× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಅರಸುಗಳು ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 ಕನ್ನಡ ಬೈಬಲ್ (KNCL) 2016 ಅರಸುಗಳು ೨ ೧೨ ಟಿಪ್ಪಣಿಗಳನ್ನು ಉಳಿಸಿ ೧ [1]ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.೨ [2]ಯಾಜಕನಾದ ಯೆಹೋಯಾದವನು ಅವನಿಗೆ ಬೋಧಕನಾಗಿದ್ದನು. ಆಗ ಅವನು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.೩ [3]ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.೪ [4]ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.೫ [5]ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣ ತೆಗೆದುಕೊಳ್ಳಬೇಕು,” ಎಂದು ಆಜ್ಞಾಪಿಸಿದನು.೬ [6]ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದವರೆಗೂ ದೇವಾಲಯದ ದುರಸ್ತುಕಾರ್ಯವನ್ನು ಕೈಗೊಂಡಿರಲಿಲ್ಲ.೭ [7]ಆದುದರಿಂದ ಅವನು ಯೆಹೋಯಾದಾವ ಮೊದಲಾದ ಯಾಜಕರನ್ನು ಕರೆದು, “ನೀವು ಈವರೆಗೂ ದೇವಾಲಯವನ್ನೇಕೆ ದುರಸ್ತು ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರು ತಂದುಕೊಡುವ ಹಣವನ್ನು ನಿಮ್ಮ ಕೈಯಲ್ಲಿಟ್ಟುಕೊಳ್ಳದೆ. ಕೂಡಲೆ ಅದನ್ನು ದೇವಾಲಯದ ದುರಸ್ತಿಗಾಗಿ ಕೊಡಿ,” ಎಂದು ಹೇಳಿದನು.೮ [8]ಆಗ ಯಾಜಕರು, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ, ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ,” ಎಂಬುದಾಗಿ ಮಾತುಕೊಟ್ಟರು.೯ [9]ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು, ಅದರ ಮುಚ್ಚಳದಲ್ಲಿ ತೂತುಮಾಡಿ, ಅದನ್ನು ಸರ್ವೇಶ್ವರನ ಆಲಯದ ಬಾಗಿಲಿನ ಬಲಗಡೆಯಲ್ಲಿ, ಬಲಿಪೀಠದ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಸರ್ವೇಶ್ವರನ ಆಲಯಕ್ಕೆ ತರಲಾದ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.೧೦ [10]ಪೆಟ್ಟಿಗೆಯಲ್ಲಿ ತಕ್ಕಷ್ಟು ಹಣಕೂಡಿದೆಯೆಂದು ಕಂಡುಬಂದಾಗೆಲ್ಲಾ, ರಾಜಲೇಖಕನು ಹಾಗು ಮಹಾಯಾಜಕನು ಬಂದು ಅದನ್ನು ಚೀಲಗಳಲ್ಲಿ ಹಾಕಿ, ತೂಕಮಾಡಿ, ಸರ್ವೇಶ್ವರನ ಆಲಯದ ಹಣವು ಇಷ್ಟಿಷ್ಟು ಆಯಿತೆಂದು ಬರೆದುಕೊಂಡು,೧೧ [11]ಅದನ್ನು ಆಲಯದ ಕೆಲಸವನ್ನು ನಡಿಸುವ ಮೇಸ್ತ್ರಿಗಳಿಗೆ ಒಪ್ಪಿಸುತ್ತಿದ್ದರು; ಇವರು ಅದನ್ನು ಅಲ್ಲಿ ಕೆಲಸಮಾಡುವ ಬಡಗಿ, ಶಿಲ್ಪಿ, ಉಪ್ಪಾರ, ಕಲ್ಲುಕುಟಿಕ ಅವರ ಸಂಬಳಕ್ಕಾಗಿಯೂ೧೨ [12]ಮರ, ಕೆತ್ತಿದ ಕಲ್ಲು, ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಉಪಯೋಗಿಸುತ್ತಿದ್ದರು.೧೩ [13]ಸರ್ವೇಶ್ವರನ ಆಲಯಕ್ಕೆ ತರಲಾದ ಹಣವನ್ನು ದುರಸ್ತುಕಾರ್ಯದವರ ಸಂಬಳಕ್ಕಾಗಿ ಉಪಯೋಗಿಸಿದರೇ ಹೊರತು,೧೪ [14]ಸರ್ವೇಶ್ವರನ ಆಲಯದ ಬೆಳ್ಳಿ ಬಟ್ಟಲು, ಕತ್ತರಿ, ಬೋಗುಣಿ, ತುತೂರಿ, ಬೆಳ್ಳಿ, ಬಂಗಾರದ ಪಾತ್ರೆ, ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸಲಿಲ್ಲ.೧೫ [15]ಕೆಲಸಗಾರರಿಗೆ ಸಂಬಳಕೊಡುವ ಮೇಸ್ತ್ರಿಗಳು ನಂಬಿಕಸ್ತರಾಗಿದ್ದುದರಿಂದ ಅವರ ವಶಕ್ಕೆ ಕೊಡಲಾದ ಹಣದ ಲೆಕ್ಕವನ್ನು ಯಾರೂ ಕೇಳಲಿಲ್ಲ.೧೬ [16]ಅಪರಾಧಪ್ರಾಯಶ್ಚಿತ್ತಕ್ಕಾಗಿ ಹಾಗು ದೋಷಪರಿಹಾರಕ್ಕಾಗಿ ತರಲಾದ ಹಣ ಯಾಜಕರ ಭಾಗವಾಗಿತ್ತು. ಅದು ಸರ್ವೇಶ್ವರನ ಆಲಯಕ್ಕೆ ಸೇರುತ್ತಿರಲಿಲ್ಲ.೧೭ [17]ಇದೇ ಕಾಲದಲ್ಲಿ ಸಿರಿಯಾದವರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆಹಾಕಿ ಅದನ್ನು ಸ್ವಾಧೀನಪಡಿಸಿಕೊಂಡು ಅಲ್ಲಿಂದ ಜೆರುಸಲೇಮಿಗೆ ದಾಳಿಯಿಡಲು ಹೊರಟನು.೧೮ [18]ಜುದೇಯದ ಅರಸ ಯೆಹೋವಾಷನು ಇದನ್ನು ಕೇಳಿ, ತಾನು ಮತ್ತು ತನ್ನ ಪೂರ್ವಿಕರಾದ ಯೆಹೋಷಾಫಾಟ್, ಯೆಹೋರಾಮ್, ಅಹಜ್ಯಾ ಎಂಬ ಯೆಹೂದರಾಜರು ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳನ್ನು ಹಾಗು ಸರ್ವೇಶ್ವರನ ಆಲಯದ ಮತ್ತು ಅರಮನೆ ಭಂಡಾರಗಳಲ್ಲಿ ಇದ್ದ ಬಂಗಾರದ ವಸ್ತುಗಳನ್ನು ಸಿರಿಯಾದವರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಜೆರುಸಲೇಮನ್ನು ಬಿಟ್ಟುಹೋದನು.೧೯ [19]ಯೆಹೋವಾಷನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.೨೦ [20]ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದರು.೨೧ [21]ಅವರಲ್ಲಿ ಶಿಮೆಯಾತನ ಮಗ ಯೋಜಾಕಾರ್, ಶೋಮೇರನ ಮಗ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗುಟ್ಟಾದ ದಾರಿಯಲ್ಲಿರುವ ಮಿಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಅಮಚ್ಯನು ಅರಸನಾದನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಅರಸುಗಳು ೨ ೧೨ 00:00:00 00:00:00 0.5x 2.0x https://beblia.bible:81/BibleAudio/kannadakncl/2kings/012.mp3 25 12