× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆರೆಮೀಯನ ಗ್ರಂಥ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೩೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯1 1 1 ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೩೫ ಟಿಪ್ಪಣಿಗಳನ್ನು ಉಳಿಸಿ ೧ [1]ಯೋಷೀಯನ ಮಗನಾದ ಜುದೇಯದ ಅರಸ ಯೆಹೋಯಾಕೀಮನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ಯೆರೆಮೀಯನಾದ ನನಗೆ ದಯಪಾಲಿಸಿದ ವಾಕ್ಯ ಇದು:೨ [2]“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ, ಅವರ ಸಂಗಡ ಮಾತಾಡು. ಅವರನ್ನು ಸರ್ವೇಶ್ವರನಾಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು.”೩ [3]ಅಂತೆಯೆ ನಾನು (ಮತ್ತೊಬ್ಬ) ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ ಸರ್ವೇಶ್ವರನಾಲಯಕ್ಕೆ ಕರೆದೊಯ್ದೆನು.೪ [4]ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಪದಾಧಿಕಾರಿಗಳ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆಯಿರುವ ಕೋಣೆಯೊಳಕ್ಕೆ ಅವರೆಲ್ಲರನ್ನು ಬರಮಾಡಿದೆನು.೫ [5]ರೇಕಾಬನ ಆ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು, ‘ದ್ರಾಕ್ಷಾರಸವನ್ನು ಕುಡಿಯಿರಿ’ ಎಂದು ಹೇಳಿದೆನು.೬ [6]ಅದಕ್ಕೆ ಅವರು, “ನಾವು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ, ‘ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸವನ್ನು ಕುಡಿಯಲೇಬಾರದು.೭ [7]ಮನೆ ಕಟ್ಟಬಾರದು, ಬೀಜಬಿತ್ತಬಾರದು, ತೋಟಮಾಡಬಾರದು, ಕೊಂಡು ಸೊತ್ತಾಗಿಸಿಕೊಳ್ಳಬಾರದು. ಜೀವಮಾನವೆಲ್ಲ ಗುಡಾರಗಳಲ್ಲೇ ವಾಸಿಸಬೇಕು. ಇದರಿಂದ ನೀವು ತಂಗುವ ನಾಡಿನಲ್ಲಿ ದೀರ್ಘಕಾಲ ಉಳಿಯುವಿರಿ,’ ಎಂದು ಆಜ್ಞಾಪಿಸಿದ್ದಾನೆ.೮ [8]ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು ಎಲ್ಲ ವಿಷಯದಲ್ಲೂ ಕೈಗೊಂಡು ಬರುತ್ತಿದ್ದೇವೆ. ನಾವಾಗಲಿ, ನಮ್ಮ ಮಡದಿ ಮಕ್ಕಳಾಗಲಿ, ಜೀವಮಾನದಲ್ಲೆಲ್ಲಾ ‘ದ್ರಾಕ್ಷಾರಸ ಕುಡಿಯುವುದಿಲ್ಲ.೯ [9]ವಾಸಕ್ಕೆ ನಾವು ಮನೆಕಟ್ಟುವುದಿಲ್ಲ. ನಮಗೆ ತೋಟವಿಲ್ಲ, ಹೊಲವಿಲ್ಲ, ಬಿತ್ತನೆ ಬೀಜವಿಲ್ಲ.೧೦ [10]ಗುಡಾರಗಳಲ್ಲಿ ವಾಸಿಸುತ್ತಾ ನಮ್ಮ ಪೂರ್ವಜ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲ ಶಿರಸಾವಹಿಸಿ ನಡೆಸಿಕೊಂಡು ಬರುತ್ತಿದ್ದೇವೆ.೧೧ [11]ಆದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಈ ನಾಡಿಗೆ ಮುತ್ತಿಗೆ ಹಾಕಿದಾಗ, ಬಾಬಿಲೋನಿಯ ಮತ್ತು ಸಿರಿಯದವರ ಸೈನ್ಯಗಳಿಂದ ತಪ್ಪಿಸಿಕೊಳ್ಳಲು, ‘ಜೆರುಸಲೇಮಿಗೆ ಹೋಗೋಣ ಬನ್ನಿ’ ಎಂದುಕೊಂಡು ಬಂದೆವು. ಈ ಕಾರಣದಿಂದಲೇ ಇಲ್ಲಿ ವಾಸಿಸುತ್ತಿದ್ದೇವೆ,” ಎಂದು ಹೇಳಿದರು.೧೨ [12]ಆಗ ಸರ್ವೇಶ್ವರ ಯೆರೆಮೀಯನಿಗೆ:೧೩ [13]“ಇಸ್ರಯೇಲರ ದೇವರೂ ಸೇನಾಧೀಶ್ವರನೂ ಸರ್ವೇಶ್ವರನೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ ಜೆರುಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೆ?’ ಎನ್ನುತ್ತಾರೆ ಸರ್ವೇಶ್ವರ.೧೪ [14]‘ರೇಕಾಬನ ಮಗ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇ ಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.೧೫ [15]ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.೧೬ [16]ರೇಕಾಬನ ಮಗ ಯೋನಾದಾಬನ ಸಂತಾನದವರು ತಮ್ಮ ಪೂರ್ವಜರು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸಿದರು. ಆದರೆ ಈ ಜನರು ನನ್ನ ಮಾತನ್ನು ಕೇಳದೆಹೋದರು.೧೭ [17]ಆದ್ದರಿಂದ ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ಯೆಹೂದ್ಯರಿಗೂ ಜೆರುಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ’.”೧೮ [18]ಯೆರೆಮೀಯನು ರೇಕಾಬ್ಯರಿಗೆ, “ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: ‘ನೀವು ನಿಮ್ಮ ಪೂರ್ವಜ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಎಲ್ಲ ವಿಧಿಗಳನ್ನು ಅನುಸರಿಸಿ, ಅವನು ಆಜ್ಞಾಪಿಸಿದ್ದನ್ನೆಲ್ಲ ನೆರವೇರಿಸಿದ ಕಾರಣ೧೯ [19]ರೇಕಾಬನ ಮಗ ಯೋನಾದಾಬನ ಸಂತಾನದವರಲ್ಲಿ ನನ್ನ ಸಮ್ಮುಖ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು’ ಎಂದನು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೩೫ 00:00:00 00:00:00 0.5x 2.0x https://beblia.bible:81/BibleAudio/kannadakncl/jeremiah/035.mp3 52 35