ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದಾರೆ,” ಎಂಬ ಸುದ್ದಿ ಜೋಸೆಫನಿಗೆ ಬಂದಿತು. ಅವನು ಮನಸ್ಸೆ ಮತ್ತು ಎಫ್ರಯಿಮ್ ಎಂಬ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ತನ್ನ ತಂದೆಯ ಬಳಿಗೆ ಬಂದನು.೨ [2]“ನಿಮ್ಮ ಮಗ ಜೋಸೆಫನು ಬಂದಿದ್ದಾನೆ,” ಎಂದು ಯಕೋಬನಿಗೆ ತಿಳಿಸಿದಾಗ ಅವನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕುಳಿತುಕೊಂಡನು.೩ [3]ಅವನು ಜೋಸೆಫನಿಗೆ, “ಸರ್ವವಲ್ಲಭರಾದ ದೇವರು ಕಾನಾನ್ ನಾಡಿನ ಲೂಜಿನಲ್ಲಿ ನನಗೆ ದರ್ಶನಕೊಟ್ಟು, ಆಶೀರ್ವದಿಸಿ -೪ [4]‘ನಾನು ನಿನ್ನನ್ನು ಫಲಪ್ರದನನ್ನಾಗಿ ಮಾಡಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು; ಅನೇಕ ಜನರಿಗೆ ನಿನ್ನನ್ನು ಮೂಲಪುರುಷನನ್ನಾಗಿ ಮಾಡುವೆನು; ನಿನ್ನ ತರುವಾಯ ನಿನ್ನ ಸಂತತಿಗೆ ಈ ನಾಡನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು,’ ಎಂದು ಹೇಳಿದರು.೫ [5]“ನಾನು ನಿನ್ನ ಬಳಿಗೆ ಈಜಿಪ್ಟ್ ದೇಶಕ್ಕೆ ಬರುವುದಕ್ಕೆ ಮುಂಚೆ ಇಲ್ಲಿ ಹುಟ್ಟಿದ್ದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಬೇಕು. ರೂಬೇನ್ ಮತ್ತು ಸಿಮೆಯೋನ್ ನನ್ನ ಮಕ್ಕಳಾಗಿರುವಂತೆಯೇ ಎಫ್ರಯಿಮ್ ಮತ್ತು ಮನಸ್ಸೆ ನನ್ನ ಮಕ್ಕಳಾಗಿರಲಿ.೬ [6]ಅವರ ತರುವಾಯ ನೀನು ಪಡೆದ ಮಕ್ಕಳು ನಿನ್ನವರಾಗಿರಲಿ. ಅವರು ತಮ್ಮ ಅಣ್ಣಂದಿರ ಸೊತ್ತಿಗೆ ಬಾಧ್ಯತೆ ಪಡೆದು ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ.೭ [7]ಏಕೆಂದರೆ ನಿಮ್ಮ ತಾಯಿ ರಾಖೇಲಳು, ನಾನು ಮೆಸಪೊಟೇಮಿಯಾದಿಂದ ಬರುವಾಗ, ಕಾನಾನ್ ನಾಡಿನಲ್ಲಿ ಎಫ್ರಾತನ್ನು ಸೇರುವುದಕ್ಕೆ ಇನ್ನು ಸ್ವಲ್ಪ ದೂರ ಇದ್ದಾಗಲೆ ದಾರಿಯಲ್ಲಿ ಸತ್ತು ನನ್ನನ್ನು ಅಗಲಿಹೋದಳು. ಈಗ ಬೇತ್ಲೆಹೇಮ್ ಎನಿಸಿಕೊಳ್ಳುವ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಆಕೆಯನ್ನು ಸಮಾಧಿಮಾಡಿದೆ,” ಎಂದು ಹೇಳಿದನು.೮ [8]ಯಕೋಬನು ಜೋಸೆಫನ ಮಕ್ಕಳನ್ನು ನೋಡಿ, “ಇವರು ಯಾರು?” ಎಂದು ಕೇಳಿದನು.೯ [9]ಅದಕ್ಕೆ ಜೋಸೆಫನು, “ಈ ದೇಶದಲ್ಲಿ ದೇವರು ನನಗೆ ಅನುಗ್ರಹಿಸಿದ ಮಕ್ಕಳು,” ಎಂದನು. ಆಗ ತಂದೆ ಯಕೋಬನು, “ಇವರನ್ನು ನಾನು ಆಶೀರ್ವದಿಸುತ್ತೇನೆ; ನನ್ನ ಹತ್ತಿರಕ್ಕೆ ಕರೆದುಕೊಂಡು ಬಾ,” ಎಂದನು.೧೦ [10]ವೃದ್ಧಾಪ್ಯದ ನಿಮಿತ್ತ ಯಕೋಬನ ಕಣ್ಣು ಮೊಬ್ಬಾಗಿತ್ತು. ಜೋಸೆಫನು ಆ ಮಕ್ಕಳನ್ನು ಹತ್ತಿರಕ್ಕೆ ತಂದಾಗ ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.೧೧ [11]ಅನಂತರ ಜೋಸೆಫನಿಗೆ, “ನಿನ್ನ ಮುಖವನ್ನು ಮತ್ತೆ ನೋಡುವೆನೆಂದು ನಾನು ನೆನಸಿರಲಿಲ್ಲ. ಈಗ ನಿನ್ನನ್ನು ಮಾತ್ರವಲ್ಲ, ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾರೆ!” ಎಂದನು.೧೨ [12]ಆಗ ಜೋಸೆಫನು ತಂದೆಯ ಮಡಲಿನಿಂದ ತನ್ನ ಮಕ್ಕಳನ್ನು ಎತ್ತಿಕೊಂಡು ತಂದೆಗೆ ನೆಲದ ತನಕ ಬಾಗಿ ನಮಸ್ಕರಿಸಿದನು.೧೩ [13]ತರುವಾಯ ಜೋಸೆಫನು ಎಫ್ರಯಿಮನನ್ನು ತನ್ನ ಬಲಕ್ಕೆ ಯಕೋಬನ ಎಡಗೈಗೆದುರಾಗಿ ಮತ್ತು ಮನಸ್ಸೆಯನ್ನು ತನ್ನ ಎಡಕ್ಕೆ, ಯಕೋಬನ ಬಲಗೈಗೆದುರಾಗಿ, ತಂದೆಯ ಮುಂದೆ ನಿಲ್ಲಿಸಿದನು.೧೪ [14]ಮನಸ್ಸೆಯು ಜೇಷ್ಠಮಗನಾಗಿದ್ದರೂ ಯಕೋಬನು ತನ್ನ ಕೈಗಳನ್ನು ಅಡ್ಡಡ್ಡವಾಗಿ ಚಾಚಿ ಕಿರಿಯವನಾದ ಎಫ್ರಯಿಮನ ತಲೆಯ ಮೇಲೆ ಬಲಗೈಯನ್ನು, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನು ಇಟ್ಟು,೧೫ [15]ಜೋಸೆಫನನ್ನು ಹೀಗೆಂದು ಆಶೀರ್ವದಿಸಿದನು: “ನನ್ನ ಪಿತೃಗಳಾದ ಅಬ್ರಹಾಮ್, ಇಸಾಕರು ಯಾವ ದೇವರ ಸಮ್ಮುಖದಲ್ಲಿ ನಡೆದುಕೊಂಡರೋ ಆ ದೇವರು, ಚಿಕ್ಕಂದಿನಿಂದ ಇಂದಿನವರೆಗೆ ನನ್ನನ್ನು ಪರಿಪಾಲಿಸಿಕೊಂಡು ಬಂದ ಆ ದೇವರು,೧೬ [16]ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”೧೭ [17]ತನ್ನ ತಂದೆ ಬಲಗೈಯನ್ನು ಎಫ್ರಯಿಮನ ತಲೆಯ ಮೇಲೆ ಇಟ್ಟದ್ದು ಜೋಸೆಫನಿಗೆ ಹಿಡಿಸಲಿಲ್ಲ. ಅವನು ಆ ಕೈಯನ್ನು ಹಿಡಿದು ಎಫ್ರಯಿಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಡುವಂತೆ ತಂದೆಗೆ,೧೮ [18]“ಹಾಗಲ್ಲ ಅಪ್ಪಾ, ಇವನೇ ಜೇಷ್ಠ ಪುತ್ರ; ಬಲಗೈಯನ್ನು ಇವನ ತಲೆಯ ಮೇಲೆ ಇಡು”, ಎಂದು ಹೇಳಿದ.೧೯ [19]ಆದರೆ ತಂದೆ ಅದಕ್ಕೆ ಒಪ್ಪದೆ, “ಗೊತ್ತು ಮಗನೇ, ನನಗೆ ಗೊತ್ತು; ಇವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವುದು; ಇವನೂ ಬಲಿಷ್ಠನಾಗುವನು. ಅವನಿಂದ ರಾಷ್ಟ್ರಗಳ ಸಮೂಹವೆ ಉತ್ಪತ್ತಿಯಾಗುವುದು,” ಎಂದು ಹೇಳಿದನು.೨೦ [20]ಆ ದಿನ ಅವರನ್ನು ಆಶೀರ್ವದಿಸುತ್ತಾ ಹೀಗೆಂದನು: \ಎಫ್ರಯಿಮ್ - ಮನಸ್ಸೆಯಂತೆ ನಿಮ್ಮನ್ನೂ ಅಭಿವೃದ್ಧಿಗೊಳಿಸಲಿ ದೇವರು! ಹೀಗೆ ನಿಮ್ಮ ಹೆಸರನ್ನು ಉಚ್ಚರಿಸುತ್ತಾ ಇತರರನ್ನು ಆಶೀರ್ವದಿಸುವರು ಇಸ್ರಯೇಲರು\. ಈ ರೀತಿಯಾಗಿ ಅವನು ಎಫ್ರಯಿಮನನ್ನು ಮನಸ್ಸೆಗಿಂತ ಮುಂದಿಟ್ಟನು.೨೧ [21]ಬಳಿಕ ಯಕೋಬನು ಜೋಸೆಫನಿಗೆ, “ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ನಾಡಿಗೆ ಮರಳಿ ಬರಮಾಡುವರು.೨೨ [22]ಇದಲ್ಲದೆ, ಕತ್ತಿ - ಬಿಲ್ಲುಗಳಿಂದ ನಾನು ಅಮೋರಿಯರ ವಶದಿಂದ ಪಡೆದ ಬೆಟ್ಟದ ತಪ್ಪಲನ್ನು, ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ, ನಿನಗೆ ಕೊಟ್ಟಿದ್ದೇನೆ,” ಎಂದು ಹೇಳಿದನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಆದಿಕಾಂಡ ೪೮ 00:00:00 00:00:00 0.5x 2.0x https://beblia.bible:81/BibleAudio/kannadakncl/genesis/048.mp3 50 48