× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ವಿಮೋಚನಾಕಾಂಡ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೪ ಟಿಪ್ಪಣಿಗಳನ್ನು ಉಳಿಸಿ ೧ [1]ಆಗ ಮೋಶೆ ಉತ್ತರ ನೀಡಿ,” ಆಲಿಸಬೇಕು; ಆ ಜನರು ನನ್ನನ್ನು ನಂಬದೆ ನನ್ನ ಮಾತಿಗೆ ಕಿವಿಗೊಡದೆ ಹೋಗಬಹುದು: ‘ಸರ್ವೇಶ್ವರ ಸ್ವಾಮಿ ನಿನಗೆ ಕಾಣಿಸಿಕೊಂಡಿದ್ದೇ ಇಲ್ಲ’ ಎಂದು ಹೇಳಬಹುದು” ಎಂದನು.೨ [2]ಅದಕ್ಕೆ ಸರ್ವೇಶ್ವರ ಅವನನ್ನು, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದರು, ಅವನು, “ಇದು ಕೋಲು” ಎಂದನು.೩ [3]ಸರ್ವೇಶ್ವರ ಅವನಿಗೆ, “ಅದನ್ನು ನೆಲದಲ್ಲಿ ಬಿಸಾಡು,” ಎಂದರು. ನೆಲದಲ್ಲಿ ಬಿಸಾಡುತ್ತಲೇ ಅದು ಹಾವಾಯಿತು! ಅದನ್ನು ಕಂಡ ಮೋಶೆ ಭಯಪಟ್ಟು ಓಡಿಹೋದನು.೪ [4]ಸರ್ವೇಶ್ವರ ಅವನಿಗೆ, “ಕೈಚಾಚಿ ಅದರ ಬಾಲವನ್ನು ಹಿಡಿ,” ಎಂದರು. ಅಂತೆಯೇ ಹಿಡಿದಾಗ ಅದು ಕೋಲು ಆಯಿತು. ಆಗ ಸರ್ವೇಶ್ವರ ಅವನಿಗೆ,೫ [5]“ಇದರಿಂದ ಆ ಜನರು ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನಿನಗೆ ಕಾಣಸಿದ್ದು ನಿಜ ಎಂಬುದನ್ನು ನಂಬುವರು,” ಎಂದು ಹೇಳಿದರು.೬ [6]ಮತ್ತೆ ಸರ್ವೇಶ್ವರ ಅವನಿಗೆ, “ನಿನ್ನ ಕೈಯನ್ನು ನಿನ್ನ ಉಡಿಗೆಯಲ್ಲಿ ಇಟ್ಟುಕೊ,” ಎಂದರು. ಅಂತೆಯೇ ಉಡಿಗೆಯಲ್ಲಿ ಇಟ್ಟು ಹೊರಗೆ ತೆಗೆದಾಗ ಅವನ ಕೈ ತೊನ್ನುಹತ್ತಿ ಹಿಮದಂತೆ ಬೆಳ್ಳಗಾಗಿ ಇತ್ತು.೭ [7]ಸರ್ವೇಶ್ವರ ಅವನಿಗೆ, “ನಿನ್ನ ಕೈಯನ್ನು ತಿರುಗಿ ಉಡಿಗೆಯಲ್ಲಿ ಸೇರಿಸು,” ಎಂದು ಹೇಳಿದರು. ಹಾಗೆಯೆ ಅವನು ಅದನ್ನು ಉಡಿಗೆಯಲ್ಲಿ ಸೇರಿಸಿದನು. ಬಳಿಕ ತೆಗೆದು ನೋಡಿದಾಗ ಅದು ಉಳಿದ ಮೈಯಂತೆಯೇ ಆಗಿತ್ತು.೮ [8]ಆಗ ಸರ್ವೇಶ್ವರ ಅವನಿಗೆ, “ಆ ಜನರು ನಿನ್ನನ್ನು ನಂಬದೆ ಮೊದಲನೆಯ ಸೂಚಕಕಾರ್ಯವನ್ನು ಅರ್ಥಮಾಡಿಕೊಳ್ಳದೆ ಹೋದರೂ ಎರಡನೆಯದನ್ನು ಅರ್ಥಮಾಡಿಕೊಂಡು ನಂಬುವರು.೯ [9]ಈ ಎರಡು ಸೂಚಕಕಾರ್ಯಗಳನ್ನೂ ಅವರು ಮನಸ್ಸಿಗೆ ತಂದುಕೊಳ್ಳದೆ ಹಾಗು ನಿನ್ನ ಮಾತನ್ನು ನಂಬದೆ ಹೋದರೆ ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣನೆಲದ ಮೇಲೆ ಸುರಿ. ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವುದು,” ಎಂದು ಹೇಳಿದರು.೧೦ [10]ಆದರೆ ಮೋಶೆ ಸರ್ವೇಶ್ವರನಿಗೆ, “ಸ್ವಾಮಿ, ನಾನು ವಾಕ್ಚಾತುರ್ಯ ಇಲ್ಲದವನು; ಮೊದಲಿನಿಂದಲೂ ಹಾಗು ತಾವು ನಿಮ್ಮ ದಾಸನ ಸಂಗಡ ಮಾತಾಡಿದ ಮೇಲೆಯೂ ಹಾಗೆಯೇ ಇದ್ದೇನೆ. ನನ್ನ ಮಾತು ತೊದಲು, ನನ್ನ ನಾಲಿಗೆ ಮಂದ,” ಎಂದನು.೧೧ [11]ಅದಕ್ಕೆ ಸರ್ವೇಶ್ವರ, “ಮನುಷ್ಯರಿಗೆ ಬಾಯಿಕೊಟ್ಟವರು ಯಾರು? ಒಬ್ಬನನ್ನು ಮೂಕನಾಗಿ, ಮತ್ತೊಬ್ಬನನ್ನು ಕಿವುಡನಾಗಿ, ಇನ್ನೊಬ್ಬನನ್ನು ಕಣ್ಣುಳ್ಳವನಾಗಿ, ಮಗದೊಬ್ಬನನ್ನು ಕಣ್ಣಿಲ್ಲದವನಾಗಿ ಇಡುವವರು ಯಾರು? ಸರ್ವೇಶ್ವರನಾಗಿರುವ ನಾನೇ ಅಲ್ಲವೆ?೧೨ [12]ಆದುದರಿಂದ ಈಗಲೇ ಹೊರಡು; ನಿನ್ನ ಬಾಯಲ್ಲಿ ನಾನೇ ಇರುವೆನು; ನೀನು ಮಾತಾಡಬೇಕಾದುದನ್ನು ನಿನಗೆ ಕಲಿಸಿಕೊಡುವೆನು,” ಎಂದು ಹೇಳಿದರು.೧೩ [13]ಅದಕ್ಕೆ ಮೋಶೆ, “ಸ್ವಾಮೀ, ಈ ಕಾರ್ಯಕ್ಕೆ ತಾವು ಬೇರೊಬ್ಬನನ್ನು ನೇಮಿಸಬೇಕು,” ಎನ್ನಲು, ಸರ್ವೇಶ್ವರ ಅವನ ಮೇಲೆ ಸಿಟ್ಟುಗೊಂಡರು.೧೪ [14]ಅವನಿಗೆ, “ಲೇವಿಯನಾದ ಆರೋನನು ನಿನಗೆ ಅಣ್ಣನಲ್ಲವೆ? ಅವನು ಚೆನ್ನಾಗಿ ಮಾತಾಡಬಲ್ಲನೆಂದು ನನಗೆ ಗೊತ್ತಿದೆ. ಇಗೋ, ಅವನೇ ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ನಿನ್ನನ್ನು ಕಂಡು ಆನಂದಿಸಲಿದ್ದಾನೆ.೧೫ [15]ನೀನು ಅವನ ಸಂಗಡ ಮಾತಾಡಿ ಹೇಳಬೇಕಾದ ವಿಷಯಗಳನ್ನು ತಿಳಿಸು. ನಾನು ನಿನಗೂ ಅವನಿಗೂ ಹೇಗೆ ಮಾತಾಡಬೇಕೆಂದು ತಿಳಿಸಿ ನೀವು ಮಾಡಬೇಕಾದುದನ್ನು ಕಲಿಸುವೆನು.೧೬ [16]ನಿನ್ನ ಪರವಾಗಿ ಅವನೇ ಆ ಜನರ ಸಂಗಡ ಮಾತಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತೆ ಇರುವೆ.೧೭ [17]ಈ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವೆ,” ಎಂದರು.೧೮ [18]ಇದಾದ ಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು, “ನಾನು ಈಜಿಪ್ಟ್ ದೇಶದಲ್ಲಿರುವ ಸ್ವಜನರ ಬಳಿಗೆ ಮರಳಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದನು. ಇತ್ರೋನನು, “ಸುಖವಾಗಿ ಹೋಗಿ ಬಾ,” ಎಂದನು.೧೯ [19]ಮಿದ್ಯಾನ್ ನಾಡಿನಲ್ಲಿ ಸರ್ವೇಶ್ವರ ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಮರಳಿ ಹೋಗು. ನಿನ್ನನ್ನು ಕೊಲ್ಲಬೇಕೆಂದಿದ್ದವರೆಲ್ಲರು ಸತ್ತುಹೋದರು,” ಎಂದು ತಿಳಿಸಿದರು.೨೦ [20]ಆದ್ದರಿಂದ ಮೋಶೆ ತನ್ನ ಮಡದಿ ಮಕ್ಕಳನ್ನು ಹೇಸರ ಕತ್ತೆಯ ಮೇಲೆ ಏರಿಸಿಕೊಂಡು ಈಜಿಪ್ಟಿಗೆ ಹೊರಟುಹೋದನು. ದೇವದಂಡ ಅವನ ಕೈಯಲ್ಲಿತ್ತು.೨೧ [21]ಸರ್ವೇಶ್ವರ ಮೋಶೆಗೆ ಮತ್ತೆ ಇಂತೆಂದರು: “ನೀನು ಈಜಿಪ್ಟಿಗೆ ಮರಳಿದಾಗ ನಾನು ನಿನಗೆ ತೋರಿಸಿಕೊಟ್ಟ ಸೂಚಕಕಾರ್ಯಗಳನ್ನೆಲ್ಲಾ ಫರೋಹ ರಾಜನ ಮುಂದೆ ಮಾಡಿ ತೋರಿಸು. ಆದರೆ ನಾನು ಅವನ ಹೃದಯವನ್ನು ಕಲ್ಲಾಗಿಸುವೆನು. ಅವನು ಇಸ್ರಯೇಲರನ್ನು ಹೋಗಗೊಡಿಸುವುದಿಲ್ಲ.೨೨ [22]ಆಗ ನೀನು ಅವನಿಗೆ ತಿಳಿಸಬೇಕಾದುದು, 'ಸರ್ವೇಶ್ವರನು ಹೇಳುವುದನ್ನು ಕೇಳು: ಇಸ್ರಯೇಲ್ ಜನತೆ ನನಗೆ ಮಗನಂತೆ, ಜ್ಯೇಷ್ಠಪುತ್ರನಂತಿದೆ.೨೩ [23]ನನ್ನನ್ನು ಆರಾಧಿಸಲು ನಿನ್ನ ದೇಶದಿಂದ ಹೊರಡುವುದಕ್ಕೆ ಅವನಿಗೆ ಅಪ್ಪಣೆಕೊಡು.' ಇದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನ್ನ ಜ್ಯೇಷ್ಠ ಪುತ್ರನನ್ನು ಕೊಲ್ಲುವೆನು,”೨೪ [24]ಈಜಿಪ್ಟಿಗೆ ಹೋಗುವ ದಾರಿಯಲ್ಲಿದ್ದ ಛತ್ರವೊಂದರಲ್ಲಿ ಸರ್ವೇಶ್ವರ ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದರು.೨೫ [25]ಆಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಮೋಶೆಗೆ, “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗ,” ಎಂದು ಹೇಳಿ೨೬ [26]ಕತ್ತರಿಸಿದ ಮುಂದೊಗಲನ್ನು ಅವನ ಪಾದಗಳಿಗೆ ಮುಟ್ಟಿಸಿದಳು. ಆಗ ಸರ್ವೇಶ್ವರ ಅವನನ್ನು ಉಳಿಸಿದರು. ಆಕೆ ಸುನ್ನತಿಯ ನಿಮಿತ್ತವೇ “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗ,” ಎಂದು ಹೇಳಿದ್ದು.೨೭ [27]ಇದಲ್ಲದೆ ಸರ್ವೇಶ್ವರ ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳಲು ಮರುಭೂಮಿಗೆ ತೆರಳು,” ಎಂದರು. ಅಂತೆಯೇ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.೨೮ [28]ಆಗ ಮೋಶೆ, ಸರ್ವೇಶ್ವರ ಸ್ವಾಮಿ ತನ್ನನ್ನು ಕಳಿಸುವಾಗ ಯಾವ ಮಾತುಗಳನ್ನು ಹೇಳಿದರೋ ಏನೇನು ಸೂಚಕಕಾರ್ಯಗಳು ಮಾಡಬೇಕೆಂದು ಆಜ್ಞಾಪಿಸಿದರೋ ಅವುಗಳನ್ನೆಲ್ಲ ಆರೋನನಿಗೆ ತಿಳಿಸಿದನು.೨೯ [29]ತರುವಾಯ ಅವರಿಬ್ಬರು ಹೋಗಿ ಇಸ್ರಯೇಲರ ಹಿರಿಯರನ್ನೆಲ್ಲ ಕೂಡಿಸಿದರು.೩೦ [30]ಮೋಶೆಗೆ ಸರ್ವೇಶ್ವರ ಹೇಳಿದ ಮಾತುಗಳನ್ನೆಲ್ಲ ಆರೋನನು ಆ ಜನರಿಗೆ ತಿಳಿಸಿದನು. ಮೋಶೆ ಅವರ ಮುಂದೆ ಆ ಸೂಚಕಕಾರ್ಯಗಳನ್ನು ಮಾಡಿದನು. ಜನರು ನಂಬಿದರು.೩೧ [31]ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ವಿಮೋಚನಾಕಾಂಡ ೪ 00:00:00 00:00:00 0.5x 2.0x https://beblia.bible:81/BibleAudio/kannadakncl/exodus/004.mp3 40 4