× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಸಮುವೇಲನು ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 ಕನ್ನಡ ಬೈಬಲ್ (KNCL) 2016 ಸಮುವೇಲನು ೨ ೨೪ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು.೨ [2]ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದವರೆಗೆ ಸಂಚರಿಸಿ ಇಸ್ರಯೇಲ್ ಕುಲಗಳ ಎಲ್ಲ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದು ಆಜ್ಞಾಪಿಸಿದನು.೩ [3]ಆಗ ಯೋವಾಬನು, “ನನ್ನ ಒಡೆಯರಾದ ತಮ್ಮ ಆಯುಷ್ಕಾಲದಲ್ಲೇ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯರಾದ ಅರಸರು ಈ ಕಾರ್ಯಕ್ಕೆ ಮನಸ್ಸುಮಾಡಿದ್ದೇಕೆ?” ಎಂದನು.೪ [4]ಆದರೆ ಅರಸನು ಯೋವಾಬನಿಗೂ ಇತರ ಸೇನಾಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ, ಅವರು ಇಸ್ರಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟುಹೋದರು.೫ [5]ಅವರು ಜೋರ್ಡನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ತೊಡಗಿ,೬ [6]ಯಗ್ಜೇರಿಗೂ ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೊಜೀಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.೭ [7]ಅಲ್ಲಿಂದ ತಿರುಗಿಕೊಂಡು ಚೀದೋನ್, ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣ ದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.೮ [8]ಹೀಗೆ ಒಂಬತ್ತು ತಿಂಗಳು ಇಪ್ಪತ್ತು ದಿವಸಗಳಲ್ಲಿ ನಾಡನ್ನೆಲ್ಲಾ ಸಂಚರಿಸಿ ಜೆರುಸಲೇಮಿಗೆ ಹಿಂದಿರುಗಿ ಬಂದರು.೯ [9]ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿಯ ಅಂಕೆಸಂಖ್ಯೆಗಳಲ್ಲಿ ಇಸ್ರಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಹಾಗು ಯೆಹೂದ್ಯರಲ್ಲಿ ಐದು ಲಕ್ಷ ಇದ್ದರು.೧೦ [10]ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.೧೧ [11]ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಸರ್ವೇಶ್ವರ ದರ್ಶನವಿತ್ತು,೧೨ [12]“ನೀನು ದಾವೀದನ ಹತ್ತಿರ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ; ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಅದನ್ನು ಆರಿಸಿಕೋ,’ ಎಂದು ಸರ್ವೇಶ್ವರ ನುಡಿಯುತ್ತಾರೆ ಎಂದು ಹೇಳು,” ಎಂದು ಆಜ್ಞಾಪಿಸಿದರು.೧೩ [13]ಆಗ ಗಾದನು ದಾವೀದನ ಬಳಿಗೆ ಬಂದು, “ನಿಮ್ಮ ನಾಡಿನಲ್ಲಿ ಏಳು ವರ್ಷಗಳ ಬರಗಾಲ ಉಂಟಾಗಬೇಕೋ, ಇಲ್ಲವೇ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳ ತನಕ ನಿನ್ನನ್ನು ಓಡಿಸಿಬಿಡಬೇಕೋ, ಇಲ್ಲವೆ ನಿನ್ನ ನಾಡಿನಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದನು.೧೪ [14]ಅದಕ್ಕೆ ದಾವೀದನು, “ನಾನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೆ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿ ವ್ಯಾಧಿಯನ್ನು ಆಯ್ದುಕೊಂಡನು.೧೫ [15]ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿದ್ದ ಇಸ್ರಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.೧೬ [16]ದೇವದೂತನು ಜೆರುಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಸರ್ವೇಶ್ವರ ಆ ಕೇಡಿನ ವಿಷಯದಲ್ಲಿ ನೊಂದುಕೊಂಡು, ಸಂಹಾರಕ ದೂತನಿಗೆ, “ಈಗ ಸಾಕು, ನಿನ್ನ ಕೈಯನ್ನು ಹಿಂತೆಗೆ,” ಎಂದು ಆಜ್ಞಾಪಿಸಿದರು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.೧೭ [17]ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ,” ಎಂದು ಬೇಡಿಕೊಂಡನು.೧೮ [18]ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು, “ನೀವು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸಿ,” ಎಂದು ಹೇಳಿದನು.೧೯ [19]ದಾವೀದನು ಗಾದನ ಮುಖಾಂತರ ತನಗಾದ ಸರ್ವೇಶ್ವರನ ಅಪ್ಪಣೆಯಂತೆ ಹೊರಟನು.೨೦ [20]ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು.೨೧ [21]“ನನ್ನ ಒಡೆಯರಾದ ಅರಸರು ತಮ್ಮ ಸೇವಕನ ಬಳಿಗೆ ಬರುವುದಕ್ಕೇನು ಕಾರಣ?” ಎಂದು ಕೇಳಿದನು. ದಾವೀದನು, “ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಪೀಠವನ್ನು ಕಟ್ಟುವುದಕ್ಕೆ ಬಂದಿದ್ದೇನೆ,” ಎಂದು ಉತ್ತರಕೊಟ್ಟನು.೨೨ [22]ಆಗ ಅರೌನನು ದಾವೀದನಿಗೆ, “ನನ್ನ ಒಡೆಯರಾದ ಅರಸರು ತಮಗೆ ಇಷ್ಟವಾದುದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ; ಇಲ್ಲಿ ಬಲಿದಾನಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.೨೩ [23]ಇವುಗಳಲ್ಲಿ ಅರಸರ ಸೇವಕನಾದ ನಾನು ಅರಸರಿಗೆ ಅರ್ಪಿಸುತ್ತೇನೆ. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಪ್ರಸನ್ನರಾಗಲಿ!” ಎಂದು ಹೇಳಿದನು.೨೪ [24]ಅರಸರು ಅರೌನನಿಗೆ, “ಹಾಗಲ್ಲ, ನಾನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಸರ್ವೇಶ್ವರನಿಗೆ ಸುಮ್ಮನೆ ಸಿಕ್ಕಿದ್ದನ್ನು ಬಲಿದಾನವಾಗಿ ಅರ್ಪಿಸಲೊಲ್ಲೆನು,” ಎಂದು ಹೇಳಿ ಆ ಕಣವನ್ನೂ ಹೋರಿಗಳನ್ನೂ ಐವತ್ತು ಬೆಳ್ಳಿ ನಾಣ್ಯಕ್ಕೆ ಕೊಂಡುಕೊಂಡನು.೨೫ [25]ಅಲ್ಲಿ ಸರ್ವೇಶ್ವರನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಅವರಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಅರ್ಪಿಸಿದನು. ಹೀಗೆ ನಾಡಿನ ಮೇಲಿದ್ದ ಸರ್ವೇಶ್ವರನ ಕೋಪ ಶಮನವಾಯಿತು. ಇಸ್ರಯೇಲರಲ್ಲಿದ್ದ ಆ ಸಂಹಾರಕವ್ಯಾಧಿ ನಿಂತುಹೋಯಿತು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಸಮುವೇಲನು ೨ ೨೪ 00:00:00 00:00:00 0.5x 2.0x https://beblia.bible:81/BibleAudio/kannadakncl/2samuel/024.mp3 24 24