× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ವಿಮೋಚನಾಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೩೭ ಟಿಪ್ಪಣಿಗಳನ್ನು ಉಳಿಸಿ ೧ [1]ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.೨ [2]ಚೊಕ್ಕಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಒಳಗಡೆಯೂ ಹೊದಿಸಿದನು; ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಿದನು.೩ [3]ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ, ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇರಿಸಿದನು.೪ [4]ಮತ್ತು ಜಾಲೀಮರದ ಗದ್ದುಗೆಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ೫ [5]ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಅದನ್ನು ಹೊರುವುದಕ್ಕಾಗಿ ಸೇರಿಸಿದನು.೬ [6]ಅದಲ್ಲದೆ ಚೊಕ್ಕಬಂಗಾರದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿತ್ತು.೭ [7]ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿದನು.೮ [8]ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿ ಕೃಪಾಸನಕ್ಕೆ ಜೋಡಿಸಿದನು.೯ [9]ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಇದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.೧೦ [10]ಬೆಚಲೇಲನು ಜಾಲೀಮರದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದೂವರೆ ಮೊಳ ಎತ್ತರವೂ ಆಗಿತ್ತು.೧೧ [11]ಅದಕ್ಕೆ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ತೋರಣ ಕಟ್ಟಿದನು.೧೨ [12]ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿ ಅದಕ್ಕೂ ಚಿನ್ನದ ತೋರಣ ಕಟ್ಟಿದನು.೧೩ [13]ಮೇಜನ್ನು ಎತ್ತುವ ಗದ್ದಿಗೆಗಳನ್ನು ಸೇರಿಸುವುದಕ್ಕಾಗಿ ಅದಕ್ಕೆ ನಾಲ್ಕು ಚಿನ್ನದ ಬಳೆಗಳನ್ನು ಎರಕ ಹೊಯಿಸಿ ಅದರ ನಾಲ್ಕು ಕಾಲುಗಳಲ್ಲಿ ಹಚ್ಚಿದನು.೧೪ [14]ಆ ಬಳೆಗಳು ಅಡ್ಡಪಟ್ಟಿಗೆ ಹತ್ತಿಕೊಂಡಿದ್ದವು.೧೫ [15]ಮೇಜನ್ನು ಹೊರುವುದಕ್ಕೆ ಗದ್ದಿಗೆಗಳನ್ನು ಜಾಲೀಮರದಿಂದ ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.೧೬ [16]ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು, ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕಬಂಗಾರದಿಂದ ಮಾಡಿದನು.೧೭ [17]ಚೊಕ್ಕಬಂಗಾರದ ದೀಪವೃಕ್ಷವನ್ನು ಮಾಡಿದನು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿದನು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಮೊಗ್ಗುಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿತ್ತು.೧೮ [18]ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳು, ಅಂತೂ ಆರು ಕೊಂಬೆಗಳಿದ್ದವು.೧೯ [19]ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಲಂಕಾರಗಳಿದ್ದವು; ಒಂದೊಂದು ಅಲಂಕಾರಕ್ಕೆ ಒಂದು ಮೊಗ್ಗೂ ಒಂದು ಪುಷ್ಪವೂ ಇದ್ದವು. ಆರು ಕೊಂಬೆಗಳನ್ನೂ ಹಾಗೆಯೇ ಮಾಡಿದನು.೨೦ [20]ದೀಪವೃಕ್ಷ ಕಡ್ಡಿಯಲ್ಲಿ ಮೊಗ್ಗುಗಳೂ ಪುಷ್ಪಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇದ್ದವು.೨೧ [21]ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇತ್ತು.೨೨ [22]ಮೊಗ್ಗುಗಳೂ ಕೊಂಬೆಗಳೂ ಸಹಿತವಾದ ದೀಪವೃಕ್ಷವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿದನು.೨೩ [23]ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿದನು.೨೪ [24]ದೀಪವೃಕ್ಷವೂ ಅದರ ಎಲ್ಲಾ ಉಪಕರಣಗಳೂ ಮೂವತ್ತೈದು ಕಿಲೋಗ್ರಾಂ ಚೊಕ್ಕಬಂಗಾರದವುಗಳಾಗಿದ್ದವು.೨೫ [25]ಅವನು ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿದನು. ಅದು ಒಂದು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರ ಅಂಗಗಳಾಗಿದ್ದವು.೨೬ [26]ಅದರ ಮೇಲ್ಭಾಗಕ್ಕೂ ನಾಲ್ಕು ಪಕ್ಕಗಳಿಗೂ ಕೊಂಬುಗಳಿಗೂ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ತೋರಣ ಕಟ್ಟಿದನು.೨೭ [27]ಅದನ್ನು ಎತ್ತುವ ಗದ್ದಿಗೆಗಳನ್ನು ಸೇರಿಸುವುದಕ್ಕಾಗಿ ಆ ತೋರಣದ ಕೆಳಗೆ ವೇದಿಕೆಯ ಎರಡು ಪಾರ್ಶ್ವಗಳ ಮೂಲೆಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಬಿಗಿಸಿದನು.೨೮ [28]ವೇದಿಕೆಯನ್ನು ಹೊರುವುದಕ್ಕೆ ಗದ್ದಿಗೆಗಳನ್ನು ಜಾಲೀಮರದಿಂದ ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.೨೯ [29]ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಅಭಿಷೇಕ ತೈಲವನ್ನು ಹಾಗು ಪರಿಮಳದ್ರವ್ಯಗಳಿಂದ ಮಾಡಲಾದ ಅಪ್ಪಟವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿಧಾನದ ಮೇರೆಗೆ ತಯಾರಿಸಿದನು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೩೭ 00:00:00 00:00:00 0.5x 2.0x https://beblia.bible:81/BibleAudio/kannadakncl/exodus/037.mp3 40 37