× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಅರಸುಗಳು ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೦ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 ಕನ್ನಡ ಬೈಬಲ್ (KNCL) 2016 ಅರಸುಗಳು ೧ ೧೦ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರನ ನಾಮಮಹತ್ತಿನಿಂದ ಸೊಲೊಮೋನನ ಕೀರ್ತಿ ಹರಡಿತು. ಇದನ್ನು ಕೇಳಿದ ಶೆಬದ ರಾಣಿ ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಬಂದಳು.೨ [2]ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ, ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಜೆರುಸಲೇಮಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.೩ [3]ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು; ಅರಸನಿಗೆ ಬಿಡಿಸಲು ಕ್ಲಿಷ್ಟವಾದ ಒಗಟು ಒಂದೂ ಇರಲಿಲ್ಲ.೪ [4]ಶೆಬದ ರಾಣಿ ಸೊಲೊಮೋನನ ಹಲವಿಧವಾದ ಜ್ಞಾನೋಕ್ತಿಗಳನ್ನು ಕೇಳಿದಳು;೫ [5]ಅವನು ಕಟ್ಟಿಸಿದ ಅರಮನೆ, ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನು ಮತ್ತು ಸರ್ವೇಶ್ವರನ ಆಲಯದಲ್ಲಿ ಅವನು ಸಮರ್ಪಿಸುತ್ತಿದ್ದ ದಹನಬಲಿಗಳನ್ನು ನೋಡಿದಳು. ಇವುಗಳಿಂದ ಆಶ್ಚರ್ಯಚಕಿತಳಾಗಿ,೬ [6]“ನಾನು ನನ್ನ ದೇಶದಲ್ಲಿ ನಿಮ್ಮ ಜ್ಞಾನವನ್ನೂ ಸಾಧನೆಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.೭ [7]ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕೆ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿಮ್ಮ ಜ್ಞಾನವೈಭವಗಳು, ನಾನು ಕೇಳಿದ್ದಕ್ಕಿಂತ ಮಿಗಿಲಾಗಿವೆ. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ವರದಿ ಮಾಡಿರಲಿಲ್ಲ.೮ [8]ನಿಮ್ಮ ಪ್ರಜೆಗಳು ಭಾಗ್ಯವಂತರು! ಸದಾ ನಿಮ್ಮ ಸನ್ನಿಧಿಯಲ್ಲಿದ್ದು ನಿಮ್ಮ ಜ್ಞಾನವಾಕ್ಯಗಳನ್ನು ಕೇಳುವ ನಿಮ್ಮ ಸೇವಕರು ಧನ್ಯರು!೯ [9]ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.೧೦ [10]ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ.೧೧ [11]ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರ ಮಾತ್ರವಲ್ಲ ಸುಗಂಧದ ಮರವನ್ನೂ ರತ್ನಗಳನ್ನೂ ರಾಶಿರಾಶಿಯಾಗಿ ತಂದವು.೧೨ [12]ಅರಸನು ಸುಗಂಧದ ಮರದಿಂದ ದೇವಾಲಯಕ್ಕೆ ಹಾಗು ಅರಮನೆಗಳಿಗೆ ಮೆಟ್ಟಲುಗಳನ್ನು ವಾದ್ಯಗಾರರಿಗಾಗಿ ಕಿನ್ನರಿಗಳನ್ನು ಹಾಗು ಸ್ವರಮಂಡಲಗಳನ್ನು ಮಾಡಿಸಿದನು. ಆಗ ಬಂದಷ್ಟು ಸುಗಂಧದಮರ ಇಂದಿನವರೆಗೂ ಬರಲಿಲ್ಲ, ಮತ್ತು ಯಾರೂ ಅಷ್ಟನ್ನು ಕಾಣಲೇ ಇಲ್ಲ.೧೩ [13]ಅರಸ ಸೊಲೊಮೋನನು ಶೆಬದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ, ಆಕೆ ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆ ತನ್ನ ಪರಿವಾರದೊಡನೆ ಸ್ವದೇಶಕ್ಕೆ ಹೊರಟುಹೋದಳು.೧೪ [14]ಸೊಲೊಮೋನನಿಗೆ ದೇಶಾಂತರ ವ್ಯಾಪಾರಿಗಳು, ವರ್ತಕರು, ಅರೇಬಿಯದ ಅರಸರು ಹಾಗು ಪ್ರದೇಶಾಧಿಪತಿಗಳು ತರುತ್ತಿದ್ದ ಬಂಗಾರವಲ್ಲದೆ೧೫ [15]ಪ್ರತಿವರ್ಷ ಸುಮಾರು ಇಪ್ಪತ್ತಮೂರು ಸಾವಿರ ಕಿಲೋಗ್ರಾಂ ಬಂಗಾರ ದೊರಕುತ್ತಿತ್ತು.೧೬ [16]ಅರಸ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಸುಮಾರು ಏಳು ಕಿಲೋಗ್ರಾಂ ಬಂಗಾರ ಹಿಡಿಯಿತು.೧೭ [17]ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನೂ ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಇವುಗಳನ್ನು ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.೧೮ [18]ಇದಲ್ಲದೆ, ಅರಸನು ದೊಡ್ಡದಾದ ಒಂದು ದಂತಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು;೧೯ [19]ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿ ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳೂ, ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.೨೦ [20]ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು; ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.೨೧ [21]ಅರಸ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು; ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯಿರಲಿಲ್ಲ. ಆದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.೨೨ [22]ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷಿಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.೨೩ [23]ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿ ಇದ್ದನು.೨೪ [24]ಭೂಲೋಕದವರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ್ದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಅವನ ದರ್ಶನಕ್ಕೆ ಬರುತ್ತಿದ್ದರು.೨೫ [25]ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.೨೬ [26]ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸುತ್ತಿದ್ದನು. ಅವನ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಜೆರುಸಲೇಮಿನಲ್ಲಿ ತನ್ನ ಬಳಿಯಲ್ಲೇ ಇರಿಸಿದ್ದನು; ಉಳಿದವುಗಳನ್ನು ರಥಗಳಿಗಾಗಿಯೇ ನೇಮಿಸಿದ್ದ ಪಟ್ಟಣಗಳಲ್ಲಿ ಇರಿಸಿದ್ದನು.೨೭ [27]ಅವನ ಕಾಲದಲ್ಲಿ ಜೆರುಸಲೇಮಿನಲ್ಲಿದ್ದ ಬೆಳ್ಳಿಯು ಕಲ್ಲಿನಂತೆ ಹಾಗು ದೇವದಾರು ಮರಗಳು ಇಳಕಲ್ಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆ ವಿಪುಲವಾಗಿದ್ದವು.೨೮ [28]ಅರಸ ಸೊಲೊಮೋನನ ಕುದುರೆಗಳು ಈಜಿಪ್ಟ್ ದೇಶದವುಗಳು; ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಳೆಯಾಗಿ ಕೊಂಡುಕೊಂಡು ಬರುತ್ತಿದ್ದರು.೨೯ [29]ಈಜಿಪ್ಟ್ ದೇಶದಿಂದ ರಥಗಳನ್ನೂ ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ಬೆಳ್ಳಿನಾಣ್ಯಗಳನ್ನೂ ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳನ್ನೂ ಕೊಡಬೇಕಾಗಿತ್ತು. ಅವು ಹಿತ್ತಿಯರ ಮತ್ತು ಸಿರಿಯಾದವರ ಎಲ್ಲಾ ಅರಸರಿಗೆ ಇವರ ಮುಖಾಂತರವೇ ಮಾರಾಟವಾಗುತ್ತಿದ್ದವು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಅರಸುಗಳು ೧ ೧೦ 00:00:00 00:00:00 0.5x 2.0x https://beblia.bible:81/BibleAudio/kannadakncl/1kings/010.mp3 22 10