× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆರೆಮೀಯನ ಗ್ರಂಥ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨1 1 1 ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೨೭ ಟಿಪ್ಪಣಿಗಳನ್ನು ಉಳಿಸಿ ೧ [1]ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಸರ್ವೇಶ್ವರನಿಂದ ಯೆರೆಮೀಯನಿಗೆ ಈ ವಾಣಿಯಾಯಿತು:೨ [2]“ಇದು ಸರ್ವೇಶ್ವರನ ನುಡಿ - ನೊಗವನ್ನೂ ಕಣ್ಣಿಗಳನ್ನೂ ಮಾಡಿ ನಿನ್ನ ಹೆಗಲಿಗೆ ಹಾಕಿಕೊ.೩ [3]ಜುದೇಯದ ಅರಸ ಚಿದ್ಕೀಯನನ್ನು ನೋಡಲು ಜೆರುಸಲೇಮಿಗೆ ಬಂದಿರುವ ರಾಯಭಾರಿಗಳ ಮೂಲಕ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯ ರಾಜ, ಟೈರಿನ ರಾಜ, ಸಿದೋನಿನ ರಾಜ ಇವರುಗಳಿಗೆ ಒಂದು ಸಮಾಚಾರವನ್ನು ಕಳಿಸು.೪ [4]ಅವರು ತಮ್ಮ ತಮ್ಮ ರಾಜರುಗಳಿಗೆ ಅದನ್ನು ತಿಳಿಸುವಂತೆ ಆಜ್ಞಾಪಿಸು. ಆ ಸಮಾಚಾರವೇನೆಂದರೆ - ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತುಗಳಿವು; ನಿಮ್ಮ ರಾಜರುಗಳು ಅರಿಯಬೇಕಾದ ವಿಷಯವಿದು:೫ [5]ನನ್ನ ಮಹಾಶಕ್ತಿಯಿಂದಲೂ ನೀಡುಗೈಯಿಂದಲೂ ಲೋಕವನ್ನೂ ಭೂಮಿಯನ್ನೂ ಅದರ ಮಾನವರನ್ನು ಮತ್ತು ಪ್ರಾಣಿಗಳನ್ನೂ ಸೃಷ್ಟಿಸಿದವನೂ ನಾನೇ. ಈ ನನ್ನ ಸೃಷ್ಟಿಯನ್ನು ನನಗೆ ಸರಿ ತೋಚಿದವನಿಗೆ ಕೊಡಬಲ್ಲೆ.೬ [6]ಈಗ ಈ ನಾಡುಗಳನ್ನೆಲ್ಲ ಬಾಬಿಲೋನಿಯದ ಅರಸ ಹಾಗೂ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.೭ [7]ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”೮ [8]“ಆದರೆ ಯಾವುದಾದರು ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲುಕೊಡಲು ಒಪ್ಪದೆಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೆ ಅದನ್ನು ನಿರ್ಮೂಲಮಾಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.೯ [9]“ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.೧೦ [10]ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು; ನೀವು ದೇಶಭ್ರಷ್ಟರಾಗಿ ನಾಶವಾಗುವಿರಿ.೧೧ [11]ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೆ ನೆಲೆಗೊಳಿಸುವೆನು; ಅವರು ಅಲ್ಲೆ ಉತ್ತು, ಬಿತ್ತು ವಾಸಮಾಡುವರು. ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.”೧೨ [12]ಜುದೇಯದ ಅರಸನಾದ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ.೧೩ [13]ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗಕ್ಷಾಮವ್ಯಾಧಿಗಳಿಂದ ಸಾಯಬೇಕಾಗುವುದೆಂದು ಸರ್ವೇಶ್ವರನೇ ನುಡಿದಿದ್ದಾರೆ. ಅಂಥ ಗತಿ ನಿಮಗೂ ನಿಮ್ಮ ಪ್ರಜೆಗೂ ಏಕೆ ಬರಬೇಕು?೧೪ [14]‘ನೀವು ಬಾಬಿಲೋನಿಯದ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.೧೫ [15]ಅವರನ್ನು ನಾನು ಕಳಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಸರ್ವೇಶ್ವರನೇ ನುಡಿದಿದ್ದಾರೆ.”೧೬ [16]ಬಳಿಕ ನಾನು ಯಾಜಕರಿಗೂ ಈ ಜನರೆಲ್ಲರಿಗೂ ಹೀಗೆಂದು ಸಾರಿದೆ: “ಇಗೋ, ಕೇಳಿ ಸರ್ವೇಶ್ವರನ ನುಡಿ: ‘ದೇವಾಲಯದ ಉಪಕರಣಗಳನ್ನು ಬೇಗನೆ ಬಾಬಿಲೋನಿನಿಂದ ಹಿಂದಕ್ಕೆ ತರಲಾಗುವುದು’ ಎಂಬುದಾಗಿ ನಿಮಗೆ ಪ್ರವಾದಿಸುವವರ ಮಾತುಗಳನ್ನು ಕೇಳಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.೧೭ [17]ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು?೧೮ [18]ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಸರ್ವೇಶ್ವರನ ವಾಕ್ಯ ಅವರಲ್ಲಿ ನೆಲೆಸಿದ್ದರೆ, ದೇವಾಲಯದಲ್ಲೂ ಜುದೇಯದ ಅರಸನ ಮನೆಯಲ್ಲೂ ಜೆರುಸಲೇಮಿನಲ್ಲೂ ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸರ್ವಶಕ್ತ ಸರ್ವೇಶ್ವರನಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.”೧೯ [19](ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಯೆಕೊನ್ಯನನ್ನು ಮತ್ತು ಜುದೇಯದ ಹಾಗು ಜೆರುಸಲೇಮಿನ ಎಲ್ಲ ಮಂತ್ರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಸಾಮಾನುಗಳನ್ನು, ಅಂದರೆ ಕಂಬಗಳು, ಕಂಚಿನ ಕಡಲು, ಪೀಠಗಳು, ನಗರದಲ್ಲಿ ಉಳಿದಿರುವ ಮತ್ತಿತರ ಉಪಕರಣಗಳು ಇವನ್ನು ತೆಗೆದುಕೊಂಡು ಹೋಗಲಿಲ್ಲ.)೨೦ [20]***೨೧ [21]ದೇವಾಲಯದಲ್ಲೂ ಜುದೇಯದ ಅರಸನ ಮನೆಯಲ್ಲೂ ಜೆರುಸಲೇಮಿನಲ್ಲೂ ಉಳಿದಿರುವ ಈ ಉಪಕರಣಗಳ ವಿಷಯವಾಗಿ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ:೨೨ [22]“ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವ ತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೨೭ 00:00:00 00:00:00 0.5x 2.0x https://beblia.bible:81/BibleAudio/kannadakncl/jeremiah/027.mp3 52 27