× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆರೆಮೀಯನ ಗ್ರಂಥ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೧೧ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ಸ್ವಾಮಿ ಯೆರೆಮೀಯನಾದ ನನಗೆ ದಯಪಾಲಿಸಿದ ವಾಕ್ಯ ಇದು:೨ [2]“ಒಡಂಬಡಿಕೆಯ ಈ ವಚನಗಳನ್ನು ಕೇಳಿ ಯೆಹೂದ್ಯರಿಗೂ ಜೆರುಸಲೇಮಿನ ನಿವಾಸಿಗಳಿಗೂ ಸಾರು.೩ [3]ನೀನು ಅವರಿಗೆ ಹೇಳಬೇಕಾದುದು - ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ ಅವರಿಗೆ ‘ನೀವು ನನ್ನ ಮಾತನ್ನು ಕೇಳಿ ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.೪ [4]ಹಾಲೂ ಜೇನೂ ಹರಿಯುವ ನಾಡನ್ನು, ಅಂದರೆ ಇಂದು ನೀವಿರುವ ನಾಡನ್ನು, ಕೊಡುವುದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಯೇಲಿನ ದೇವರಾದ ಸರ್ವೇಶ್ವರ ಹೇಳುವ ಮಾತು.” ಆಗ ನಾನು, “ತಮ್ಮ ಅಪ್ಪಣೆಯಂತಾಗಲಿ, ಸರ್ವೇಶ್ವರಾ,” ಎಂದು ಉತ್ತರಕೊಟ್ಟೆ.೫ [5]ಸರ್ವೇಶ್ವರ ನನಗೆ: “ಜುದೇಯದ ನಗರಗಳಲ್ಲೂ ಜೆರುಸಲೇಮಿನ ಹಾದಿಬೀದಿಗಳಲ್ಲೂ ಈ ಸಮಾಚಾರವನ್ನು ಹರಡು - ಈ ಒಡಂಬಡಿಕೆಯ ವಚನಗಳನ್ನು ಕೇಳಿ ಅದರಂತೆ ನಡೆದುಕೊಳ್ಳಿರಿ.೬ [6]ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ ನನ್ನ ಮಾತನ್ನು ಕೇಳಿರೆಂದು ತಡಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದಿದ್ದೇನೆ.೭ [7]ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನು ತನ್ನ ದುಷ್ಟ ಹೃದಯದ ನಿಮಿತ್ತ ಹಟಮಾರಿಯಂತೆ ನಡೆದುಕೊಂಡನು. ಆದಕಾರಣ, ಕೈಗೊಳ್ಳಬೇಕೆಂದು ನಾನು ಆಜ್ಞಾಪಿಸಿದ್ದರೂ ಅವರು ಕೈಗೊಳ್ಳದೆಹೋದ ಆ ಒಡಂಬಡಿಕೆಯಲ್ಲೆ ಸೂಚಿಸಲಾಗಿರುವ ಶಾಪಗಳನ್ನೆಲ್ಲ ಅವರ ಮೇಲೆ ಬರಮಾಡಿದೆ.”೮ [8]ಮತ್ತೆ ಸರ್ವೇಶ್ವರ ನನಗೆ: “ಜುದೇಯದ ಹಾಗು ಜೆರುಸಲೇಮಿನ ನಿವಾಸಿಗಳಲ್ಲಿ ಒಳಸಂಚು ಕಂಡುಬಂದಿದೆ.೯ [9]ನನ್ನ ಮಾತನ್ನು ಕೇಳದೆಹೋದ ತಮ್ಮ ಮೂಲಪಿತೃಗಳ ದುಷ್ಕೃತ್ಯಗಳ ಕಡೆ ಈ ಜನರು ತಿರುಗಿಕೊಂಡಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸುತ್ತಿದ್ದಾರೆ. ಅವುಗಳನ್ನು ಪೂಜಿಸುತ್ತಿದ್ದಾರೆ. ನಾನು ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ಮೀರಿದ್ದಾರೆ.೧೦ [10]ಆದಕಾರಣ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ: ಇಗೋ, ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ಬರಮಾಡುವೆನು. ಇವರು ನನಗೆ ಮೊರೆಯಿಟ್ಟರೂ ನಾನೂ ಕಿವಿಗೊಡೆನು.೧೧ [11]ಆಗ ಜುದೇಯದ ನಗರದವರೂ ಜೆರುಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಧೂಪಾರತಿಯೆತ್ತಿದರೋ ಅವುಗಳನ್ನು ಮರೆಹೊಕ್ಕು ಕೂಗಿಕೊಳ್ಳುವರು. ಆದರೆ ಅಂಥ ಕೇಡಿನ ಕಾಲದಲ್ಲಿ ಆ ದೇವತೆಗಳಿಂದ ಅವರಿಗೆ ಯಾವ ರಕ್ಷಣೆಯೂ ದೊರಕದು.೧೨ [12]ಎಲೈ ಯೆಹೂದ ಜನರೇ, ನಿಮಗೆ ಎಷ್ಟು ನಗರಗಳಿವೆಯೋ ಅಷ್ಟೂ ದೇವರುಗಳಿದ್ದಾರೆ. ಜೆರುಸಲೇಮಿನಲ್ಲಿ ಹಾದಿಬೀದಿಗಳು ಎಷ್ಟಿವೆಯೋ ಅಷ್ಟೂ ಬಲಿಪೀಠಗಳಿವೆ, ಆ ತುಚ್ಛ ದೇವತೆ ಬಾಳನಿಗೆ ಧೂಪಾರತಿಯೆತ್ತಲು.೧೩ [13]ಆದುದರಿಂದ ಯೆರೆಮೀಯನೇ, ಈ ಜನರ ಪರವಾಗಿ ಬೇಡಿಕೊಳ್ಳಬೇಡ. ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂಬೇಡ. ಅವರಿಗೆ ಕೇಡು ಬಂದಾಗ ನನ್ನನ್ನು ಗೋಗರೆದರೂ ನಾನು ಕೇಳುವುದಿಲ್ಲ.೧೪ [14]“ನನಗೆ ಆಪ್ತವಾದ ಜನತೆಯು, ನನಗೆ ಅಸಹ್ಯಕಾರ್ಯಗಳನ್ನು ಮಾಡಿದ್ದೇಕೆ? ನನ್ನ ಆಲಯದಲ್ಲಿ ಅದಕ್ಕಿರುವ ಹಕ್ಕಾದರೂ ಏನು? ವ್ರತಗಳ ಮೂಲಕ, ಪಶುಬಲಿ ಮಾಂಸದ ಮೂಲಕ ಅದು ಬರಲಿರುವ ದಂಡನೆಯನ್ನು ತಡೆಗಟ್ಟಬಲ್ಲದೆ?೧೫ [15]ಸರ್ವೇಶ್ವರನಾದ ನಾನು ಅದಕ್ಕೆ ‘ಸುಂದರ ಫಲದಿಂದ ಕೂಡಿದ ಚೆಲುವಾದ ಹಚ್ಚನೆಯ ಓಲಿವ್ ಮರ’ ಎಂದು ಹೆಸರಿಟ್ಟೆ. ಆದರೆ ಅದೇ ಮರಕ್ಕೆ ಬೆಂಕಿಯಿಟ್ಟು ಧಗಧಗನೆ ಉರಿಯುವಂತೆ ಮಾಡುವೆನು. ಅದರ ರೆಂಬೆಗಳು ಸುಟ್ಟುಹೋಗುವುವು.೧೬ [16]“ಸರ್ವಶಕ್ತ ಸರ್ವೇಶ್ವರನಾದ ನಾನೇ ಈ ಇಸ್ರಯೇಲನ್ನೂ ಜುದೇಯವನ್ನೂ ನೆಟ್ಟಿ ಬೆಳೆಸಿದೆ. ಆದರೆ ಈಗ ‘ನಿನಗೆ ಕೇಡು,’ ಎಂದು ಶಪಿಸುತ್ತಿದ್ದೇನೆ. ಏಕೆಂದರೆ ಬಾಳನಿಗೆ ಧೂಪಾರತಿಯೆತ್ತಿ, ನನ್ನನ್ನು ಕೆಣಕಿ, ತಮಗೇ ಕೆಡುಕನ್ನು ಮಾಡಿಕೊಂಡಿದ್ದಾರೆ.೧೭ [17]ಸರ್ವೇಶ್ವರ ಸ್ವಾಮಿ ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು.೧೮ [18]ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.೧೯ [19]ಆಗ ನಾನು, “ಸೇನಾಧೀಶ್ವರರಾದ ಸರ್ವೇಶ್ವರಾ, ನೀವು ಹೃನ್ಮನಗಳನ್ನು ಪರೀಕ್ಷಿಸಿ ನ್ಯಾಯವಾದ ತೀರ್ಪನ್ನು ನೀಡುವವರು. ನೀವು ಅವರಿಗೆ ಮಾಡುವ ಪ್ರತೀಕಾರವನ್ನು ನಾನು ಕಾಣುವೆನು. ನನ್ನ ವ್ಯಾಜ್ಯವನ್ನು ನಿಮ್ಮ ಕೈಗೊಪ್ಪಿಸಿದ್ದೇನೆ,” ಎಂದೆನು.೨೦ [20]ಹೀಗಿರಲು, “ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಬೇಡ, ಮಾಡಿದರೆ ನಮ್ಮ ಕೈಯಿಂದಲೆ ನೀನು ಸಾಯುವೆ,” ಎಂದು ಅನಾತೋತಿನವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿದ್ದರು.೨೧ [21]ಅವರ ವಿಷಯವಾಗಿ ಸರ್ವೇಶ್ವರ, “ಇಗೋ ಅವರನ್ನು ನಾನು ದಂಡಿಸಿಯೇ ತೀರುವೆನು. ಅವರ ಯುವಕರು ಕತ್ತಿಗೆ ತುತ್ತಾಗುವರು. ಅವರ ಗಂಡುಹೆಣ್ಣು ಮಕ್ಕಳು ಕ್ಷಾಮದಿಂದ ಸಾಯುವರು.೨೨ [22]ದಂಡನೆಯ ಕಾಲವನ್ನು ಗೊತ್ತುಮಾಡಿರುವೆನು. ಅದು ಬಂದಾಗ ಅವರಲ್ಲಿ ಯಾರೂ ಉಳಿಯರು. ಇದು ನನ್ನ ತೀರ್ಮಾನ,” ಎಂದರು.Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೧೧ 00:00:00 00:00:00 0.5x 2.0x https://beblia.bible:81/BibleAudio/kannadakncl/jeremiah/011.mp3 52 11