× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಅರಸುಗಳು ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 ಕನ್ನಡ ಬೈಬಲ್ (KNCL) 2016 ಅರಸುಗಳು ೨ ೧೧ ಟಿಪ್ಪಣಿಗಳನ್ನು ಉಳಿಸಿ ೧ [1]ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದಾಗ ರಾಜಸಂತಾನದವರನ್ನೆಲ್ಲಾ ಬೇಗನೆ ಸಂಹರಿಸಿಬಿಟ್ಟಳು.೨ [2]ಆದರೆ ಅರಸ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬ ಎಂಬಾಕೆ, ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗ ಯೆಹೋವಾಷನನ್ನು, ಹತವಾಗುವುದಕ್ಕಿದ್ದ ರಾಜಪುತ್ರರ ಮಧ್ಯೆಯಿಂದ, ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಬಿಟ್ಟಳು.೩ [3]ಹೀಗೆ ಅವನು ಅತಲ್ಯಳಿಂದ ಹತವಾಗದೆ ತಪ್ಪಿಸಿಕೊಂಡು, ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಸರ್ವೇಶ್ವರನ ಆಲಯದಲ್ಲಿದ್ದನು. ಈ ಆರು ವರ್ಷಗಳಲ್ಲಿ ಅತಲ್ಯಳೇ ನಾಡನ್ನು ಆಳುತ್ತಿದ್ದಳು.೪ [4]ಏಳನೆಯ ವರ್ಷದಲ್ಲಿ ಯೆಹೋಯಾದಾವನು ‘ಕಾರಿ’ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಸರ್ವೇಶ್ವರನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಪ್ಪಂದವನ್ನು ಮಾಡಿಕೊಂಡನಂತರ ರಾಜಕುಮಾರನನ್ನು ತೋರಿಸಿದನು.೫ [5]ಅನಂತರ ಅವರಿಗೆ, “ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗ ಅರಮನೆಯನ್ನು ಕಾಯಬೇಕು;೬ [6]ಇನ್ನೊಂದು ಭಾಗ ಸೂರ್ ಬಾಗಿಲಿನಲ್ಲಿಯೂ ಮತ್ತೊಂದು ಭಾಗ ಕಾವಲುದಂಡಿನ ಹಿಂದಣ ಬಾಗಿಲಿನಲ್ಲಿಯೂ ಇರಬೇಕು. ಈ ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು.೭ [7]ಅದೂ ಅಲ್ಲದೆ, ಸಬ್ಬತ್ ದಿನದಲ್ಲಿ ಕಾಯುವುದಕ್ಕಾಗಿ ಬರುವ ನಿಮ್ಮ ಇಮ್ಮಡಿಯಾದ ಸೈನ್ಯವು ಸರ್ವೇಶ್ವರನ ಆಲಯದಲ್ಲಿ ಅರಸನನ್ನು ಕಾಯಬೇಕು.೮ [8]ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು, ಅವನ ಸುತ್ತಲೂ ನಿಂತು, ನಿಮ್ಮ ಗುಂಪಿನಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು; ಇದು ನನ್ನ ಅಪ್ಪಣೆ,” ಎಂದು ಹೇಳಿದನು.೯ [9]ಯಾಜಕನಾದ ಯೆಹೋಯಾದವನು ಆಜ್ಞಾಪಿಸಿದಂತೆ ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ಅವನ ಬಳಿಗೆ ಬಂದರು.೧೦ [10]ಅವರು ಆ ಶತಾಧಿಪತಿಗಳಿಗೆ ಸರ್ವೇಶ್ವರನ ಆಲಯದಲ್ಲಿ ಇಡಲಾಗಿದ್ದ ದಾವೀದನ ಬರ್ಜಿಯನ್ನೂ ಗುರಾಣಿಗಳನ್ನೂ ಕೊಟ್ಟನು.೧೧ [11]ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕಾಗಿ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಬಲಿಪೀಠದವರೆಗು, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗು, ಸಾಲಾಗಿ ನಿಂತರು.೧೨ [12]ಯೆಹೋಯಾದವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು, ‘ಅರಸನು ಚಿರಂಜೀವಿಯಾಗಿರಲಿ!’ ಎಂದು ಜಯಕಾರ ಮಾಡಿದರು.೧೩ [13]ಅತಲ್ಯಳು ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ, ಅವರು ಕೂಡಿದ್ದ ಸರ್ವೇಶ್ವರನ ಆಲಯಕ್ಕೆ ಬಂದಳು.೧೪ [14]ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಜನಸಾಮಾನ್ಯರೆಲ್ಲರು ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆ ಕೋಪದಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.೧೫ [15]ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ ಶತಾಧಿಪತಿಗಳಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ, ಹೊರಗೆ ಕರೆದುಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.೧೬ [16]ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ಅರಮನೆಗೆ ಒಯ್ದು ಅಲ್ಲಿ ಹತಿಸಿದರು.೧೭ [17]ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಸರ್ವೇಶ್ವರನ ಪ್ರಜೆಗಳಾಗಿರುವುದಾಗಿ ಪ್ರಮಾಣಮಾಡಿದರು. ಇದಲ್ಲದೆ, ರಾಜನಿಗೂ ಪ್ರಜೆಗಳಿಗೂ ಒಂದು ಒಪ್ಪಂದವಾಯಿತು.೧೮ [18]ಯೆಹೂದ್ಯರೆಲ್ಲರೂ ಬಾಳ್ ದೇವತೆಯ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಪೀಠಗಳ ಮುಂದೆಯೇ ಕೊಂದು, ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗು ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟನು;೧೯ [19]ಬಳಿಕ ಶತಾಧಿಪತಿಗಳು, ‘ಕಾರಿ’ ಎನಿಸಿಕೊಳ್ಳುವ ಸೈನ್ಯ, ಕಾವಲುದಂಡು ಹಾಗು ಜನಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ, ಅರಮನೆಗೆ ಕರೆದುಕೊಂಡು ಹೋಗಿ, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.೨೦ [20]ನಾಡಿನವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿಯಿತ್ತು; ಅತಲ್ಯಳನ್ನು ಅರಮನೆಯಲ್ಲೇ ಕತ್ತಿಯಿಂದ ಸಂಹರಿಸಿದರು.೨೧ [21]ಹೀಗೆ ಯೆಹೋವಾಷನು ಅರಸನಾದಾಗ ಅವನಿಗೆ ಏಳು ವರ್ಷ ವಯಸ್ಸು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಅರಸುಗಳು ೨ ೧೧ 00:00:00 00:00:00 0.5x 2.0x https://beblia.bible:81/BibleAudio/kannadakncl/2kings/011.mp3 25 11