× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೪೯ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೪೯ ಟಿಪ್ಪಣಿಗಳನ್ನು ಉಳಿಸಿ ೧ [1]ಕಿವಿಗೊಡಿ ನನ್ನ ದ್ವೀಪನಿವಾಸಿಗಳೇ, ಆಲಿಸಿ ನನ್ನನ್ನು ದೂರದ ಜನಾಂಗಗಳೇ, ಸರ್ವೇಶ್ವರ ಕರೆದನೆನ್ನನ್ನು ಗರ್ಭದಲ್ಲಿದ್ದಾಗಲೇ; ಹೆಸರಿಟ್ಟನೆನಗೆ ನಾನು ತಾಯಿಯ ಉದರದಲ್ಲಿದ್ದಾಗಲೇ.೨ [2]ಮಾಡಿದನು ನನ್ನ ನುಡಿಯನ್ನು ಹರಿತವಾದ ಖಡ್ಗವನ್ನಾಗಿ ಮುಚ್ಚಿಟ್ಟಹನು ನನ್ನನ್ನು ತನ್ನ ಕರದ ನೆರಳಿನಲ್ಲಿ ರೂಪಿಸಿಹನು ನನ್ನನ್ನು ಚೂಪಾದ ಬಾಣವನ್ನಾಗಿ, ಬಚ್ಚಿಟ್ಟಿಹನು ನನ್ನನು ತನ್ನ ಬತ್ತಳಿಕೆಯಲ್ಲಿ.೩ [3]ಆತನೆನಗೆ ಇಂತೆಂದ: “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.”೪ [4]ಇಂತೆಂದುಕೊಂಡೆ ನಾನಾಗ: ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.೫ [5]ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲಿ.೬ [6]ಮತ್ತೆ ಆತ ಇಂತೆಂದನು ನನಗೆ: “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”೭ [7]ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು: “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”೮ [8]ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ: “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.೯ [9]‘ಹೊರಟುಹೋಗಿರಿ’ ಎನ್ನುವೆನು ಸೆರೆಯಾಳುಗಳಿಗೆ ‘ಬೆಳಕಿಗೆ ಬನ್ನಿರಿ’ ಎನ್ನುವೆನು ಕತ್ತಲಲ್ಲಿರುವವರಿಗೆ ಪಾಳುಬಿದ್ದ ಸೊತ್ತುಗಳನ್ನು ಹಂಚಿಕೊಡುವೆನು ಅವರಿಗೆ. ದೇಶವನ್ನು ಪುನಃ ತರುವೆನು ಪೂರ್ವಸ್ಥಿತಿಗೆ ದಾರಿಯುದ್ದಕ್ಕೂ ಆಹಾರ ಒದಗಿಸುವೆನು ನನ್ನ ಪ್ರಜೆಗೆ ಬೋಳು ಬೆಟ್ಟಗಳೆಲ್ಲ ಹುಲ್ಲುಗಾವಲುಗಳಾಗುವುವು ನನ್ನಾ ಮಂದೆಗೆ.೧೦ [10]ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.೧೧ [11]ಸಮದಾರಿಯಾಗಿಸುವೆನು ನನ್ನ ಬೆಟ್ಟಗುಡ್ಡಗಳನು ಎತ್ತರಿಸುವೆನು ನನ್ನ ರಾಜಮಾರ್ಗಗಳನು.೧೨ [12]ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.೧೩ [13]ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.೧೪ [14]ಜೆರುಸಲೇಮಿನ ಜನರಾದರೋ ಇಂತೆಂದರು: ಸರ್ವೇಶ್ವರ ನಮ್ಮನ್ನು ಕೈಬಿಟ್ಟಿಹನು, ಆ ಸ್ವಾಮಿ ನಮ್ಮನ್ನು ಮರೆತುಬಿಟ್ಟಿಹನು.”೧೫ [15]ಹೆತ್ತ ತಾಯಿಗೆ ತನ್ನ ಕಂದನ ಪ್ರೀತಿ ಬತ್ತಿಹೋಗುವುದುಂಟೆ? ಆಕೆ ತನ್ನ ಮೊಲೆಗೂಸನು ಮರೆತುಬಿಡುವುದುಂಟೆ? ಒಂದು ವೇಳೆ ಆಕೆ ಮರೆತರೂ ನಾ ನಿನ್ನನು ಮರೆಯೆ.೧೬ [16]ನೋಡು, ನಿನ್ನ ಚಿತ್ರ ಕೊರೆದಿದೆ ನನ್ನ ಅಂಗೈಗಳಲೆ ನಿನ್ನ ಪೌಳಿಗೋಡೆಗಳು ಇವೆ ಸದಾ ನನ್ನ ಕಣ್ಣೆದುರಿನಲೆ.೧೭ [17]ನಿನ್ನ ಮರಳಿ ಕಟ್ಟುವವರು ಬರುತಿಹರು ತ್ವರೆಯಿಂದ ನಿನ್ನ ಕೆಡವಿ ಹಾಳುಮಾಡಿದವರು ಹೊರಡುತಿಹರು ನಿನ್ನಿಂದ.೧೮ [18]ಕಣ್ಣೆತ್ತಿ ಸುತ್ತಮುತ್ತಲು ನೋಡು: ಬರುತಿಹರು ನಿನ್ನ ಬಳಿಗೆ ಅವರೆಲ್ಲರು ಕೂಡಿಕೊಂಡು. ನನ್ನ ಜೀವದಾಣೆ ನಿನಗೆ ಹೇಳುವುದೇನೆಂದರೆ: ‘ವಧುವು ಒಡವೆಗಳನು ಧರಿಸಿಕೊಳ್ಳುವಂತೆ ಅವರಾಗುವರು ನಿನಗೆ ಆಭರಣಗಳಂತೆ.’೧೯ [19]ಪಾಳುಬಿದ್ದ ನಿನ್ನ ಪ್ರದೇಶಗಳು ಬೀಳುಬಿದ್ದ ನಿನ್ನ ಭೂಮಿಗಳು ಕೆಡವಿಬಿದ್ದ ನಿನ್ನ ಬೀಡುಗಳು ಕಿಕ್ಕಿರಿದಾಗುವುವು ನಿನ್ನ ನಿವಾಸಿಗಳಿಗೆ; ನಿನ್ನ ಕಬಳಿಸಿದವರು ದೂರವಾಗುವರು ನಿನಗೆ.೨೦ [20]“ಸರಿದುಕೊ, ನಮಗೆ ಸ್ಥಳಾವಕಾಶ ಸಾಲದು” ಎಂದು ಪೇಳ್ವರು ನಿನ್ನ ಕಿವಿಯೊಳು ಮಕ್ಕಳು ನೀ ಪರದೇಶಿಯಾಗಿದ್ದಾಗ ನಿನಗೆ ಹುಟ್ಟಿದಾ ಮಕ್ಕಳು.೨೧ [21]ಆಗ ನೀನು ಹೀಗೆಂದುಕೊಳ್ಳುವೆ ಮನದೊಳು: “ನಾನೋ ಮಕ್ಕಳನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇಷ್ಟೊಂದು ಮಕ್ಕಳನು ಕೊಟ್ಟವರಾರು ನನಗೆ? ಇವರನ್ನು ಪೋಷಿಸಿದವರಾರು ಹೀಗೆ? ಇವರೆಲ್ಲಿದ್ದರು? ನಾನೋ ಒಬ್ಬಂಟಿಗಳಾಗಿದ್ದೆ!”೨೨ [22]ಇಂತೆನ್ನುವರು ಸ್ವಾಮಿ ಸರ್ವೇಶ್ವರ: ಇದೋ, ಕೈಸನ್ನೆಮಾಡುವೆ ಜನಾಂಗಗಳಿಗೆ ನನ್ನ ಧ್ವಜವನ್ನೆತ್ತುವೆ ದೇಶಾಂತರಗಳವರೆಗೆ ಬರುವರವರು ನಿನ್ನ ಕುವರರನು ಅಪ್ಪಿಕೊಂಡು ಎದೆಗೆ ಕರೆತರುವರು ನಿನ್ನ ಕುವರಿಯರನು ಹೆಗಲಮೇಲೆ.೨೩ [23]ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.೨೪ [24]ಬಲಾಢ್ಯನಿಂದ ಕೊಳ್ಳೆಯನ್ನು ಕಸಿದುಕೊಳ್ಳಲಾದೀತೆ? ಭೀಕರನಿಗೆ ಸೆರೆಯಾದವರನ್ನು ಬಿಡಿಸಲಾದೀತೆ?೨೫ [25]ಸರ್ವೇಶ್ವರ ಹೀಗೆನ್ನುತ್ತಾರೆ: “ಹೌದು, ಅಪಹರಿಸಲಾಗುವುದು ಬಲಾಢ್ಯನ ಸೆರೆಯಾಳುಗಳನು ಕಸಿದುಕೊಳ್ಳಲಾಗುವುದು ಭೀಕರನ ಕೊಳ್ಳೆಯನು. ನಿನ್ನೊಡನೆ ಹೋರಾಡುವವನ ಸಂಗಡ ಹೊರಾಡುವೆ ನಾನೇ. ಅಷ್ಟೇ ಅಲ್ಲ, ನಿನ್ನ ಮಕ್ಕಳನು ಉದ್ಧರಿಸುವೆ ನಾನೇ.೨೬ [26]ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು: ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಶಾಯನ ೪೯ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/049.mp3 66 49