× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಅರಸುಗಳು ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮1 1 1 ಕನ್ನಡ ಬೈಬಲ್ (KNCL) 2016 ಅರಸುಗಳು ೧ ೩ ಟಿಪ್ಪಣಿಗಳನ್ನು ಉಳಿಸಿ ೧ [1]ಸೊಲೊಮೋನನು ಈಜಿಪ್ಟಿನ ಅರಸ ಫರೋಹನ ಮಗಳನ್ನು ಮದುವೆಮಾಡಿಕೊಂಡು ಅವನ ಅಳಿಯನಾದ. ತನ್ನ ಅರಮನೆಯನ್ನು, ಸರ್ವೇಶ್ವರನ ಮಹಾದೇವಾಲಯವನ್ನು ಹಾಗು ಜೆರುಸಲೇಮಿನ ಸುತ್ತಣ ಗೋಡೆಯನ್ನು ಕಟ್ಟಿಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲೇ ಇರಿಸಿಕೊಂಡನು.೨ [2]ಅಲ್ಲಿಯವರೆಗೂ ಸರ್ವೇಶ್ವರಸ್ವಾಮಿಯ ನಾಮಕ್ಕೋಸ್ಕರ ಆಲಯವೇ ಇರಲಿಲ್ಲ. ಆದುದರಿಂದ ಜನರು ಪೂಜಾಸ್ಥಳಗಳಲ್ಲಿ ಬಲಿಯರ್ಪಣೆ ಮಾಡುತ್ತಿದ್ದರು.೩ [3]ಸೊಲೊಮೋನನು ಸರ್ವೇಶ್ವರನನ್ನು ಪ್ರೀತಿಸಿ, ತನ್ನ ತಂದೆ ದಾವೀದನ ವಿಧಿಗಳನ್ನು ಕೈಗೊಳ್ಳುತ್ತಿದ್ದರೂ ಆ ಪೂಜಾಸ್ಥಳಗಳಲ್ಲೇ ಬಲಿಯರ್ಪಿಸುತ್ತಿದ್ದನು; ಅಲ್ಲಿಯೇ ಧೂಪಾರತಿ ಎತ್ತುತ್ತಿದ್ದನು.೪ [4]ಒಮ್ಮೆ ಅರಸ ಸೊಲೊಮೋನನು ಬಲಿಯರ್ಪಿಸುವುದಕ್ಕಾಗಿ ಪೂಜಾಸ್ಥಳಗಳಲ್ಲೇ ಪ್ರಾಮುಖ್ಯವಾದ ಗಿಬ್ಯೋನಿಗೆ ಹೋದನು. ಅಲ್ಲಿನ ಪೀಠದ ಮೇಲೆ ಸಹಸ್ರಬಲಿಗಳನ್ನು ಸಮರ್ಪಿಸಿದಾಗ,೫ [5]ದೇವರಾದ ಸರ್ವೇಶ್ವರ ಆ ರಾತ್ರಿ ಕನಸಿನಲ್ಲಿ ಅವನಿಗೆ ಕಾಣಿಸಿಕೊಂಡರು; “ನಿನಗೆ ಯಾವ ವರಬೇಕು ಕೇಳಿಕೋ,” ಎಂದು ಹೇಳಿದರು.೬ [6]ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ.೭ [7]ನನ್ನ ದೇವರಾದ ಸರ್ವೇಶ್ವರಾ, ನನ್ನ ತಂದೆಗೆ ಬದಲಾಗಿ ನಿಮ್ಮಿಂದ ಅರಸನಾಗಿ ನೇಮಕಗೊಂಡಿರುವ ನಿಮ್ಮ ದಾಸನಾದ ನಾನು ಇನ್ನೂ ಚಿಕ್ಕವನು.೮ [8]ವ್ಯವಹಾರಜ್ಞಾನ ಇಲ್ಲದವನು; ನಿಮ್ಮ ದಾಸನಾದ ನಾನು ಅಸಂಖ್ಯಾತ ಮಹಾಜನಾಂಗವಾದ ನಿಮ್ಮ ಸ್ವಕೀಯ ಪ್ರಜೆಯ ಮಧ್ಯೆ ಇದ್ದೇನೆ.೯ [9]ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.೧೦ [10]ಸೊಲೊಮೋನನ ಈ ಬಿನ್ನಹವನ್ನು ಸರ್ವೇಶ್ವರನಾದ ದೇವರು ಮೆಚ್ಚಿದರು.೧೧ [11]ಅವರು ಆತನಿಗೆ, “ನೀನು ದೀರ್ಘಾಯುಷ್ಯವನ್ನಾಗಲಿ, ಸಿರಿಸಂಪತ್ತನ್ನಾಗಲಿ, ಶತ್ರುವಿನಾಶವನ್ನಾಗಲಿ ಕೇಳಿಕೊಳ್ಳಲಿಲ್ಲ. ನ್ಯಾಯನಿರ್ಣಯಿಸುವುದಕ್ಕೆ ಬೇಕಾದ ವಿವೇಕವನ್ನು ಬೇಡಿಕೊಂಡೆ.೧೨ [12]ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ.೧೩ [13]ಇದಲ್ಲದೆ, ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಸಿರಿಸಂಪತ್ತಿನಲ್ಲಿಯೂ ಘನತೆ ಗೌರವದಲ್ಲಿಯೂ ನಿನಗೆ ಸಮಾನವಾದ ಅರಸನು ಇನ್ನೊಬ್ಬನಿರುವುದಿಲ್ಲ.೧೪ [14]ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು.೧೫ [15]ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಕನಸೆಂದು ತಿಳಿದುಕೊಂಡನು. ಅವನು ಜೆರುಸಲೇಮಿಗೆ ಬಂದನಂತರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿ, ತನ್ನ ಎಲ್ಲಾ ಪರಿವಾರದವರಿಗೆ ಔತಣವನ್ನು ಏರ್ಪಡಿಸಿದನು.೧೬ [16]ಒಂದು ದಿನ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು.೧೭ [17]ಅವರಲ್ಲಿ ಒಬ್ಬಳು ಅರಸನಿಗೆ, “ಒಡೆಯಾ, ಕೇಳಿ; ನಾನೂ ಇವಳೂ ಒಂದೇ ಮನೆಯಲ್ಲಿ ವಾಸಿಸುತ್ತೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಒಂದು ಮಗವನ್ನು ಹೆತ್ತೆ.೧೮ [18]ಮೂರನೆಯ ದಿನದಲ್ಲಿ ಇವಳೂ ಹೆತ್ತಳು. ನಾವಿಬ್ಬರೂ ಒಟ್ಟಿಗೆ ಇದ್ದೆವು; ನಮ್ಮಿಬ್ಬರ ಹೊರತು ಆ ಮನೆಯಲ್ಲಿ ಯಾರೂ ಇರಲಿಲ್ಲ.೧೯ [19]ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು.೨೦ [20]ಮಧ್ಯರಾತ್ರಿಯಲ್ಲಿ ಇವಳೆದ್ದು, ನಿಮ್ಮ ಸೇವಕಳಾದ ನಾನು ಗಾಢನಿದ್ರೆಯಲ್ಲಿದ್ದಾಗ, ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಮಗ್ಗುಲಲ್ಲಿ ಇಟ್ಟುಕೊಂಡಳು. ಸತ್ತುಹೋದ ತನ್ನ ಮಗುವನ್ನು ನನ್ನ ಮಗ್ಗುಲಲ್ಲಿಟ್ಟಳು.೨೧ [21]ನಾನು ಬೆಳಿಗ್ಗೆ ಎದ್ದು ಮಗುವಿಗೆ ಮೊಲೆಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ,” ಎಂದು ಹೇಳಿದಳು.೨೨ [22]ಆಗ ಎರಡನೆಯವಳು, “ಹಾಗಲ್ಲ, ಬದುಕಿರುವವನು ನನ್ನ ಮಗ; ಸತ್ತಿರುವವನು ನಿನ್ನ ಮಗ,” ಎಂದು ನುಡಿದಳು. ಮೊದಲನೆಯವಳು ಮತ್ತೆ, “ಇಲ್ಲ ಸತ್ತಿರುವವನು ನಿನ್ನ ಮಗ ಬದುಕಿರುವವನು ನನ್ನ ಮಗ,” ಎಂದಳು. ಹೀಗೆ ಅವರು ಅರಸನ ಮುಂದೆ ವಾದಿಸುತ್ತಾ ಇದ್ದರು.೨೩ [23]ಆಗ ಅರಸನು, “ಜೀವದಿಂದಿರುವ ಕೂಸು ನನ್ನದು, ಸತ್ತಿರುವುದು ನಿನ್ನದು,’ ಎಂದು ಒಬ್ಬಳು ಹೇಳುತ್ತಾಳೆ; ಇನ್ನೊಬ್ಬಳು, ‘ಇಲ್ಲ, ಸತ್ತಿರುವುದು ನಿನ್ನದು, ಜೀವದಿಂದಿರುವುದು ನನ್ನದು,’ ಎನ್ನುತ್ತಾಳೆ.೨೪ [24]ನನಗೊಂದು ಕತ್ತಿಯನ್ನು ತಂದುಕೊಡಿ,” ಎಂದು ಸೇವಕರಿಗೆ ಹೇಳಿದನು.೨೫ [25]ಅವರು ತಂದರು. ಅರಸನು ಅವರಿಗೆ, “ಜೀವದಿಂದಿರುವ ಕೂಸನ್ನು ಕಡಿದು, ಎರಡು ಭಾಗಮಾಡಿ, ಅರ್ಧವನ್ನು ಅವಳಿಗೂ ಅರ್ಧವನ್ನು ಇವಳಿಗೂ ಕೊಡಿ,” ಎಂದು ಅಪ್ಪಣೆಮಾಡಿದನು.೨೬ [26]ಆಗ, ಜೀವದಿಂದಿದ್ದ ಕೂಸಿನ ನಿಜವಾದ ತಾಯಿಗೆ ಕೂಸಿನ ವಿಷಯದಲ್ಲಿ ಕರುಳುಕರಗಿತು; “ನನ್ನೊಡೆಯಾ, ಬೇಡಿ; ಬದುಕಿರುವ ಕೂಸನ್ನು ಅವಳಿಗೇ ಕೊಟ್ಟುಬಿಡಿ; ಅದನ್ನು ಕೊಲ್ಲಿಸಬೇಡಿ,” ಎಂದು ಬೇಡಿಕೊಂಡಳು; ಎರಡನೆಯವಳು, “ಅದು ನನಗೂ ಬೇಡ, ನಿನಗೂ ಬೇಡ, ಕಡಿಯಲಿ,” ಎಂದು ಕೂಗಿದಳು.೨೭ [27]ಕೂಡಲೆ ಅರಸನು, “ಬದುಕಿರುವ ಕೂಸನ್ನು ಕೊಲ್ಲಬೇಡಿ, ಅದನ್ನು ಆ ಸ್ತ್ರೀಗೆ ಕೊಡಿ; ಅವಳೇ ಅದರ ತಾಯಿ,” ಎಂದು ಆಜ್ಞಾಪಿಸಿದನು.೨೮ [28]ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಅರಸುಗಳು ೧ ೩ 00:00:00 00:00:00 0.5x 2.0x https://beblia.bible:81/BibleAudio/kannadakncl/1kings/003.mp3 22 3