× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಸಮುವೇಲನು ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೬ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩1 1 1 ಕನ್ನಡ ಬೈಬಲ್ (KNCL) 2016 ಸಮುವೇಲನು ೨ ೬ ಟಿಪ್ಪಣಿಗಳನ್ನು ಉಳಿಸಿ ೧ [1]ಪುನಃ ದಾವೀದನು ಇಸ್ರಯೇಲರಲ್ಲಿ ಮೂವತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು ದೇವರ ಮಂಜೂಷವನ್ನು ತರುವುದಕ್ಕಾಗಿ ಅವರೆಲ್ಲರ ಸಹಿತ ಜುದೇಯ ನಾಡಿನ ಬಾಳಾ ಎಂಬಲ್ಲಿಗೆ ಹೋದನು.೨ [2]ಆ ಮಂಜೂಷವು ದೇವನಾಮದಿಂದ, ಅಂದರೆ ‘ಕೆರೂಬಿಯರ ನಡುವೆ ಆಸೀನರಾಗಿರುವ ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮದಿಂದ ಸುಪ್ರಸಿದ್ಧವಾಗಿತ್ತು.೩ [3]ದೇವರ ಆ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನು ಹಾಗು ಅಹೀಯೋವನು ಆ ಬಂಡಿಯನ್ನು ನಡೆಸಿದರು.೪ [4]ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲಾದ ಆ ದೇವರ ಮಂಜೂಷದ ಮುಂದೆ ಅಹೀಯೋವನು ನಡೆಯುತ್ತಿದ್ದನು.೫ [5]ದಾವೀದನೂ ಎಲ್ಲ ಇಸ್ರಯೇಲರೂ ಕಿನ್ನರಿ, ಸ್ವರಮಂಡಲ, ತಮಟೆ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು, ಪೂರ್ಣಾವೇಶದಿಂದ ಗೀತೆಗಳನ್ನು ಹಾಡುತ್ತಾ, ಸರ್ವೇಶ್ವರನ ಮುಂದೆ ನರ್ತನ ಮಾಡುತ್ತಾ ಹೋದರು.೬ [6]ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ತಡವರಿಸಿದವು. ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.೭ [7]ಆಗ ಸರ್ವೇಶ್ವರ ಉಜ್ಜನ ಮೇಲೆ ಕೋಪಗೊಂಡರು. ಅಂಥ ಅಗೌರವಕ್ಕಾಗಿ ಅವನನ್ನು ದಂಡಿಸಿದರು. ಅವನು ಅಲ್ಲೇ ದೇವರ ಮಂಜೂಷದ ಬಳಿ ಸತ್ತುಬಿದ್ದನು.೮ [8]ಸರ್ವೇಶ್ವರ ಉಜ್ಜನನ್ನು ಶಿಕ್ಷಿಸಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ ‘ಪೆರೆಚುಜ್ಜಾ’ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.೯ [9]ಆ ದಿನ ದಾವೀದನು ಸರ್ವೇಶ್ವರನಿಗೆ ಭಯಪಟ್ಟನು; ಆ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ ಎಂದು ಆಲೋಚಿಸಿದನು.೧೦ [10]ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.೧೧ [11]ಸರ್ವೇಶ್ವರನ ಮಂಜೂಷ ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಅವಧಿಯಲ್ಲಿ ಸರ್ವೇಶ್ವರ ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದರು.೧೨ [12]ಹೀಗೆ ಸರ್ವೇಶ್ವರ ತಮ್ಮ ಮಂಜೂಷದ ಕಾರಣ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾರೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸವದಿಂದ ದಾವೀದನಗರಕ್ಕೆ ತಂದನು.೧೩ [13]ಸರ್ವೇಶ್ವರನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದನಂತರ ದಾವೀದನು ಒಂದು ಎತ್ತನ್ನೂ ಒಂದು ಕೊಬ್ಬಿದ ಕರುವನ್ನೂ ಬಲಿದಾನ ಮಾಡಿದನು.೧೪ [14]ದಾವೀದನು ಏಫೋದೆಂಬ ನಾರುಮಡಿಯನ್ನು ಮಾತ್ರ ಉಟ್ಟುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ಪೂರ್ಣಾವೇಶದಿಂದ ಕುಣಿದಾಡಿದನು.೧೫ [15]ಹೀಗೆ ದಾವೀದನು ಹಾಗು ಎಲ್ಲ ಇಸ್ರಯೇಲರೂ ಜಯಕಾರ ಮಾಡುತ್ತಾ ತುತ್ತೂರಿ ಊದುತ್ತಾ ಸರ್ವೇಶ್ವರನ ಮಂಜೂಷವನ್ನು ತಂದರು.೧೬ [16]ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿ ದಾವೀದನು ಸರ್ವೇಶ್ವರನ ಮುಂದೆ ನಲಿದಾಡುತ್ತಾ ಕುಣಿಯುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲೇ ಅವನನ್ನು ತಿರಸ್ಕರಿಸಿದಳು.೧೭ [17]ಜನರು ಸರ್ವೇಶ್ವರನ ಮಂಜೂಷವನ್ನು ತಂದು ದಾವೀದನು ಕಟ್ಟಿಸಿದ್ದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿ ಇಟ್ಟರು; ಆಗ ದಾವೀದನು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದನು.೧೮ [18]ಇದಾದ ಮೇಲೆ ಅವನು ಸೇನಾಧೀಶ್ವರ ಸರ್ವೇಶ್ವರನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.೧೯ [19]ನೆರೆದುಬಂದು ಸಭೆ ಸೇರಿದ್ದ ಇಸ್ರಯೇಲರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನು ಹಾಗು ದ್ರಾಕ್ಷಿ ಹಣ್ಣಿನಿಂದ ಮಾಡಿದ ಉಂಡೆಯನ್ನು ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.೨೦ [20]ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದಳು. “ಈ ದಿನ ಇಸ್ರಯೇಲರ ಅರಸರು ಎಂಥ ಅಗೌರವದಿಂದ ನಡೆದುಕೊಂಡರು! ಹುಚ್ಚರಲ್ಲಿ ಒಬ್ಬರಂತೆ ತಮ್ಮ ಜನಸಾಮಾನ್ಯರಾದ ದಾಸಿಯರ ಮುಂದೆ ಬೆತ್ತಲೆಯಾಗಿದ್ದರಲ್ಲಾ!” ಎಂದಳು.೨೧ [21]ಆಗ ದಾವೀದನು ಆಕೆಗೆ, “ನಾನು ಮಾಡಿದ್ದು ಸರ್ವೇಶ್ವರನ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಯೇಲರ ಅರಸನನ್ನಾಗಿ ಮಾಡಿದ ಆ ಸರ್ವೇಶ್ವರನ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.೨೨ [22]ಇದಕ್ಕಿಂತಲೂ ಹೆಚ್ಚಾದ ತಿರಸ್ಕಾರ ಹೊಂದುವುದಕ್ಕೂ ನನ್ನನ್ನೇ ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ನಾನು ಸಿದ್ಧನು. ನೀನು ಹೇಳಿದ ದಾಸಿಯರಾದರೋ ನನ್ನನ್ನು ಹೇಗೂ ಸನ್ಮಾನಿಸುವರು!” ಎಂದನು.೨೩ [23]ಸೌಲನ ಮಗಳಾದ ಆ ಮೀಕಲಳಿಗೆ ಜೀವದಿಂದಿರುವವರೆಗೂ ಮಕ್ಕಳೇ ಆಗಲಿಲ್ಲ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಸಮುವೇಲನು ೨ ೬ 00:00:00 00:00:00 0.5x 2.0x https://beblia.bible:81/BibleAudio/kannadakncl/2samuel/006.mp3 24 6