× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಕ್ರಾನಿಕಲ್ಸ್ ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೦ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೩೦ ಟಿಪ್ಪಣಿಗಳನ್ನು ಉಳಿಸಿ ೧ [1]ತರುವಾಯ ಹಿಜ್ಕೀಯನು, ಇಸ್ರಯೇಲ್ ದೇವರಾದ ಸರ್ವೇಶ್ವರಸ್ವಾಮಿಯ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಮಹಾಲಯಕ್ಕೆ ಬರಬೇಕೆಂದು ಎಲ್ಲ ಇಸ್ರಯೇಲರಿಗೆ, ಯೆಹೂದ್ಯರಿಗೆ, ಎಫ್ರಯಿಮರಿಗೆ ಹಾಗು ಮನಸ್ಸೆಯವರಿಗೆ ದೂತರ ಮುಖಾಂತರ ಮತ್ತು ಪತ್ರಗಳ ಮೂಲಕ ತಿಳಿಯಪಡಿಸಿದನು.೨ [2]ಯಾಜಕರಲ್ಲಿ ತಕ್ಕಷ್ಟು ಮಂದಿ ತಮ್ಮನ್ನು ಶುದ್ಧಪಡಿಸಿಕೊಂಡಿರಲಿಲ್ಲ. ಜನರು ಜೆರುಸಲೇಮಿನಲ್ಲಿ ಇನ್ನೂ ಕೂಡಿಬಂದಿರಲಿಲ್ಲವಾದುದರಿಂದ ಪಾಸ್ಕವನ್ನು ಕೂಡಲೆ ಆಚರಿಸಲಾಗದೆಂದು ಅರಸನು, ಅವನ ಪದಾಧಿಕಾರಿಗಳು ಹಾಗು ಜೆರುಸಲೇಮಿನ ಸರ್ವಸಂಘದವರು ತಿಳಿದು೩ [3]ಎರಡನೆಯ ತಿಂಗಳಿನಲ್ಲಿ ಅದನ್ನು ಆಚರಿಸಬೇಕೆಂದು ಅಭಿಪ್ರಾಯಪಟ್ಟರು.೪ [4]ಈ ಅಭಿಪ್ರಾಯ ಅರಸನಿಗೂ ಸಾರ್ವಜನಿಕರಿಗೂ ಸರಿಕಂಡಿತು.೫ [5]ಜನರು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಬೇಕೆಂಬುದಾಗಿ ಬೇರ್ಷೆಬದಿಂದ ದಾನಿನವರೆಗೂ ವಾಸಿಸುವ ಇಸ್ರಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಆವರೆಗೂ, ಜನರಲ್ಲಿ ಹೆಚ್ಚುಮಂದಿ ಧರ್ಮಶಾಸ್ತ್ರವಿಧಿಯ ಮೇರೆಗೆ, ಪಾಸ್ಕವನ್ನು ಆಚರಿಸಲಿಲ್ಲ.೬ [6]ಅರಸನ ಮತ್ತು ಅವನ ಪದಾಧಿಕಾರಿಗಳ ಪತ್ರವನ್ನು ತೆಗೆದುಕೊಂಡುಹೋದ ದೂತರು ಇಸ್ರಯೇಲ್ ಹಾಗು ಜುದೇಯ ನಾಡುಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಯೇಲರೇ, ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರಾದ ಸರ್ವೇಶ್ವರನಿಗೆ ಅಭಿಮುಖರಾಗಿರಿ. ಆಗ ಅವರೂ ನಿಮ್ಮಲ್ಲಿ ಅಸ್ಸೀರಿಯಾದ ಅರಸನ ಕೈಗೆ ಸಿಕ್ಕದೆ ತಪ್ಪಿಸಿಕೊಂಡ ಅಳಿದುಳಿದವರಿಗೆ ಅಭಿಮುಖರಾಗುವರು.೭ [7]ನಿಮ್ಮ ಹೆತ್ತವರೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿ. ಅವರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾದರು; ಈ ಕಾರಣ ನಾಶನಕ್ಕೆ ಗುರಿಯಾದರು. ಅದಕ್ಕೆ ನೀವೇ ಸಾಕ್ಷಿಗಳು.೮ [8]ಈಗ ನಿಮ್ಮ ಪೂರ್ವಜರಂತೆ ಆಜ್ಞೆಗೆ ಮಣಿಯದವರಾಗಬೇಡಿ. ಸರ್ವೇಶ್ವರನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಸರ್ವೇಶ್ವರ ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಅವರನ್ನು ಅವಲಂಬಿಸಿರಿ. ಆಗ ನಿಮ್ಮ ಮೇಲಿರುವ ಅವರ ಉಗ್ರಕೋಪ ತೊಲಗಿಹೋಗುವುದು.೯ [9]ನೀವು ಸರ್ವೇಶ್ವರನಿಗೆ ಅಭಿಮುಖರಾದರೆ, ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ಮರಳಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಸರ್ವೇಶ್ವರ ದಯಾವಂತರು, ಕನಿಕರವುಳ್ಳವರು. ತಮಗೆ ಅಭಿಮುಖರಾಗುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”೧೦ [10]ದೂತರು ಎಫ್ರಯಿಮ್, ಮನಸ್ಸೆ, ಜೆಬುಲೂನ್ ಪ್ರಾಂತಗಳಲ್ಲಿ ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಆದರೆ ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.೧೧ [11]ಕೆಲವು ಮಂದಿ ಆಶೇರ್ಯರು, ಮನಸ್ಸೆಯವರು ಹಾಗು ಜೆಬುಲೂನ್ಯರು ಮಾತ್ರ ದೀನಮನಸ್ಕರಾಗಿ ಜೆರುಸಲೇಮಿಗೆ ಬಂದರು.೧೨ [12]ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.೧೩ [13]ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿ ಕೂಡಿದರು; ಅದೊಂದು ಮಹಾಕೂಟವಾಗಿತ್ತು.೧೪ [14]ಅವರು ಜೆರುಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.೧೫ [15]ಆಮೇಲೆ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನ ಪಾಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ವಧಿಸಿದರು. ಯಾಜಕರೂ ಲೇವಿಯರೂ, ಮೊದಲನೆಯ ಸಾರಿ ತಪ್ಪಿದ್ದಕ್ಕಾಗಿ ನಾಚಿಕೆಪಟ್ಟು, ತಮ್ಮನ್ನು ಶುದ್ಧಪಡಿಸಿಕೊಂಡರು. ಸರ್ವೇಶ್ವರನ ಆಲಯದಲ್ಲಿ ದಹನಬಲಿಗಳನ್ನು ಸಮರ್ಪಿಸಿದರು;೧೬ [16]ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೈವಪುರುಷನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ, ಸೇವೆಯನ್ನು ಸಲ್ಲಿಸಿದರು. ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.೧೭ [17]ಜನಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಪಡಿಸಿಕೊಳ್ಳದೆ ಇದ್ದುದರಿಂದ, ಅಶುದ್ಧರಾಗಿದ್ದವರೆಲ್ಲರ ಬಲಿಪಶುಗಳು ಸರ್ವೇಶ್ವರನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.೧೮ [18]ಜನರಲ್ಲಿ ಅನೇಕಾನೇಕರು ಅಂದರೆ, ಹೆಚ್ಚಾಗಿ ಎಫ್ರಯಿಮ್, ಮನಸ್ಸೆ, ಇಸ್ಸಾಕಾರ್ ಹಾಗು ಜೆಬಲೂನ್ ಪ್ರಾಂತಗಳವರು, ತಮ್ಮನ್ನು ಶುದ್ಧಪಡಿಸಿಕೊಳ್ಳದೆ, ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ, ಪಾಸ್ಕಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಸರ್ವೇಶ್ವರಾ, ದಯಾಪರರಾದ ದೇವರೇ, ಈ ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತೆ ಅನೇಕರಲ್ಲಿ ಇಲ್ಲ.೧೯ [19]ಆದರೂ ಪಿತೃಗಳ ದೇವರಾದ ನಿಮ್ಮನ್ನು ಅರಸುವ ಮನಸ್ಸಿನಿಂದ ಬಂದಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.೨೦ [20]ಅಂತೆಯೇ ಸರ್ವೇಶ್ವರ ಹಿಜ್ಕೀಯನ ಪ್ರಾರ್ಥನೆಯನ್ನು ಆಲಿಸಿದರು; ಜನರಿಗೆ ಕೇಡು ಮಾಡಲಿಲ್ಲ.೨೧ [21]ಜೆರುಸಲೇಮಿನಲ್ಲಿ ಕೂಡಿಬಂದ ಇಸ್ರಯೇಲರು ಏಳು ದಿನಗಳವರೆಗೂ ಮಹಾಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಲೇವಿಯರೂ ಯಾಜಕರೂ ಮಹಾವಾದ್ಯದೊಡನೆ ಸರ್ವೇಶ್ವರನನ್ನು ಪ್ರತಿದಿನವೂ ಕೀರ್ತಿಸುತ್ತಿದ್ದರು.೨೨ [22]ಹಿಜ್ಕೀಯನು ಸರ್ವೇಶ್ವರನ ಸೇವೆಯಲ್ಲಿ ನಿಪುಣರಾದ ಎಲ್ಲ ಲೇವಿಯರನ್ನು ಪುರಸ್ಕರಿಸಿದನು. ನೇಮಕವಾದ ಏಳು ದಿನಗಳವರೆಗೂ ಜನರು ಶಾಂತಿಸಮಾಧಾನ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣಮಾಡಿದರು.೨೩ [23]ಜುದೇಯದ ಅರಸ ಹಿಜ್ಕೀಯನು ಸಾವಿರ ಹೋರಿಗಳನ್ನು, ಏಳು ಸಾವಿರ ಕುರಿಗಳನ್ನು, ಪದಾಧಿಕಾರಿಗಳು ಸಾವಿರ ಹೋರಿಗಳನ್ನು ಹಾಗು ಹತ್ತು ಸಾವಿರ ಕುರಿಗಳನ್ನು ಜನರಿಗೆ ದಾನಮಾಡಿದರು; ಯಾಜಕರಲ್ಲಿ ಬಹುಮಂದಿ ತಮ್ಮನ್ನು ಶುದ್ಧಪಡಿಸಿಕೊಂಡರು.೨೪ [24]ಈ ಕಾರಣ, ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ತೀರ್ಮಾನಿಸಿಕೊಂಡರು. ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು.೨೫ [25]ಯೆಹೂದ್ಯರ ಸರ್ವಸಮೂಹದವರು, ಯಾಜಕರು, ಲೇವಿಯರು ಇಸ್ರಯೇಲ್ ಪ್ರಾಂತಗಳಿಂದ ನೆರೆದುಬಂದವರು ಎಲ್ಲರು ಹಾಗು ಇಸ್ರಯೇಲ್, ಜುದೇಯ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗಾರರಾಗಿದ್ದರು.೨೬ [26]ದಾವೀದನ ಮಗನೂ ಇಸ್ರಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಜೆರುಸಲೇಮಿನಲ್ಲಿ ಅಂಥ ಉತ್ಸವ ನಡೆದಿರಲಿಲ್ಲ. ಆದುದರಿಂದ ಜೆರುಸಲೇಮಿನಲ್ಲಿ ಹೇಳತೀರದ ಆನಂದವಿತ್ತು.೨೭ [27]ಯಾಜಕರು ಆಗಿದ್ದ ಲೇವಿಯರು ಆಮೇಲೆ ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರ ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆ ಪರಲೋಕದಲ್ಲಿರುವ ಆ ದೇವರ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೩೦ 00:00:00 00:00:00 0.5x 2.0x https://beblia.bible:81/BibleAudio/kannadakncl/2chronicles/030.mp3 36 30