× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೩ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೨೩ ಟಿಪ್ಪಣಿಗಳನ್ನು ಉಳಿಸಿ ೧ [1]ಟೈರ್ ನಗರವನ್ನು ಕುರಿತ ದೈವೋಕ್ತಿ: “ಗೋಳಾಡಿರಿ ತಾರ್ಷಿಷಿನ ನಾವಿಕರೆಲ್ಲ, ಹಾಳಾಗಿವೆ ನಿಮ್ಮ ಬಂದರುಗಳೆಲ್ಲ; ಹಡಗುಗಳಿಗೆ ರೇವಿಲ್ಲ, ನೆಲೆಯಿಲ್ಲ, ಸೈಪ್ರಸ್ಸಿನಿಂದ ಬಂದ ನಾವಿಕರಿಂದ ಈ ಸುದ್ದಿ ನಿಮಗೆ ತಿಳಿಯುವುದು.”೨ [2]ಕರಾವಳಿಯ ನಿವಾಸಿಗಳೇ, ಸಿದೋನಿನ ವರ್ತಕರೇ, ಮೌನತಾಳಿರಿ. ನಿಮ್ಮ ಜನರು ವ್ಯಾಪಾರಕ್ಕಾಗಿ ವಿಶಾಲವಾದ ಸಮುದ್ರವನ್ನು ದಾಟುವಂತೆ ಮಾಡಿದಿರಿ.೩ [3]ಶೀಹೋರಿನ ಧಾನ್ಯದಿಂದಲೂ ನೈಲಿನ ಬೆಳೆಯಿಂದಲೂ ಆದಾಯ ಪಡೆದಿರಿ, ನಿಮ್ಮ ನಗರ ಹಲವಾರು ನಾಡುಗಳಿಗೆ ಮಾರುಕಟ್ಟೆಯಾಗಿತ್ತು.೪ [4]ಸಿದೋನ್ ನಗರವೇ, ನಿನಗೆ ನಾಚಿಕೆಗೇಡು! ಸಮುದ್ರವೂ ಸಮುದ್ರ ತಳವೂ ನಿನ್ನನ್ನು ನಿರಾಕರಿಸುತ್ತಾ; “ನಾನು ಗರ್ಭಧರಿಸಲಿಲ್ಲ, ಪ್ರಸವಿಸಲಿಲ್ಲ, ಪುತ್ರಪುತ್ರಿಯರನ್ನು ಸಾಕಿ ಸಲಹಲಿಲ್ಲ,” ಎಂದು ನುಡಿದಿದೆ.೫ [5]ಟೈರಿನ ದುರ್ಗತಿಯ ಸುದ್ದಿಯನ್ನು ಕೇಳಿದ ಈಜಿಪ್ಟಿನವರು ಸಹ ಕಳವಳಪಡುವರು.೬ [6]ಕರಾವಳಿಯ ನಿವಾಸಿಗಳೇ, ಗೋಳಾಡಿರಿ, ಸಮುದ್ರವನ್ನು ದಾಟಿ ತಾರ್ಷೀಷಿಗೆ ಹೋಗಿರಿ.೭ [7]ಇದು ತಾನೋ, ನಿಮ್ಮ ವಸಾಹತುಗಳನ್ನು ನಿರ್ಮಿಸಿಕೊಳ್ಳಲು ಜನರನ್ನು ಕಳುಹಿಸಿದ ನಗರ! ಇದರ ವರ್ತಕರು ಪ್ರಭುಗಳು!೮ [8]ಇದರ ವ್ಯಾಪಾರಿಗಳು ವಿಶ್ವವಿಖ್ಯಾತರು. ಇಂಥ ಟೈರ್ ಪಟ್ಟಣಕ್ಕೆ ನಾಶವೊದಗಿದುದನ್ನು ಯೋಚಿಸಿದವರಾರು?೯ [9]ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.೧೦ [10]ತಾರ್ಷೀಷ್ ನಗರವೇ, ನೈಲ್ ನದಿಯಂತೆ ನಿನ್ನ ನಾಡನ್ನು ಕೃಷಿಮಾಡು. ನಿನಗೆ ಬಂದರು ಇಲ್ಲವೇ ಇಲ್ಲ.೧೧ [11]ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.೧೨ [12]“ಹಿಂಸೆಗೆ ಈಡಾದ ಕನ್ಯೆಯಂತೆ ಇರುವ ಸಿದೋನ್ ನಗರವೇ, ಇನ್ನು ಮೇಲೆ ನಿನಗಿರದು ಸಂತೃಪ್ತಿ: ಸಮುದ್ರ ದಾಟಿ ಸೈಪ್ರಸ್ಸಿಗೆ ಹಾದುಹೋಗು, ಅಲ್ಲಿಯೂ ನಿನಗೆ ದೊರಕದು ವಿಶ್ರಾಂತಿ,” ಎಂದು ಹೇಳಿದ್ದಾರೆ.೧೩ [13]ಬಾಬಿಲೋನಿನ ನಾಡನ್ನು ನೋಡು. ಅದರ ಜನಾಂಗ ನಿರ್ನಾಮವಾಯಿತು. ಅಸ್ಸೀರಿಯದವರು ಆ ನಾಡನ್ನು ಕಾಡುಮೃಗಗಳಿಗೆ ಈಡುಮಾಡಿದರು. ಅಲ್ಲಿ ಬುರುಜುಗಳನ್ನು ಕಟ್ಟಿಕೊಂಡರು. ಇದರ ಕೋಟೆಗಳನ್ನಾದರೋ ಕೆಡವಿ ನಾಶಮಾಡಿದರು.೧೪ [14]‘ಗೋಳಾಡಿರಿ, ತಾರ್ಷೀಷಿನ ನಾವಿಕರೆಲ್ಲರು; ಹಾಳಾಗಿವೆ ನಿಮ್ಮ ಬಂದರುಗಳೆಲ್ಲವು.’೧೫ [15]ಒಬ್ಬ ಅರಸನ ಜೀವಮಾನ ಕಾಲದಷ್ಟು ದಿನ - ಅಂದರೆ ಎಪ್ಪತ್ತು ವರ್ಷಕಾಲ - ನಗರವು ಯಾರ ನೆನಪಿಗೂ ಬಾರದೆಹೋಗುವುದು. ಆ ಅವಧಿಯು ಮುಗಿದ ಮೇಲೆ ಅದರ ಗತಿ ವೇಶ್ಯೆಯ ಗೀತದಂತಾಗುವುದು:೧೬ [16]‘ಓ ವೇಶ್ಯೆಯೇ, ಮರೆತಿಹರು, ನೋಡು, ಜನರು ನಿನ್ನನು; ಎಂದೇ ತೆಗೆದುಕೋ ಕೈಯಲಿ ಕಿನ್ನರಿಯನು: ನುಡಿಸು ಇಂಪಾಗಿ ನಿನ್ನ ವಾದ್ಯವನು; ಹಾಡು ಅನೇಕಾನೇಕ ಗೀತಗಳನು; ಆಗಲಾದರೂ ನೆನಸಿಕೊಳ್ಳಲಿ ಜನರು ನಿನ್ನನು.’೧೭ [17]ಎಪ್ಪತ್ತು ವರ್ಷಗಳಾದ ಮೇಲೆ ಸರ್ವೇಶ್ವರ ಟೈರಿಗೆ ಭೇಟಿನೀಡುವರು. ಆ ನಗರಿ ತನ್ನ ಕಸುಬಿಗೆ ಹಿಂದಿರುಗುವಳು. ಜಗದ ಎಲ್ಲ ರಾಷ್ಟ್ರಗಳೊಂದಿಗೆ ವ್ಯಾಪಾರ ಗೈಯುವಳು.೧೮ [18]ಅವಳ ವ್ಯಾಪಾರದಿಂದ ಬಂದ ಆದಾಯ ಅವಳಿಗೆ ನಿಧಿನಿಕ್ಷೇಪವಾಗದೆ ಸರ್ವೇಶ್ವರ ಸ್ವಾಮಿಗೆ ಮೀಸಲಾಗುವುದು. ಅದು ಸರ್ವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ವಾಸಮಾಡುವವರಿಗೆ ಬೇಕಾದಷ್ಟು ಆಹಾರವನ್ನೂ ಅತ್ಯುತ್ತಮವಾದ ಉಡುಪನ್ನೂ ಒದಗಿಸುವುದು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೨೩ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/023.mp3 66 23