× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕ್ರಾನಿಕಲ್ಸ್ ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೨ ಟಿಪ್ಪಣಿಗಳನ್ನು ಉಳಿಸಿ ೧ [1]ಸೊಲೊಮೋನನು ಸರ್ವೇಶ್ವರನ ಹೆಸರಿಗಾಗಿ ಒಂದು ಅರಮನೆಯನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿದನು.೨ [2]ಇಪ್ಪತ್ತು ಸಾವಿರ ಮಂದಿ ಹೊರೆಹೊರುವವರೂ ಎಂಬತ್ತು ಸಾವಿರ ಮಂದಿ ಕಲ್ಲುಗಣಿಯಲ್ಲಿ ಕೆಲಸಮಾಡುವವರನ್ನೂ ಇವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿ ಮೇಸ್ತ್ರಿಗಳನ್ನೂ ಎಣಿಸಿ ನೇಮಿಸಿದನು.೩ [3]ಇದಲ್ಲದೆ, ಟೈರಿನ ಅರಸ ಹೂರಾಮನಿಗೆ ದೂತರ ಮುಖಾಂತರ, “ನನ್ನ ತಂದೆ ದಾವೀದ ತಮ್ಮ ವಾಸಕ್ಕೆ ಅರಮನೆಯನ್ನು ಕಟ್ಟಿಸಿಕೊಳ್ಳುವುದಕ್ಕಾಗಿ ನೀನು ದೇವದಾರು ಮರಗಳನ್ನು ಕಳುಹಿಸಿದೆ.೪ [4]ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.೫ [5]ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರು! ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು.೬ [6]ಅವರಿಗೆ ಆಲಯವನ್ನು ಕಟ್ಟುವುದಕ್ಕೆ ಯಾರೂ ಶಕ್ತರಲ್ಲ; ಆಕಾಶವೂ ಉನ್ನತೋನ್ನತವಾದ ಆಕಾಶವೂ ಅವರ ವಾಸಕ್ಕೆ ಸಾಲದಿರುವಲ್ಲಿ ಅವರಿಗಾಗಿ ಆಲಯವನ್ನು ಕಟ್ಟುವುದಕ್ಕೆ ಯಾರು ತಾನೆ ಶಕ್ತರು? ನಾನು ಅವರ ಸನ್ನಿಧಿಯಲ್ಲಿ ಧೂಪಾರತಿ ಎತ್ತುವ ಒಂದು ಸ್ಥಳವನ್ನು ಕಟ್ಟಿಸಬಲ್ಲೆನೇ ಹೊರತು, ಅವರ ವಾಸಕ್ಕಾಗಿ ಆಲಯವನ್ನು ಕಟ್ಟಿಸುವುದಕ್ಕೆ ನಾನು ಎಷ್ಟು ಮಾತ್ರಕ್ಕೂ ಶಕ್ತನಲ್ಲ.೭ [7]ಹೀಗಿರಲು, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ ಇವುಗಳ ಕೆಲಸಮಾಡುವುದರಲ್ಲಿ, ಊದಾ, ಕೆಂಪು, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿ ಹಾಗೂ ಚಿತ್ರ ಕೆತ್ತುವುದರಲ್ಲಿ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆ ಗೊತ್ತುಮಾಡಿದಂಥ ಮತ್ತು ನನ್ನೊಡನೆ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇರುವಂಥ ಕಲಾಕುಶಲರೊಂದಿಗೆ ಅವನು ಕೆಲಸಮಾಡಲಿ.೮ [8]ಅಂತೆಯೇ ಲೆಬನೋನಿನಿಂದ ದೇವದಾರು ಮರವನ್ನೂ ತುರಾಯಿಮರವನ್ನೂ ಸುಗಂಧದ ಮರವನ್ನೂ ನನಗೆ ಕಳುಹಿಸಬೇಕು. ನಿನ್ನ ಆಳುಗಳು ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ಜಾಣರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಕೆಲಸಮಾಡುವರು.೯ [9]ಬೃಹದಾಕಾರವಾದ ಹಾಗೂ ಭವ್ಯವಾದ ದೇವಾಲಯವನ್ನು ನಾನು ಕಟ್ಟಿಸಬೇಕಾಗಿದೆ. ಆದುದರಿಂದ ಹೆಚ್ಚು ಮರವನ್ನು ಸಿದ್ಧಪಡಿಸಬೇಕು.೧೦ [10]ಮರ ಕಡಿಯುವ ನಿನ್ನ ಆಳುಗಳಿಗಾಗಿ ಎರಡು ಸಾವಿರ ಮೆಟ್ರಿಕ್ ಟನ್ ಗೋದಿ, ಎರಡು ಸಾವಿರ ಮೆಟ್ರಿಕ್ ಟನ್ ಜವೆಗೋದಿ, ನಾಲ್ಕು ಲಕ್ಷ ಲೀಟರ್ ದ್ರಾಕ್ಷಾರಸ ಹಾಗೂ ನಾಲ್ಕು ಲಕ್ಷ ಲೀಟರ್ ಎಣ್ಣೆ ಇವುಗಳನ್ನು ಕೊಡುವೆನು,” ಎಂದು ಹೇಳಿಸಿದನು.೧೧ [11]ಟೈರಿನ ಅರಸ ಹೂರಾಮನು ಪತ್ರದ ಮೂಲಕ ಸೊಲೊಮೋನನಿಗೆ, “ಸರ್ವೇಶ್ವರ ತಮ್ಮ ಪ್ರಜೆಗಳನ್ನು ಪ್ರೀತಿಸುವವರು. ಆದುದರಿಂದ ನಿನ್ನನ್ನು ಆ ಜನರ ಅರಸನನ್ನಾಗಿ ನೇಮಿಸಿದ್ದಾರೆ.೧೨ [12]ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಯೇಲ್ ದೇವರಾದ ಸರ್ವೇಶ್ವರ ತಮಗಾಗಿ ಒಂದು ದೇವಾಲಯವನ್ನೂ ರಾಜನಿಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ ಹಾಗೂ ವಿವೇಕಗಳುಳ್ಳ ಒಬ್ಬ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದಾರೆ; ಅವರಿಗೆ ಸ್ತೋತ್ರವಾಗಲಿ!೧೩ [13]ನಾನು ಈಗ ಜ್ಞಾನಿಯೂ ಕಲಾಪ್ರವೀಣನೂ ಆದ ಒಬ್ಬ ವ್ಯಕ್ತಿಯನ್ನು ಕಳುಹಿಸುತ್ತೇನೆ; ಇವನ ಹೆಸರು ಹೂರಾಮಾಬೀ.೧೪ [14]ಇವನು ದಾನ್ ಕುಲದ ಒಬ್ಬ ಸ್ತ್ರೀಯ ಮಗ; ಅವನ ತಂದೆ ಟೈರಿನವನು. ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ ಊದಾ, ನೀಲಿ, ಕೆಂಪುವರ್ಣಗಳುಳ್ಳ ನಾರುಬಟ್ಟೆಗಳನ್ನು ನೇಯುವುದಕ್ಕೂ ಎಲ್ಲಾ ತರದ ಕೆತ್ತನೆಯ ಕೆಲಸ ಮಾಡುವುದಕ್ಕೂ ತನಗೆ ಒಪ್ಪಿಸಲಾಗುವ ಎಲ್ಲಾ ಕಲಾತ್ಮಕ ಕೆಲಸಗಳನ್ನು ನಡೆಸುವುದಕ್ಕೂ ಇವನು ಸಮರ್ಥನು. ನೀನೂ ನಿನ್ನ ತಂದೆ ದಾವೀದನೂ ಗೊತ್ತುಮಾಡಿದ ಕಲಾಕುಶಲರೊಡನೆ ಇವನು ಕೆಲಸಮಾಡಲಿ.೧೫ [15]ಈಗ ನನ್ನ ಒಡೆಯರಾದ ತಾವು ಮಾತುಕೊಟ್ಟ ಮೇರೆಗೆ ಗೋದಿ, ಜವೆಗೋದಿ, ಎಣ್ಣೆ, ದ್ರಾಕ್ಷಾರಸ ಇವುಗಳನ್ನು ತನ್ನ ಸೇವಕರಿಗೆ ಕಳುಹಿಸಬೇಕು.೧೬ [16]ನಾವಾದರೋ ತಮಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು, ತೆಪ್ಪಗಳಾಗಿ ಕಟ್ಟಿ, ಸಮುದ್ರಮಾರ್ಗವಾಗಿ ಜೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀವು ಅವುಗಳನ್ನು ಜೆರುಸಲೇಮಿಗೆ ತರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟನು.೧೭ [17]ಸೊಲೊಮೋನನು, ತನ್ನ ತಂದೆ ದಾವೀದನು ಮಾಡಿಸಿದ ಜನಗಣತಿಯ ಆಧಾರದಿಂದ, ಇಸ್ರಯೇಲ್ ನಾಡಿನಲ್ಲಿ ಪ್ರವಾಸಿಗಳಾಗಿದ್ದ ಎಲ್ಲಾ ಅನ್ಯಜನರನ್ನು ಲೆಕ್ಕಿಸಿದನು. ಅವರು ಒಂದು ಲಕ್ಷ ಐವತ್ತಮೂರು ಸಾವಿರದ ಆರುನೂರು ಮಂದಿ ಇದ್ದರು.೧೮ [18]ಅವರಲ್ಲಿ ಹೊರೆಹೊರುವುದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ ಕಲ್ಲುಗಣಿಗಳಲ್ಲಿ ಕೆಲಸಮಾಡುವುದಕ್ಕಾಗಿ ಎಂಬತ್ತು ಸಾವಿರ ಮಂದಿಯನ್ನೂ ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇಮಿಸಿದನು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೨ 00:00:00 00:00:00 0.5x 2.0x https://beblia.bible:81/BibleAudio/kannadakncl/2chronicles/002.mp3 36 2