× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕ್ರಾನಿಕಲ್ಸ್ ೧ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೧ ೧೭ ಟಿಪ್ಪಣಿಗಳನ್ನು ಉಳಿಸಿ ೧ [1]ಆಗ ಅರಸ ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದನು.೨ [2]ಒಂದು ದಿನ ಅವನು ಪ್ರವಾದಿ ನಾತಾನನನ್ನು ಬರಮಾಡಿ, “ನೋಡು, ನಾನು ವಾಸಮಾಡುತ್ತಾ ಇರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ; ಆದರೆ ಸರ್ವೇಶ್ವರನ ನಿಬಂಧನ ಮಂಜೂಷವಿರುವುದು ಬಟ್ಟೆಯಿಂದ ಮಾಡಿದ ಗುಡಾರದಲ್ಲಿ!” ಎಂದನು.೩ [3]ಅದಕ್ಕೆ ನಾತಾನನು ಸಮ್ಮತಿಸಿ, “ನಿಮಗೆ ಮನಸ್ಸಿದ್ದಂತೆ ಮಾಡಿ; ಸರ್ವೇಶ್ವರ ನಿಮ್ಮೊಡನೆ ಇದ್ದಾರೆ,” ಎಂದನು.೪ [4]ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು:೫ [5]“ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬಾರದು.೬ [6]ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಿದ್ದೆನು. ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗಲೆಲ್ಲಾ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ’.”೭ [7]“ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೇಳಿದೆನೆಂದು ಹೀಗೆ ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.೮ [8]ನೀನು ಹೋದ ಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು.೯ [9]ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ಅಲ್ಲೇ ವಾಸಿಸುವರು.೧೦ [10]ಪೂರ್ವಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚೆಗೆ ಇಸ್ರಯೇಲರು ಶೋಷಣೆಗೆ ಗುರಿಯಾಗದಂತೆ ಇನ್ನು ಗುರಿಯಾಗರು. ನಿನ್ನ ಶತ್ರುಗಳನ್ನೆಲ್ಲ ನಿನಗೆ ಅಧೀನಮಾಡುವೆನು. ಅದು ಮಾತ್ರವಲ್ಲ, ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತುಕೊಡುತ್ತೇನೆ.೧೧ [11]ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.೧೨ [12]ನನಗಾಗಿ ಒಂದು ದೇವಾಲಯವನ್ನು ಕಟ್ಟುವವನು ಅವನೇ. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.೧೩ [13]ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಇದ್ದವನನ್ನು ನನ್ನ ಕೃಪೆ ಬಿಟ್ಟು ಹೋಗದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ.೧೪ [14]ಅವನನ್ನು ನನ್ನ ಮನೆಯಲ್ಲೂ ನನ್ನ ರಾಜ್ಯದಲ್ಲೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನ ಶಾಶ್ವತವಾಗಿರುವುದು’.”೧೫ [15]ನಾತಾನನು ತನಗಾದ ದರ್ಶನದ ಈ ಮಾತುಗಳನ್ನೆಲ್ಲ ದಾವೀದನಿಗೆ ಹೇಳಿದನು.೧೬ [16]ಬಳಿಕ ಅರಸ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ದೇವರೇ, ಸರ್ವೇಶ್ವರಾ, ನನ್ನಂಥವನಿಗೆ ತಾವು ಈ ಪದವಿಯನ್ನು ಅನುಗ್ರಹಿಸಿದ್ದೀರಿ; ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!೧೭ [17]ದೇವರೇ, ಇದೂ ಸಾಲದೆಂದೆಣಿಸಿ, ನಿಮ್ಮ ದಾಸನ ಬಹುದೂರ ಸಂತಾನದ ವಿಷಯದಲ್ಲೂ ತಾವು ವಾಗ್ದಾನ ಮಾಡಿರುವಿರಿ. ದೇವರೇ, ಸರ್ವೇಶ್ವರಾ, ನೀವು ನನ್ನನ್ನು ಒಬ್ಬ ಮಹಾನ್ ವ್ಯಕ್ತಿಯನ್ನೋ ಎಂಬಂತೆ ಭಾವಿಸಿದಿರಿ; ತಾವು ಹೀಗೆ ವರ್ತಿಸುವುದು ನರಮಾನವರಿಗೆ ಎಂಥಾ ಭಾಗ್ಯ!೧೮ [18]ನೀವು ನಿಮ್ಮ ದಾಸ ದಾವೀದನನ್ನು ಚೆನ್ನಾಗಿ ಬಲ್ಲಿರಿ; ನಾನು ನನ್ನ ಘನತೆಯನ್ನು ಕುರಿತು ಇನ್ನೇನು ಹೇಳಲಿ?೧೯ [19]ಸರ್ವೇಶ್ವರಾ, ನಿಮ್ಮ ದಾಸನಾದ ನನ್ನ ಹಿತಕ್ಕಾಗಿಯೂ ತಮ್ಮ ಚಿತ್ತಾನುಸಾರವಾಗಿಯೂ ಈ ಮಹತ್ಕಾರ್ಯಗಳನ್ನೆಲ್ಲಾ ನಡೆಸಿ ನಿಮ್ಮ ಸರ್ವಮಹತ್ವವನ್ನು ತೋರ್ಪಡಿಸಿದ್ದೀರಿ.೨೦ [20]ಸರ್ವೇಶ್ವರಾ, ತಮಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದಂಥವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ತಮ್ಮ ಹೊರತು, ಬೇರಾವ ದೇವರೂ ಇಲ್ಲ ಎಂಬುದು ನಿಶ್ಚಯ.೨೧ [21]ತಮ್ಮ ಇಸ್ರಯೇಲ್ ಪ್ರಜೆಗೆ ಸಮನಾದ ಜನಾಂಗ ಲೋಕದಲ್ಲಿ ಬೇರೆ ಯಾವುದಿದೆ? ದೇವರಾದ ತಾವೇ ಬಂದು ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿಸಿಕೊಂಡಿರಿ; ಆಶ್ಚರ್ಯಕರವಾದ ಅದ್ಭುತಕಾರ್ಯಗಳಿಂದ ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರ ಕೈಯಿಂದ ತಮ್ಮ ಪ್ರಜೆಯನ್ನು ತಪ್ಪಿಸಿ, ರಕ್ಷಿಸಿದಿರಿ. ಅನ್ಯಜನಾಂಗಗಳನ್ನು ಅವರ ನಾಡಿನಿಂದ ಹೊರಡಿಸಿಬಿಟ್ಟಿರಿ.೨೨ [22]ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ;೨೩ [23]ಸರ್ವೇಶ್ವರಾ, ನೀವು ಅವರಿಗೆ ದೇವರಾದಿರಿ. ಸರ್ವೇಶ್ವರಾ, ತಮ್ಮ ದಾಸನನ್ನೂ ಅವನ ಕುಟುಂಬವನ್ನೂ ಕುರಿತು ನೀವು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ, ನೆರವೇರಿಸಿರಿ. ಅದು ಸದಾ ಸ್ಥಿರವಾಗಿರಲಿ.೨೪ [24]‘ಸರ್ವಶಕ್ತರಾದ ಸರ್ವೇಶ್ವರ, ಇಸ್ರಯೇಲರ ದೇವರು; ತಮ್ಮ ದಾಸ ದಾವೀದನ ಮನೆತನವನ್ನು ತಮ್ಮ ಸನ್ನಿಧಿಯಲ್ಲಿ ಸ್ಥಿರವಾಗಿಟ್ಟಿದ್ದಾರೆ’ ಎಂದು ಜನರು ನಿಮ್ಮ ನಾಮವನ್ನು ಕೊಂಡಾಡಲಿ.೨೫ [25]ನನ್ನ ದೇವರೇ, ತಾವು ತಮ್ಮ ದಾಸನಿಗೆ, ‘ನಾನು ನಿನಗೊಂದು ಮನೆತನವನ್ನು ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದೀರಿ. ಆದುದರಿಂದಲೇ ಈ ಪ್ರಕಾರ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡೆ.೨೬ [26]ಸರ್ವೇಶ್ವರಾ, ತಮ್ಮ ದಾಸನಾದ ನನಗೆ ಇಂಥ ಶ್ರೇಷ್ಠ ವಾಗ್ದಾನ ಮಾಡಿದ ನೀವು ದೇವರಾಗಿದ್ದೀರಿ.೨೭ [27]ಈಗ ನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಅದನ್ನು ಸದಾಕಾಲ ನಿಮ್ಮ ಆಶ್ರಯದಲ್ಲಿ ಇಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀರಿ; ಸರ್ವೇಶ್ವರಾ, ನೀವು ಅದನ್ನು ಆಶೀರ್ವದಿಸಿದ್ದೀರಿ; ಅದು ನಿತ್ಯವು ಸೌಭಾಗ್ಯದಿಂದ ಇರುವುದು,” ಎಂದು ಪ್ರಾರ್ಥಿಸಿದನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೧ ೧೭ 00:00:00 00:00:00 0.5x 2.0x https://beblia.bible:81/BibleAudio/kannadakncl/1chronicles/017.mp3 29 17