× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕ್ರಾನಿಕಲ್ಸ್ ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೨೩ ಟಿಪ್ಪಣಿಗಳನ್ನು ಉಳಿಸಿ ೧ [1]ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗ ಅಜರ್ಯ, ಯೆಹೋಹಾನಾನನ ಮಗ ಇಷ್ಮಾಯೇಲ್, ಓಬೇದನ ಮಗ ಅಜರ್ಯ, ಅದಾಯನ ಮಗ ಮಾಸೇಯ, ಜಿಕ್ರಿಯ ಮಗ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಂದು ಒಪ್ಪಂದ ಮಾಡಿಕೊಂಡನು.೨ [2]ಇವರು ಜುದೇಯದಲ್ಲೆಲ್ಲಾ ಸಂಚರಿಸಿ ಎಲ್ಲ ಪಟ್ಟಣಗಳಿಂದ ಲೇವಿಯರನ್ನೂ ಇಸ್ರಯೇಲರ ಗೋತ್ರಪ್ರಧಾನರನ್ನೂ ಕೂಡಿಸಿದರು. ಅವರೆಲ್ಲರು ಜೆರುಸಲೇಮಿಗೆ ಬಂದರು.೩ [3]ಹೀಗೆ ಕೂಡಿಬಂದವರೆಲ್ಲರು ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು; ಸರ್ವೇಶ್ವರಸ್ವಾಮಿ ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕನುಸಾರ ಅರಸನಾಗತಕ್ಕವನು ಇವನೇ.೪ [4]ಈಗ ನೀವು ಮಾಡತಕ್ಕದ್ದೇನೆಂದರೆ - ಸಬ್ಬತ್ದಿನ ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.೫ [5]ಇನ್ನೊಂದು ಭಾಗದವರು ಅರಮನೆಯನ್ನೂ ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರು ಸರ್ವೇಶ್ವರನ ಆಲಯದ ಪ್ರಾಕಾರದಲ್ಲೇ ಇರಬೇಕು.೬ [6]ಯಾಜಕರು ಹಾಗು ಸೇವೆಯಲ್ಲಿರುವ ಲೇವಿಯರು ಇವರನ್ನು ಬಿಟ್ಟು ಬೇರೆ ಯಾರೂ ಸರ್ವೇಶ್ವರನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರು ಸರ್ವೇಶ್ವರನ ಆಜ್ಞಾನುಸಾರ ಹೊರಗಿರಬೇಕು.೭ [7]ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು,” ಎಂದು ಹೇಳಿದನು.೮ [8]ಲೇವಿಯರೂ ಎಲ್ಲ ಯೆಹೂದ್ಯರೂ ಯಾಜಕ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್ದಿನದಲ್ಲಿ ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈ ಕೆಳಗಿನವರನ್ನು ಕೂಡಿಸಿಕೊಂಡನು.೯ [9]ದೇವಾಲಯದಲ್ಲಿಟ್ಟಿದ್ದ ದಾವೀದ ಅರಸನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.೧೦ [10]ಆಯುಧಪಾಣಿಗಳಾದ ಎಲ್ಲ ಜನರನ್ನು ಅರಸನ ಸುತ್ತಲು ದೇವಾಲಯದ ದಕ್ಷಿಣದಿಕ್ಕಿನ ಮೂಲೆಯಿಂದ ಬಲಿಪೀಠದವರೆಗೂ ಅಲ್ಲಿಂದ ಉತ್ತರದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಲ್ಲಿಸಿದನು.೧೧ [11]ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜಾಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.೧೨ [12]ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಕೂಡಿದ್ದ ಸರ್ವೇಶ್ವರನ ಆಲಯಕ್ಕೆ ಬಂದಳು.೧೩ [13]ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತೂರಿಗಳನ್ನು ಊದುವವರು ಅರಸನ ಹತ್ತಿರವಿದ್ದರು; ಜನಸಾಮಾನ್ಯರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನಪದ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆ ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.೧೪ [14]ಆಗ ಯಾಜಕ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.೧೫ [15]ಅವರು ಆಕೆಯನ್ನು ಹಿಡಿದು ಅರಮನೆಗೆ ಹೋಗುವ ಕುದುರೆಬಾಗಿಲಿನ ತನಕ ಒಯ್ದು, ಅಲ್ಲಿ ಕೊಂದರು.೧೬ [16]ಅನಂತರ ಯೆಹೋಯಾದನು ಎಲ್ಲ ಜನರನ್ನೂ ಅರಸನನ್ನೂ ಪ್ರೇರಿಸಿ ತಾವೆಲ್ಲರೂ ಸರ್ವೇಶ್ವರನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣಮಾಡಿದನು.೧೭ [17]ತರುವಾಯ ಜನರೆಲ್ಲರೂ ಬಾಳ್ದೇವಸ್ಥಾನಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಮುಂದೆಯೇ ಕೊಂದರು; ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗೂ ವಿಗ್ರಹಗಳನ್ನೂ ಹಾಳುಮಾಡಿಬಿಟ್ಟರು.೧೮ [18]ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಸರ್ವೇಶ್ವರನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಸರ್ವೇಶ್ವರನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ, ಮೋಶೆಯ ಧರ್ಮಶಾಸ್ತ್ರಾನುಸಾರ ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆ ಮಾಡುವುದು ಅವರ ಕರ್ತವ್ಯವಾಗಿ ಇತ್ತು.೧೯ [19]ಯಾವ ವಿಧದಲ್ಲಾದರೂ ಅಶುದ್ಧನಾದವನು ಸರ್ವೇಶ್ವರನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.೨೦ [20]ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗು ಶ್ರೀಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.೨೧ [21]ನಾಡಿನವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೨೩ 00:00:00 00:00:00 0.5x 2.0x https://beblia.bible:81/BibleAudio/kannadakncl/2chronicles/023.mp3 36 23