× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಶಾಯನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨೫೩೫೪೫೫೫೬೫೭೫೮೫೯೬೦೬೧೬೨೬೩೬೪೬೫೬೬1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫1 1 1 ಕನ್ನಡ ಬೈಬಲ್ (KNCL) 2016 ಯೆಶಾಯನ ೭ ಟಿಪ್ಪಣಿಗಳನ್ನು ಉಳಿಸಿ ೧ [1]ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮೆಲ್ಯನ ಮಗನೂ ಇಸ್ರಯೇಲಿನ ಅರಸನೂ ಆದ ಪೆಕಹ ಎಂಬವರು ಜೆರುಸಲೇಮಿನ ಮೇಲೆ ದಂಡೆತ್ತಿಬಂದರು. ಆದರೆ ಅದನ್ನು ಜಯಿಸಲು ಅವರಿಂದಾಗಲಿಲ್ಲ.೨ [2]ಸಿರಿಯರ ಸೈನಿಕರು ಈಗಾಗಲೇ ಇಸ್ರಯೇಲಿನ ಗಡಿಯೊಳಗಿದ್ದಾರೆ ಎಂಬ ಸುದ್ದಿ ಜುದೇಯದ ಅರಸನಿಗೆ ಮುಟ್ಟಿದ್ದೇ ತಡ, ಅವನೂ ಅವನ ಪ್ರಜೆಗಳೆಲ್ಲರೂ ಹೆದರಿದರು. ಬಿರುಗಾಳಿಗೆ ಸಿಕ್ಕಿದ ಗಿಡಮರಗಳಂತೆ ನಡುಗಿದರು.೩ [3]ಆಗ ಸರ್ವೇಶ್ವರಸ್ವಾಮಿ ಯೆಶಾಯನಿಗೆ ಹೀಗೆಂದರು: “ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಆಹಾಜಾರಸನನ್ನು ಕಾಣಲುಹೋಗು. ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದಲ್ಲಿ ಕೆರೆಯ ಕಾಲುವೆಯ ತುದಿಯ ಬಳಿ ಆತ ನಿನಗೆ ಸಿಕ್ಕುವನು. ಅವನಿಗೆ ಈ ಪ್ರಕಾರ ತಿಳಿಸು:೪ [4]ಜೋಕೆ, ಸುಮ್ಮನಿರು, ಹೆದರಬೇಡ. ರೆಚೀನ, ಸಿರಿಯ ಮತ್ತು ಪೆಕಹ - ಇವರೆಲ್ಲರ ಕೋಪ ಎಷ್ಟು ಉಗ್ರವಾಗಿದ್ದರೂ ಅದು ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ಸಮಾನ. ಆದ್ದರಿಂದ ಎದೆಗುಂದಬೇಡ.೫ [5]ಸಿರಿಯ, ಇಸ್ರಯೇಲ್, ಅರಸನಾದ ಪೆಕಹನೊಂದಿಗೆ ಸೇರಿ ಒಳಸಂಚು ಮಾಡಿದ್ದಾರೆ.೬ [6]‘ಜುದೇಯ ನಾಡಿಗೆ ಮುತ್ತಿಗೆ ಹಾಕಿ, ಅದನ್ನು ಬೆದರಿಸಿ ಆಕ್ರಮಿಸಿಕೊಳ್ಳೋಣ; ತೆಬೇಲನ ಮಗನಿಗೆ ಅಲ್ಲಿಯೇ ಪಟ್ಟಕಟ್ಟೋಣ’ ಎಂದು ದುರಾಲೋಚನೆ ಮಾಡಿಕೊಂಡಿದ್ದಾರೆ.೭ [7]“ಆದರೆ ಸ್ವಾಮಿ ಸರ್ವೇಶ್ವರ ಆದ ನಾನು ನಿನಗೆ ಹೇಳುತ್ತೇನೆ: ಈ ಯೋಜನೆ ಕೈಗೂಡುವುದಿಲ್ಲ. ಈ ಒಳಸಂಚು ನೆರವೇರುವುದಿಲ್ಲ.೮ [8]ಕಾರಣ, ರಾಜಧಾನಿಯಾದ ದಮಸ್ಕಸ್ಸಿಗಿಂತ ಸಿರಿಯ ಹೆಚ್ಚಲ್ಲ, ರಾಜನಾದ ರೆಚೀನನಿಗಿಂತ ದಮಸ್ಕಸ್ ಹೆಚ್ಚಲ್ಲ. ಇಸ್ರಯೇಲಿನ ಬಗ್ಗೆ ಹೇಳುವುದಾದರೆ, ಅದು ಅರವತ್ತೈದು ವರ್ಷದೊಳಗೆ ನುಚ್ಚುನೂರಾಗುವುದು, ಅಖಂಡ ರಾಷ್ಟ್ರವಾಗಿ ಉಳಿಯದು.೯ [9]ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”೧೦ [10]ಪುನಃ ಸರ್ವೇಶ್ವರಸ್ವಾಮಿ ಆಹಾಜನಿಗೆ ಹೇಳಿದ್ದೇನೆಂದರೆ:೧೧ [11]“ನಿನ್ನ ದೇವರಾದ ಸರ್ವೇಶ್ವರನಿಂದ ಒಂದು ಗುರುತನ್ನು ಕೇಳಿಕೊ. ಅದು ಪಾತಾಳದಷ್ಟು ಆಳದಲ್ಲೇ ಇರಲಿ, ಆಕಾಶದಷ್ಟು ಎತ್ತರದಲ್ಲೇ ಇರಲಿ, ಕೇಳು.” ಎಂದರು.೧೨ [12]ಅದಕ್ಕೆ ಆಹಾಜನು, “ಇಲ್ಲ, ನಾನು ಗುರುತನ್ನು ಕೇಳುವುದಿಲ್ಲ, ಸರ್ವೇಶ್ವರನನ್ನು ಪರೀಕ್ಷಿಸುವುದಿಲ್ಲ” ಎಂದನು.೧೩ [13]ಆಗ ಯೆಶಾಯನು: “ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ?೧೪ [14]ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.೧೫ [15]ಆತನು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನುತುಪ್ಪವನ್ನೂ ತಿನ್ನುವನು.೧೬ [16]ಆ ಮಗು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವುದರೊಳಗೆ, ನೀನು ಯಾವ ಇಬ್ಬರು ಅರಸರುಗಳಿಗೆ ಹೆದರಿ ನಡುಗುತ್ತಿರುವಿಯೋ ಆ ಅರಸರುಗಳ ದೇಶ ನಿರ್ಜನವಾಗುವುದು.೧೭ [17]ಸರ್ವೇಶ್ವರ ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಭೀಕರ ದಿನಗಳನ್ನು ಬರಮಾಡುವರು. ಇಸ್ರಯೇಲ್ ರಾಜ್ಯ ಜುದೇಯ ನಾಡಿನಿಂದ ಬೇರ್ಪಟ್ಟ ದಿನ ಮೊದಲುಗೊಂಡು ಇದುವರೆಗೂ ಅಂಥ ದಿನಗಳು ಬಂದಿರಲಿಲ್ಲ. ಅಸ್ಸೀರಿಯದ ಅರಸನೇ ಆ ದುರ್ದಿನಗಳ ಪ್ರತೀಕ.೧೮ [18]ಆ ದಿನ ಬಂದಾಗ ಈಜಿಪ್ಟಿನಿಂದ ನೊಣಗಳನ್ನೋ ಎಂಬಂತೆ, ಅಸ್ಸೀರಿಯ ನಾಡಿನಿಂದ ದುಂಬಿಗಳನ್ನೋ ಎಂಬಂತೆ, ಸ್ವಾಮಿ ಸಿಳ್ಳುಹಾಕಿ ಶತ್ರುಗಳನ್ನು ಬರಮಾಡುವರು.೧೯ [19]ಅವರೆಲ್ಲ ಬಂದು ಕಡಿದಾದ ಕಣಿವೆಗಳಲ್ಲಿಯೂ ಬಂಡೆಗಳ ಸಂದುಗೊಂದುಗಳಲ್ಲಿಯೂ ಮುಳ್ಳುಪೊದೆಗಳಲ್ಲಿಯೂ ಗೋಮಾಳಗಳಲ್ಲಿಯೂ ಹುಳುಹುಪ್ಪಟೆಗಳಂತೆ ಮುತ್ತಿಕೊಳ್ಳುವರು.೨೦ [20]ಆ ದಿನದಂದು ಯೂಫ್ರೆಟಿಸ್ ನದಿಯಾಚೆ ಇರುವ ಅಸ್ಸೀರಿಯದ ರಾಜನೆಂಬ ಹಜಾಮನ ಕತ್ತಿಯಿಂದ ಸರ್ವೇಶ್ವರ ನಿನ್ನ ತಲೆಯನ್ನೂ ಗಡ್ಡವನ್ನೂ ಕಾಲುಗೂದಲನ್ನೂ ಬೋಳಿಸುವರು.೨೧ [21]ಅಂದು ಒಬ್ಬ ರೈತನು ಒಂದು ಕಡಸನ್ನು ಎರಡು ಮೇಕೆಗಳನ್ನು ಮಾತ್ರ ಉಳಿಸಿಕೊಳ್ಳಬಲ್ಲವನಾದರೂ ಬಾಯಿ ಮೊಸರಾಗುವಷ್ಟು ಅಧಿಕವಾದ ಹಾಲನ್ನು ಕರೆಯುವನು.೨೨ [22]ಹೌದು, ನಾಡಿನಲ್ಲಿ ಅಳಿದುಳಿದವರೆಲ್ಲರು ಹಾಲು ಜೇನನ್ನೇ ಉಣ್ಣುವರು.೨೩ [23]ಆ ದಿನದಂದು ಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವ ಸಹಸ್ರ ದ್ರಾಕ್ಷಿಬಳ್ಳಿಗಳು ಬೆಳೆಯುವಂಥ ಪ್ರತಿಯೊಂದು ಪ್ರದೇಶದಲ್ಲೂ ಮುಳ್ಳುಪೊದೆಗಳು ಬೆಳೆದುಕೊಳ್ಳುವುವು.೨೪ [24]ಅಲ್ಲಿ ಜನರು ಬಿಲ್ಲುಬಾಣಗಳನ್ನು ಹಿಡಿದು ಬೇಟೆಯಾಡುವರು. ನಾಡೆಲ್ಲ ಮುಳ್ಳುಪೊದೆಯಾಗಿ ಇರುವುದು.೨೫ [25]ಸಾಗುವಳಿಯಾಗುತ್ತಿದ್ದ ಗುಡ್ಡಗಳಲ್ಲಿ ಯಾರೂ ಬರಲು ಅಂಜುವಷ್ಟು ಮುಳ್ಳುಕೊಂಪೆಗಳು ತುಂಬಿರುವುವು; ಅವು ದನಕರುಗಳು ಮೇದು ಕುರಿಮೇಕೆಗಳು ತುಳಿದಾಡುವ ಮಾಳಗಳಾಗುವುವು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಶಾಯನ ೭ 00:00:00 00:00:00 0.5x 2.0x https://beblia.bible:81/BibleAudio/kannadakncl/isaiah/007.mp3 66 7