× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಅರಸುಗಳು ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ಅರಸುಗಳು ೨ ೧ ಟಿಪ್ಪಣಿಗಳನ್ನು ಉಳಿಸಿ ೧ [1]ಅಹಾಬನು ಮರಣಹೊಂದಿದ ನಂತರ ಮೋವಾಬ್ಯರು ಇಸ್ರಯೇಲರ ವಿರುದ್ಧ ದಂಗೆ ಎದ್ದರು.೨ [2]ಅಹಜ್ಯನು ಸಮಾರಿಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ನೀವು ಎಕ್ರೋನಿನ ದೇವರಾದ ‘ಬಾಳ್ಜೆಬೂಬ’ನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ, ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು.೩ [3]ಆದರೆ ಸರ್ವೇಶ್ವರ ಸ್ವಾಮಿಯ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರಿಯದ ಅರಸನ ಆ ಸೇವಕರನ್ನು ಭೇಟಿಯಾಗು. ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ?೪ [4]ಈ ಕಾರಣ ಅಹಜ್ಯನು ತಾನು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು,” ಎಂದು ಆಜ್ಞಾಪಿಸಿದರು. ಎಲೀಯನು ಹಾಗೆಯೇ ಮಾಡಿದನು.೫ [5]ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ ಅರಸನು, “ನೀವು ಹಿಂದಿರುಗಿದ್ದೇಕೆ?” ಎಂದು ಕೇಳಿದನು.೬ [6]ಅದಕ್ಕೆ ಅವರು, “ಒಬ್ಬ ವ್ಯಕ್ತಿ ನಮ್ಮನ್ನು ಎದುರುಗೊಂಡು, “ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿರಿ. ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೀಗೆಂದು ಹೇಳಿರಿ: ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಹೇಳಿರಿ’ ಎಂದು ಆಜ್ಞಾಪಿಸಿದನು,” ಎಂದು ಉತ್ತರಕೊಟ್ಟರು.೭ [7]ಅದಕ್ಕೆ ಅರಸನು, “ನಿಮ್ಮನ್ನು ಭೇಟಿಯಾಗಿ ಹೀಗೆಂದು ನುಡಿದ ಆ ವ್ಯಕ್ತಿ ಹೇಗಿದ್ದನು?” ಎಂದು ವಿಚಾರಿಸಿದನು.೮ [8]ಅವರು, “ಅವನು ಕಂಬಳಿಯನ್ನು ಹೊದ್ದುಕೊಂಡಿದ್ದ; ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು,” ಎಂದರು. ಆಗ ಅರಸನು, “ಆ ವ್ಯಕ್ತಿ ತಿಷ್ಬೀಯನಾದ ಎಲೀಯನೇ ಆಗಿರಬೇಕು,” ಎಂದುಕೊಂಡನು.೯ [9]ಬಳಿಕ ಅರಸನು ಎಲೀಯನನ್ನು ಕರೆದುತರುವುದಕ್ಕಾಗಿ ಒಬ್ಬ ಪಂಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡನು. “ದೈವಪುರುಷರೇ, ಇಳಿದು ಬನ್ನಿ, ಅರಸರು ತಮ್ಮನ್ನು ಕರೆಯುತ್ತಿದ್ದಾರೆ,” ಎಂದು ಆಮಂತ್ರಿಸಿದನು.೧೦ [10]ಅದಕ್ಕೆ ಎಲೀಯನು, “ನಾನು ದೈವಪುರುಷನಾಗಿ ಇರುವುದು ನಿಜವಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ,” ಎಂದನು. ಕೂಡಲೆ ಆಕಾಶದಿಂದ ಬೆಂಕಿಬಿದ್ದು ಅವನನ್ನೂ ಅವನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.೧೧ [11]ಆಮೇಲೆ ಅರಸನು ಇನ್ನೊಬ್ಬ ಪಂಶಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳ ಸಮೇತ ಕಳುಹಿಸಿದನು. ಇವನು ಬಂದು ಎಲೀಯನಿಗೆ, “ದೈವಪುರುಷರೇ, ಬೇಗನೆ ಇಳಿದು ಬನ್ನಿ; ಅರಸರು ನಿಮ್ಮನ್ನು ಕರೆಯುತ್ತಾರೆ,” ಎಂದು ಹೇಳಿದನು.೧೨ [12]ಅದಕ್ಕೆ ಎಲೀಯನು, “ನಾನು ದೈವಪುರುಷ ಹೌದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ,” ಎಂದನು. ಕೂಡಲೆ ದೇವರು ಆಕಾಶದಿಂದ ಕಳುಹಿಸಿದ ಬೆಂಕಿ ಬಂದು ಅವನನ್ನೂ ಅವನ ಐವತ್ತುಮಂದಿ ಸಿಪಾಯಿಗಳನ್ನೂ ಸುಟ್ಟುಬಿಟ್ಟಿತು.೧೩ [13]ಅರಸನು ಮತ್ತೊಬ್ಬ ಪಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು, ಎಲೀಯನ ಮುಂದೆ ಮೊಣಕಾಲೂರಿ, “ದೈವಪುರುಷರೇ, ನನ್ನ ಮತ್ತು ನನ್ನ ಸೇವಕರಾದ ಈ ಐವತ್ತುಮಂದಿಯ ಪ್ರಾಣ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದ್ದಾಗಿರಲಿ;೧೪ [14]ಆಕಾಶದಿಂದ ಬೆಂಕಿಬಿದ್ದು ನನಗೆ ಮುಂದೆ ಬಂದ ಆ ಇಬ್ಬರು ಪಂಚಾಶದಧಿಪತಿಗಳನ್ನೂ ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲವೆ? ನನ್ನ ಪ್ರಾಣವಾದರೂ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದೆಂದು ಮಾನ್ಯವಾಗಲಿ,” ಎಂದು ಬೇಡಿಕೊಂಡನು.೧೫ [15]ಆಗ ಸರ್ವೇಶ್ವರನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು; ಹೆದರಬೇಡ,” ಎಂದು ಹೇಳಿದನು. ಆದ್ದರಿಂದ ಎಲೀಯನು ಎದ್ದು ಇವನ ಜೊತೆಯಲ್ಲೇ ಅರಸನ ಬಳಿಗೆ ಹೋದನು.೧೬ [16]ಅರಸನಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇಕೆ? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದನು.೧೭ [17]ಸರ್ವೇಶ್ವರ ಎಲೀಯನ ಮುಖಾಂತರ ಮುಂತಿಳಿಸಿದಂತೆಯೇ ಅರಸನು ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ. ಅವನ ಸ್ಥಾನದಲ್ಲಿ ಅವನ ತಮ್ಮ ಯೋರಾಮನು, ಯೆಹೂದ್ಯರ ಅರಸ ಯೆಹೋಷಾಫಾಟನ ಮಗ ಯೆಹೋರಾಮನ ಅಳ್ವಿಕೆಯ ಎರಡನೆಯ ವರ್ಷದಲ್ಲಿ, ಅರಸನಾದನು.೧೮ [18]ಅಹಜ್ಯನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ಅರಸುಗಳ ಇತಿಹಾಸ ಗ್ರಂಥದಲ್ಲಿ ಲಿಖಿತವಾಗಿವೆ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಅರಸುಗಳು ೨ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/2kings/001.mp3 25 1