× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೨೪ ಟಿಪ್ಪಣಿಗಳನ್ನು ಉಳಿಸಿ ೧ [1]ಇಗೋ, ಸರ್ವೇಶ್ವರ ಬರಿದುಮಾಡುವರು ಧರೆಯನು, ನಿರ್ಜನ ಪ್ರದೇಶವಾಗಿಸುವರು ವಿರೂಪಗೊಳಿಸಿ ಅದನು, ಚದರಿಸುವರು ಅದರ ನಿವಾಸಿಗಳನು.೨ [2]ಪ್ರಜೆಗೆ ಹೇಗೋ ಹಾಗೆ ಯಾಜಕನಿಗೆ, ದಾಸನಿಗೆ ಹೇಗೋ ಹಾಗೆ ದಣಿಗೆ, ದಾಸಿಗೆ ಹೇಗೋ ಹಾಗೆ ಯಜಮಾನಿಗೆ, ಕೊಳ್ಳುವವನಿಗೆ ಹೇಗೋ ಹಾಗೆ ಕೊಡುವವನಿಗೆ, ಸಾಲ ಕೊಡುವವನಿಗೆ ಹೇಗೋ ಹಾಗೆ ಸಾಲ ಪಡೆಯುವವನಿಗೆ, ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆ ಬಡ್ಡಿ ತೆರುವವನಿಗೆ, ಬರುವುದು ಒಂದೇ ಗತಿ ಇವರೆಲ್ಲರಿಗೆ.೩ [3]ಬೆಟ್ಟ ಬರಿದಾಗಿ ಸಂಪೂರ್ಣ ಸುಲಿಗೆಯಾಗುವುದು ಜಗವು, ಸರ್ವೇಶ್ವರ ಸ್ವಾಮಿಯ ನುಡಿಗಳಿವು:೪ [4]ಸೊರಗಿಹೋಗುವುದು ಲೋಕ ದುಃಖಿಸುತ್ತಾ ಕುಗ್ಗಿಹೋಗುವುದು ಬುವಿ ಗೋಳಾಡುತ್ತಾ ಕಂಗೆಟ್ಟುಹೋಗುವನು ಪ್ರತಿಯೊಬ್ಬ ವಿಶ್ವವಿಖ್ಯಾತ.೫ [5]ಭೂನಿವಾಸಿಗಳು ಮೀರಿಹರು ದೈವಾಜ್ಞೆಗಳನು ಉಲ್ಲಂಘಿಸಿಹರು ದೈವನಿಯಮಗಳನು, ಭಂಗಪಡಿಸಿಹರು ಶಾಶ್ವತ ಒಡಂಬಡಿಕೆಯನ್ನು, ಮಲಿನವಾಗಿಸಿಹರು ನಡತೆಯಿಂದ ಲೋಕವನು.೬ [6]ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ.೭ [7]ಬಾಡಿಹೋಗಿದೆ ದ್ರಾಕ್ಷಾಲತೆ, ದುಬಾರಿಯಾಗಿದೆ ದ್ರಾಕ್ಷಾರಸ, ನರಳುತಿದೆ ನಲಿಯುತ್ತಿದ್ದ ಜನಸಮೂಹ.೮ [8]ನಿಂತುಹೋಗಿದೆ ದಮ್ಮಡಿಗಳ ಹರ್ಷನಾದ, ಕೊನೆಗೊಂಡಿದೆ ಉಲ್ಲಾಸಿಗಳ ಕೋಲಾಹಲ, ಅಡಗಿಹೋಗಿದೆ ಕಿನ್ನರಿಯ ಮಧುರಸ್ವರ.೯ [9]ಇನ್ನಿಲ್ಲ ಮದ್ಯಪಾನ ಗೀತಾಗಾನ, ಕಹಿಪಾನವಾಯಿತು ಕುಡುಕನಿಗೆ ಸುರಾಪಾನ.೧೦ [10]ಪಾಳುಬಿದ್ದಿದೆ ಅಸ್ತವ್ಯಸ್ತವಾದ ನಗರ, ಯಾರೂ ಪ್ರವೇಶಿಸದಂತೆ ಮುಚ್ಚಿದೆ ಪ್ರತಿಯೊಂದು ಗೃಹ.೧೧ [11]ಮದ್ಯಪಾನವಿಲ್ಲವೆಂದು ಬೀದಿಗಳಲಿ ಬೊಬ್ಬೆ ಇಡುತಿಹರೆಲ್ಲ, ಅಸ್ತಮಿಸಿಹೋಯಿತು ಜಗದ ಉಲ್ಲಾಸವೆಲ್ಲ, ಸೆರೆಯಾಗಿ ತೊಲಗಿತು ಅದರ ಸಡಗರವೆಲ್ಲ.೧೨ [12]ಪಾಳುಬಿದ್ದಿದೆ ನಗರ, ಮುರಿದು ಬಿದ್ದಿದೆ ಪುರದ್ವಾರ.೧೩ [13]ಉಳಿಯುವುವು ಜನಾಂಗಗಳು ಜಗದ ಮಧ್ಯೆ, ಎಣ್ಣೆಯ ಬೀಜವನು ಉದುರಿಸಿದ ಮೇಲೆ ಮಿಗುವ ಹೀಚಿನಂತೆ, ದ್ರಾಕ್ಷಿ ಹಣ್ಣನು ಕೊಯ್ದ ಮೇಲೆ ಉಳಿದ ಕೂಳೆಯಂತೆ.೧೪ [14]ಆರ್ಭಟಿಸುವರು ಅಳಿದುಳಿದವರು ಆನಂದದಿಂದ, ಕೊಂಡಾಡುವರು ಸರ್ವೇಶ್ವರನ ಮಹಿಮೆಯನು ಪಡುವಣದಿಂದ,೧೫ [15]ಎಂದೇ ಮೂಡಣದವರೇ, ಸನ್ಮಾನಿಸಿರಿ ಸರ್ವೇಶ್ವರ ಸ್ವಾಮಿಯನು, ಕರಾವಳಿಯವರೇ, ಘನಪಡಿಸಿರಿ ಇಸ್ರಯೇಲಿನ ದೇವರಾದ ಸ್ವಾಮಿಯ ನಾಮವನು.೧೬ [16]ಜಗದ ಕಟ್ಟಕಡೆಯಿಂದ ಕೇಳಿಬರುತಿದೆ, ‘ಸತ್ಯಸ್ವರೂಪನಿಗೆ ಸ್ತೋತ್ರ’ ಎಂಬ ಗೀತೆ. ಆದರೆ ನಶಿಸಿಹೋಗುತ್ತಿರುವೆನು ನಾನು, ಹೌದು, ನಶಿಸಿ ನಾಶವಾಗುತ್ತಿರುವೆನು, ಏನೆಂದು ಹೇಳಲಿ ನನ್ನ ಗತಿಯನು. ಇದೋ, ಬಾಧಿಸುತ್ತಿಹರು ದ್ರೋಹಿಗಳು, ದ್ರೋಹದ ಮೇಲೆ ದ್ರೋಹವೆಸಗುತಿಹರು.೧೭ [17]ಎಲೈ ಭೂನಿವಾಸಿಗಳೇ, ಕೇಳಿರೆಲ್ಲರು, ಕಾದಿದೆ ನಿಮಗೆ ಭಯಭೀತಿ, ಕುಳಿ ಮತ್ತು ಬಲೆಯು.೧೮ [18]ಬೀಳುವನು ಕುಳಿಯಲ್ಲಿ, ಭಯಭೀತಿಯ ಸಪ್ಪಳಕ್ಕೆ ಓಡಿಹೋಗುವವನು, ಸಿಕ್ಕಿಬೀಳುವನು ಬಲೆಯಲ್ಲಿ ಕುಳಿಯ ಹತ್ತಿ ಬರುವವನು. ತೆರೆದಿವೆ ನೋಡಿ, ಆಕಾಶದ ದ್ವಾರಗಳು, ಕಂಪಿಸುತ್ತಿವೆ ಬುವಿಯ ಅಸ್ತಿವಾರಗಳು.೧೯ [19]ಬಿರುಕು ಬಿಡುವುದು ಭೂಮಿ ಸೀಳುಪಾಳಾಗಿ ಕತ್ತರಿಸುವುದು ಕದಲಿಹೋಗಿ.೨೦ [20]ಓಲಾಡುವುದು ಭೂಮಿ ಅಮಲೇರಿದವನಂತೆ, ತೂಗಾಡುವುದು ಬಿರುಗಾಳಿಗೆ ಸಿಕ್ಕಿದ ಗುಡಿಸಲಂತೆ, ಕುಸಿದು ಬೀಳುವುದು ದ್ರೋಹದ ಭಾರಕೆ, ಮರಳಿ ಏಳದಂತೆ.೨೧ [21]ಆ ದಿನ ಸರ್ವೇಶ್ವರ ದಂಡಿಸುವರು ಮೇಲಣ ಸೇನಾಶೂರರನು, ಕೆಳಗಣ ಭೂ ರಾಜರನು.೨೨ [22]ತಳ್ಳುವವರನು ಖೈದಿಗಳ ಗುಂಪಿನಂತೆ ನೆಲಮಾಳಿಗೆಗೆ, ಇರುವರವರು ಸೆರೆಯಲಿ ಬಹುದಿನಗಳವರೆಗೆ, ತದನಂತರ ಗುರಿಯಾಗುವರು ದಂಡನೆಗೆ.೨೩ [23]ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೨೪ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/024.mp3 66 24