× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕ್ರಾನಿಕಲ್ಸ್ ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೧ ೧೫ ಟಿಪ್ಪಣಿಗಳನ್ನು ಉಳಿಸಿ ೧ [1]ದಾವೀದ ನಗರದಲ್ಲಿ ದಾವೀದನು ತನ್ನ ವೈಯಕ್ತಿಕ ಉಪಯೋಗಕ್ಕಾಗಿ ಮನೆಗಳನ್ನು ಕಟ್ಟಿಸಿಕೊಂಡನು. ದೇವಮಂಜೂಷಕ್ಕೂ ಒಂದು ಸ್ಥಳವನ್ನು ಸಿದ್ಧಪಡಿಸಿ ಅದಕ್ಕೆ ಒಂದು ಗುಡಾರವನ್ನು ಹಾಕಿಸಿದನು.೨ [2]‘ಲೇವಿಯರು ಮಾತ್ರವೇ ದೇವಮಂಜೂಷವನ್ನು ಹೊರಬೇಕು. ಏಕೆಂದರೆ ಸದಾಕಾಲ ತಮ್ಮ ಸೇವೆಮಾಡುವುದಕ್ಕೂ ಮಂಜೂಷವನ್ನು ಹೊರುವುದಕ್ಕೂ ಸರ್ವೇಶ್ವರನಿಂದ ಆಯ್ಕೆಯಾದವರು ಅವರೇ’ ಎಂದು ನಿಶ್ಚಯಿಸಿಕೊಂಡನು.೩ [3]ತಾನು ಸಿದ್ಧಪಡಿಸಿದ ಸ್ಥಳಕ್ಕೆ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ಎಲ್ಲಾ ಇಸ್ರಯೇಲರನ್ನು ಜೆರುಸಲೇಮಿಗೆ ಬರಮಾಡಿಕೊಂಡನು.೪ [4]ಅನಂತರ ಆರೋನನ ಸಂತತಿಯವರನ್ನೂ ಲೇವಿಯರನ್ನೂ ಕರೆಯಿಸಿದನು.೫ [5]ಅಂತೆಯೇ, ಲೇವಿಯರಲ್ಲಿ ಕೇಹತನ ಊರಿಯೇಲನೆಂಬ ಮೇಲ್ವಿಚಾರಕನು ತನ್ನ ಕುಲದ ನೂರಿಪ್ಪತ್ತು ಸದಸ್ಯರೊಂದಿಗೆ ಬಂದನು.೬ [6]ಮೆರಾರೀ ಗೋತ್ರದಿಂದ ಮೇಲ್ವಿಚಾರಕ ಅಸಾಯನು ಇನ್ನೂರ ಇಪ್ಪತ್ತು ಜನರೊಂದಿಗೆ ಬಂದನು;೭ [7]ಗೇರ್ಷೋನ್ ಗೋತ್ರದಿಂದ ಮೇಲ್ವಿಚಾರಕ ಯೋವೇಲ ನೂರ ಮೂವತ್ತು ಜನರೊಂದಿಗೆ ಬಂದನು;೮ [8]ಎಲೀಚಾಫನ್ಯ ಗೋತ್ರದಿಂದ ಮೇಲ್ವಿಚಾರಕ ಶೆಮಾಯ ಇನ್ನೂರು ಜನರೊಂದಿಗೆ ಬಂದನು;೯ [9]ಹೆಬ್ರೋನ್ ಗೋತ್ರದಿಂದ ಮೇಲ್ವಿಚಾರಕ ಎಲೀಯೋಲನು ಎಂಬತ್ತು ಜನರೊಂದಿಗೆ ಬಂದನು.೧೦ [10]ಉಜ್ಜೀಯೇಲನ ಗೋತ್ರದಿಂದ ಮೇಲ್ವಿಚಾರಕ ಅಮ್ಮೀನಾದಾಬ ನೂರಹನ್ನೆರಡು ಜನರೊಂದಿಗೆ ಬಂದನು.೧೧ [11]ದಾವೀದನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರೆಂಬುವರನ್ನು ಕರೆಯಿಸಿದನು; ಅಂತೆಯೇ ಲೇವಿಯರಾದ ಊರಿಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೋಲ್ ಮತ್ತು ಅಮ್ಮೀನಾದಾಬ್ ಎಂಬವರನ್ನೂ ಕರೆಯಿಸಿದನು.೧೨ [12]“ನೀವು ಲೇವಿಯರ ಗೋತ್ರಗಳ ನಾಯಕರು; ನಾನು ಸಿದ್ಧಪಡಿಸಿದ ಸ್ಥಳಕ್ಕೆ ಇಸ್ರಯೇಲರ ದೇವರಾದ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ನೀವು ಹಾಗು ನಿಮ್ಮ ಜೊತೆಯಲ್ಲಿ ಲೇವಿಯರೂ ನಿಮ್ಮನ್ನೇ ಶುದ್ಧಪಡಿಸಿಕೊಳ್ಳಿರಿ.೧೩ [13]ಮೊದಲೊಂದು ಸಾರಿ, ಅದನ್ನು ತರಲು ನೀವು ಇಲ್ಲದೇ ಹೋದುದರಿಂದ ಹಾಗು ನಾವು ತಕ್ಕ ರೀತಿಯಲ್ಲಿ ಅವರನ್ನು ಆರಾಧಿಸದೇ ಹೋದುದಕ್ಕಾಗಿ ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಶಿಕ್ಷಿಸಿದರು,” ಎಂದು ಅವರನ್ನು ಎಚ್ಚರಿಸಿದನು.೧೪ [14]ಆಗ ಯಾಜಕರೂ ಲೇವಿಯರೂ ಇಸ್ರಯೇಲರ ದೇವರಾದ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ತಮ್ಮನ್ನೇ ಶುದ್ಧೀಕರಿಸಿಕೊಂಡರು.೧೫ [15]ಲೇವಿಯರು ಅದನ್ನು ಗುದಿಗೆಗಳ ಮೇಲಿಟ್ಟು, ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ, ತಮ್ಮ ಹೆಗಲಮೇಲೆ ಹೊತ್ತುಕೊಂಡು ನಡೆದರು.೧೬ [16]ಸ್ವರಮಂಡಲ, ಕಿನ್ನರಿ, ತಾಳಗಳೊಂದಿಗೆ ಸಂಭ್ರಮದಿಂದ ವಾದ್ಯಗಳನ್ನು ಬಾರಿಸುವುದಕ್ಕೂ ಹಾಡುವುದಕ್ಕೂ ವಿವಿಧ ಲೇವಿಯರನ್ನು ನೇಮಿಸಬೇಕೆಂದು ದಾವೀದನು ಲೇವಿಯರ ನಾಯಕನಿಗೆ ಆಜ್ಞಾಪಿಸಿದನು.೧೭ [17]ಗಾಯಕರ ಮಂಡಳಿಯಿಂದ ಕಂಚಿನ ತಾಳಗಳನ್ನು ಬಾರಿಸಲು ಆಯ್ಕೆಹೊಂದಿದವರು: ಯೋವೇಲನ ಮಗ ಹೇಮಾನ್, ಅವನ ಬಂಧು ಬೆರೆಕ್ಯನ ಮಗ ಆಸಾಫ್, ಮೆರಾರೀ ಕುಟುಂಬಕ್ಕೆ ಸೇರಿದ ಕೂಷಾಯನ ಮಗ ಏತಾನ್ ಎಂಬವರು. ತಮಗೆ ಸಹಾಯ ಮಾಡಲು ತಾರಸ್ಥಾಯಿಯ ತಂತಿವಾದ್ಯಗಳನ್ನು ಬಾರಿಸಲು ಜೆಕರ್ಯ, ಬೇನ್, ಯಾಜೀಯೇಲ್, ಶಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ ಹಾಗು ಮಸೇಯ ಎಂಬವರನ್ನು ಆರಿಸಿಕೊಂಡರು. ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸಲು ಮತಿತ್ಯ, ಎಲೀಫೆಲೇಹು, ಮಿಕ್ನೇಯ, ದೇವಾಲಯದ ದ್ವಾರಪಾಲಕರಾದ ಓಬೇದೆದೋಮ್ ಮತ್ತು ಯೆಗೀಯೇಲರನ್ನೂ ನೇಮಿಸಿಕೊಂಡರು.೧೮ [18]***೧೯ [19]***೨೦ [20]***೨೧ [21]***೨೨ [22]ಸಂಗೀತದಲ್ಲಿ ಪರಿಣತನಾದ ಕೆನನ್ಯ, ಲೇವಿಯರ ವಾದ್ಯವೃಂದಕ್ಕೆ ಮುಖ್ಯಸ್ಥನಾಗಿ ನೇಮಕಗೊಂಡನು.೨೩ [23]ಬೆರಕ್ಕ ಹಾಗು ಎಲ್ಕಾನ ಎಂಬವರು ಓಬೇದೆದೋಮ್ ಮತ್ತು ಯೆಹೀಯರೊಂದಿಗೆ ಮಂಜೂಷದ ಕಾವಲುಗಾರರಾಗಿ ನೇಮಕವಾದರು. ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಹಾಗು ಎಲೀಯೆಜೆರ್ ಎಂಬವರು ಮಂಜೂಷದ ಮುಂದೆ ತುತ್ತೂರಿಗಳನ್ನು ಊದಲು ಆಯ್ಕೆಯಾದರು.೨೪ [24]***೨೫ [25]ಹೀಗೆ ಅರಸ ದಾವೀದನು, ಇಸ್ರಯೇಲಿನ ನಾಯಕರು ಹಾಗು ಸೈನ್ಯದ ಅಧಿಕಾರಿಗಳು ನಿಬಂಧನ ಮಂಜೂಷವನ್ನು ತರಲು ಓಬೇದೆದೋಮನ ಮನೆಗೆ ಹೋದರು. ಇದನ್ನು ಒಂದು ದೊಡ್ಡ ಜಾತ್ರೆಯಂತೆಯೇ ಆಚರಿಸಲಾಯಿತು.೨೬ [26]ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರ ಸಹಾಯ ದೊರೆತುದರಿಂದ ಅವರು ಏಳು ಹೋರಿಗಳನ್ನೂ ಏಳು ಕುರಿಗಳನ್ನೂ ಬಲಿದಾನ ಮಾಡಿದರು.೨೭ [27]ದಾವೀದನು, ಮಂಜೂಷ ಹೊತ್ತವರು, ವಾದ್ಯ ಬಾರಿಸುವವರು ಹಾಗು ಅವರ ನಾಯಕ ಕೆನನ್ಯನು ಅತ್ಯುತ್ತಮ ನೂಲಿನಿಂದ ತಯಾರಿಸಿದ ನಿಲುವಂಗಿಗಳನ್ನು ಧರಿಸಿದ್ದರು. ದಾವೀದನು ಏಫೋದನ್ನು ಕೂಡ ಧರಿಸಿಕೊಂಡಿದ್ದನು.೨೮ [28]ಹೀಗೆ ಎಲ್ಲಾ ಇಸ್ರಯೇಲರು ಜೆರುಸಲೇಮಿನವರೆಗೆ ಆನಂದಘೋಷಣೆಗಳಿಂದಲೂ ತುತೂರಿ, ಕೊಂಬು, ತಾಳ, ತಂತಿ, ವಾದ್ಯಗಳ ಸಂಗೀತದಿಂದಲೂ ಸರ್ವೇಶ್ವರನ ನಿಬಂಧನಾ ಮಂಜೂಷವನ್ನು ಹೊತ್ತುತಂದರು.೨೯ [29]ಆ ಮಂಜೂಷ ಪಟ್ಟಣದೊಳಗೆ ಬರುತ್ತಿದ್ದಂತೆ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿದಳು. ದಾವೀದನು ಸಂತೋಷದಿಂದ ಕುಣಿಯುತ್ತಾ ನರ್ತಿಸುತ್ತಾ ಇದ್ದುದನ್ನು ಕಂಡಳು. ಅದನ್ನು ನೋಡಿ ಅವನ ಬಗ್ಗೆ ಅವಳಲ್ಲಿ ತಿರಸ್ಕಾರ ಭಾವ ಮೂಡಿತು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೧ ೧೫ 00:00:00 00:00:00 0.5x 2.0x https://beblia.bible:81/BibleAudio/kannadakncl/1chronicles/015.mp3 29 15