× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಸಮುವೇಲನು ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩1 1 1 ಕನ್ನಡ ಬೈಬಲ್ (KNCL) 2016 ಸಮುವೇಲನು ೨ ೧೬ ಟಿಪ್ಪಣಿಗಳನ್ನು ಉಳಿಸಿ ೧ [1]ದಾವೀದನು ಗುಡ್ಡದ ತುದಿಯ ಆಚೆಗೆ ಹೋಗುವಷ್ಟರಲ್ಲಿ ಮೆಫೀಬೋಶೆತನ ಸೇವಕನಾದ ಚೀಬನು ಇನ್ನೂರು ರೊಟ್ಟಿಗಳನ್ನು, ನೂರು ಒಣಗಿದ ದ್ರಾಕ್ಷಿಗೊಂಚಲುಗಳನ್ನು, ನೂರು ಹಣ್ಣುಗಳನ್ನು ಹಾಗು ಒಂದು ಬುದ್ದಲಿ ದ್ರಾಕ್ಷಾರಸವನ್ನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.೨ [2]ಅರಸನು ಚೀಬನನ್ನು ನೋಡಿ, “ಇವುಗಳನ್ನು ಏಕೆ ತಂದೆ?” ಎಂದು ಕೇಳಿದನು. ಅವನು, “ಕತ್ತೆಗಳನ್ನು ಅರಸರ ಮನೆಯವರು ಸವಾರಿಮಾಡಲೆಂದು, ಹಣ್ಣು ರೊಟ್ಟಿಗಳನ್ನು ಆಳುಗಳು ತಿನ್ನಲೆಂದೂ ಹಾಗು ದ್ರಾಕ್ಷಾರಸವನ್ನು ಅರಣ್ಯದಲ್ಲಿ ದಣಿದವರು ಕುಡಿಯಲೆಂದು ತಂದಿದ್ದೇನೆ,” ಎಂದು ಉತ್ತರಕೊಟ್ಟನು.೩ [3]ಅರಸನು ಮತ್ತೆ, “ನಿನ್ನ ಯಜಮಾನನ ಮಗ ಎಲ್ಲಿದ್ದಾನೆ?” ಎಂದು ಕೇಳಲು ಅವನು, “ತನ್ನ ತಂದೆಯ ರಾಜ್ಯವನ್ನು ಇಸ್ರಯೇಲರು ಈ ದಿನ ತನಗೆ ಮರಳಿಕೊಡುವರೆಂದು ಹೇಳಿ ಅವನು ಜೆರುಸಲೇಮಿನಲ್ಲೇ ಉಳಿದುಕೊಂಡನು,” ಎಂದನು.೪ [4]ಆಗ ಅರಸನು, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ,” ಎಂದು ಹೇಳಿದನು. ಅವನು, “ಅರಸರೇ, ನಿಮಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ; ನನ್ನ ಒಡೆಯರೇ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ!” ಎಂದನು.೫ [5]ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ ಗೇರನ ಮಗನೂ ಆದ ಶಿಮ್ಮೀ ಎಂಬವನು ದಾವೀದನನ್ನು ಶಪಿಸುತ್ತಾ ಆ ಊರಿನಿಂದ ಹೊರಗೆ ಬಂದನು.೬ [6]ಅವನು ದಾವೀದನ, ಅವನ ಎಲ್ಲ ಸೇವಕರ, ಎಡಬಲದಲ್ಲಿದ್ದ ಸೈನಿಕರ ಹಾಗು ಶೂರರ ಕಡೆಗೆ ಕಲ್ಲೆಸೆಯ ತೊಡಗಿದನು.೭ [7]ಅಲ್ಲದೆ, ಅವನು ದಾವೀದನನ್ನು ಶಪಿಸುತ್ತಾ, “ನಡೆ, ಕೊಲೆಗಾರನೇ, ನೀಚನೇ, ನಡೆ; ಸೌಲನ ರಾಜ್ಯವನ್ನು ಕಬಳಿಸಿಕೊಂಡು, ಅವನ ಮನೆಯವರನ್ನು ಕೊಂದದ್ದಕ್ಕಾಗಿ ಸರ್ವೇಶ್ವರ ನಿನಗೆ ಮುಯ್ಯಿ ತೀರಿಸಿದ್ದಾರೆ.೮ [8]ಅವರು ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನಿಗೆ ಕೊಟ್ಟುಬಿಟ್ಟರು. ಕೊಲೆಗಾರನೇ, ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ,” ಎಂದನು.೯ [9]ಆಗ ಚೆರೂಯಳ ಮಗ ಅಬೀಷೈಯು ಅರಸನಿಗೆ, “ಈ ಸತ್ತನಾಯಿ ಅರಸನಾದ ನನ್ನ ಒಡೆಯರನ್ನು ಶಪಿಸುವುದೇನು? ಅಪ್ಪಣೆಯಾಗಲಿ, ನಾನು ಅವನಿರುವಲ್ಲಿಗೇ ಹೋಗಿ, ಅವನ ತಲೆ ಹಾರಿಸಿಕೊಂಡು ಬರುತ್ತೇನೆ,” ಎಂದನು.೧೦ [10]ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಸರ್ವೇಶ್ವರಸ್ವಾಮಿಯೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಯಾರು ಕೇಳಲಾದೀತು?” ಎಂದು ಉತ್ತರಕೊಟ್ಟನು.೧೧ [11]ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವುದು ಯಾವ ಲೆಕ್ಕ? ಬಿಡಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅವನಿಗೆ ಆಜ್ಞಾಪಿಸಿದ್ದಾರೆ.೧೨ [12]ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.೧೩ [13]ದಾವೀದನೂ ಅವನ ಜನರೂ ದಾರಿಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ ಕಲ್ಲುಮಣ್ಣು ತೂರುತ್ತಾ, ಗುಡ್ಡದ ಓರೆಯಲ್ಲಿ ಸಮಾನಾಂತರದಲ್ಲೇ ನಡೆಯುತ್ತಿದ್ದನು.೧೪ [14]ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ ಜೋರ್ಡನ್ ಸ್ಥಳವನ್ನು ಸೇರಿ ಅಲ್ಲಿ ವಿಶ್ರಮಿಸಿಕೊಂಡರು.೧೫ [15]ಅಷ್ಟರಲ್ಲಿ ಅಬ್ಷಾಲೋಮನು ಎಲ್ಲ ಇಸ್ರಯೇಲರೊಡನೆ ಜೆರುಸಲೇಮಿಗೆ ಬಂದನು. ಅಹೀತೋಫೆಲನೂ ಅವನ ಸಂಗಡ ಇದ್ದನು.೧೬ [16]ಅರ್ಕೀಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸರು ಚಿರಂಜೀವಿಯಾಗಿ ಬಾಳಲಿ! ಅರಸರು ಚಿರಂಜೀವಿಯಾಗಿ ಬಾಳಲಿ!” ಎಂದು ಘೋಷಿಸಿದನು.೧೭ [17]ಅಬ್ಷಾಲೋಮನು, “ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಏಕೆ ಹೋಗಲಿಲ್ಲ?” ಎಂದನು.೧೮ [18]ಅದಕ್ಕೆ ಹೂಷೈಯು, “ಹಾಗಲ್ಲ, ಸರ್ವೇಶ್ವರ, ಈ ಜನ ಹಾಗು ಇಸ್ರಯೇಲರೆಲ್ಲರು ಯಾರನ್ನು ಆರಿಸಿದ್ದಾರೋ ಅವನ ಪಕ್ಷದವನಾಗಿರುತ್ತೇನೆ ನಾನು; ಅವನ ಬಳಿಯಲ್ಲೇ ವಾಸಿಸುತ್ತೇನೆ.೧೯ [19]ಇದಲ್ಲದೆ, ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿಮ್ಮ ತಂದೆಯ ಸನ್ನಿಧಿಯಲ್ಲಿ ಸೇವೆಮಾಡಿದಂತೆ ನಿಮ್ಮ ಸನ್ನಿಧಿಯಲ್ಲಿ ಸೇವೆಮಾಡುವೆನು,” ಎಂದು ಉತ್ತರಕೊಟ್ಟನು.೨೦ [20]ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆಮಾಡಿ ಹೇಳು,” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.೨೧ [21]ಅವನು, “ತಾವು ಹೋಗಿ ತಮ್ಮ ತಂದೆ ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಗಳೊಡನೆ ಸಂಗಮಿಸಿ. ಹೀಗೆ ಮಾಡುವುದಾದರೆ, ತಾವು ತಮ್ಮ ತಂದೆಗೆ ಅಸಹ್ಯವೈರಿಯಾದಿರೆಂದು ಎಲ್ಲ ಇಸ್ರಯೇಲರಿಗೆ ತಿಳಿಯುವುದು. ಆಗ ತಮ್ಮ ಪಕ್ಷದವರು ಹುಮ್ಮಸ್ಸುಗೊಳ್ಳುವರು,” ಎಂದು ಉತ್ತರಕೊಟ್ಟನು.೨೨ [22]ಆಗ ಅಬ್ಷಾಲೋಮನಿಗಾಗಿ ಮಾಳಿಗೆಯ ಮೇಲೆ ಗುಡಾರಹಾಕಿದರು. ಅವನು ಎಲ್ಲ ಇಸ್ರಯೇಲರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.೨೩ [23]ಆ ದಿನಗಳಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟೇ ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಸಲಹೆಗಳನ್ನು ಮಾನ್ಯಮಾಡುತ್ತಿದ್ದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಸಮುವೇಲನು ೨ ೧೬ 00:00:00 00:00:00 0.5x 2.0x https://beblia.bible:81/BibleAudio/kannadakncl/2samuel/016.mp3 24 16