× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೨೮ ಟಿಪ್ಪಣಿಗಳನ್ನು ಉಳಿಸಿ ೧ [1]ಕುಡುಕರಿಂದ ಕೂಡಿದ ಎಫ್ರಯಿಮಿನ ಕಿರೀಟದಂತಿರುವ ನಗರಕ್ಕೆ ಧಿಕ್ಕಾರ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಧಿಕ್ಕಾರ!೨ [2]ಇದೋ, ಸರ್ವೇಶ್ವರ ಸ್ವಾಮಿ ಬಳಿ ಮಹಾ ಬಲಿಷ್ಠನೊಬ್ಬನು ಇದ್ದಾನೆ. ಆತನು ರಭಸವಾಗಿರುವ ಕಲ್ಮಳೆಯಂತೆ, ವಿನಾಶಕರವಾದ ಬಿರುಗಾಳಿಯಂತೆ, ಕೊಚ್ಚಿ ಹರಿಯುವ ತುಂಬು ಪ್ರವಾಹದಂತೆ ಬರುವನು. ಆ ನಗರ ನೆಲಕ್ಕೆ ಕುಸಿದುಬಿದ್ದು ನೆಲಸಮವಾಗುವಂತೆ ಮಾಡುವನು.೩ [3]ಎಫ್ರಯಿಮಿನ ಕುಡುಕರ ಮಹಾಮುಕುಟದಂತಿರುವ ಆ ನಗರ ಕಾಲಿನ ತುಳಿತಕ್ಕೆ ಈಡಾಗುವುದು.೪ [4]ಫಲವತ್ತಾದ ಕಣಿವೆಗೆ ಶ್ರೇಷ್ಠಶಿರೋಭೂಷಣವಾಗಿದ್ದು, ಈಗ ಬಾಡುತ್ತಿರುವ ಆ ನಗರ, ಹೂ ಕಾಲಕ್ಕೆ ಮುಂಚೆ ಮಾಗಿದ ಅಂಜೂರಕ್ಕೆ ಸಮಾನವಾಗುವುದು. ಆ ಹಣ್ಣನ್ನು ಕಂಡವರು ಕಿತ್ತ ಕೂಡಲೆ ತಿಂದುಬಿಡುವರು.೫ [5]ಆ ದಿನದಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯೇ ಅಳಿದುಳಿದ ತಮ್ಮ ಜನರಿಗೆ ಅಂದದ ಕಿರೀಟ, ಸುಂದರ ಮುಕುಟವಾಗುವರು.೬ [6]ಅವರು ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯನ್ನೂ ಊರಬಾಗಿಲ ಬಳಿ ಶತ್ರುಗಳನ್ನು ತಡೆಗಟ್ಟುವವರಿಗೆ ಶೌರ್ಯವನ್ನೂ ನೀಡುವರು.೭ [7]ಯಾಜಕರು, ಪ್ರವಾದಿಗಳು ಮದ್ಯಪಾನದಿಂದ ಮತ್ತರಾಗಿದ್ದಾರೆ; ದ್ರಾಕ್ಷಾರಸದಿಂದ ಓಲಾಡುತ್ತಿದ್ದಾರೆ; ಕುಡಿತದಿಂದ ತೂರಾಡುತ್ತಿದ್ದಾರೆ. ದ್ರಾಕ್ಷಾರಸವೇ ಅವರನ್ನು ಮುಳುಗಿಸಿಬಿಟ್ಟಿದೆ. ಹೌದು, ಅವರು ಮದ್ಯದಲ್ಲಿ ತೇಲಾಡುತ್ತಿದ್ದಾರೆ. ದೈವದರ್ಶನವಾಗುತ್ತಿರುವಾಗಲೂ ಅವರು ಓಲಾಡುತ್ತಾರೆ.೮ [8]ಅವರು ಕುಳಿತುಕೊಳ್ಳುವ ಮೇಜುಗಳ ಮೇಲೆಲ್ಲಾ ಹೊಲಸು ವಾಂತಿ! ಸ್ವಚ್ಛವಾದ ಸ್ಥಳವಂತೂ ಕೊಂಚವೂ ಇಲ್ಲ.೯ [9]ಇವರು ನನ್ನನ್ನು ಕುರಿತು: “ಇವನ ಜ್ಞಾನೋಪದೇಶ ಯಾರಿಗೆ? ಇವನು ಸಾರುವ ಸಂದೇಶ ಯಾರಿಗೆ? ಮೊಲೆಬಿಟ್ಟ ಕೂಸುಗಳಿಗೋ? ಎದೆಬಿಟ್ಟ ಮಕ್ಕಳಿಗೋ?೧೦ [10]ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ; ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ” ಎಂದು ಹರಟೆ ಕೊಚ್ಚಿಕೊಳ್ಳುತ್ತಾರೆ.೧೧ [11]ನೀವು ನನಗೆ ಕಿವಿಗೊಡದೆಹೋದರೆ, ಸರ್ವೇಶ್ವರ ಅಪರಿಚಿತವಾದ ಅನ್ಯಭಾಷೆಯನ್ನು ಆಡುವ ಜನರ ಮುಖಾಂತರ ನಿಮಗೆ ಪಾಠಕಲಿಸುವರು.೧೨ [12]“ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ: ಬಳಲಿದವರನ್ನು ವಿಶ್ರಮಗೊಳಿಸಿರಿ; ಇದೇ ನಿಮಗೆ ಅನುಕೂಲವಾದ ಉಪಶಮನ” ಎಂದು ದೇವರು ನಿಮಗೆ ಹೇಳಿದಾಗ, ನೀವು ಕೇಳದೆಹೋದಿರಿ.೧೩ [13]ಆದುದರಿಂದಲೇ ಸರ್ವೇಶ್ವರ ನಿಮಗೆ;ಆಜ್ಞೆಯ ಮೇಲೆ ಅಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ’ ಎಂದು ಹೇಳಿ ಪಾಠಕಲಿಸುವರು. ಆಗ ನೀವು ನಡೆ ನಡೆದೂ ಎಡವಿ ಬೀಳುವಿರಿ, ಗಾಯಗೊಳ್ಳುವಿರಿ. ಉರುಲಿಗೆ ಸಿಕ್ಕಿಬೀಳುವಿರಿ, ಬಂಧನಕ್ಕೊಳಗಾಗುವಿರಿ.೧೪ [14]ಆದಕಾರಣ, ಜೆರುಸಲೇಮಿನ ಜನರನ್ನಾಳುವ ಧರ್ಮನಿಂದಕರೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳಿರಿ.೧೫ [15]ನೀವು ನಿಮ್ಮನಿಮ್ಮೊಳಗೆ: “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.೧೬ [16]ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ: ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.೧೭ [17]ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.೧೮ [18]ಮೃತ್ಯುವಿನೊಂದಿಗೆ ನೀವು ಮಾಡಿಕೊಂಡ ಒಪ್ಪಂದ ಬಿದ್ದುಹೋಗುವುದು. ಆ ಮಹಾವಿಪತ್ತು ನಾಡನ್ನು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು.೧೯ [19]ಅದು ಹಾದುಹೋಗುವಾಗಲೆಲ್ಲಾ ನಿಮ್ಮನ್ನು ಹಿಡಿದುಬಿಡುವುದು. ಪ್ರತಿದಿನವೂ ಹಗಲೂ ರಾತ್ರಿ ಅದು ಹಾದುಹೋಗುವುದು. ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.೨೦ [20]ನೀವಾದರೋ ಕಾಲು ಚಾಚಲು ಚಾಪೆ ಸಾಲದವನಂತೆ, ಹೊದ್ದುಕೊಳ್ಳಲು ಕಂಬಳಿ ಸಾಲದವನಂತೆ ಇರುವಿರಿ.೨೧ [21]ಒಮ್ಮೆ ಸರ್ವೇಶ್ವರ ಪೆರಾಚೀಮ್ ಬೆಟ್ಟದ ಮೇಲೆ ಎದ್ದಂತೆ ಏಳುವರು; ಗೊಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವರು. ಆಗ ಅಸಾಧಾರಣ ಕಾರ್ಯವೊಂದನ್ನು ನಡೆಸುವರು; ಅಪೂರ್ವವಾದ ತಮ್ಮ ಕೆಲಸವನ್ನು ನೆರವೇರಿಸುವರು;೨೨ [22]ಆದಕಾರಣ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಟ್ಟುಬಿಡಿ. ‘ಇಡೀ ನಾಡೇ ನಾಶವಾಗಲಿ’ ಎಂಬ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ತೀರ್ಪನ್ನು ನಾನು ಕೇಳಿದ್ದೇನೆ.೨೩ [23]ನನ್ನ ಮಾತಿಗೆ ಕಿವಿಗೊಡಿ, ನಾನು ಹೇಳುವುದನ್ನು ಗಮನವಿಟ್ಟು ಆಲಿಸಿ.೨೪ [24]ಬಿತ್ತನೆಗಾಗಿ ಉಳುವವನು ಸದಾ ಉತ್ತುಕೊಂಡೇ ಇರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆದುಕೊಂಡೇ ಇರುವನೋ?೨೫ [25]ಒಮ್ಮೆ ಭೂಮಿಯನ್ನು ಹಸನುಮಾಡಿದ ಮೇಲೆ ಜೀರಿಗೆಯನ್ನು ಚೆಲ್ಲಿ, ಸದಾಪನ್ನು ಬಿತ್ತುವವನಲ್ಲವೆ? ಗೋದಿಯನ್ನು ಸಾಲುಸಾಲಾಗಿಯೂ ಬಾರ್ಲಿಯನ್ನು ತಕ್ಕ ಸ್ಥಳದಲ್ಲಿ ಬಿತ್ತಿ, ಕಡಲೆಯನ್ನು ಅಂಚಿನಲ್ಲಿ ಹಾಕುವವನಲ್ಲವೆ?೨೬ [26]ಅವನ ದೇವರು ಇದನ್ನೆಲ್ಲಾ ಸರಿಯಾಗಿ ತಿಳಿಸಿ ಕಲಿಸಿಕೊಡುತ್ತಾರೆ.೨೭ [27]ಸದಾಪನ್ನು ಒಕ್ಕುವುದು ಕಣದ ಗುಂಡಿನಿಂದಲ್ಲ, ದೊಣ್ಣೆಯಿಂದಲೇ.೨೮ [28]ಗೋದಿಯನ್ನು ಒಕ್ಕುವಾಗ ಕುದುರೆಗಳನ್ನು ಹೊಡೆದು ಗುಂಡನ್ನು ಉರುಳಿಸಿ ಕಾಳನ್ನು ಪುಡಿಪುಡಿಮಾಡುವನೋ? ಇಲ್ಲ.೨೯ [29]ಈ ವಿವೇಕವು ಕೂಡ ಸೇನಾಧೀಶ್ವರ ಸರ್ವೇಶ್ವರನಿಂದಲೇ ಬರುತ್ತದೆ. ಅವರ ಆಲೋಚನೆ ಅತಿಶಯವಾದುದು. ಅವರ ಜ್ಞಾನ ಸರ್ವಶ್ರೇಷ್ಠವಾದುದು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಶಾಯನ ೨೮ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/028.mp3 66 28