× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೫೭ ಟಿಪ್ಪಣಿಗಳನ್ನು ಉಳಿಸಿ ೧ [1]ಸಜ್ಜನರು ಸಾಯುತ್ತಾರೆ, ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಶರಣರು ಕಣ್ಮರೆಯಾಗುತ್ತಾರೆ, ‘ಇವರು ಕೇಡಿನಿಂದ ಪಾರಾದರು’ ಎಂದು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.೨ [2]ಸನ್ಮಾರ್ಗದಲ್ಲಿ ನಡೆಯುವವರು ಶಯ್ಯೆಯಲ್ಲಿ ವಿಶ್ರಮಿಸುತ್ತಾರೆ; ಶಾಂತಿಸಮಾಧಾನವನ್ನು ಸೇರುತ್ತಾರೆ.೩ [3]ಮಾಟಗಾತಿಯ ಮಕ್ಕಳೇ, ವೇಶ್ಯೆ ವ್ಯಭಿಚಾರಿಗಳ ಸಂತಾನದವರೇ, ಬನ್ನಿ ಇಲ್ಲಿಗೆ.೪ [4]ಯಾರನ್ನು ಅಣಕಿಸಿ ಹಾಸ್ಯಮಾಡುತ್ತಿದ್ದೀರಿ? ಯಾರನ್ನು ನೋಡಿ ಬಾಯಿಕಿಸಿದು ನಾಲಿಗೆಯನ್ನು ಚಾಚುತ್ತೀರಿ?೫ [5]ಓಕ್ಮರಗಳ ತೋಪುಗಳಲ್ಲೂ ಸೊಂಪಾಗಿ ಹರಡಿರುವ ಮರಗಳ ಅಡಿಯಲ್ಲೂ ಕಾಮಾಗ್ನಿಯಿಂದ ಕುದಿಯುತ್ತೀರಿ. ಹೊಳೆಕೊರೆದ ಡೊಗರುಗಳಲ್ಲೂ ಬಂಡೆಬಿರುಕುಗಳಲ್ಲೂ ಮಕ್ಕಳನ್ನು ಬಲಿಕೊಡುತ್ತೀರಿ. ನೀವು ವಿದ್ರೋಹಿಗಳ ಸಂತಾನ, ಸುಳ್ಳುಗಾರರ ಸಂತತಿ.೬ [6]ಎಲೈ ದುಷ್ಟ ಸಂತಾನವೇ, ಹೊಳೆಯ ನುಣುಪುಗಲ್ಲುಗಳೆಂದರೆ ನಿನಗೆ ಅತಿಪ್ರಿಯ. ಹೌದು, ಅವೇ ನಿನ್ನ ಪಾಲಿನ ಭಾಗ್ಯ. ಅವುಗಳಿಗೆ ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದಿರುವೆ, ದವಸ ಧಾನ್ಯಗಳನ್ನು ಕಾಣಿಕೆಯಾಗಿ ಅರ್ಪಿಸಿರುವೆ. ಇದನ್ನೆಲ್ಲ ನೋಡಿ ಕೋಪವನ್ನು ನಾನು ಅಡಗಿಸಿಕೊಳ್ಳಲಾದೀತೆ?೭ [7]ಬಲಿಯರ್ಪಿಸಲು ಎತ್ತರವಾದ, ದೊಡ್ಡದಾದ ಬೆಟ್ಟವನ್ನು ಹತ್ತಿರುವೆ. ಆದರೆ ಅಲ್ಲಿ ಕಾಮಕೇಳಿಗಳಲ್ಲಿ ತೊಡಗಿರುವೆ.೮ [8]ಬಾಗಿಲಿನ ಹಾಗು ಬಾಗಿಲಿನ ನಿಲುವಿನ ಹಿಂಭಾಗದಲ್ಲಿ ಅಶ್ಲೀಲ ಸ್ಮಾರಕಗಳನ್ನು ಇಟ್ಟುಕೊಂಡಿರುವೆ. ನನ್ನನ್ನು ತ್ಯಜಿಸಿಬಿಟ್ಟು, ನಿನ್ನ ಹಾಸಿಗೆಯನ್ನು ಬಿಚ್ಚಿರುವೆ. ಅನ್ಯರ ಸಂಗಮವನ್ನು ಬಯಸಿ ಅವರೊಂದಿಗೆ ಬೆಲೆಗೆ ಒಪ್ಪಂದ ಮಾಡಿಕೊಂಡಿರುವೆ; ಬಳಿಕ ಕಾಮವಿಲಾಸದಲ್ಲಿ ತೊಡಗಿರುವೆ.೯ [9]ಬೇಕಾದಷ್ಟು ಪರಿಮಳ ದ್ರವ್ಯವನ್ನು ಕೂಡಿಸಿಕೊಂಡು, ಸುಗಂಧ ತೈಲವನ್ನು ತೆಗೆದುಕೊಂಡು ‘ಮೋಲೆಕ್’ ದೇವತೆಯ ಬಳಿಗೆ ಯಾತ್ರೆಗೈದಿರುವೆ. (ಹೊಸ ದೇವತೆಗಳನ್ನು ಹುಡುಕಲು) ನಿನ್ನ ದೂತರನ್ನು ದೂರದೂರ ನಾಡುಗಳಿಗೆ ಕಳಿಸಿರುವೆ. ಪಾತಾಳದವರೆಗೂ ನಿನ್ನನ್ನು ತಗ್ಗಿಸಿಕೊಂಡಿರುವೆ.೧೦ [10]ನಡೆದು ನಡೆದು ದಣಿದಿದ್ದರೂ ‘ಇನ್ನು ಪ್ರಯೋಜನವಿಲ್ಲ’ ಎಂದುಕೊಳ್ಳಲಿಲ್ಲ. ಹೊಸ ಚೈತನ್ಯವನ್ನು ತಂದುಕೊಂಡು ನಿಲ್ಲದೆ ಮುಂದುವರೆದಿರುವೆ.೧೧ [11]ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?೧೨ [12]ನಿನ್ನ ನಡತೆಯನ್ನು ಬಯಲಿಗೆ ತರುವೆನು. ಆಗ ನಿನ್ನ ಕೃತ್ಯಗಳು ನಿನಗೆ ನೆರವಾಗವು.೧೩ [13]ಸಹಾಯಕ್ಕಾಗಿ ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಈ ವಿಗ್ರಹಗಳೇ ನಿನಗೆ ರಕ್ಷಣೆ ನೀಡಲಿ. ಇವುಗಳನ್ನೆಲ್ಲ ಗಾಳಿ ಬಡಿದುಕೊಂಡು ಹೋಗುವುದು. ಕೇವಲ ಒಂದು ಉಸಿರು ಸಾಕು, ಇವುಗಳನ್ನು ಒಯ್ದುಬಿಡಲು. ಆದರೆ ನನ್ನನ್ನು ಆಶ್ರಯಿಸಿಕೊಂಡವನು ನಾಡಿಗೆ ಬಾಧ್ಯಸ್ಥನಾಗುವನು; ನನ್ನ ಪವಿತ್ರ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವನು.೧೪ [14]“ಸರಿಮಾಡಿ ಮಾರ್ಗವನು ಮಣ್ಣುಹಾಕಿ, ಹಾಕಿ; ನನ್ನ ಜನರ ದಾರಿಯಿಂದ ತೊಡರುಗಳನ್ನು ಎತ್ತಿಹಾಕಿ,” ಎನ್ನುತ್ತದೆ ವಾಣಿಯೊಂದು.೧೫ [15]“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು: ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.೧೬ [16]ನಾನು ಸರ್ವದಾ ತಪ್ಪು ಹುಡುಕುವವನಲ್ಲ; ಕಡೆಯ ತನಕ ಕೋಪದಿಂದಿರುವವನಲ್ಲ. ಹಾಗೆ ಮಾಡಿದರೆ ಜೀವಾತ್ಮ ಕುಂದಿಹೋದೀತು. ಆ ಜೀವಿಗಳನ್ನು ಸೃಷ್ಟಿಸಿದವನು ನಾನೇ ಅಲ್ಲವೇ?೧೭ [17]ನನ್ನ ಜನರ ದುರಾಶೆಯ ದೋಷದ ನಿಮಿತ್ತ ನಾನು ಕೋಪಗೊಂಡೆ, ದಂಡಿಸಿದೆ, ಮುಖ ಮರೆಸಿಕೊಂಡೆ, ರೋಷಭರಿತನಾದೆ. ಅವರಾದರೋ ಮೊಂಡುತನದಿಂದ ಮನಸ್ಸಿಗೆ ತೋಚಿದ ಹಾಗೆ ನಡೆಯುತ್ತಾ ಬಂದಿದ್ದಾರೆ.೧೮ [18]“ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.೧೯ [19]ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.೨೦ [20]“ಆದರೆ, ದುರುಳರು ಅಲ್ಲೋಲಕಲ್ಲೋಲವಾದ ಸಮುದ್ರದಂತೆ ಇದ್ದಾರೆ. ಅದು ಸುಮ್ಮನಿರದು - ಅದರ ಅಲೆಗಳು ಕೆಸರನ್ನೂ ಕೊಳಚೆಯನ್ನೂ ಕಕ್ಕುತ್ತಾ ಇರುತ್ತದೆ.೨೧ [21]ದುರುಳರಿಗೆ ಇಲ್ಲ ಶಾಂತಿಸಮಾಧಾನ,” ಎನ್ನುತ್ತಾರೆ ದೇವರು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಶಾಯನ ೫೭ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/057.mp3 66 57