× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೩೮ ಟಿಪ್ಪಣಿಗಳನ್ನು ಉಳಿಸಿ ೧ [1]ಆ ದಿನಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ. ಆದುದರಿಂದ ನಿನ್ನ ಸಂಸಾರವನ್ನು ವ್ಯವಸ್ಥೆಮಾಡಬೇಕು ಎಂದು ಸರ್ವೇಶ್ವರ ಹೇಳಿದ್ದಾರೆ,” ಎಂದು ತಿಳಿಸಿದನು.೨ [2]ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು,೩ [3]“ಸರ್ವೇಶ್ವರಾ, ನಿಮಗೆ ಶ್ರದ್ಧೆಯಿಂದಲೂ, ಪ್ರಾಮಾಣಿಕತೆಯಿಂದಲೂ ಸೇವೆಮಾಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಂಡಿದ್ದೇನೆ. ಇದನ್ನು ದಯೆಯಿಂದ ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥನೆ ಮಾಡಿದನು.೪ [4]ಆಗ ಸರ್ವೇಶ್ವರ ಯೆಶಾಯನಿಗೆ,೫ [5]“ನೀನು ಹೋಗಿ ಹಿಜ್ಕೀಯನಿಗೆ ಹೀಗೆಂದು ತಿಳಿಸು: ‘ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಇನ್ನೂ ಹದಿನೈದು ವರ್ಷಗಳನ್ನು ಸೇರಿಸುತ್ತೇನೆ.೬ [6]ನಿನ್ನನ್ನು ಮತ್ತು ಈ ಪಟ್ಟಣವನ್ನು ಅಸ್ಸೀರಿಯದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುತ್ತೇನೆ. ಈ ಪಟ್ಟಣವನ್ನು ಉಳಿಸಿ ಕಾಪಾಡುತ್ತೇನೆ’.”೭ [7]ಯೆಶಾಯನು ಹಿಜ್ಕೀಯನಿಗೆ ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ, ‘ನಿನ್ನ ಕುರುವಿನ ಮೇಲೆ ಕಟ್ಟು, ಆಗ ನೀನು ಗುಣಹೊಂದುವೆ,” ಎಂದು ಹೇಳಲು೮ [8]ಹಿಜ್ಕೀಯನು, “ನಾನು ಗುಣಹೊಂದಿ ಸರ್ವೇಶ್ವರ ಸ್ವಾಮಿಯ ಆಲಯವನ್ನು ಸೇರುವೆನು ಎಂಬುದಕ್ಕೆ ಗುರುತೇನು?” ಎಂದು ಕೇಳಿದನು. ಅದಕ್ಕೆ ಯೆಶಾಯನು, “ಸರ್ವೇಶ್ವರ ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಈ ಗುರುತನ್ನು ಕಾಣುವೆ: ಇಗೋ, ಅಹಾಜನು ಕಟ್ಟಿಸಿದ ನೆರಳು ಗಡಿಯಾರದಲ್ಲಿ ಸೂರ್ಯನ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡುವರು,” ಎಂದು ತಿಳಿಸಿದನು. ಅಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು. ಜುದೇಯದ ಅರಸ ಹಿಜ್ಕೀಯನು ರೋಗದಿಂದ ಗುಣಹೊಂದಿದಾಗ ಬರೆದ ಸ್ತುತಿಗೀತೆ: ನನ್ನ ರೋಗದಲ್ಲಿ ನಾನು ಇಂತೆಂದುಕೊಂಡೆ: ಮಧ್ಯಪ್ರಾಯದಲ್ಲೇ ಮೃತ್ಯುಲೋಕವನ್ನು ಸಮೀಪಿಸಿರುವೆ ನನ್ನ ಆಯುಷ್ಯವನ್ನು ನಾ ಕಳೆದುಕೊಂಡಿರುವೆ. ಜೀವಲೋಕದಲ್ಲಿ ಇನ್ನು ದೇವನನ್ನು ಕಾಣೆನೆಂದುಕೊಂಡೆ ಭೂಲೋಕನಿವಾಸಿಗಳಲ್ಲಿ ಒಬ್ಬನನ್ನೂ ನೋಡಲಾರೆನೆಂದುಕೊಂಡೆ. ಕುರುಬನು ತನ್ನ ಗುಡಿಸಲನ್ನು ಕಿತ್ತುಹಾಕುವಂತೆ ನೇಯಿಗೆಯವನು ತನ್ನ ಹಾಸನ್ನು ಸುತ್ತುವಂತೆ ಮಗ್ಗದಿಂದ ಅವನು ದಾರವನ್ನು ಕತ್ತರಿಸುವಂತೆ ಬೆಳಗುಬೈಗಿನೊಳಗೆ ನನ್ನ ಆಯುಷ್ಯವನ್ನು ನೀ ಮುಗಿಸುತ್ತಿರುವೆನೆಂದೆ. ಸಿಂಹವು ಮೇಲೆಬಿದ್ದು ಮೂಳೆ ಮುರಿದಂತೆ ನನಗಾಗುತ್ತಿತ್ತು ಅತೀವ ಬಾಧೆ, ಆದರೂ ಇರುಳೆಲ್ಲ ಮೊರೆಯಿಡುತ್ತಿದ್ದೆ ಬೆಳಗು ಬೈಗಿನೊಳಗೆ ನೀ ನನ್ನ ಮುಗಿಸುತ್ತಿರುವೆನೆಂದೆ. ಕಿಚುಗುಟ್ಟಿದೆ ನಾ ಬಾನಕ್ಕಿ-ಬಕಗಳಂತೆ ಗುಬ್ಬಳಿಸಿದೆ ನಾ ಪಾರಿವಾಳದಂತೆ ಕಂಗೆಟ್ಟೆ, ನಾ ಮೇಲೆ ಮೇಲಕ್ಕೆ ನೋಡುತಾ ಸರ್ವೇಶ್ವರಾ, ನಾನಿರುವೆ ಬಾಧೆಪಡುತಾ ನೀ ಎನಗೆ ನೆರವಾಗಲು ಬಾ ಎನ್ನುತಾ. ನುಡಿದಂತೆ ಪ್ರಭೂ ನೆರವೇರಿಸಿಹನು; ನಾನೇನು ಹೇಳಲಿ; ಮುಳುಗಿದೆ ನನ್ನಾತ್ಮ ದುಃಖಸಾಗರದಲಿ ನಿದ್ರೆಯಿಲ್ಲದೆ ಸೊರಗುತಿದೆ ನನ್ನ ಜೀವಮಾನವಿಡೀ. ಸರ್ವೇಶ್ವರಾ, ಮಾನವನ ಜೀವನ ಇಂತಿದೆ, ಇವುಗಳಿಂದಲೇ ನನ್ನ ಆತ್ಮ ಚೇತನಗೊಳ್ಳುತಿದೆ, ನೀನೀಗ ಗುಣಪಡಿಸು, ನಾ ಬಾಳುವೆ. ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ. ಸತ್ತವರು ನಿನ್ನನ್ನು ಕೀರ್ತಿಸರು ಪಾತಾಳದವರು ನಿನ್ನನ್ನು ಸ್ತುತಿಸರು ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯಸಂಧತೆಯನ್ನು ಆಶ್ರಯಿಸರು. ಜೀವಂತನು, ಜೀವಂತನು ಮಾತ್ರವೇ ನಿನ್ನ ಸ್ತುತಿಮಾಡುವಂತೆ ನಾನಿಂದು ನಿನ್ನನ್ನು ಜೀವಂತನಾಗಿ ಸ್ತುತಿಮಾಡುತ್ತಿರುವೆ ನಿನ್ನ ಸತ್ಯಸಂಧತೆಯನ್ನು ಮಕ್ಕಳಿಗೆ ಬೋಧಿಸುವನು ತಂದೆ. ಸರ್ವೇಶ್ವರಾ, ನೀ ನನ್ನ ಉದ್ಧಾರಕ ಹೊಗಳುವೆ ನಿನ್ನ ನಾ ತಂತಿವಾದ್ಯ ಸಮೇತ ದಿನನಿತ್ಯ, ನಿನ್ನಾಲಯದೊಳು, ಜೀವವಿರುವ ತನಕ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೩೮ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/038.mp3 66 38