× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ವಿಮೋಚನಾಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬1 1 1 ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೧೭ ಟಿಪ್ಪಣಿಗಳನ್ನು ಉಳಿಸಿ ೧ [1]ಇಸ್ರಯೇಲರು ಸರ್ವೇಶ್ವರನ ಅಪ್ಪಣೆಯ ಪ್ರಕಾರ ಸೀನ್ ಎಂಬ ಮರುಭೂಮಿಯಿಂದ ಹೊರಟು ಮುಂದಕ್ಕೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು.೨ [2]ಅಲ್ಲಿ ಕುಡಿಯುವುದಕ್ಕೆ ನೀರಿರಲಿಲ್ಲ. ಜನರು ಮೋಶೆಯ ಸಂಗಡ ಜಗಳವಾಡುತ್ತಾ, “ನಮಗೆ ಕುಡಿಯುವುದಕ್ಕೆ ನೀರು ತೋರಿಸಬೇಕು,” ಎಂದು ಹೇಳಿದರು. ಆಗ ಮೋಶೆ, “ನೀವು ನನ್ನ ಸಂಗಡ ವಾದಿಸುವುದೇಕೆ? ಸರ್ವೇಶ್ವರನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.೩ [3]ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಬೇಸರದಿಂದ ಮೋಶೆಯ ವಿರುದ್ಧ ಗೊಣಗುಟ್ಟಿದರು. “ನೀನು ನಮ್ಮನ್ನು, ನಮ್ಮ ಮಕ್ಕಳನ್ನು ಹಾಗು ದನಕರುಗಳನ್ನು ಈಜಿಪ್ಟಿನಿಂದ ಕರೆದು ತಂದದ್ದು ಏಕೆ? ನೀರಿಲ್ಲದೆ ಸಾಯಿಸುವುದಕ್ಕೋ?” ಎಂದು ದೂರಿದರು.೪ [4]ಆಗ ಮೋಶೆ ಸರ್ವೇಶ್ವರನಿಗೆ ಮೊರೆಯಿಟ್ಟನು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವಂತಿದ್ದಾರೆ” ಎಂದು ಪ್ರಾರ್ಥಿಸಿದನು.೫ [5]ಅದಕ್ಕೆ ಸರ್ವೇಶ್ವರ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು, ಇಸ್ರಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು, ನಾನು ತೋರಿಸುವ ಸ್ಥಳಕ್ಕೆ ಜನರ ಮುಂದೆ ಹೋಗು.೬ [6]ಅಲ್ಲೇ ಹೋರೇಬಿನಲ್ಲಿರುವ ಬಂಡೆಯೊಂದರ ಮೇಲೆ ನಾನೇ ನಿನ್ನ ಮುಂದೆ ನಿಲ್ಲುವೆನು. ಆ ಬಂಡೆಯನ್ನು ನೀನು ಹೊಡೆ. ಆಗ ಅದರಿಂದ ನೀರು ಹೊರಡುವುದು; ಜನರು ಕುಡಿಯಲಿ,” ಎಂದು ಅಪ್ಪಣೆಕೊಟ್ಟರು. ಹಾಗೆಯೇ ಮೋಶೆ ಇಸ್ರಯೇಲರ ಹಿರಿಯರ ಕಣ್ಣೆದುರಿನಲ್ಲೆ ಮಾಡಿದನು.೭ [7]ಸರ್ವೇಶ್ವರ ಸ್ವಾಮಿ ತಮ್ಮ ಮಧ್ಯೆ ಇದ್ದಾರೋ ಇಲ್ಲವೋ ಎಂದು ಇಸ್ರಯೇಲರು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ‘ಮಸ್ಸಾ’ ಎಂತಲೂ ಜನರು ತನ್ನೊಡನೆ ವಾಗ್ವಾದ ಮಾಡಿದ್ದರಿಂದ ‘ಮೆರೀಬಾ’ ಎಂತಲೂ ಹೆಸರಿಟ್ಟನು.೮ [8]ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಯೇಲರ ಮೇಲೆ ಯುದ್ಧಮಾಡುವುದಕ್ಕೆ ಬಂದರು.೯ [9]‘ಮೋಶೆ ಯೆಹೋಶುವನಿಗೆ, “ನೀನು ಯೋಧರನ್ನು ಆರಿಸಿಕೊಂಡು ನಾಳೆ ನಮ್ಮ ಪರವಾಗಿ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ದೇವದಂಡವನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು,” ಎಂದು ಹೇಳಿದನು.೧೦ [10]ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರ ಸಂಗಡ ಯುದ್ಧಮಾಡಲು ಹೊರಟನು. ಮೋಶೆ, ಆರೋನ ಹಾಗು ಹೂರ ಈ ಮೂವರು ಗುಡ್ಡದ ತುದಿಗೆ ಏರಿದರು.೧೧ [11]ಮೋಶೆ ತನ್ನ ಕೈಗಳನ್ನು ಮೇಲಕ್ಕೆ ಎತ್ತಿರುವಾಗಲೆಲ್ಲಾ ಇಸ್ರಯೇಲರು ಜಯಶೀಲರಾಗುತ್ತಿದ್ದರು, ಇಳಿಸುವಾಗಲೆಲ್ಲಾ ಅಮಾಲೇಕ್ಯರು ಜಯಶೀಲರಾಗುತ್ತಿದ್ದರು.೧೨ [12]ಹೀಗಿರಲು ಮೋಶೆಯ ಕೈಗಳು ಆಯಾಸಗೊಳ್ಳುತ್ತಿದ್ದುದರಿಂದ ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದಿಟ್ಟು ಅದರ ಮೇಲೆ ಮೋಶೆಯನ್ನು ಕುಳ್ಳಿರಿಸಿದರು. ಅಲ್ಲದೆ ಬಲಗಡೆ ಒಬ್ಬನು ಎಡಗಡೆ ಒಬ್ಬನು ನಿಂತು ಅವನ ಕೈಗಳಿಗೆ ಆಧಾರಕೊಟ್ಟರು. ಈ ರೀತಿಯಾಗಿ ಅವನ ಕೈಗಳು ಹೊತ್ತು ಮುಳುಗುವ ತನಕ ಇಳಿಯದೆ ನಿಂತೇ ಇರುವಂತೆ ಮಾಡಿದರು.೧೩ [13]ಹೀಗೆ ಯೆಹೋಶುವನು ಅಮಾಲೇಕ್ಯರ ಯೋಧರನ್ನು ಕತ್ತಿಗೆ ತುತ್ತಾಗಿಸಿ ಅವರನ್ನು ಸೋಲಿಸಿದನು.೧೪ [14]ಆಗ ಸರ್ವೇಶ್ವರ, “ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು ಎಂಬ ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ ಮತ್ತು ಯೆಹೋಶುವನಿಗೆ ಮನದಟ್ಟಾಗುವಂತೆ ಮಾಡು” ಎಂದು ಮೋಶೆಗೆ ಹೇಳಿದರು.೧೫ [15]ಆ ಸ್ಥಳದಲ್ಲಿ ಮೋಶೆ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ‘ಯಾವ್ವೆನಿಸ್ಸಿ’ ಎಂದು ಹೆಸರಿಟ್ಟನು.೧೬ [16]ಅಲ್ಲದೆ, “ಸರ್ವೇಶ್ವರನ ಪತಾಕೆಯನ್ನು ಎತ್ತಿಹಿಡಿಯಿರಿ. ಅಮಾಲೇಕ್ಯರ ಮೇಲೆ ಸರ್ವೇಶ್ವರನಿಗೆ ತಲತಲಾಂತರಕ್ಕೂ ಯುದ್ಧವಿರುವುದು,” ಎಂದು ಹೇಳಿದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೧೭ 00:00:00 00:00:00 0.5x 2.0x https://beblia.bible:81/BibleAudio/kannadakncl/exodus/017.mp3 40 17