× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಉಪದೇಷಕ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪ ೧೨೩೪೫೬೭೮೯೧೦೧೧೧೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬1 1 1 ಕನ್ನಡ ಬೈಬಲ್ (KNCL) 2016 ಉಪದೇಷಕ ೪ ಟಿಪ್ಪಣಿಗಳನ್ನು ಉಳಿಸಿ ೧ [1]ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.೨ [2]ಇದನ್ನು ನೋಡಿ ಜೀವದಿಂದ ಇರುವವರಿಗಿಂತ ಸತ್ತವರೇ ಧನ್ಯರೆಂದು ಹೊಗಳಿದೆ.೩ [3]ಹೌದು, ಉಭಯರಿಗಿಂತಲೂ ಇನ್ನೂ ಹುಟ್ಟದೆ, ಜಗದಲ್ಲಿನ ಅಧರ್ಮವನ್ನು ಕಾಣದೆ ಇರುವವನು ಮತ್ತಷ್ಟು ಭಾಗ್ಯವಂತನೆಂದು ತಿಳಿದುಕೊಂಡೆ.೪ [4]ಮಾನವನು ಪಡುವ ಸಮಸ್ತ ಪರಿಶ್ರಮವನ್ನು ಹಾಗೂ ಸಾಧಿಸುವ ಸಕಲ ಕಾರ್ಯಗಳನ್ನು ಅವಲೋಕಿಸಿದೆ. ಇವಕ್ಕೆಲ್ಲ ಪರರ ಬಗ್ಗೆ ಅವನಿಗಿರುವ ಮತ್ಸರವೇ ಕಾರಣವೆಂದು ತೋರಿಬಂತು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.೫ [5]ಕೈಕಟ್ಟಿಕೊಂಡು ಕುಳಿತುಕೊಳ್ಳುವ ಮೈಗಳ್ಳನಾದ ಮೂಢನಿಗೆ ಅವನ ಒಡಲೇ ಊಟ.೬ [6]ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎರಡು ಕೈಹಿಡಿ ವ್ಯರ್ಥ ಪರಿಶ್ರಮಕ್ಕಿಂತ ಒಂದೇ ಕೈಹಿಡಿಯಷ್ಟು ಸಂಪಾದನೆ ಪಡೆದು ನೆಮ್ಮದಿಯಿಂದಿರುವುದು ಲೇಸು.೭ [7]ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆ. ಒಬ್ಬಂಟಿಗನಾದ ಮನುಷ್ಯನೊಬ್ಬ ಇದ್ದ. ಅವನಿಗೆ ಅಣ್ಣತಮ್ಮಂದಿರು ಇರಲಿಲ್ಲ. ಮಕ್ಕಳುಮರಿ ಇರಲಿಲ್ಲ. ಆದರೂ ಅವನ ದುಡಿಮೆಗೆ ಎಲ್ಲೆ ಇರಲಿಲ್ಲ. ಆಸ್ತಿಪಾಸ್ತಿಯಿಂದ ಅವನ ಕಣ್ಣಿಗೆ ತೃಪ್ತಿ ಇರಲಿಲ್ಲ.೮ [8]“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.೯ [9]ಒಬ್ಬನಿಗಿಂತ ಇಬ್ಬರು ಲೇಸು; ಅವರ ಪ್ರಯಾಸಕ್ಕೆ ಹೆಚ್ಚಿನ ಲಾಭ.೧೦ [10]ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುತ್ತಾನೆ; ಬಿದ್ದಾಗ ಎತ್ತುವವನು ಇಲ್ಲದಿದ್ದರೆ ಅವನ ಗತಿ ದುರ್ಗತಿಯೇ ಸರಿ.೧೧ [11]ಇದಲ್ಲದೆ, ಒಬ್ಬನ ಮಗ್ಗುಲಲ್ಲಿ ಇನ್ನೊಬ್ಬನು ಮಲಗಿಕೊಂಡರೆ ಇಬ್ಬರಿಗೂ ಬೆಚ್ಚಗಾದೀತು!೧೨ [12]ಒಬ್ಬಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಕೂಡ ಎದುರಾಗಿ ನಿಲ್ಲಬಹುದು. ಮೂರು ಹುರಿಗಳಿಂದ ಹೆಣೆದ ಹಗ್ಗ ಸುಲಭವಾಗಿ ಕಿತ್ತುಹೋಗುವುದಿಲ್ಲ.೧೩ [13]ಬುದ್ಧಿಮಾತಿಗೆ ಕಿವಿಗೊಡದ ಮೂರ್ಖನಾದ ಮುದಿಯರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.೧೪ [14]ಇಂಥ ಯುವಕನೊಬ್ಬನನ್ನು ರಾಜನನ್ನಾಗಿಸಲು ಸೆರೆಮನೆಯಿಂದ ಕರೆ ತರಲಾಯಿತು. ರಾಜ್ಯದಲ್ಲಿ ಒಬ್ಬ ಬಡ ಪ್ರಜೆಯಾಗಿ ಹುಟ್ಟಿದವನು ಆತ.೧೫ [15]ಜಗತ್ತಿನಲ್ಲಿ ಬದುಕಿದ್ದ ಜೀವಂತರೆಲ್ಲರು ರಾಜನಿಗೆ ಪ್ರತಿಯಾಗಿ ನಿಂತ ಆ ಯುವಕನ ಪಕ್ಷ ವಹಿಸುವುದನ್ನು ಕಂಡೆ.೧೬ [16]ಇವನ ಅಧಿಪತ್ಯಕ್ಕೆ ಒಳಪಟ್ಟ ಜನಜಂಗುಳಿಯ ಸಂಖ್ಯೆ ಅಪಾರವಾಗಿತ್ತು. ಇವನ ನಂತರ ಬಂದವರಾದರೋ ಇವನ ಬಗ್ಗೆ ಅಭಿಮಾನ ತೋರಲಿಲ್ಲ. ಇದು ಸಹ ವ್ಯರ್ಥ, ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಉಪದೇಷಕ ೪ 00:00:00 00:00:00 0.5x 2.0x https://beblia.bible:81/BibleAudio/kannadakncl/ecclesiastes/004.mp3 12 4