× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೬೦ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೬೦ ಟಿಪ್ಪಣಿಗಳನ್ನು ಉಳಿಸಿ ೧ [1]ನಿನಗೆ ಬೆಳಕು ಬಂದಿದೆ ಜೆರುಸಲೇಮೇ, ಏಳು, ಪ್ರಕಾಶಿಸು; ನಿನ್ನ ಮೇಲೆ ಉದಯಿಸಿದೆ ಸರ್ವೇಶ್ವರನ ತೇಜಸ್ಸು.೨ [2]ಇಗೋ ಜಗತ್ತನು ಮುತ್ತಿದೆ ಕತ್ತಲು ಜನಾಂಗಗಳನು ಆವರಿಸಿದೆ ಕಾರ್ಗತ್ತಲು. ನಿನ್ನ ಮೇಲಾದರೋ ಉದಯಿಸುವನು ಸರ್ವೇಶ್ವರನು ನಿನ್ನಲ್ಲಿ ಗೋಚರವಾಗುವುದು ಆತನಾ ತೇಜಸ್ಸು.೩ [3]ರಾಷ್ಟ್ರಗಳು ಬರುವುವು ನಿನ್ನ ಬೆಳಕಿಗೆ ಅರಸರು ನಿನ್ನ ಉದಯದ ಶೋಭೆಗೆ.೪ [4]ನೀ ನೋಡು ಸುತ್ತಮುತ್ತಲು ಕಣ್ಣೆತ್ತಿ ಬರುತಿಹರು ನಿನ್ನ ಮಕ್ಕಳೆಲ್ಲರು ಗುಂಪಾಗಿ. ದೂರದಿಂದ ಬರುತಿಹರು ಗಂಡುಮಕ್ಕಳು ಕಂಕುಳಿನಲ್ಲಿ ಹೊತ್ತ ಆ ಹೆಣ್ಣುಮಕ್ಕಳು.೫ [5]ಇದನ್ನು ನೋಡಿ ನೀ ಬೆಳಗುವೆ ಕಾಂತಿಯಿಂದ ಉಬ್ಬುವುದು ನಿನ್ನ ಎದೆ ಆನಂದದಿಂದ. ಹರಿಯುವುದು ನಿನ್ನೆಡೆಗೆ ಸಮುದ್ರ ವ್ಯಾಪಾರ ಸಮೃದ್ಧಿ ದೊರಕುವುದು ನಿನಗೆ ಅನ್ಯಜನಾಂಗಗಳ ಆಸ್ತಿಪಾಸ್ತಿ.೬ [6]ತುಂಬಿರುವುವು ನಿನ್ನೊಳು ಒಂಟೆಗಳ ಗುಂಪುಗಳು ಮಿದ್ಯಾನಿನ, ಏಫದ ಪ್ರಾಯದ ಒಂಟೆಗಳು. ಬರುವರೆಲ್ಲರು ಶೆಬದಿಂದ, ತರುವರು ಬಂಗಾರ, ಧೂಪಗಳನು ಸಾರುವರೆಲ್ಲರು ಸರ್ವೇಶ್ವರನ ಸ್ತುತ್ಯಕಾರ್ಯಗಳನು.೭ [7]ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು.೮ [8]ಹಾರಿಬರುತ್ತಿರುವ ಇವರಾರು ಮೇಘಗಳಂತೆ? ಗೂಡುಗಳಿಗೆ ತ್ವರೆಮಾಡುವ ಪಾರಿವಾಳಗಳಂತೆ?೯ [9]ನಿರೀಕ್ಷಿಸುತ್ತಿಹರು ನನ್ನನು ದೂರದ ನಿವಾಸಿಗಳು ಮುಂದಾಗಿ ಬರುತಿಹವು ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಸರ್ವೇಶ್ವರನ ಶ್ರೀನಾಮ ನಿಧಿಯಾದ ಇಲ್ಲಿಗೆ; ನಿನ್ನ ಘನಪಡಿಸಿದ ಇಸ್ರಯೇಲಿನ ಪರಮಪಾವನನ ಸನ್ನಿಧಿಗೆ. ಹೊತ್ತು ತರುತಿಹರು ನಿನ್ನ ಮಕ್ಕಳನು ಜೊತೆಗೆ ಅವರ ಬೆಳ್ಳಿಬಂಗಾರಗಳನು.೧೦ [10]ಕಟ್ಟುವರು ವಿದೇಶಿಯರು ನಿನ್ನ ಪೌಳಿಗೋಡೆಗಳನು ಅರಸರು ಕೂಡ ಸಲ್ಲಿಸುವರು ನಿನಗೆ ಸೇವೆಯನು. ಶಿಕ್ಷಿಸಿದೆ ನಿನ್ನನ್ನು ಕೋಪದಿಂದ ಆದರೆ, ಕರುಣಿಸುವೆನು ಕೃಪೆಯಿಂದ.೧೧ [11]ತರುತ್ತಿಹರು ರಾಷ್ಟ್ರಗಳ ಆಸ್ತಿಯನ್ನು ನಿನ್ನಲ್ಲಿಗೆ ಬರುತಿಹರು ಅವುಗಳ ಅರಸರು ಮೆರವಣಿಗೆಯೊಂದಿಗೆ. ನಿನ್ನ ದ್ವಾರಗಳು ತೆರೆದಿರುವುವು ಹಗಲಿರುಳು ಮುಚ್ಚದೆ.೧೨ [12]ನಾಶವಾಗುವುವು ನಿನ್ನ ಸೇವೆಮಾಡಲೊಲ್ಲದ ರಾಜ್ಯಗಳು, ಜನಾಂಗಗಳು; ಹೌದು, ಸಂಪೂರ್ಣವಾಗಿ ಹಾಳಾಗುವುವು ಆ ಜನಾಂಗಗಳು.೧೩ [13]ಬರುವುದು ನಿನ್ನಲ್ಲಿಗೆ ಲೆಬನೋನಿನ ವೈಭವವು ಅದರ ತುರಾಯಿ, ಅಗಸೆ, ತಿಲಕ ಈ ಮರಗಳಾವುವು. ಅಲಂಕರಿಸುವುವು ನನ್ನ ಪವಿತ್ರಾಲಯವನು ಮಹಿಮೆಪಡಿಸುವೆನು ನನ್ನ ಪಾದಪೀಠದ ಮಂದಿರವನು.೧೪ [14]ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.೧೫ [15]ಪರಿತ್ಯಕ್ತಳೂ ದ್ವೇಷಿತಳೂ ಆದ ನಿರ್ಜನ ನಗರಿಯೇ, ನಿತ್ಯಘನತೆಯನು, ಶಾಶ್ವತ ಸಂತೋಷವನು ನೀಡುವೆ ನಿನಗೆ.೧೬ [16]ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.೧೭ [17]ಒದಗಿಸುವೆ ನಿನಗೆ ಮರವಿದ್ದಲ್ಲಿ ತಾಮ್ರವನು ಹಿತ್ತಾಳೆಗೆ ಬದಲಾಗಿ ಬಂಗಾರವನು ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನು ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನು ಮಾಡುವೆ ಶಾಂತಿಯನ್ನೇ ನಿನಗೆ ಅಧಿಪತಿಯನ್ನಾಗಿ ಸದ್ಧರ್ಮವನ್ನೇ ನಿನಗೆ ಅಧಿಕಾರಿಯನ್ನಾಗಿ.೧೮ [18]ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.೧೯ [19]ನಿನಗಿನ್ನು ಬೇಕಾಗಿಲ್ಲ ಸೂರ್ಯನ ಬೆಳಕು ಹಗಲೊಳು ನಿನಗೆಂದಿಗೂ ಬೇಕಾಗಿಲ್ಲ ಚಂದ್ರನ ಬೆಳಕು ಇರುಳೊಳು. ನಿನಗೆ ನಿತ್ಯಪ್ರಕಾಶ ಸರ್ವೇಶ್ವರನೆ, ನಿನ್ನ ಬೆಳಗುವ ತೇಜಸ್ಸು ನಿನ್ನ ದೇವನೆ.೨೦ [20]ನಿನ್ನ ಸೂರ್ಯನು ಇನ್ನು ತೊಲಗನು. ನಿನ್ನ ಚಂದ್ರನು ಬಿಟ್ಟು ತೊಲಗನು. ಸರ್ವೇಶ್ವರನೇ ನಿನಗೆ ನಿತ್ಯಜ್ಯೋತಿ ನಿನ್ನ ದುಃಖ ದಿನಗಳಿಗಿದೆ ಸಮಾಪ್ತಿ.೨೧ [21]ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.೨೨ [22]ದೊಡ್ಡ ಕುಲವಾಗಿಸುವೆನು ಚಿಕ್ಕವನಿಂದ ಬಲಿಷ್ಠ ರಾಷ್ಟ್ರವಾಗಿಸುವೆನು ದುರ್ಬಲನಿಂದ. ಸಾಧಿಸುವೆನು ಇದನು ಕ್ಲುಪ್ತಕಾಲದೊಳು ಸರ್ವೇಶ್ವರನಾದ ನಾನು, ಶೀಘ್ರದೊಳು.Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಶಾಯನ ೬೦ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/060.mp3 66 60