× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ನೆಹೆಮೀಯಾ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨ ೧೨೩೪೫೬೭೮೯೧೦೧೧೧೨೧೩1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦1 1 1 ಕನ್ನಡ ಬೈಬಲ್ (KNCL) 2016 ನೆಹೆಮೀಯಾ ೨ ಟಿಪ್ಪಣಿಗಳನ್ನು ಉಳಿಸಿ ೧ [1]ನಾನು ರಾಜನ ಪಾನಸೇವಕನಾಗಿದ್ದೆ. ಅರ್ತಷಸ್ತರಾಜನ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ, ರಾಜನು ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ, ದ್ರಾಕ್ಷಾರಸವನ್ನು ತಂದುಕೊಟ್ಟೆ. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ.೨ [2]ರಾಜ ನನಗೆ, “ನೀನು ಕಳೆಗುಂದಿದವನಾಗಿರುವೆ, ಏಕೆ? ನಿನ್ನ ದೇಹಾರೋಗ್ಯ ಚೆನ್ನಾಗಿದೆಯಲ್ಲವೆ? ಇದಕ್ಕೆ ಮನೋವೇದನೆಯೇ ಹೊರತು ಬೇರೇನೂ ಕಾರಣ ಇರಲಾರದು,” ಎಂದು ಹೇಳಿದ. ನನಗೆ ಮಹಾಭೀತಿಯುಂಟಾಯಿತು.೩ [3]ನಾನು ರಾಜನಿಗೆ, “ರಾಜಾಧಿರಾಜರು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಹೀಗಿರುವಲ್ಲಿ, ನನ್ನ ಮುಖ ಕಳೆಗುಂದದೆ ಇರಲು ಸಾಧ್ಯವೆ?,” ಎಂದು ಹೇಳಿದೆ.೪ [4]ಆಗ ರಾಜ, “ನಿನ್ನ ಆಶೆಯೇನು?,” ಎಂದು ಕೇಳಿದನು. ನಾನು ಪರಲೋಕ ದೇವರನ್ನು ಪ್ರಾರ್ಥಿಸಿ, ಅವನಿಗೆ, “ರಾಜರ ಚಿತ್ತವಿರುವುದಾದರೆ,೫ [5]ಮತ್ತು ತಮ್ಮ ಸೇವಕನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ, ನನ್ನ ಪಿತೃಗಳ ಸಮಾಧಿಗಳಿರುವ ಪಟ್ಟಣವನ್ನು ಮರಳಿ ಕಟ್ಟುವುದಕ್ಕೆ ಜುದೇಯ ನಾಡಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು,” ಎಂದು ಹೇಳಿದೆ.೬ [6]ರಾಜರ ಹತ್ತಿರದಲ್ಲೇ ಕುಳಿತುಕೊಂಡಿದ್ದಳು ರಾಣಿ. ರಾಜ, “ಪ್ರಯಾಣಕ್ಕೆ ನಿನಗೆ ಎಷ್ಟುಕಾಲಬೇಕು? ಯಾವಾಗ ಹಿಂದಿರುಗುವೆ,” ಎಂದು ವಿಚಾರಿಸಿದ. ನಾನು ಕಾಲವನ್ನು ಸೂಚಿಸಿದೆ. ಅವನು ಒಪ್ಪಿಕೊಂಡು ಹೋಗಿಬರಲು ಅಪ್ಪಣೆಕೊಟ್ಟ.೭ [7]ತರುವಾಯ ನಾನು ರಾಜನಿಗೆ, “ನದಿ ಆಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳಲ್ಲಿ ಹಾದು ಜುದೇಯ ನಾಡಿಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡಬೇಕಾಗುತ್ತದೆ.೮ [8]ರಾಜ ವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳನ್ನೂ ಪಟ್ಟಣದ ಪೌಳಿಗೋಡೆಯನ್ನೂ ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡಬೇಕಾಗುತ್ತದೆ; ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆ. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ ರಾಜನು ಅವುಗಳನ್ನು ನನಗೆ ಕೊಟ್ಟನು.೯ [9]ಅದೂ ಅಲ್ಲದೆ ನನ್ನನ್ನು ಸಾಗಕಳುಹಿಸುವುದಕ್ಕೆ ಸೇನಾಧಿಪತಿಗಳನ್ನೂ ರಾಹುತರನ್ನೂ ಕಳುಹಿಸಿದನು. ಹೀಗೆ ನಾನು ನದಿಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ರಾಜನ ಪತ್ರಗಳನ್ನು ಅವರಿಗೆ ತೋರಿಸಿದೆ.೧೦ [10]ಇಸ್ರಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್ ದೇಶದವನಾದ ತೊಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬ ಹೊಟ್ಟೆಕಿಚ್ಚುಪಟ್ಟರು.೧೧ [11]ಅನಂತರ ಜೆರುಸಲೇಮಿಗೆ ಬಂದೆ. ಅಲ್ಲಿ ಮೂರು ದಿನಗಳಿದ್ದೆ.೧೨ [12]ಆಮೇಲೆ ಜೆರುಸಲೇಮಿಗಾಗಿ ಮಾಡತಕ್ಕ ಕಾರ್ಯದ ಬಗ್ಗೆ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾರೆಂದು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆ. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.೧೩ [13]ನಾನು ರಾತ್ರಿ ವೇಳೆಯಲ್ಲಿ ಕಣಿವೆಯ ಬಾಗಿಲಿನಿಂದ ಹೊರಟು, ಹಾಳುಬಿದ್ದ ಜೆರುಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲಾಗಿದ್ದ ಅದರ ಬಾಗಿಲುಗಳನ್ನೂ ನೋಡುತ್ತಾ ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆ.೧೪ [14]ಅಲ್ಲಿಂದ ಬುಗ್ಗೆಬಾಗಿಲನ್ನು ಹಾದು ಅರಸನ ಕೊಳಕ್ಕೆ ಹೋದೆ.೧೫ [15]ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿಲ್ಲದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆ. ಆಮೇಲೆ ಪುನಃ ಕಣಿವೆಯ ಬಾಗಿಲಿನಿಂದ ಮನೆಗೆ ಬಂದೆ.೧೬ [16]ನಾನು ಆವರೆಗೆ ಯೆಹೂದ್ಯರಿಗೂ ಯಾಜಕರಿಗೂ ಶ್ರೀಮಂತರಿಗೂ ಅಧಿಕಾರಿಗಳಿಗೂ ಹಾಗು ಕೆಲಸ ನಡೆಸತಕ್ಕ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ, ನಾನು ಎಲ್ಲಿ ಹೋಗಿದ್ದೆ, ಏನು ಮಾಡಿದೆ ಎಂಬುದು ಅಧಿಕಾರಿಗಳಿಗೆ ಗೊತ್ತಿರಲಿಲ್ಲ.೧೭ [17]ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣಮುಂದಿರುತ್ತದಲ್ಲವೇ? ಜೆರುಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಜೆರುಸಲೇಮಿನ ಗೋಡೆಯನ್ನು ಕಟ್ಟೋಣ, ಹೀಗೆ ಮಾಡಿದರೆ ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.೧೮ [18]ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.೧೯ [19]ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಯೂ ಅರೇಬಿಯನಾದ ಗೆಷೆಮನೂ ಈ ಸಮಾಚಾರವನ್ನೂ ಕೇಳಿದಾಗ ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿದರು. “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರೋಧವಾಗಿ ದಂಗೆ ಏಳಬೇಕೆಂದಿದ್ದೀರೋ?” ಎಂದು ಕೇಳಿದರು.೨೦ [20]ನಾನು ಅವರಿಗೆ, “ಪರಲೋಕದೇವರು ನಮಗೆ ಸಫಲತೆಯನ್ನು ಅನುಗ್ರಹಿಸುವರು. ಆದುದರಿಂದ ಅವರ ದಾಸರಾದ ನಾವು ಕೋಟೆಯ ಗೋಡೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದೇವೆ. ನಿಮಗಾದರೋ ಜೆರುಸಲೇಮಿನಲ್ಲಿ ಪಾಲಾಗಲಿ, ಹಕ್ಕಾಗಲಿ, ಸ್ಮಾರಕವಾಗಲಿ ಇರುವುದಿಲ್ಲ,” ಎಂದು ಉತ್ತರಕೊಟ್ಟೆ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ನೆಹೆಮೀಯಾ ೨ 00:00:00 00:00:00 0.5x 2.0x https://beblia.bible:81/BibleAudio/kannadakncl/nehemiah/002.mp3 13 2