× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಉಪದೇಷಕ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೯ ೧೨೩೪೫೬೭೮೯೧೦೧೧೧೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ಉಪದೇಷಕ ೯ ಟಿಪ್ಪಣಿಗಳನ್ನು ಉಳಿಸಿ ೧ [1]ನಾನು ಇವೆಲ್ಲವನ್ನು ಪರ್ಯಾಲೋಚಿಸಿ ಇದನ್ನು ಮನಗಂಡೆ: ಸತ್ಪುರುಷರ ಹಾಗೂ ಸುಜ್ಞಾನಿಗಳ ಕಾರ್ಯಗಳೆಲ್ಲವೂ ದೇವರ ಕೈಯಲ್ಲಿವೆ. ತಾವು ಪ್ರೀತಿಗೆ ಪಾತ್ರರೋ ದ್ವೇಷಕ್ಕೆ ಅರ್ಹರೋ ಮಾನವರಿಗೆ ತಿಳಿಯದು. ಮುಂದೆ ಏನು ಕಾದಿದೆ ಎಂಬುದು ಯಾರಿಗೂ ಗೊತ್ತಿಲ್ಲ.೨ [2]ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು; ಸಜ್ಜನನಿಗೂ ದುರ್ಜನನಿಗೂ, ಒಳ್ಳೆಯವನಿಗೂ (ಕೆಟ್ಟವನಿಗೂ), ಶುದ್ಧನಿಗೂ, ಅಶುದ್ಧನಿಗೂ ಬಲಿಯನ್ನರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿ ಕಾದಿದೆ; ನಿರ್ದೋಷಿಯಂತೆ ದೋಷಿಯೂ ಇರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನೂ ಇರುವನು.೩ [3]ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕ ವ್ಯವಹಾರಗಳಲ್ಲೆಲ್ಲಾ ಸೇರಿಕೊಂಡಿದೆ. ಇದಲ್ಲದೆ, ನರಮಾನವರ ಎದೆಯಲ್ಲಿ ಕೆಟ್ಟತನ ತುಂಬಿದೆ; ಅವರು ಬದುಕಿರುವ ತನಕ ಮರುಳುತನ ಅವರ ಮನಸ್ಸನ್ನು ಸೆರೆಹಿಡಿದಿರುತ್ತದೆ. ಅನಂತರ ಸತ್ತವರನ್ನು ಸೇರಿಕೊಳ್ಳುತ್ತಾರೆ.೪ [4]ಜೀವಿತರ ಗುಂಪಿಗೆ ಸೇರಿದವನಿಗೆ ನಂಬಿಕೆ-ನಿರೀಕ್ಷೆಯುಂಟು; ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.೫ [5]ಜೀವಿತರಿಗೆ ಖಂಡಿತವಾಗಿ ಸಾಯುತ್ತೇವೆಂಬ ತಿಳುವಳಿಕೆಯಾದರೂ ಉಂಟು. ಸತ್ತವರಿಗಾದರೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಯಾವ ಪ್ರತಿಫಲವೂ ಇಲ್ಲ; ಅವರ ಹೆಸರನ್ನೂ ಜನರು ಮರೆತುಬಿಡುತ್ತಾರೆ.೬ [6]ಅವರ ಪ್ರೀತಿ, ದ್ವೇಷ, ಮತ್ಸರ, ಅವರು ಸತ್ತಾಗಲೇ ಅಳಿದುಹೋಗುತ್ತವೆ. ಇಹಲೋಕದಲ್ಲಿ ನಡೆಯುವ ಯಾವುದರಲ್ಲೂ ಅವರಿಗೆ ಇನ್ನೆಂದಿಗೂ ಪಾಲಿರುವುದಿಲ್ಲ.೭ [7]ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.೮ [8]ನಿನ್ನ ಬಟ್ಟೆಗಳು ಬೆಳ್ಳಗಿರಲಿ, ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.೯ [9]ಲೋಕದಲ್ಲಿ ದೇವರು ವಿಧಿಸಿರುವ ಈ ನಿರರ್ಥಕ ಜೀವಮಾನದ ನಿರರ್ಥಕ ದಿನದಿನವೂ ನಿನ್ನ ಪ್ರಿಯ ಪತ್ನಿಯೊಡನೆ ಸುಖದಿಂದ ಬದುಕು; ಇಹಲೋಕದ ನಿನ್ನ ಬಾಳಿನಲ್ಲಿ ನೀನು ಪಡುವ ಪಾಡಿಗೆ ಇದೇ ನಿನ್ನ ಪಾಲಿಗೆ ಬಂದ ಪಂಚಾಮೃತ.೧೦ [10]ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.೧೧ [11]ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.೧೨ [12]ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.೧೩ [13]ಲೋಕದಲ್ಲಿ ನಾನು ಜ್ಞಾನವನ್ನು ಈ ವಿಧವಾಗಿ ಮನಗಂಡೆ; ಅದು ನನ್ನ ದೃಷ್ಟಿಗೆ ದೊಡ್ಡದಾಗಿ ಕಾಣಿಸಿತು.೧೪ [14]ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಕೆಲವೇ ನಿವಾಸಿಗಳು. ಬಲಿಷ್ಠವಾದ ಅರಸ ಅದಕ್ಕೆ ಮುತ್ತಿಗೆಹಾಕಿದ. ಅದರ ಸುತ್ತಲು ದೊಡ್ಡ ಕೋಟೆ ಎಬ್ಬಿಸಿದ.೧೫ [15]ಆಗ ಅಲ್ಲಿದ್ದವರು ತಮ್ಮಲ್ಲೇ ಒಬ್ಬ. ಜ್ಞಾನಿಯನ್ನು ಕಂಡುಹಿಡಿದರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದ. ಆದರೆ ಆ ಬಡಜ್ಞಾನಿಯನ್ನು ಆಮೇಲೆ ಯಾರೂ ಸ್ಮರಿಸಲಿಲ್ಲ.೧೬ [16]ಇದನ್ನು ನೋಡಿದ ನಾನು, ಶಕ್ತಿಗಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಆ ಬಡವನ ಜ್ಞಾನವನ್ನು ತಾತ್ಸಾರ ಮಾಡುತ್ತಾರೆ, ಅವನ ಮಾತುಗಳನ್ನು ಗಮನಿಸುವುದಿಲ್ಲ, ಎಂದುಕೊಂಡೆ.೧೭ [17]ಹುಚ್ಚರ ಕೂಟದಲ್ಲಿ ಕೇಳಿಬರುವ ಅಧ್ಯಕ್ಷನ ಕೂಗಾಟಕ್ಕಿಂತ ಜ್ಞಾನಿಯ ಮೆಲ್ಲನೆಯ ಮಾತು ಕಿವಿಗೆ ಲೇಸು.೧೮ [18]ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಆದರೆ ಒಬ್ಬನೇ ಒಬ್ಬ ಪಾಪಿ ಸಾಕು ಪುಣ್ಯಕೋಟೆಯನ್ನು ಹಾಳುಮಾಡಲು!Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಉಪದೇಷಕ ೯ 00:00:00 00:00:00 0.5x 2.0x https://beblia.bible:81/BibleAudio/kannadakncl/ecclesiastes/009.mp3 12 9