× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕ್ರಾನಿಕಲ್ಸ್ ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೧೩ ಟಿಪ್ಪಣಿಗಳನ್ನು ಉಳಿಸಿ ೧ [1]ಅರಸ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಜುದೇಯದ ಅರಸನಾಗಿ೨ [2]ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆ ಇವನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.೩ [3]ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು. ಯಾರೊಬ್ಬಾಮನು ಎಂಟು ಲಕ್ಷ ಶ್ರೇಷ್ಠಯೋಧರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು.೪ [4]ಆಗ ಅಬೀಯನು ಎಫ್ರಯಿಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮೆಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಯೇಲರೇ, ನನ್ನ ಮಾತಿಗೆ ಕಿವಿಗೊಡಿ;೫ [5]ಮುರಿಯಲಾಗದ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಯೇಲರ ಮೇಲೆ ಸರ್ವೇಶ್ವರ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾರೆಂದು ನಿಮಗೆ ಗೊತ್ತಿಲ್ಲವೇ?೬ [6]ಹೀಗೆ ಇದ್ದರೂ ದಾವೀದನ ಮಗ ಸೊಲೊಮೋನನ ಸೇವೆಯಲ್ಲಿದ್ದ, ನೆಬಾಟನ ಮಗ ಯಾರೊಬ್ಬಾಮನು ದಂಗೆಯೆದ್ದು ತನ್ನ ದಣಿಗೆ ವಿರುದ್ಧ ದ್ರೋಹವೆಸಗಿದ;೭ [7]ಕಾಕಪೋಕರೂ ದುಷ್ಟರೂ ಆದ ಜನರನ್ನು ಕೂಡಿಕೊಂಡ ಎಳೇಪ್ರಾಯದವನೂ ಮುಗ್ಧನೂ ತಮ್ಮೆದುರಿನಲ್ಲಿ ನಿಲ್ಲಲು ಅಶಕ್ತನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.೮ [8]ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿಕರುಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಸರ್ವೇಶ್ವರನ ರಾಜ್ಯಕ್ಕೆ ವಿರುದ್ಧ ದಂಗೆಯೆದ್ದು ಗೆಲ್ಲಬಹುದೆಂದು ನೆನಸುತ್ತೀರೋ?೯ [9]ನೀವು ಸರ್ವೇಶ್ವರನ ಯಾಜಕರಾದ ಆರೋನನ ಸಂತಾನದವರನ್ನೂ ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗಾಗಿ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ!೧೦ [10]ನಮಗಾದರೋ ಸರ್ವೇಶ್ವರನೊಬ್ಬನೇ ದೇವರು; ನಾವು ಅವರನ್ನು ಬಿಡಲಿಲ್ಲ. ಸರ್ವೇಶ್ವರನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರು ಹಾಗೂ ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರು ನಮಗಿರುತ್ತಾರೆ.೧೧ [11]ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.೧೨ [12]ಇಗೋ, ದೇವರೇ ನಾಯಕರಾಗಿ ನಮ್ಮೊಂದಿಗಿರುತ್ತಾರೆ; ನಿಮಗೆ ವಿರುದ್ಧ ಯುದ್ಧ ಕಹಳೆಗಳನ್ನು ಮೊಳಗಿಸುವ ಯಾಜಕರೂ ನಮ್ಮೊಂದಿಗೆ ಇರುತ್ತಾರೆ. ಇಸ್ರಯೇಲರೇ, ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರನೊಡನೆ ಯುದ್ಧಮಾಡಬೇಡಿ; ನೀವು ಜಯಿಸಲಾರಿರಿ,” ಎಂದು ಕೂಗಿ ಹೇಳಿದನು.೧೩ [13]ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚುಹಾಕುವುದಕ್ಕಾಗಿ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಶತ್ರುಸೈನ್ಯ ಯೆಹೂದ್ಯರ ಮುಂದೆಯೂ ಹೊಂಚುಹಾಕುವವರು ಅವರ ಹಿಂದೆಯೂ ಇದ್ದರು.೧೪ [14]ಯೆಹೂದ್ಯರು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಸರ್ವೇಶ್ವರನಿಗೆ ಅಭಿಮುಖರಾಗಿ ಮೊರೆಯಿಟ್ಟರು; ಯಾಜಕರು ಕಹಳೆಗಳನ್ನು ಊದಿದರು.೧೫ [15]ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ದೇವರು ಯಾರೊಬ್ಬಾಮನನ್ನೂ ಎಲ್ಲಾ ಇಸ್ರಯೇಲರನ್ನೂ ಅಬೀಯನಿಂದ ಹಾಗೂ ಯೆಹೂದ್ಯರಿಂದ ಅಪಜಯಗೊಳಿಸಿದರು.೧೬ [16]ಹೀಗಾಗಿ ಇಸ್ರಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದರು.೧೭ [17]ಅಬೀಯನೂ ಅವನ ಜನರೂ ಅವರಲ್ಲಿ ಅನೇಕಾನೇಕರನ್ನು ಸದೆಬಡಿದರು. ಇಸ್ರಯೇಲ್ ಯೋಧರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.೧೮ [18]ಹೀಗೆ ಇಸ್ರಯೇಲರು ಆ ಕಾಲದಲ್ಲಿ ಸೋಲು ಸವಿದರು; ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಲ್ಲಿ ಭರವಸೆಯಿಟ್ಟದ್ದರಿಂದ ಜಯಶೀಲರಾದರು.೧೯ [19]ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.೨೦ [20]ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ಮತ್ತೆ ತಲೆಯೆತ್ತಲೇ ಇಲ್ಲ. ಕಾಲಕ್ರಮೇಣ, ಸರ್ವೇಶ್ವರನ ದಂಡನೆಯಿಂದ ಅವನು ಸತ್ತನು.೨೧ [21]ಇತ್ತ ಅಬೀಯನು ಪ್ರಬಲನಾದನು. ಅವನಿಗೆ ಹದಿನಾಲ್ಕು ಮಂದಿ ಹೆಂಡತಿಯರೂ ಇಪ್ಪತ್ತೆರಡು ಮಂದಿ ಗಂಡುಮಕ್ಕಳೂ ಹದಿನಾರು ಮಂದಿ ಹೆಣ್ಣುಮಕ್ಕಳೂ ಇದ್ದರು.೨೨ [22]ಅಬೀಯನ ಉಳಿದ ಚರಿತ್ರೆ ಹಾಗೂ ನಡೆನುಡಿಗಳು ಪ್ರವಾದಿ ಇದ್ದೋವಿನ ವ್ಯಾಖ್ಯಾನದಲ್ಲಿ ಲಿಖಿತವಾಗಿವೆ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೧೩ 00:00:00 00:00:00 0.5x 2.0x https://beblia.bible:81/BibleAudio/kannadakncl/2chronicles/013.mp3 36 13