× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಅರಸುಗಳು ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯1 1 1 ಕನ್ನಡ ಬೈಬಲ್ (KNCL) 2016 ಅರಸುಗಳು ೨ ೨೨ ಟಿಪ್ಪಣಿಗಳನ್ನು ಉಳಿಸಿ ೧ [1]ಯೋಷೀಯನು ಅರಸನಾದಾಗ ಅವನಿಗೆ ಎಂಟು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಅವನು ಆಳಿದ್ದು ಮೂವತ್ತೊಂದು ವರ್ಷ. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆ ಅವನ ತಾಯಿ.೨ [2]ಅವನು ಎಡಕ್ಕಾಗಲಿ ಬಲಕ್ಕಾಗಲಿ ವಾಲದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲಿ ನೇರವಾಗಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.೩ [3]ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚೆಲ್ಯನ ಮಗನೂ ಮೆಷುಲ್ಲಾಮನ ಮೊಮ್ಮಗನೂ ಆದ ಶಾಫಾನನೆಂಬ ಲೇಖಕನನ್ನು ಕರೆದು,೪ [4]“ನೀನು ಪ್ರಧಾನ ಯಾಜಕ ಹಿಲ್ಕೀಯನ ಬಳಿಗೆ ಹೋಗಿ ಅವನಿಗೆ, ‘ದ್ವಾರಪಾಲಕರು ಸರ್ವೇಶ್ವರನ ಆಲಯಕ್ಕೆ ಬರುವ ಜನರಿಂದ ಸಂಗ್ರಹಿಸಿದ ಹಣವನ್ನು ಲೆಕ್ಕಮಾಡಿ ಆಲಯದ ಕೆಲಸ ಮಾಡಿಸುವ ಮೇಸ್ತ್ರಿಗಳಿಗೆ ಅದನ್ನು ಒಪ್ಪಿಸು,’ ಎಂದು ಹೇಳು.೫ [5]ಮೇಸ್ತ್ರಿಗಳು ಅದನ್ನು ಸರ್ವೇಶ್ವರನ ಆಲಯದ ದುರಸ್ತುಮಾಡುವ ಬಡಗಿ, ಶಿಲ್ಪಿ, ಉಪ್ಪಾರ, ಮೊದಲಾದವರ ಸಂಬಳಕ್ಕಾಗಿಯೂ ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು, ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಉಪಯೋಗಿಸಲಿ.೬ [6]ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲಾಗುವ ಹಣದ ಲೆಕ್ಕವನ್ನು ಕೇಳಬಾರದು,” ಎಂದು ಆಜ್ಞಾಪಿಸಿ ಅವನನ್ನು ಸರ್ವೇಶ್ವರನ ಆಲಯಕ್ಕೆ ಕಳುಹಿಸಿದನು.೭ [7]ಪ್ರಧಾನ ಯಾಜಕ ಹಿಲ್ಕೀಯನು ಲೇಖಕ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ,” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು.೮ [8]ಅನಂತರ ಅವನು ಹಿಂದಿರುಗಿ ಅರಸನ ಬಳಿಗೆ ಹೋಗಿ, “ನಿಮ್ಮ ಸೇವಕರು ದೇವಾಲಯಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮೇಸ್ತ್ರಿಗಳಿಗೆ ಒಪ್ಪಿಸಿದರು;೯ [9]ಇದಲ್ಲದೆ ಯಾಜಕ ಹಿಲ್ಕೀಯನು ನನಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ,” ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.೧೦ [10]ಅರಸನು ಧರ್ಮೋಪದೇಶ ಗ್ರಂಥವಾಕ್ಯಗಳನ್ನು ಕೇಳಿದಾಗ,೧೧ [11]ದುಃಖಾವೇಶದಿಂದ ಬಟ್ಟೆಗಳನ್ನು ಹರಿದುಕೊಂಡು, ಯಾಜಕ ಹಿಲ್ಕೀಯನು ಶಾಫಾನನ ಮಗ ಅಹೀಕಾಮ್, ಮೀಕಾಯನ ಮಗ ಅಕ್ಬೋರ್, ಲೇಖಕ ಶಾಫಾನ್ ಹಾಗು ತನ್ನ ಹಸ್ತಕನಾದ ಅಸಾಯ ಎಂಬುವರಿಗೆ,೧೨ [12]“ನಮ್ಮ ಪೂರ್ವಜರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆ ಹಾಗು ಅವುಗಳನ್ನು ಕೈಕೊಳ್ಳದೆಹೋದುದರಿಂದ ಸರ್ವೇಶ್ವರನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿ ಜನರಿಗಾಗಿ ಹಾಗು ಎಲ್ಲಾ ಯೆಹೂದ್ಯರಿಗಾಗಿ ಸರ್ವೇಶ್ವರನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.೧೩ [13]ಆಗ ಯಾಜಕ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆ ಜೆರುಸಲೇಮಿನ ಎರಡನೇ ಕೇರಿಯಲ್ಲಿ ವಾಸವಾಗಿದ್ದಳು.೧೪ [14]ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವರಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತುಗಳನ್ನು ತಿಳಿಸಿರಿ;೧೫ [15]‘ಈ ನಾಡಿನ ಮೇಲೆ ಹಾಗು ಜನರ ಮೇಲೆ ಜುದೇಯದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಿಕ್ಷೆಯನ್ನು ಬರಮಾಡುವೆನು.೧೬ [16]ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯಹತ್ತಿ ಆರಿಹೋಗುವುದೇ ಇಲ್ಲ,’ ಎನ್ನುತ್ತಾರೆ ಸರ್ವೇಶ್ವರ.೧೭ [17]ತಾನು ಕೇಳಿದ ವಾಕ್ಯಗಳ ವಿಷಯವಾಗಿ ಸರ್ವೇಶ್ವರನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಜುದೇಯದ ಅರಸರಿಗೆ ನೀವು ತಿಳಿಸಬೇಕಾದ ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತು ಏನೆಂದರೆ,೧೮ [18]‘ನಾನು ಈ ನಾಡನ್ನೂ ನಿವಾಸಿಗಳನ್ನೂ ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುದನ್ನು ನೀನು ಕೇಳಿದಾಗ, ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.೧೯ [19]ನಾನು ಈ ನಾಡಿಗೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಅರಸುಗಳು ೨ ೨೨ 00:00:00 00:00:00 0.5x 2.0x https://beblia.bible:81/BibleAudio/kannadakncl/2kings/022.mp3 25 22