× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ವಿಮೋಚನಾಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೦ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೨೦ ಟಿಪ್ಪಣಿಗಳನ್ನು ಉಳಿಸಿ ೧ [1]ದೇವರು ಕೊಟ್ಟ ಆಜ್ಞೆಗಳು ಇವು:೨ [2]“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.೩ [3]ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು.೪ [4]ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ, ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ.೫ [5]ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.೬ [6]ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.೭ [7]ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.೮ [8]ಸಬ್ಬತ್ ದಿನವನ್ನು ದೇವರ ದಿನವೆಂದು ತಿಳಿದು ಪವಿತ್ರವಾಗಿ ಆಚರಿಸು.೯ [9]ಆರು ದಿನಗಳು ದುಡಿದು ನಿನ್ನ ಕೆಲಸವನ್ನೆಲ್ಲ ಮಾಡು.೧೦ [10]ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡು ಹೆಣ್ಣು ಮಕ್ಕಳು, ನಿನ್ನ ಗಂಡು ಹೆಣ್ಣು ಆಳುಗಳು, ಪಶುಪ್ರಾಣಿಗಳು ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು.೧೧ [11]ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.೧೨ [12]ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.೧೩ [13]ಕೊಲೆಮಾಡಬೇಡ.೧೪ [14]ವ್ಯಭಿಚಾರಮಾಡಬೇಡ.೧೫ [15]ಕದಿಯಬೇಡ.೧೬ [16]ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ.೧೭ [17]ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ.೧೮ [18]ಆ ಗುಡುಗು ಮಿಂಚನ್ನು, ತುತೂರಿ ಧ್ವನಿಯನ್ನು ಹಾಗು ಬೆಟ್ಟದಿಂದ ಹೊರಡುತ್ತಿದ್ದ ಹೊಗೆಯನ್ನು ಜನರೆಲ್ಲರು ನೋಡಿದರು. ನೋಡಿ ನಡುಗುತ್ತಾ ದೂರದಲ್ಲೇ ನಿಂತುಕೊಂಡರು.೧೯ [19]ಅವರು ಮೋಶೆಗೆ, “ನೀನೇ ನಮ್ಮೊಡನೆ ಮಾತಾಡು, ನಾವು ಕೇಳುತ್ತೇವೆ. ದೇವರು ನಮ್ಮೊಡನೆ ಮಾತಾಡಿದರೆ ನಾವು ಸತ್ತು ಹೋಗುತ್ತೇವೆ,” ಎಂದು ಹೇಳಿದರು.೨೦ [20]ಅದಕ್ಕೆ ಮೋಶೆ, “ಭಯಪಡಬೇಡಿ; ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ ಬಂದಿದ್ದಾರೆ; ಹೀಗೆ ದೈವಭೀತಿ ನಿಮ್ಮ ಕಣ್ಮುಂದಿದ್ದು ನೀವು ಪಾಪಮಾಡದೆ ಇರುವಿರಿ,” ಎಂದನು.೨೧ [21]ಮೋಶೆಯೊಬ್ಬನೇ ದೇವರಿದ್ದ ಕಾರ್ಮುಗಿಲನ್ನು ಸಮೀಪಿಸಿದ್ದನು. ಜನರು ದೂರದಲ್ಲೇ ನಿಂತಿದ್ದರು.೨೨ [22]ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆ ಹೇಳಿದರು: “ಇಸ್ರಯೇಲರಿಗೆ ಹೀಗೆಂದು ತಿಳಿಸು - ‘ನಾನು ಆಕಾಶದಿಂದ ನಿಮ್ಮೊಡನೆ ಮಾತಾಡಿದ್ದೇನೆಂದು ನಿಮಗೆ ಗೊತ್ತಿದೆ.೨೩ [23]ಆದ್ದರಿಂದ ನೀವು ನನಗೆ ಪ್ರತಿಯಾಗಿ ಬೆಳ್ಳಿಬಂಗಾರಗಳಿಂದ ದೇವರುಗಳನ್ನು ಮಾಡಿಕೊಳ್ಳಬಾರದು,೨೪ [24]ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.೨೫ [25]ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.೨೬ [26]ನೀವು ನನಗಾಗಿ ಕಲ್ಲಿನಿಂದ ಬಲಿಪೀಠವನ್ನು ಕಟ್ಟಬೇಕಾದರೆ ಕೆತ್ತಿರುವ ಕಲ್ಲುಗಳಿಂದ ಕಟ್ಟಕೂಡದು. ಏಕೆಂದರೆ ಉಳಿ ಮುಂತಾದುದನ್ನು ಉಪಯೋಗಿಸಿದರೆ ಅದು ಅಪವಿತ್ರವಾಗುವುದು.೨೭ [27]ಅದೂ ಅಲ್ಲದೆ ನಿಮ್ಮ ನಗ್ನತೆ ನನ್ನ ಪೀಠದ ಮೇಲೆ ಕಾಣಿಸಿಕೊಳ್ಳದಂತೆ ಮೆಟ್ಟಲುಗಳ ಮೂಲಕ ಅದರ ಮೇಲೆ ಹತ್ತಬೇಡಿ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೨೦ 00:00:00 00:00:00 0.5x 2.0x https://beblia.bible:81/BibleAudio/kannadakncl/exodus/020.mp3 40 20