× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೧೩ ಟಿಪ್ಪಣಿಗಳನ್ನು ಉಳಿಸಿ ೧ [1]ಬಾಬಿಲೋನಿನ ವಿಷಯವಾಗಿ ಆಮೋಚನ ಮಗ ಯೆಶಾಯನಿಗೆ ಕೇಳಿಬಂದ ದೇವವಾಣಿ:೨ [2]ಬೋಳುಬೆಟ್ಟದ ಮೇಲೆ ಧ್ವಜವನ್ನು ಏರಿಸಿರಿ. ಪ್ರಭುಗಳ ನಗರದ್ವಾರಗಳನ್ನು ಮುತ್ತುವಂತೆ ಸೈನಿಕರಿಗೆ ಸನ್ನೆಮಾಡಿ ಕೂಗಿ ಹೇಳಿರಿ.೩ [3]ಆಯ್ಕೆಯಾದವರಿಗೆ ಅಪ್ಪಣೆಮಾಡಿದ್ದೇನೆ: ಹೌದು, ಹೆಮ್ಮೆಯಿಂದ ಮೆರೆಯುವ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆನೀಡಿದ್ದೇನೆ.೪ [4]ಇಗೋ, ಬೆಟ್ಟಗುಡ್ಡಗಳಿಂದ ಕೇಳಿಬರುತ್ತಿದೆ ಜನಜಂಗುಳಿಯಂಥ ಗದ್ದಲ; ಒಟ್ಟಿಗೆ ಕೂಡಿಕೊಂಡ ದೇಶವಿದೇಶಗಳ ಆರ್ಭಟ; ಸಜ್ಜಾಗಿ ನಿಂತಿದೆ ಸೇನಾಧೀಶ್ವರ ಸರ್ವೇಶ್ವರನ ಸೈನ್ಯ.೫ [5]ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.೬ [6]ಪ್ರಲಾಪಿಸಿರಿ, ಸಮೀಪಿಸಿದೆ ಸರ್ವೇಶ್ವರನ ದಿನ; ಸನ್ನಿಹಿತವಾಗಿದೆ, ಸರ್ವನಾಶ ಮಾಡುವ ಸೇನಾಧೀಶ್ವರನ ದಿನ!೭ [7]ಈ ಕಾರಣ ಜೋಲುಬೀಳುವುವು ಎಲ್ಲರ ಕೈಗಳು; ಕರಗಿ ನೀರಾಗುವುವು ಎಲ್ಲರ ಹೃದಯಗಳು.೮ [8]ಭಯಭ್ರಾಂತರಾಗುವರು ಅವರೆಲ್ಲರು; ಆಕ್ರಮಿಸುವುವು ಅವರನ್ನು ಯಾತನೆ ವೇದನೆಗಳು. ಸಂಕಟಪಡುವರವರು ಹೆರುವ ಹೆಂಗಸಿನಂತೆ; ಒಬ್ಬರನ್ನೊಬ್ಬರು ನೋಡುವರು ದಿಗ್ಭ್ರಾಂತರಾದವರಂತೆ; ಅವರ ಮುಖಗಳು ಕೆಂಪೇರುವುವು ಬೆಂಕಿಯಂತೆ.೯ [9]ಇಗೋ, ಸರ್ವೇಶ್ವರನ ದಿನ ಬರುತ್ತಿದೆ! ಭೂಮಿಯನ್ನು ಹಾಳುಮಾಡಲು, ಪಾಪಿಗಳನ್ನು ನಿರ್ಮೂಲಮಾಡಲು; ಕೋಪೋದ್ರೇಕದಿಂದ, ರೋಷಾವೇಶದಿಂದ, ಕ್ರೂರವಾಗಿ ಬರುತ್ತಿದೆ!೧೦ [10]ಆಕಾಶದ ತಾರೆಗಳು, ನಕ್ಷತ್ರಗಳು ಬೆಳಗವು, ಸೂರ್ಯನು ಅಂಧಕಾರಮಯನಾಗುವನು, ಚಂದ್ರನು ಕಾಂತಿಹೀನನಾಗುವನು.೧೧ [11]ಸರ್ವೇಶ್ವರ ಇಂತೆನ್ನುತ್ತಾರೆ: “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು.೧೨ [12]ಅಳಿದುಳಿದ ಜನರು ಅಪರಂಜಿಗಿಂತಲೂ ಓಫೀರಿನ ಬಂಗಾರಕ್ಕಿಂತಲೂ ವಿರಳವಾಗಿರುವಂತೆ ಮಾಡುವೆನು.೧೩ [13]ಸೇನಾಧೀಶ್ವರ ಸರ್ವೇಶ್ವರನು ಕೋಪೋದ್ರೇಕದಿಂದ ರೋಷಾವೇಶದಿಂದ ಕೆರಳುವ ದಿನದಂದು ಆಕಾಶಮಂಡಲ ನಡುಗುವುದು, ಭೂಮಂಡಲ ಸ್ಥಳಪಲ್ಲಟಗೊಳ್ಳುವುದು.೧೪ [14]“ಬೇಟೆಗಾರನಿಂದ ತಪ್ಪಿಸಿಕೊಂಡು ಓಡುತ್ತಿರುವ ಜಿಂಕೆಯಂತೆಯೂ ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನು ಸ್ವಜನರ ಕಡೆಗೆ ತಿರುಗುವನು; ಸ್ವದೇಶದ ಕಡೆಗೆ ಓಡುವನು.೧೫ [15]ಸಿಕ್ಕಿಸಿಕ್ಕಿದವರೆಲ್ಲರು ಇರಿತಕ್ಕೆ ಗುರಿಯಾಗುವರು. ಅಟ್ಟಿಹಿಡಿಯಲಾದವರೆಲ್ಲರು ಕತ್ತಿಗೆ ತುತ್ತಾಗುವರು.೧೬ [16]ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಲಾಗುವುದು. ಅವರ ಮನೆಗಳನ್ನು ಸೂರೆಮಾಡಲಾಗುವುದು. ಅವರ ಹೆಂಗಳೆಯರು ಅತ್ಯಾಚಾರಕ್ಕೆ ಈಡಾಗುವರು.೧೭ [17]“ಇಗೋ, ಬಾಬಿಲೋನಿಯದ ಜನರಿಗೆ ವಿರುದ್ಧವಾಗಿ ಮೇದ್ಯರನ್ನು ಎತ್ತಿಕಟ್ಟುವೆನು. ಇವರು ಬೆಳ್ಳಿಬಂಗಾರಕ್ಕೆ ಮಾರುಹೋಗರು.೧೮ [18]ಇವರ ಬಿಲ್ಲುಗಳು ಯುವಜನರನ್ನು ಚೂರುಚೂರು ಮಾಡುವುವು; ಇವರು ಕರುಳ ಕುಡಿಗಳನ್ನೂ ಕನಿಕರಿಸರು; ಮಕ್ಕಳುಮರಿಗಳನ್ನೂ ಕರುಣಿಸದು ಇವರ ಕಣ್ಣು.೧೯ [19]ಬಾಬಿಲೋನ್ ರಾಜ್ಯಗಳಿಗೆ ಶಿರೋಮಣಿ, ಕಸ್ದೀಯರ ಭವ್ಯಭೂಷಣ. ಆದರೆ ದೇವರಾದ ನಾನು ಸೊದೋಮ್ ಮತ್ತು ಗೊಮೋರಾ ನಾಡುಗಳನ್ನು ನಾಶಮಾಡಿದಂತೆ ಇದನ್ನೂ ಕೆಡಿಸಿ ನಾಶಮಾಡುವೆನು.೨೦ [20]ಅದು ಎಂದಿಗೂ ನಿವಾಸಕ್ಕೆ ಯೋಗ್ಯವಾಗದು. ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಮಾಡರು. ಯಾವ ಅರಬ್ಬಿಯನೂ ಅಲ್ಲಿ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.೨೧ [21]ಆ ನಾಡು ಕಾಡುಮೃಗಗಳಿಗೆ ಬೀಡಾಗುವುದು. ಅದರ ಮನೆಗಳು ಗೂಬೆಗಳ ಗೂಡಾಗುವುವು. ಉಷ್ಟ್ರಪಕ್ಷಿಗಳು ಅಲ್ಲಿ ವಾಸಮಾಡುವುವು. ಕಾಡುಮೇಕೆಗಳು ಕುಣಿದಾಡುವುವು.೨೨ [22]ಅದರ ಅರಮನೆಗಳಲ್ಲಿ ನರಿಗಳು, ಮೋಜಿನ ಮಹಲುಗಳಲ್ಲಿ ತೋಳಗಳು ಕೂಗಾಡುವುವು. ಬಾಬಿಲೋನಿಗೆ ಕಾಲ ಬಂದಿದೆ. ಅದರ ದಿನಗಳು ಮುಗಿಯುತ್ತಿವೆ.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಶಾಯನ ೧೩ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/013.mp3 66 13