× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕ್ರಾನಿಕಲ್ಸ್ ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೧ ಟಿಪ್ಪಣಿಗಳನ್ನು ಉಳಿಸಿ ೧ [1]ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದ ಮೇಲೆ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಸರ್ವೇಶ್ವರಸ್ವಾಮಿ ಅವನನ್ನು ಹರಸಿ ಮಹಾ ಬಲಾಢ್ಯನಾಗುವಂತೆ ಮಾಡಿದರು.೨ [2]ಅವನು ತನ್ನ ಸಹಸ್ರಾಧಿಪತಿಗಳನ್ನು, ಶತಾಧಿಪತಿಗಳನ್ನು, ಸರಕಾರದ ಎಲ್ಲ ಪದಾಧಿಕಾರಿಗಳನ್ನು ಹಾಗೂ ಇಸ್ರಯೇಲ್ ಕುಲಗೋತ್ರಗಳ ನಾಯಕರನ್ನು ಬರಮಾಡಿ, ಅವರ ಸಮೇತ ಗಿಬ್ಯೋನಿನಲ್ಲಿದ್ದ ಪೂಜಾಸ್ಥಳಕ್ಕೆ ಹೋದನು.೩ [3]ಸರ್ವೇಶ್ವರನ ದಾಸನಾದ ಮೋಶೆ ಮರುಭೂಮಿಯಲ್ಲಿ ಮಾಡಿಸಿದ್ದ ದೇವದರ್ಶನದ ಗುಡಾರ ಅಲ್ಲಿಯೇ ಇತ್ತು.೪ [4]ದಾವೀದನು ದೇವರ ಮಂಜೂಷವನ್ನು, ಈಗಾಗಲೇ ಕಿರ್ಯತ್ಯಾರೀಮಿನಿಂದ ತಾನು ಜೆರುಸಲೇಮಿನಲ್ಲಿ ಅದಕ್ಕೋಸ್ಕರ ಸಿದ್ಧಮಾಡಿದ್ದ ಗುಡಾರಕ್ಕೆ, ತೆಗೆದುಕೊಂಡು ಬಂದಿದ್ದನು.೫ [5]ಆದರೂ ಊರೀಯನ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿಸಿದ್ದ ತಾಮ್ರದ ಬಲಿಪೀಠ, ಅಲ್ಲೇ ಗಿಬ್ಯೋನಿನಲ್ಲಿ ಸರ್ವೇಶ್ವರನ ಗುಡಾರದ ಮುಂದೆ ಇತ್ತು. ಈ ಕಾರಣ ಸೊಲೊಮೋನನೂ ಅವನ ಸಮಾಜದವರೂ ಅಲ್ಲಿಗೆ ದರ್ಶನಕ್ಕಾಗಿ ಹೋಗುತ್ತಿದ್ದರು.೬ [6]ಸೊಲೊಮೋನನು, ದೇವದರ್ಶನದ ಗುಡಾರದ ಬಳಿ ಸರ್ವೇಶ್ವರನ ಮುಂದಿದ್ದ ಆ ತಾಮ್ರದ ಪೀಠದ ಮೇಲೆ, ಸಾವಿರ ದಹನಬಲಿಗಳನ್ನು ಅರ್ಪಿಸಿದನು.೭ [7]ಅದೇ ರಾತ್ರಿ ದೇವರು ಸೊಲೊಮೋನನಿಗೆ ದರ್ಶನಕೊಟ್ಟು, “ನಿನಗೆ ಯಾವ ವರಬೇಕು, ಕೇಳಿಕೋ,” ಎಂದು ಹೇಳಿದರು.೮ [8]ಸೊಲೊಮೋನನು, “ನೀವು ನನ್ನ ತಂದೆ ದಾವೀದನಿಗೆ ಮಹಾಕೃಪೆಯನ್ನು ತೋರಿಸಿದಿರಿ. ಅವರ ಸ್ಥಾನದಲ್ಲಿ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀರಿ.೯ [9]ಹೀಗೆ ಇರಲಾಗಿ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ ನುಡಿದದ್ದು ಸಾರ್ಥಕವಾಗಲಿ; ಧರೆಯ ಧೂಳಿನಷ್ಟು ಅಸಂಖ್ಯವಾದ ಜನಾಂಗದ ಮೇಲೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀರಿ.೧೦ [10]ನಿಮ್ಮ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವುದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಇವರನ್ನು ಪರಿಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳನ್ನು ನನಗೆ ಅನುಗ್ರಹಿಸಿರಿ,” ಎಂದು ದೇವರನ್ನು ಬೇಡಿಕೊಂಡನು.೧೧ [11]ಆಗ ದೇವರು ಸೊಲೊಮೋನನಿಗೆ, “ನೀನು ಘನಧನೈಶ್ವರ್ಯಗಳನ್ನಾಗಲಿ, ಶತ್ರುಗಳ ವಿನಾಶವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳಿಕೊಳ್ಳಲಿಲ್ಲ. ಬದಲಿಗೆ ನಾನು ಯಾರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಪ್ರಜೆಗಳನ್ನು ಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳ ಮೇಲೆ ಮನಸ್ಸಿಟ್ಟು ಅವುಗಳನ್ನು ನಿನಗಾಗಿ ಬೇಡಿಕೊಂಡೆ. ಆದುದರಿಂದ ಅವು ನಿನಗೆ ದೊರಕುವುವು.೧೨ [12]ಇದಲ್ಲದೆ, ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವುದಿಲ್ಲ,” ಎಂದರು.೧೩ [13]ಆಮೇಲೆ ಅರಸ ಸೊಲೊಮೋನನು ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದ ದೇವದರ್ಶನದ ಗುಡಾರದಿಂದ ಜೆರುಸಲೇಮಿಗೆ ಬಂದು ಇಸ್ರಯೇಲ್ ರಾಜ್ಯವನ್ನು ಆಳಿದನು.೧೪ [14]ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಅವನಿಗಿದ್ದ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಜೆರುಸಲೇಮಿನಲ್ಲೇ ಇಟ್ಟುಕೊಂಡನು. ಉಳಿದವುಗಳನ್ನು ರಥಗಳಿಗಾಗಿಯೇ ನೇಮಿಸಿದ್ದ ಪಟ್ಟಣಗಳಲ್ಲಿ ಇರಿಸಿದನು.೧೫ [15]ಅವನ ಕಾಲದಲ್ಲಿ ಬೆಳ್ಳಿಬಂಗಾರ ಕಲ್ಲಿನಂತೆಯೂ, ದೇವದಾರು ಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆಯೂ ಜೆರುಸಲೇಮಿನಲ್ಲಿ ವಿಫುಲವಾಗಿದ್ದವು.೧೬ [16]ಅರಸ ಸೊಲೊಮೋನನ ಕುದುರೆಗಳು ಈಜಿಪ್ಟ್ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.೧೭ [17]ರಥಕ್ಕೆ ಆರುನೂರು ಬೆಳ್ಳಿನಾಣ್ಯಗಳಂತೆ, ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳಂತೆ ಕೊಟ್ಟು, ರಥಗಳನ್ನೂ ಕುದುರೆಗಳನ್ನೂ ಈಜಿಪ್ಟ್ ದೇಶದಿಂದ ತರಿಸುತ್ತಿದ್ದರು; ಹಿತ್ತಿಯರ ಮತ್ತು ಸಿರಿಯಾದವರ ಎಲ್ಲಾ ಅರಸರು ಇವರ ಮುಖಾಂತರವೇ ತರಿಸುತ್ತಿದ್ದರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೧ 00:00:00 00:00:00 0.5x 2.0x https://beblia.bible:81/BibleAudio/kannadakncl/2chronicles/001.mp3 36 1