× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಸಮುವೇಲನು ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 ಕನ್ನಡ ಬೈಬಲ್ (KNCL) 2016 ಸಮುವೇಲನು ೨ ೫ ಟಿಪ್ಪಣಿಗಳನ್ನು ಉಳಿಸಿ ೧ [1]ಅನಂತರ ಇಸ್ರಯೇಲರ ಎಲ್ಲ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದರು. “ನಾವು ನಿಮ್ಮ ರಕ್ತಸಂಬಂಧಿಗಳು;೨ [2]ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.೩ [3]ಹೆಬ್ರೋನಿನಲ್ಲಿದ್ದ ಅರಸ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಯೇಲರ ಹಿರಿಯರೊಡನೆ ಅಲ್ಲೇ ಸರ್ವೇಶ್ವರನ ಸನ್ನಿಧಿಯಲ್ಲಿ ಒಪ್ಪಂದಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದರು.೪ [4]ದಾವೀದನು ಮೂವತ್ತು ವರ್ಷದವನಾಗಿದ್ದಾಗ ಅರಸನಾಗಿ ನಾಲ್ವತ್ತು ವರ್ಷ ಆಳಿದನು.೫ [5]ಅವನು ಹೆಬ್ರೋನಿನಲ್ಲಿದ್ದುಕೊಂಡು ಯೆಹೂದ ಕುಲ ಒಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು; ಜೆರುಸಲೇಮಿನಲ್ಲಿದ್ದುಕೊಂಡು ಯೆಹೂದ್ಯರನ್ನು ಹಾಗು ಇಸ್ರಯೇಲರನ್ನು ಆಳಿದ್ದು ಮೂವತ್ತಮೂರು ವರ್ಷ.೬ [6]ದಾವೀದನು ತನ್ನ ಜನರನ್ನು ಕರೆದುಕೊಂಡು ಜೆರುಸಲೇಮಿನ ಮೇಲೆ ದಾಳಿ ಮಾಡಲು ಹೊರಟನು. ನಾಡಿನ ಮೂಲನಿವಾಸಿಗಳಾದ ಯೆಬೂಸಿಯರು ಅಲ್ಲಿದ್ದರು. ಅವರು ದಾವೀದನು ಒಳಗೆ ಬರಲಾರನೆಂದು ನೆನೆಸಿ ಅವನಿಗೆ, “ನೀನು ಒಳಗೆ ಬರಕೂಡದು; ಬಂದರೆ ಕುರುಡರು, ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು,” ಎಂದು ಹೇಳಿದರು.೭ [7]ಆದರೂ ಅವನು, ಈಗ ‘ದಾವೀದನಗರ’ ಎನಿಸಿಕೊಳ್ಳುವ ಸಿಯೋನ್ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.೮ [8]ಆ ದಿವಸ ದಾವೀದನು, “ಯೆಬೂಸಿಯರನ್ನು ಜಯಿಸಬೇಕೆಂದಿರುವವನು ಜಲದ್ವಾರದಲ್ಲೆ ಹತ್ತಿ ಹೋಗಿ ನನ್ನನ್ನು ದ್ವೇಷಿಸುವ ಕುರುಡರನ್ನೂ ಕುಂಟರನ್ನೂ ಕಂದಕದಲ್ಲಿ ನಾಶಮಾಡಿಬಿಡಲಿ,” ಎಂದು ಹೇಳಿದನು. ಆದುದರಿಂದಲೇ “ಕುರುಡರೂ ಕುಂಟರೂ ದೇವಾಲಯದೊಳಗೆ ಹೋಗಲಾಗದು,” ಎಂಬ ಹೇಳಿಕೆಯುಂಟು.೯ [9]ದಾವೀದನು ಆ ಕೋಟೆಗೆ ‘ದಾವೀದನಗರ’ ಎಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಿದ್ದನು. ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು.೧೦ [10]ಸೇನಾಧೀಶ್ವರ ಹಾಗು ಸರ್ವೇಶ್ವರರಾದ ದೇವರು ಅವನೊಂದಿಗೆ ಇದ್ದರು. ಆದ್ದರಿಂದ ಅವನು ಅಭಿವೃದ್ಧಿಹೊಂದುತ್ತಾ ಬಂದನು.೧೧ [11]ಟೈರಿನ ರಾಜನಾದ ಹೀರಾಮನು ದಾವೀದನಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಹಾಗು ಶಿಲ್ಪಿಗಳನ್ನು ಕಳುಹಿಸಿದನು. ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.೧೨ [12]ಹೀಗೆ ದಾವೀದನು, “ಸರ್ವೇಶ್ವರಸ್ವಾಮಿ ನನ್ನನ್ನು ಇಸ್ರಯೇಲ್ ಅರಸನನ್ನಾಗಿ ಸ್ಥಿರಪಡಿಸಿದ್ದಾರೆ, ತಮ್ಮ ಪ್ರಜೆಗಳಾದ ಇಸ್ರಯೇಲರ ನಿಮಿತ್ತ ನನ್ನ ರಾಜ್ಯವನ್ನು ಅಭಿವೃದ್ಧಿಪಡಿಸಿದ್ದಾರೆ,” ಎಂದು ತಿಳಿದುಕೊಂಡನು.೧೩ [13]ಹೆಬ್ರೋನಿನಿಂದ ಜೆರುಸಲೇಮಿಗೆ ಬಂದ ಮೇಲೆ ದಾವೀದನು ಹೆಚ್ಚುಮಂದಿ ಸ್ತ್ರೀಯರನ್ನು ಪತ್ನಿಯರನ್ನಾಗಿ ಹಾಗು ಉಪಪತ್ನಿಯರನ್ನಾಗಿ ಮಾಡಿಕೊಂಡನು. ಅವನಿಗೆ ಇನ್ನೂ ಕೆಲವು ಮಂದಿ ಗಂಡುಹೆಣ್ಣು ಮಕ್ಕಳು ಹುಟ್ಟಿದರು.೧೪ [14]ಅಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಇವು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,೧೫ [15]ಇಬ್ಹಾರ್, ಎಲೀಷೂವ, ನೆಫೆಗ್, ಯಾಫೀಯ,೧೬ [16]ಎಲೀಷಾಮ, ಎಲ್ಯಾದ ಹಾಗು ಎಲೀಫೆಲೆಟ್.೧೭ [17]ಇಸ್ರಯೇಲರು ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಆಗ ಅವರು ಅವನನ್ನು ಬಂಧಿಸಲು ಬಂದರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.೧೮ [18]ಫಿಲಿಷ್ಟಿಯರು ನಾಡಿನೊಳಗೆ ನುಗ್ಗಿ ರೆಫಾಯಿಮ್ ತಗ್ಗಿಗೆ ಬಂದು ಪಾಳೆಯ ಮಾಡಿಕೊಂಡರು.೧೯ [19]ದಾವೀದನು ಸರ್ವೇಶ್ವರನನ್ನು, “ನಾನು ಫಿಲಿಷ್ಟಿಯರ ಮೇಲೆ ದಾಳಿ ಮಾಡಬಹುದೇ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿರಾ?’ ಎಂದು ಕೇಳಿದನು. ಸರ್ವೇಶ್ವರ, “ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು,” ಎಂದು ಉತ್ತರಕೊಟ್ಟರು.೨೦ [20]ಆದುದರಿಂದ ಅವನು ಹೋಗಿ ಅವರನ್ನು ಸೋಲಿಸಿದನು. “ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ಸರ್ವೇಶ್ವರ ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ ಆ ಯುದ್ಧಸ್ಥಳಕ್ಕೆ, ‘ಬಾಳ್ ಪೆರಾಚೀಮ್’ ಎಂದು ಹೆಸರಿಟ್ಟನು.೨೧ [21]ಫಿಲಿಷ್ಟಿಯರು ಅಲ್ಲಿ ಬಿಟ್ಟುಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.೨೨ [22]ಫಿಲಿಷ್ಟಿಯರು ಇನ್ನೊಮ್ಮೆ ಹೊರಟುಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.೨೩ [23]ದಾವೀದನು ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಿದಾಗ ಅವರು, “ನೀನು ನೆಟ್ಟಗೆ ಹೋಗಿ ಅವರ ಮೇಲೆ ದಾಳಿ ಮಾಡಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.೨೪ [24]ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಸರ್ವೇಶ್ವರ, ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು.೨೫ [25]ದಾವೀದನು ಸರ್ವೇಶ್ವರನ ಆಜ್ಞಾನುಸಾರ ಮಾಡಿ ಫಿಲಿಷ್ಟಿಯರನ್ನು ಗೆಬದಿಂದ ಗೆಜರಿನವರೆಗೂ ಹೊಡೆದು ಓಡಿಸಿದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಸಮುವೇಲನು ೨ ೫ 00:00:00 00:00:00 0.5x 2.0x https://beblia.bible:81/BibleAudio/kannadakncl/2samuel/005.mp3 24 5