× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೧೪ ಟಿಪ್ಪಣಿಗಳನ್ನು ಉಳಿಸಿ ೧ [1]ದಯೆತೋರಿಸುವರು ಸರ್ವೇಶ್ವರ ಯಕೋಬ್ಯರಿಗೆ, ಆರಿಸಿಕೊಳ್ಳುವರು ಮತ್ತೆ ಇಸ್ರಯೇಲರನ್ನೆ, ನೆಲೆಗೊಳಿಸುವರವರನ್ನು ತಾಯಿನಾಡಿನಲ್ಲೆ. ಹೊರನಾಡಿಗರು ಕೂಡಿಕೊಳ್ಳುವರು ಅವರೊಡನೆ, ಸೇರಿಕೊಳ್ಳುವರವರು ಯಕೋಬ ಮನೆತನಕ್ಕೆ.೨ [2]ರಾಷ್ಟ್ರಗಳೇ ಇಸ್ರಯೇಲರನ್ನು ಕರೆತಂದು ಸೇರಿಸುವುವು ಸ್ವಂತ ನಾಡಿಗೆ ಸರ್ವೇಶ್ವರನ ಆ ನಾಡಿನಲಿ ದಾಸದಾಸಿಯರನ್ನಾಗಿಸಿಕೊಳ್ಳುವುದು ಇಸ್ರಯೇಲ್ ಮನೆತನವು ಆ ರಾಷ್ಟ್ರಗಳನ್ನೇ. ಸೆರೆಹಿಡಿಯುವರು ತಮ್ಮನ್ನು ಸೆರೆಹಿಡಿದವರನ್ನೇ ಅಧೀನಪಡಿಸುವರು ತಮ್ಮನ್ನು ಹಿಂಸಿಸಿದವರನ್ನೇ.೩ [3]ಸಂಕಟದಿಂದಲೂ ನೋವುನಷ್ಟದಿಂದಲೂ ಕ್ರೂರವಾದ ಬಿಟ್ಟಿಜೀತದಿಂದಲೂ ಸರ್ವೇಶ್ವರ ನಿಮ್ಮನ್ನು ಬಿಡುಗಡೆಮಾಡುವರು. ಆ ದಿನದಂದು ಬಾಬಿಲೋನಿನ ಅರಸನನ್ನು ಮೂದಲಿಸಿ ಈ ಪದ್ಯವನ್ನು ನೀವು ಹಾಡಬೇಕು:೪ [4]ಬಿದ್ದುಹೋದನಿದೊ ವಿಧ್ವಂಸಕ ಸದ್ದಿಲ್ಲದಾಗಿದೆ ಅವನ ಅಟ್ಟಹಾಸದ ಬಿಂಕ.೫ [5]ಮುರಿದಿಹನು ಸರ್ವೇಶ್ವರ ದುರುಳರಾ ಗದೆಯನು ಮುರಿದಿಹನು ಅರಸರ ರಾಜದಂಡವನು.೬ [6]ಏಕೆನೆ, ಎಡೆಬಿಡದೆ ದಂಡಿಸಿದರು ಪ್ರಜೆಗಳನು ಕೋಪೋದ್ರೇಕದಿಂದ ತಡೆಯಿಲ್ಲದೆ ದಬ್ಬಾಳಿಕೆ ನಡೆಸಿದರು ರಾಷ್ಟ್ರಗಳ ಮೇಲೆ ಸಿಟ್ಟಿನಿಂದ.೭ [7]ಕಟ್ಟಕಡೆಗೆ ಶಾಂತಿಯಿಂದ ಸುರಕ್ಷಿತವಾಗಿದೆ ಜಗವೆಲ್ಲ ಹರ್ಷಧ್ವನಿಗೈಯುತ ಹಾಡುತಿಹರು ಜನರೆಲ್ಲ.೮ [8]ನಲಿಯುತಿಹವು ತುರಾಯಿ, ಲೆಬನೋನಿನ ದೇವದಾರು ವೃಕ್ಷಗಳು ಕೂಡಾ, ‘ಮಡಿದು ಹೋದನಿವನು, ಇನ್ನು, ಕಡಿವವರಾರು ನಮ್ಮನು?’ ಎನ್ನುತಾ.೯ [9]ನಿನ್ನ ಸ್ವಾಗತಿಸಲು ಸಡಗರದಿಂದಿದೆ ಪಾತಾಳಲೋಕವು, ಚೇತನಗೊಂಡಿವೆ ಲೋಕಮುಖಂಡರ ಪ್ರೇತಗಳು, ಎದ್ದು ನಿಂತಿಹರು ಸಕಲ ರಾಷ್ಟ್ರಗಳ ಅರಸರುಗಳು.೧೦ [10]ಇವರೆಲ್ಲರು ಇಂತೆನ್ನುವರು ನಿನಗೆ: ‘ನೀನು ಸಹ ದುರ್ಬಲ ನಾದೆ ನಮ್ಮ ಹಾಗೆ ನೀನೂ ಸರಿಸಮಾನನಾದೆ ನಮಗೆ’.೧೧ [11]ಇಳಿದಿದೆ ನಿನ್ನ ವೈಭವ, ವೀಣಾನಾದ ಪಾತಾಳಕೆ ನಿನಗೀಗ ಹುಳುಗಳೇ ಹಾಸಿಗೆ, ಕ್ರಿಮಿಗಳೇ ಹೊದಿಕೆ.೧೨ [12]ಮುಂಜಾನೆಯ ನಕ್ಷತ್ರವೆ, ಉದಯ ಕುಮಾರನೆ, ಆಗಸದಿಂದ ಹೇಗೆ ಬಿದ್ದೆ? ರಾಷ್ಟ್ರಗಳನ್ನು ಗೆದ್ದ ನೀನು, ನೆಲಕ್ಕೆ ಅದು ಹೇಗೆ ಉರುಳಿದೆ?೧೩ [13]‘ಹತ್ತಿಹೋಗುವೆನು ನಾನು ಆಕಾಶಮಂಡಲಕೆ ಉತ್ತರದಿಕ್ಕಿನ ಕೊನೆಗಿರುವ ಸುರಗಣ ಪರ್ವತಕ್ಕೆ ಎತ್ತುವೆ ಸಿಂಹಾಸನವನ್ನು ದೇವ ನಕ್ಷತ್ರಗಳ ಮೇಲಕೆ ‘ಕುಳಿತಲ್ಲಿ ರಾಜ್ಯವಾಳುವೆ’ ಎಂದುಕೊಂಡೆ ನಿನ್ನೊಳಗೆ.೧೪ [14]‘ಏರುವೆ ಉನ್ನತ ಮೇಘಮಂಡಲದ ಮೇಲಕೆ, ಸರಿಸಮಾನನಾಗುವೆ ಉನ್ನತೋನ್ನತನಿಗೆ’.೧೫ [15]ಇಂತೆಂದ ನೀನು ದೂಡಲಾಗಿರುವೆ ಪಾತಾಳಕೆ ಅಧೋಲೋಕದ ಅಗಾಧ ಕೂಪಗಳಿಗೆ.೧೬ [16]ಸತ್ತವರು ದಿಟ್ಟಿಸಿ ನಿನ್ನನು: ‘ಭುವಿಯನು ನಡುಗಿಸಿದವನು, ರಾಜ್ಯಗಳನು ಕದಲಿಸಿದವನು,೧೭ [17]ನಗರಗಳನು ಕೆಡವಿಸಿದವನು, ನಾಡನು ಕಾಡಾಗಿಸಿದವನು, ಖೈದಿಗಳನು ಬಂಧನದಿಂದ ಬಿಡಿಸಿದವನು ಈತನೇ ಅಲ್ಲವೆ?’ ಎಂದಾಡಿಕೊಳ್ವರು.೧೮ [18]ಸಂಭ್ರಮದಿ ಸ್ವಂತ ಸಮಾಧಿಗಳಲಿ ನಿರಂತರ ನಿದ್ರಿಸುತಿಹರು ಸಕಲ ರಾಷ್ಟ್ರಗಳ ಅರಸರು, ಸಮಸ್ತ ರಾಜರು.೧೯ [19]ನಿನ್ನನ್ನಾದರೊ ಕೊಳೆತ ಕಡ್ಡಿಯಂತೆ ಬಿಸಾಡಿಹರು ಕೆಳಕೆ ಗೋರಿಯಿಲ್ಲದ ನಿನ್ನ ಶವ ಈಡಾಗಿದೆ ಪರರ ತುಳಿತಕ್ಕೆ, ಕತ್ತಿ ತಿವಿದ, ಕಲ್ಲುಗುಂಡಿಗೆ ಪಾಲಾದ ಹೆಣಗಳೇ ನಿನ್ನ ಹೊದಿಕೆ.೨೦ [20]ಸ್ವಂತ ಜನರನೇ ಕೊಂದ ನಿನಗೆ ಸ್ವಂತ ನಾಡನೇ ನಾಶಗೈದ ನಿನಗೆ ಸಿಗದು ರಾಜ್ಯವೈಭವದ ಸಂಸ್ಕಾರ ಗೋರಿಗೆ, ‘ಹೇಳಹೆಸರಿಲ್ಲದ ಗತಿ ದುರುಳರ ಸಂತಾನಕೆ’.೨೧ [21]ತಲೆಯೆತ್ತಿ ಪೃಥ್ವಿಯನೇ ವಶಪಡಿಸಿಕೊಳ್ಳದಂತೆ, ಧರೆಯ ಮೇಲೆಲ್ಲ ನಗರಗಳನ್ನು ಕಟ್ಟಿಕೊಳ್ಳದಂತೆ, ಸಿದ್ಧಮಾಡಿರಿವನ ಮಕ್ಕಳಿಗೆ ವಧ್ಯಸ್ಥಾನ, ಈತನ ಪಿತಾಪಿತೃಗಳ ಪಾಪಕೃತ್ಯಗಳ ಕಾರಣ.೨೨ [22]ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯ ನುಡಿಗಳು: “ನಾನವರಿಗೆ ವಿರುದ್ಧವಾಗಿ ಎದ್ದು ನಿರ್ನಾಮಮಾಡುವೆನು, ಬಾಬಿಲೋನಿನ ಹೆಸರನು, ಜನಶೇಷವನು, ಪುತ್ರಪೌತ್ರರನು.೨೩ [23]ಪರಿವರ್ತಿಸುವೆನಾ ನಾಡನು ಜವುಗು ನೆಲವನ್ನಾಗಿ, ಅಹುದು, ಮುಳ್ಳುಹಂದಿಗಳ ರೊಪ್ಪವನ್ನಾಗಿ, ಗುಡಿಸಿಬಿಡುವೆನು ನಾಶವೆಂಬ ಪೊರಕೆಯಿಂದ ಪೂರ್ತಿಯಾಗಿ\.೨೪ [24] ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಪ್ರತಿಜ್ಞೆಯಿದು: “ನೆರವೇರಿಯೇ ತೀರುವುದು ನಾ ಸಂಕಲ್ಪಿಸಿದ್ದು, ಈಡೇರಿಯೇ ತೀರುವುದು ನಾ ಯೋಚಿಸಿದ್ದು.೨೫ [25]ನಶಿಸಿಬಿಡುವೆನಾ ಅಸ್ಸೀರಿಯರನು ನನ್ನ ನಾಡಿನಲಿ, ತುಳಿದುಬಿಡುವೆನು ಅವರನು ನನ್ನ ಬೆಟ್ಟಗಳಲಿ, ನೀಗುವುದಾಗ ನನ್ನ ಜನರಿಂದ ಅವರು ಹೂಡಿದ ನೊಗವು, ತೊಲಗುವುದಾಗ ಅವರು ಹೊರಿಸಿದ ಹೊರೆಯು.೨೬ [26]ವಿಶ್ವದ ಬಗ್ಗೆ ನಾ ಮಾಡಿರುವ ಯೋಜನೆಯಿದು, ರಾಷ್ಟ್ರಗಳನ್ನು ದಂಡಿಸಲೆತ್ತಿರುವ ಕೈಯಿದು\.೨೭ [27]ವ್ಯರ್ಥಗೊಳಿಸುವವರಾರು ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯ ಯೋಜನೆಯನು? ಹಿಂತೆಗೆವವರಾರು ಅವರೆತ್ತಿದ ಕೈಯನು?.೨೮ [28]ಅರಸ ಆಹಾಜನು ಕಾಲವಾದ ವರುಷದಲಿ ಕೇಳಿಬಂದಿತು ಈ ದೈವೋಕ್ತಿ:೨೯ [29]“ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು.೩೦ [30]ಪೋಷಣೆ ಪಡೆಯುವರು ದೀನದಲಿತರು, ನಿರ್ಭಯದಿಂದ ನಿದ್ರಿಸುವರು ದಿಕ್ಕಿಲ್ಲದವರು. ನಿನ್ನ ಸಂತಾನದವರಾದರೋ ಸಾಯುವರು ಕ್ಷಾಮದಿಂದ, ಅಳಿದುಳಿದವರು ಹತರಾಗುವರು ಆ ಘಟಸರ್ಪದಿಂದ.೩೧ [31]ಪುರದ್ವಾರವೇ, ಗೋಳಾಡು; ಪಟ್ಟಣವೇ, ಬೊಬ್ಬೆಯಿಡು, ಫಿಲಿಷ್ಟಿಯವೇ, ಕರಗಿಹೋಗು, ಉತ್ತರದಿಂದ ಬರುತ್ತಿದೆ ಧೂಮಧೂಳಿ ಆ ದಂಡಿನಲ್ಲಿಲ್ಲ ನೋಡು, ಯಾವ ಹೇಡಿ.೩೨ [32]ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೧೪ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/014.mp3 66 14