× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಕ್ರಾನಿಕಲ್ಸ್ ೨ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೮ ಟಿಪ್ಪಣಿಗಳನ್ನು ಉಳಿಸಿ ೧ [1]ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಸರ್ವೇಶ್ವರನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.೨ [2]ಹೂರಾಮನಿಂದ ತನಗೆ ದೊರಕಿದ ಪಟ್ಟಣಗಳನ್ನು ಭದ್ರಪಡಿಸಿ ಅವುಗಳಲ್ಲಿ ಇಸ್ರಯೇಲರು ನೆಲಸುವಂತೆ ಮಾಡಿದನು.೩ [3]ಅನಂತರ ಅವನು ಚೋಬರಾಜ್ಯದ ಹಮಾತಿಗೆ ಹೋಗಿ ಅದನ್ನು ಸ್ವಾಧೀನ ಮಾಡಿಕೊಂಡನು.೪ [4]ಮರುಭೂಮಿಯಲ್ಲಿದ್ದ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಸುಭದ್ರಪಡಿಸಿದನು.೫ [5]ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಊರುಗಳಿಗೆ ಪೌಳಿಗೋಡೆ, ಕದ, ಅಗುಳಿ ಇವುಗಳನ್ನು ಏರ್ಪಡಿಸಿ ಕೋಟೆಗಳನ್ನಾಗಿ ಮಾರ್ಪಡಿಸಿದನು.೬ [6]ಬಾಲಾ ತೂರು, ತನ್ನ ಎಲ್ಲ ಉಗ್ರಾಣದ ಪಟ್ಟಣಗಳು, ಯುದ್ಧರಥಗಳನ್ನಿರಿಸುವ ಪಟ್ಟಣ, ರಾಹುತರ ಪಟ್ಟಣ ಇವುಗಳನ್ನೂ ಕಟ್ಟಿಸಿದನು. ಜೆರುಸಲೇಮಿನಲ್ಲೂ ಲೆಬನೋನಿನಲ್ಲೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲೂ ತನಗೆ ಇಷ್ಟವಾದುವುಗಳನ್ನೆಲ್ಲಾ ಕಟ್ಟಿಸಿದನು.೭ [7]ಇಸ್ರಯೇಲರಿಂದ ಸಂಹೃತರಾಗದೆ ಕಾನಾನ್ ನಾಡಿನಲ್ಲಿ ಅಳಿದುಳಿದ ಹಿತ್ತಿಯ, ಅಮೋರಿಯ, ಪೆರಿಜೀಯ, ಹಿವ್ವಿಯ ಹಾಗೂ ಯೆಬೂಸಿಯ ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನೂ ಬಿಟ್ಟಿಹಿಡಿದನು.೮ [8]ಅವರು ಇಂದಿನವರೆಗೂ ಬಿಟ್ಟೀಕೆಲಸದವರಾಗಿರುತ್ತಾರೆ.೯ [9]ಆದರೆ ಸೊಲೊಮೋನನು ತನ್ನ ಕೆಲಸಕ್ಕಾಗಿ ಇಸ್ರಯೇಲರನ್ನು ಬಿಟ್ಟಿಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿ, ಅಧಿಪತಿಗಳನ್ನಾಗಿ, ಸರದಾರರನ್ನಾಗಿ ಹಾಗೂ ರಥಾಶ್ವಬಲಗಳ ನಾಯಕರನ್ನಾಗಿ ನೇಮಿಸಿಕೊಂಡನು.೧೦ [10]ಇಂಥ ಇನ್ನೂರೈವತ್ತು ಮಂದಿ ಮುಖ್ಯಾಧಿಪತಿಗಳು ಅರಸ ಸೊಲೊಮೋನನ ಆಳುಗಳ ಮೇಲೆ ಅಧಿಕಾರಿಗಳಾಗಿದ್ದರು.೧೧ [11]“ಯಾವ ಯಾವ ಸ್ಥಳಗಳಲ್ಲಿ ಸರ್ವೇಶ್ವರನ ಮಂಜೂಷವಿತ್ತೋ ಅವು ಪವಿತ್ರಸ್ಥಾನಗಳು; ಆದುದರಿಂದ ಇಸ್ರಯೇಲರ ಅರಸನಾಗಿದ್ದ ದಾವೀದನ ಮನೆ ಪವಿತ್ರವಾದುದು; ಅಲ್ಲಿ ಫರೋಹನ ಮಗಳಾದ ನನ್ನ ಹೆಂಡತಿ ವಾಸಿಸಬಾರದು,” ಎಂದುಕೊಂಡು ಸೊಲೊಮೋನನು ಆಕೆಯನ್ನು ದಾವೀದನಗರದಿಂದಾಚೆ ಆಕೆಗಾಗಿಯೇ ತಾನು ಕಟ್ಟಿಸಿದ್ದ ಮಂದಿರದಲ್ಲಿ ಇರಿಸಿದನು.೧೨ [12]ಆ ಕಾಲದಲ್ಲಿ ಸೊಲೊಮೋನನು ತಾನು ಸರ್ವೇಶ್ವರನಿಗಾಗಿ ಮಂಟಪದ ಮುಂದೆ ಕಟ್ಟಿಸಿದ ಸರ್ವೇಶ್ವರನ ಬಲಿಪೀಠದ ಮೇಲೆ,೧೩ [13]ಮೋಶೆಯ ಆಜ್ಞೆಯಂತೆ, ಸಬ್ಬತ್ದಿನ, ಅಮಾವಾಸ್ಯೆ, ಇವುಗಳಲ್ಲೂ ಹುಳಿರಹಿತ ರೊಟ್ಟಿಗಳ ಜಾತ್ರೆ, ಪಂಚಾಶತ್ತಮ ದಿನದ ಜಾತ್ರೆ, ಪರ್ಣಕುಟೀರಗಳ ಜಾತ್ರೆ ಎಂಬೀ ಮೂರು ವಾರ್ಷಿಕ ಜಾತ್ರೆಗಳಲ್ಲೂ ಆಯಾ ದಿವಸಗಳಿಗೆ ನೇಮಕವಾದ ದಹನಬಲಿಗಳನ್ನು ಸಮರ್ಪಿಸುತ್ತಿದ್ದನು.೧೪ [14]ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.೧೫ [15]ಅವನು ಯಾಜಕರನ್ನೂ ಲೇವಿಯರನ್ನೂ ಅರಮನೆಯ ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಕಿಂಚಿತ್ತಾದರೂ ಮೀರಲಿಲ್ಲ.೧೬ [16]ಈ ಪ್ರಕಾರ ಅಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸವೂ ಮುಗಿದು ಸರ್ವೇಶ್ವರನ ಆಲಯ ಸಿದ್ಧವಾಯಿತು.೧೭ [17]ಆಮೇಲೆ, ಸೊಲೊಮೋನನು ಎದೋಮ್ ದೇಶದ ಸಮುದ್ರತೀರದಲ್ಲಿರುವ ಎಚ್ಯೋನ್ಗೆಬೆರ್ ಹಾಗೂ ಏಲೋತ್ ಎಂಬ ಊರುಗಳಿಗೆ ಹೋದನು.೧೮ [18]ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನೂ ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸ ಸೊಲೊಮೋನನಿಗೆ 15,000 ಕಿಲೋಗ್ರಾಂಗಿಂತ ಹೆಚ್ಚು ಬಂಗಾರವನ್ನೂ ತಂದುಕೊಟ್ಟರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಕ್ರಾನಿಕಲ್ಸ್ ೨ ೮ 00:00:00 00:00:00 0.5x 2.0x https://beblia.bible:81/BibleAudio/kannadakncl/2chronicles/008.mp3 36 8