× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಅರಸುಗಳು ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩1 1 1 ಕನ್ನಡ ಬೈಬಲ್ (KNCL) 2016 ಅರಸುಗಳು ೧ ೧೩ ಟಿಪ್ಪಣಿಗಳನ್ನು ಉಳಿಸಿ ೧ [1]ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು.೨ [2]ಆ ಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಆ ಪೀಠವನ್ನು ಉದ್ದೇಶಿಸಿ, “ಎಲೈ ಪೀಠವೇ, ಪೀಠವೇ, ದಾವೀದನ ಸಂತಾನದಲ್ಲಿ ಯೋಷೀಯ ಎಂಬೊಬ್ಬನು ಹುಟ್ಟುವನು. ಅವನು, ನಿನ್ನ ಮೇಲೆ ಧೂಪಸುಡುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಬಲಿಕೊಡುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವುದು ಎಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.೩ [3]ಇದಲ್ಲದೆ, “ನನ್ನ ಮಾತು ಸರ್ವೇಶ್ವರನದು ಎಂಬುದಕ್ಕೆ ಈ ಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಗುವುದೇ ಗುರುತಾಗಿರುವುದು,” ಎಂದು ಹೇಳಿದನು.೪ [4]ಬೇತೇಲಿನ ಪೀಠದ ಬಳಿ ನಿಂತಿದ್ದ ಅರಸನು ಆ ದೈವಭಕ್ತನು ಪೀಠಕ್ಕೆ ವಿರೋಧವಾಗಿ ನುಡಿದದ್ದನ್ನು ಕೇಳಿ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದು ಆಜ್ಞಾಪಿಸಿದನು. ಕೂಡಲೆ ಅವನ ಕೈ ಒಣಗಿಹೋಯಿತು. ಅವನು ಅದನ್ನು ಹಿಂತೆಗೆದುಕೊಳ್ಳಲಾಗಲಿಲ್ಲ.೫ [5]ಬಲಿಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಯಿತು. ಹೀಗೆ ಆ ದೈವಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.೬ [6]ಅರಸನು ಆ ಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರನು ಪ್ರಸನ್ನನಾಗುವಂತೆ ಬೇಡಿಕೊ; ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಅವರನ್ನು ನನ್ನ ಪರವಾಗಿ ಪ್ರಾರ್ಥಿಸು,” ಎಂದು ಕೇಳಿದನು. ಅಂತೆಯೇ ಆ ದೈವಭಕ್ತನು ಸರ್ವೇಶ್ವರನನ್ನು ಬೇಡಿಕೊಂಡನು; ಅರಸನ ಕೈ ವಾಸಿಯಾಗಿ ಮೊದಲಿನಂತೆ ಆಯಿತು.೭ [7]ಆಗ ಅರಸನು, “ನನ್ನ ಮನೆಗೆ ಬಾ; ಸ್ವಲ್ಪ ಊಟಮಾಡಿ ಸುಧಾರಿಸಿಕೊ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ,” ಎಂದನು.೮ [8]ಆ ದೈವಭಕ್ತನು, “ನೀವು ನನಗೆ ನಿಮ್ಮ ಆಸ್ತಿಯಲ್ಲಿ ಅರ್ಧ ಕೊಟ್ಟರೂ ನಾನು ನಿಮ್ಮ ಸಂಗಡ ಬರುವುದಿಲ್ಲ. ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ.೯ [9]ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂದೂ ನನಗೆ ಸರ್ವೇಶ್ವರನ ಅಪ್ಪಣೆಯಾಗಿದೆ,” ಎಂದನು.೧೦ [10]ಅನಂತರ ಅವನು ಆ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟನು.೧೧ [11]ಬೇತೇಲಿನಲ್ಲಿ ಒಬ್ಬ ಮುದುಕ ಪ್ರವಾದಿ ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದೈವಭಕ್ತನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಅವನು ಅರಸನಿಗೆ ಹೇಳಿದ್ದನ್ನೂ ತಂದೆಗೆ ತಿಳಿಸಿದರು.೧೨ [12]“ಅವನು ಯಾವ ದಾರಿಯಿಂದ ಹೋದ?” ಎಂದು ತಂದೆ ಅವರನ್ನು ಕೇಳಲು, ಅವರು ಜುದೇಯ ನಾಡಿನ ಆ ದೈವಭಕ್ತ ಹೋದ ದಾರಿಯನ್ನು ತೋರಿಸಿದರು.೧೩ [13]ಆಗ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿಹಾಕಿರಿ,” ಎಂದು ಆಜ್ಞಾಪಿಸಲು ಅವರು ಹಾಕಿದರು. ಅವನು ಕತ್ತೆಯ ಮೇಲೆ ಕುಳಿತುಕೊಂಡು೧೪ [14]ಆ ದೈವಭಕ್ತನ ಹಿಂದೆಯೇ ಹೋಗಿ ಏಲಾವೃಕ್ಷದ ಕೆಳಗೆ ಕುಳಿತಿದ್ದ ಅವನನ್ನು ಕಂಡು, “ಜುದೇಯದಿಂದ ಬಂದ ದೈವಭಕ್ತನು ನೀನೋ?” ಎಂದು ಕೇಳಿದನು. ಅವನು ಹೌದೆಂದನು.೧೫ [15]ಆಗ ಆ ಮುದುಕನು, “ನೀನು ನನ್ನ ಮನೆಗೆ ಬಂದು ಊಟಮಾಡು,” ಎಂದು ಹೇಳಿದನು.೧೬ [16]ಅದಕ್ಕೆ ಅವನು, “ನಾನು ನಿನ್ನ ಸಂಗಡ ಬರಕೂಡದು; ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದೂ ನನಗೆ ಸರ್ವೇಶ್ವರನ ಅಪ್ಪಣೆಯಾಗಿದೆ,” ಎಂದು ಉತ್ತರಕೊಟ್ಟನು.೧೭ [17]ಆಗ ಆ ಮುದುಕನು, “ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರೆದುಕೊಂಡು ಬರಬೇಕೆಂದು ಸರ್ವೆಶ್ವರನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ,” ಎಂದು ಹೇಳಿದನು. ಆದರೆ ಈ ಮಾತು ಸುಳ್ಳಾಗಿತ್ತು.೧೮ [18]ದೈವಭಕ್ತನು ಹಿಂದಿರುಗಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.೧೯ [19]ಅವರು ಊಟಮಾಡುತ್ತಿರುವಾಗ ದೈವಭಕ್ತನನ್ನು ಹಿಂದಕ್ಕೆ ಕರೆದುತಂದ ಆ ಪ್ರವಾದಿಗೆ ಸರ್ವೇಶ್ವರ ಒಂದು ಸಂದೇಶವನ್ನು ದಯಪಾಲಿಸಿದರು.೨೦ [20]ಅವನು ಜುದೇಯ ನಾಡಿನ ಆ ದೈವಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರ ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಅವರ ಆಜ್ಞೆಯನ್ನು ಮೀರಿ, ಅವಿಧೇಯನಾಗಿ೨೧ [21]ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕಾಗಿ ಹಿಂದಿರುಗಿ ಬಂದುದರಿಂದ ನಿನ್ನ ಶವ ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.೨೨ [22]ಅನ್ನಪಾನಗಳನ್ನು ತೆಗೆದುಕೊಂಡನಂತರ ಆ ಮುದುಕ ಪ್ರವಾದಿ ತಾನು ಕರೆದುತಂದ ಪ್ರವಾದಿಯನ್ನು ಕಳುಹಿಸಲು ಕತ್ತೆಗೆ ತಡಿಹಾಕಿಸಿದನು.೨೩ [23]ಆ ದೈವಭಕ್ತನು ಸ್ವಲ್ಪ ದೂರಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವ ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.೨೪ [24]ಹಾದುಹೋಗುವವರು ಆ ಶವವು ದಾರಿಯಲ್ಲಿ ಬಿದ್ದು ಇರುವುದನ್ನೂ ಸಿಂಹವು ಅದರ ಬಳಿಯಲ್ಲೆ ನಿಂತಿರುವುದನ್ನೂ ಕಂಡು ಮುದುಕ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು.೨೫ [25]ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿ, ಈ ಸುದ್ದಿಯನ್ನು ಕೇಳಿ, “ಆ ಶವವು ದೈವಭಕ್ತನದೇ ಆಗಿರಬೇಕು. ಅವನು ಸರ್ವೇಶ್ವರನ ಆಜ್ಞೆಗೆ ಅವಿಧೇಯನಾದುದರಿಂದ ಸರ್ವೇಶ್ವರ ಅವನ ವಿಷಯದಲ್ಲಿ ತಾವು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದರು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು,” ಎಂದು ಹೇಳಿ,೨೬ [26]ಕತ್ತೆಗೆ ತಡಿಹಾಕಬೇಕೆಂದು ಮಕ್ಕಳಿಗೆ ಆಜ್ಞಾಪಿಸಿದನು. ಅವರು ಹಾಕಿದರು.೨೭ [27]ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.೨೮ [28]ಪ್ರವಾದಿಯು ಆ ದೈವಭಕ್ತನ ಶವವನ್ನು ಹೂಳಿ ಗೋಳಾಡಬೇಕೆಂದು, ಕತ್ತೆಯ ಮೇಲೆ ಹಾಕಿ,೨೯ [29]ತನ್ನ ಊರಿಗೆ ತೆಗೆದುಕೊಂಡು ಬಂದು, ತನ್ನ ಸ್ಮಶಾನ ಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ,” ಎಂದು ಗೋಳಾಡಿದರು.೩೦ [30]ಅನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ನನ್ನ ಶವವನ್ನು ಆ ದೈವಭಕ್ತನ ಶವ ಇರುವಲ್ಲೇ ಸಮಾಧಿಮಾಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳಿರುವಲ್ಲೇ ಇಡಿ.೩೧ [31]ಅವನು ಸರ್ವೇಶ್ವರನ ಅಪ್ಪಣೆಯಿಂದ ಬೇತೇಲಿನ ಬಲಿಪೀಠಕ್ಕೆ ವಿರುದ್ಧ ಹಾಗು ಸಮಾರಿಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳಿಗೆ ವಿರುದ್ಧ ಹೇಳಿದ ಮಾತುಗಳು ನಿಸ್ಸಂದೇಹವಾಗಿ ನೆರವೇರುವುವು,” ಎಂದನು.೩೨ [32]ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ಪದೇ ಪದೇ ಜನಸಾಮಾನ್ಯರನ್ನು ಉನ್ನತಸ್ಥಾನಗಳಿಗೆ ನೇಮಿಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.೩೩ [33]ಈ ಕಾರಣ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ವಿಸರ್ಜಿತರಾಗಿ ನಿರ್ನಾಮವಾದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಅರಸುಗಳು ೧ ೧೩ 00:00:00 00:00:00 0.5x 2.0x https://beblia.bible:81/BibleAudio/kannadakncl/1kings/013.mp3 22 13