× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫೮ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೫೮ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ: “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;೨ [2]ತಮ್ಮ ದೇವರ ವಿಧಿನಿಯಮಗಳನ್ನು ಬಿಡದೆ, ಧರ್ಮವನ್ನು ಆಚರಿಸುವ ಜನಾಂಗವೋ ಎಂಬಂತೆ, ಇವರು ದಿನದಿನವೂ ನನ್ನ ದರ್ಶನಕ್ಕಾಗಿ ಬರುತ್ತಾರೆ; ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಿಸುವಂತೆ ನಟಿಸುತ್ತಾರೆ. ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳುತ್ತಾರೆ. ದೇವದರ್ಶನದಲ್ಲಿ ಆನಂದಿಸುವವರಂತೆ ತೋರಿಸಿಕೊಳ್ಳುತ್ತಾರೆ.”೩ [3]“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ.೪ [4]“ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ: ವ್ಯಾಜ್ಯ, ಕಲಹ, ಗುದ್ದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.೫ [5]ಸ್ವಾರ್ಥ ನಿಗ್ರಹಕ್ಕಾಗಿ ನಾನು ನೇಮಿಸಿದ ಉಪವಾಸದ ದಿನ ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣೀತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ನನಗೆ ಮೆಚ್ಚುಗೆಯಾಗುವ ಉಪವಾಸ ಎನ್ನುತ್ತೀರೊ?೬ [6]“ನಾನು ಹೇಳುವುದನ್ನು ಕೇಳಿ: ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು,೭ [7]ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ?೮ [8]“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.೯ [9]ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ೧೦ [10]ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು.೧೧ [11]ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.೧೨ [12]ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ‘ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ’ ಎಂಬ ಬಿರುದು ನಿಮಗೆ ಬರುವುದು.”೧೩ [13]“ನೀವು ಸಬ್ಬತ್ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ೧೪ [14]ನೀವು ಸರ್ವೇಶ್ವರ ಸ್ವಾಮಿಯಾದ ನನ್ನ ಆನಂದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರಾತಂಕವಾಗಿ ಅನುಭವಿಸುವಂತೆ ಮಾಡುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೫೮ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/058.mp3 66 58