× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ನೆಹೆಮೀಯಾ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪ ೧೨೩೪೫೬೭೮೯೧೦೧೧೧೨೧೩1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩1 1 1 ಕನ್ನಡ ಬೈಬಲ್ (KNCL) 2016 ನೆಹೆಮೀಯಾ ೪ ಟಿಪ್ಪಣಿಗಳನ್ನು ಉಳಿಸಿ ೧ [1]ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿ ಸನ್ಬಲ್ಲಟನಿಗೆ ಮುಟ್ಟಿತು. ಅವನು ಬಹಳ ಹೊಟ್ಟೆಕಿಚ್ಚಿನ ಹಾಗು ಸಿಡುಕಿನ ವ್ಯಕ್ತಿ.೨ [2]“ನನ್ನ ಸಹೋದರರ ಮುಂದೆ ಹಾಗು ಸಮಾರಿಯದ ದಂಡಿನವರ ಮುಂದೆ ಅಶಕ್ತರಾದ ಈ ಯೆಹೂದ್ಯರು ಮಾಡುವುದಾದರೂ ಏನು? ಇವರು ತಮ್ಮನ್ನೇ ಬಲಪಡಿಸಿಕೊಳ್ಳಬೇಕೆಂದು ಇರುವರೋ? ಬಲಿಯರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮಾಡಿಮುಗಿಸುವರೋ? ಸುಟ್ಟುಹೋದ ಪಟ್ಟಣದ ಬೂದಿಯ ರಾಶಿಯೊಳಗೆ ಹುದುಗಿಹೋದ ಕಲ್ಲುಗಳನ್ನು ಬದುಕಿಸುವರೋ?’ ಎಂದು ಹೇಳಿ ಯೆಹೂದ್ಯರನ್ನು ಪರಿಹಾಸ್ಯ ಮಾಡಿದನು.೩ [3]ಅವನ ಬಳಿಯಲ್ಲೇ ನಿಂತಿದ್ದ ಅಮ್ಮೋನಿಯನಾದ ಟೋಬೀಯನು, “ಅವರು ಕಟ್ಟುವ ಕಲ್ಲು ಗೋಡೆಯ ಮೇಲೆ ನರಿ ಹಾರಿದರೆ ಅದು ಬಿದ್ದುಹೋಗುವುದು!” ಎಂದು ಅಣಕಿಸಿದನು.೪ [4]“ನಮ್ಮ ದೇವರೇ ಆಲಿಸಿ: ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡಿ. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡಿ.೫ [5]ಅವರ ಅಪರಾಧವನ್ನು ಕ್ಷಮಿಸಬೇಡಿ. ನಿಮ್ಮೆದುರಿಗಿರುವ ಅವರ ಪಾಪವನ್ನು ಅಳಿಸಿಬಿಡಬೇಡಿ. ಏಕೆಂದರೆ ಕಟ್ಟುವವರ ಮುಂದೆಯೇ ಅವರು ನಿಮ್ಮನ್ನು ಕೆಣಕಿದ್ದಾರೆ,” ಎಂದು ನಾನು ಪ್ರಾರ್ಥಿಸಿದೆ.೬ [6]ಇದಾದ ಮೇಲೆ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಮನಸ್ಸುಮಾಡಿ ಅರ್ಧಗೋಡೆಯನ್ನು ಕಟ್ಟಿದರು.೭ [7]ಸನ್ಬಲ್ಲಟನು, ಟೋಬೀಯನು, ಅರೇಬಿಯರು, ಅಮ್ಮೋನಿಯರು ಹಾಗು ಅಷ್ಡೋದಿನವರು ಜೆರುಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂಬುದನ್ನು ಕೇಳಿದರು.೮ [8]ಅವರಿಗೆ ಬಹುಕೋಪ ಬಂದಿತು. “ನಾವು ಒಟ್ಟಾಗಿ ಜೆರುಸಲೇಮಿನವರ ವಿರುದ್ಧ ಯುದ್ಧಕ್ಕೆ ಹೋಗಿ ಅವರನ್ನು ತಳಮಳಗೊಳಿಸೋಣ,” ಎಂದು ಒಳಸಂಚು ಮಾಡಿಕೊಂಡರು.೯ [9]ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಆ ಜನರು ಬರುವ ದಾರಿಯಲ್ಲಿ ಹಗಲಿರುಳು ಕಾವಲಿಟ್ಟೆವು.೧೦ [10]ಇತ್ತ ಯೆಹೂದ್ಯರೇ, “ಹೊರೆಹೊರುವವರ ಬಲ ಕುಂದಿಹೋಯಿತು. ಧೂಳಿನ ರಾಶಿ ವಿಪರೀತ ಆಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದಾಗದು,” ಎಂದರು.೧೧ [11]ಅತ್ತ ನಮ್ಮ ವಿರೋಧಿಗಳು, “ಅವರಿಗೆ ತಿಳಿಯದೆ, ಗೋಚರವಾಗದೆ, ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ,” ಎಂದುಕೊಳ್ಳುತ್ತಿದ್ದರು.೧೨ [12]ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು, “ನೀವು ಯಾವ ಕಡೆಗೆ ತಿರುಗಿಕೊಂಡರೂ ಆ ಎಲ್ಲಾ ಕಡೆಗಳಿಂದ ನಮಗೆ ವಿರೋಧವಾಗಿ ಯುದ್ಧಕ್ಕೆ ಬರುತ್ತಾರೆ,” ಎಂದು ಪದೇ ಪದೇ ತಿಳಿಸುತ್ತಿದ್ದರು.೧೩ [13]ಆಗ ನಾನು ಜನರಿಗೆ, “ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಿ,” ಎಂದು ಆಜ್ಞಾಪಿಸಿದೆ.೧೪ [14]ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು, ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿ; ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿಕೊಂಡು, ನಿಮ್ಮ ಸಹೋದರರಿಗಾಗಿ, ಮಡದಿಮಕ್ಕಳಿಗಾಗಿ ಹಾಗು ನಿಮ್ಮ ಮನೆಮಠಗಳಿಗಾಗಿ ಕಾದಾಡಿರಿ,” ಎಂದು ಹುರಿದುಂಬಿಸಿದೆ.೧೫ [15]ನಮ್ಮ ಶತ್ರುಗಳು ತಮ್ಮ ಹಂಚಿಕೆ ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥಮಾಡಿದರೆಂದೂ ತಿಳಿದುಕೊಂಡರು. ನಮ್ಮನ್ನು ಬಿಟ್ಟುಹೋದರು; ನಾವೆಲ್ಲರು ನಮ್ಮ ನಮ್ಮ ಗೋಡೆಯ ಕೆಲಸಕ್ಕೆ ಮತ್ತೆ ಕೈಹಾಕಿದೆವು.೧೬ [16]ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧಮಂದಿ ಕಟ್ಟಡ ಕೆಲಸದಲ್ಲಿ ನಿರತರಾದರು. ಅರ್ಧಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಅಧಿಕಾರಿಗಳೂ ಗೋಡೆ ಕಟ್ಟುವ ಯೆಹೂದ್ಯರ ಹಿಂದೆ ನಿಂತರು.೧೭ [17]ಹೊರೆಹೊರುವವರೂ ಒಂದು ಕೈಯಿಂದ ಹೊರೆಹೊತ್ತು ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತ ಇದ್ದರು.೧೮ [18]ಕಟ್ಟುವವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಳ್ಳುತ್ತ ಇದ್ದನು. ನಾನಂತೂ ಕಹಳೆ ಊದುವವನೊಬ್ಬನನ್ನು ನನ್ನ ಬಳಿಯಲ್ಲೇ ಇರಿಸಿಕೊಂಡಿದ್ದೆ.೧೯ [19]ಶ್ರೀಮಂತರಿಗು, ಅಧಿಕಾರಿಗಳಿಗು ಹಾಗು ಉಳಿದ ಜನರಿಗು, “ನಾವು ಮಾಡುವ ಕೆಲಸ ದೊಡ್ಡದು, ಹಲವಾರು ಎಡೆಗಳಲ್ಲಿ ನಡೆಯುವಂಥದ್ದು; ನಾವು ಗೋಡೆಯ ನಿಮಿತ್ತ ಒಬ್ಬರಿಂದ ಒಬ್ಬರು ದೂರವಾಗಿರುತ್ತೇವೆ.೨೦ [20]ನಿಮಗೆ ಕಹಳೆಯ ಧ್ವನಿ ಕೇಳಿದಕೂಡಲೆ, ನಮ್ಮ ಬಳಿಗೆ ಕೂಡಿಬನ್ನಿರಿ. ನಮ್ಮ ದೇವರು ನಮ್ಮ ಪರವಾಗಿ ಯುದ್ಧಮಾಡುವರು,” ಎಂದು ಹೇಳಿದ್ದೆ.೨೧ [21]ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸಮಾಡುತ್ತಿದ್ದೆವು; ನನ್ನ ಸೇವಕರಲ್ಲಿ ಅರ್ಧಮಂದಿ ಬರ್ಜಿ ಹಿಡಿದುಕೊಂಡಿದ್ದರು.೨೨ [22]ಇದಲ್ಲದೆ, ನಾನು ಮೇಸ್ತ್ರಿಗಳಿಗೆ, “ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರಲು ಹಾಗು ಹಗಲಿನಲ್ಲಿ ಕೆಲಸಮಾಡಲು ಸಾಧ್ಯವಾಗುವಂತೆ, ನೀವು ನಿಮ್ಮ ನಿಮ್ಮ ಆಳುಗಳೊಡನೆ ಜೆರುಸಲೇಮಿನಲ್ಲೇ ವಾಸಮಾಡಬೇಕು,” ಎಂದು ಅಪ್ಪಣೆಮಾಡಿದ್ದೆ.೨೩ [23]ನಾನು, ನನ್ನ ಸಹೋದರರು, ಸೇವಕರು ಹಾಗು ಮೈಗಾವಲಿನವರು ಸ್ನಾನ ಸಮಯದಲ್ಲಿ ಹೊರತು, ಬೇರೆ ಸಮಯದಲ್ಲಿ ನಮ್ಮ ಬಟ್ಟೆಗಳನ್ನು ತೆಗೆದುಹಾಕುತ್ತಿರಲಿಲ್ಲ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ನೆಹೆಮೀಯಾ ೪ 00:00:00 00:00:00 0.5x 2.0x https://beblia.bible:81/BibleAudio/kannadakncl/nehemiah/004.mp3 13 4