× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆರೆಮೀಯನ ಗ್ರಂಥ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೫ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮೪೯೫೦೫೧೫೨1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧1 1 1 ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೫ ಟಿಪ್ಪಣಿಗಳನ್ನು ಉಳಿಸಿ ೧ [1]ಜೆರುಸಲೇಮಿನ ಜನರೇ, ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನೋಡಿ ಅಲ್ಲಿನ ಚೌಕಗಳಲ್ಲಿ ಹುಡುಕಾಡಿ ನೋಡಿ. ನೀತಿಯನ್ನು ಕೈಗೊಂಡು ಸತ್ಯವನ್ನರಸುವವನು ಒಬ್ಬನಾದರೂ ಇದ್ದಾನೆಯೇ? ಅಂಥ ಸತ್ಪುರುಷ ಸಿಕ್ಕುತ್ತಾನೆಯೆ ಎಂಬುದನ್ನು ನೀವೇ ನಿಶ್ಚಯಿಸಿರಿ; ಸಿಕ್ಕಿದ್ದೇ ಆದರೆ ಸರ್ವೇಶ್ವರ ಸ್ವಾಮಿ ಆ ನಗರವನ್ನು ಕ್ಷಮಿಸುವರು.೨ [2]ನೀವು ‘ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳೇ ಸುಳ್ಳು ಎನ್ನುತ್ತಾರೆ ಸರ್ವೇಶ್ವರ.೩ [3]ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.೪ [4]ಹೀಗಿರಲು ನಾನು, “ಈ ಜನರು ಬಡವರು, ಮೂಢರು, ಸರ್ವೇಶ್ವರನ ಮಾರ್ಗವನ್ನೂ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು.೫ [5]ಆದುದರಿಂದ ಗಣ್ಯವ್ಯಕ್ತಿಗಳ ಬಳಿಗೆ ಹೋಗಿ ಮಾತಾಡುವೆನು ಅವರು ಸರ್ವೇಶ್ವರನ ಮಾರ್ಗ ಹಾಗೂ ಅವರ ದೇವರ ನ್ಯಾಯವಿಧಿಗಳನ್ನು ಬಲ್ಲವರು,” ಎಂದುಕೊಂಡೆನು. ಆದರೆ ಆ ವ್ಯಕ್ತಿಗಳು ಕೂಡ ನೊಗವನ್ನು ಮುರಿದವರು, ಕಣ್ಣಿಗಳನ್ನು ಕಿತ್ತುಬಿಟ್ಟವರು.೬ [6]ಆದಕಾರಣ ಅಡವಿಯ ಸಿಂಹ ಅವರನ್ನು ಕೊಲ್ಲುವುದು ಕಾಡಿನ ತೋಳ ಕೊಳ್ಳೆಹೊಡೆಯುವುದು ಚಿರತೆ ಅವರ ಪಟ್ಟಣಗಳಿಗೆ ಹೊಂಚುಹಾಕುವುದು ಅಲ್ಲಿಂದ ಹೊರಬರುವ ಪ್ರತಿಯೊಬ್ಬನನ್ನು ಸೀಳುವುದು. ಅವರ ಅಪರಾಧಗಳೋ ಬಹಳ, ಅವರ ದ್ರೋಹಗಳೋ ಅಪಾರ!೭ [7]ಸರ್ವೇಶ್ವರ ಸ್ವಾಮಿ ಹೀಗೆಂದು ಪ್ರಶ್ನಿಸುತ್ತಾರೆ; “ಎಲೈ ಜೆರುಸಲೇಮ್, ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ತೊರೆದುಬಿಟ್ಟಿದ್ದಾರೆ; ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆತುಂಬ ಊಟಕೊಟ್ಟೆ; ಅವರೋ ವ್ಯಭಿಚಾರ ಮಾಡಿದ್ದಾರೆ, ವೇಶ್ಯೆಯರ ಮನೆಗಳಲ್ಲಿ ಗುಂಪು ಸೇರಿದ್ದಾರೆ!೮ [8]ಅತ್ತಿತ್ತ ಓಡಾಡುವ ಕೊಬ್ಬಿದ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನೂ ಕೆನೆಯುತ್ತಾನೆ ತನ್ನ ನೆರೆಯವನ ಹೆಂಡತಿಯನ್ನು ನೋಡಿ!೯ [9]ಇವುಗಳ ನಿಮಿತ್ತ ನಾನು ದಂಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪವನ್ನು ತೀರಿಸದಿರುವೆನೋ?೧೦ [10]ಆಕ್ರಮಣಕಾರರಿಗೆ ಕರೆ; ಸಿಯೋನೆಂಬ ದ್ರಾಕ್ಷಾತೋಟದ ಸಾಲುಗಿಡಗಳನ್ನು ಹಾಳುಮಾಡಿ. ಆದರೆ ಅದನ್ನು ನಿರ್ಮೂಲಮಾಡಬೇಡಿ. ಅದರ ರೆಂಬೆಗಳನ್ನು ಕಿತ್ತುಹಾಕಿ. ಅವು ಸರ್ವೇಶ್ವರನಾದ ನನಗೆ ಸೇರಿದವುಗಳಲ್ಲ.೧೧ [11]ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ನನಗೆ ಬಹಳವಾಗಿ ದ್ರೋಹವೆಸಗಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.”೧೨ [12]ಆ ಜನರು ಸರ್ವೇಶ್ವರ ಸ್ವಾಮಿಯನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ.೧೩ [13]ಪ್ರವಾದಿಗಳು ಆಡುವುದೆಲ್ಲ ಬರೀ ಗಾಳಿಮಾತುಗಳು. ದೈವೋಕ್ತಿಯೆಂಬುದು ಅವುಗಳಲ್ಲಿ ಇಲ್ಲ. ಅವರಿಗೇ ತಗಲಲಿ ಅವರು ಹೇಳುವುದೆಲ್ಲ,” ಎಂದುಕೊಂಡಿದ್ದಾರೆ.೧೪ [14]ಆದುದರಿಂದ ಸೇನಾಧೀಶ್ವರ ಸರ್ವೇಶ್ವರ ಆದ ದೇವರು ಯೆರೆಮೀಯನಿಗೆ ಹೀಗೆಂದರು: “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು; ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು; ಆ ಬೆಂಕಿ ಅವರನ್ನು ಸುಟ್ಟುಹಾಕುವುದು.೧೫ [15]ಇಸ್ರಯೇಲ್ ವಂಶವೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಗಮನದಿಂದ ಕೇಳು: “ನಾನು ಒಂದು ರಾಷ್ಟ್ರವನ್ನು ದೂರದಿಂದ ನಿನ್ನ ವಿರುದ್ಧ ಬರಮಾಡುವೆನು. ಅದು ಪ್ರಾಚೀನ ಹಾಗೂ ಪ್ರಬಲ ರಾಷ್ಟ್ರ. ಅದರ ಭಾಷೆ ನಿನಗೆ ತಿಳಿಯದು. ಅದು ಆಡುವ ಮಾತು ನಿನಗೆ ಅರ್ಥವಾಗದು.೧೬ [16]ಅದರ ಬತ್ತಳಿಕೆ ಬಾಯ್ದೆರೆದ ಗೋರಿ; ಅದರ ಯೋಧರೆಲ್ಲರು ಶೂರರು,೧೭ [17]ಅವರು ನಿನ್ನ ದವಸಧಾನ್ಯಗಳನ್ನು ತಿಂದುಬಿಡುವರು. ನಿನ್ನ ಗಂಡುಹೆಣ್ಣುಮಕ್ಕಳನ್ನು ಕೊಲ್ಲುವರು. ನಿನ್ನ ದನಕುರಿಗಳನ್ನು ಕಬಳಿಸಿಬಿಡುವರು. ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ಹಾಳುಮಾಡುವರು. ನೀನು ನಂಬಿಕೊಂಡಿರುವ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಸ್ತ್ರಗಳಿಂದ ಹಾಳುಮಾಡುವರು.೧೮ [18]“ಆದರೂ ಆ ದಿನಗಳಲ್ಲಿ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.೧೯ [19]‘ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ ಇವುಗಳನ್ನೆಲ್ಲ ನಮಗೇಕೆ ಮಾಡಿದ್ದಾರೆ?’ ಎಂದು ಕೇಳುವಾಗ ನೀನು ಅವರಿಗೆ, ‘ನೀವು ಸರ್ವೇಶ್ವರನನ್ನೇ ತೊರೆದು, ಸ್ವಂತನಾಡಿನಲ್ಲೆ ಅನ್ಯದೇವತೆಗಳಿಗೆ ಸೇವೆಸಲ್ಲಿಸಿದ್ದೀರಿ. ಅಂತೆಯೇ ಹೊರನಾಡಿನಲ್ಲಿ ಅನ್ಯರಿಗೆ ಸೇವೆಮಾಡುವಿರಿ’ ಎಂದು ಹೇಳು.”೨೦ [20]ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಯಕೋಬ ಮನೆತನಕ್ಕೆ ಇದನ್ನು ಸಾರಿರಿ, ಜುದೇಯದಲ್ಲಿ ಹೀಗೆ ಪ್ರಕಟಿಸಿರಿ:೨೧ [21]ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;೨೨ [22]ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.೨೩ [23]ನೀವಾದರೋ ನನ್ನ ಅಧೀನದಿಂದ ತಪ್ಪಿಸಿಕೊಂಡು ಎದುರಿಬೀಳುವ ಹೃದಯವುಳ್ಳವರಾಗಿ ಇದ್ದೀರಿ. ಹದ್ದುಮೀರಿ ನನ್ನನ್ನು ಬಿಟ್ಟುಹೋಗಿ ಇದ್ದೀರಿ.೨೪ [24]ಮುಂಗಾರು, ಹಿಂಗಾರು ಹೀಗೆ ಸಕಾಲದ ಮಳೆಯನ್ನು ಬರಮಾಡುವವನು ನಾನು. ಸುಗ್ಗಿಯ ಕ್ಲುಪ್ತವಾರಗಳನ್ನು ಪ್ರತ್ಯೇಕಿಸುವವನು ನಾನು. ಆದರೆ ನೀವು ನನ್ನಲ್ಲಿ ಭಯಭಕ್ತಿ ಇಡಲು ಮನದಲ್ಲಿ ನೆನೆಯದೆ ಇದ್ದೀರಿ.೨೫ [25]ನಿಮ್ಮ ಅಪರಾಧಗಳು ಈ ಪ್ರಯೋಜನಗಳನ್ನು ತಡೆಗಟ್ಟಿವೆ. ನಿಮ್ಮ ಪಾಪಗಳು, ಈ ಒಳಿತು ನಿಮಗೆ ಸಿಗದಂತೆ ತಪ್ಪಿಸಿವೆ.೨೬ [26]“ನನ್ನ ಜನರ ನಡುವೆ ಕೆಟ್ಟವರು ಕಂಡುಬಂದಿದ್ದಾರೆ. ಬೇಡರು ಹೊಂಚುಹಾಕುವ ಹಾಗೆ ಅವರು ಹೊಂಚುಹಾಕುತ್ತಾರೆ. ಬೋನೊಡ್ಡಿ ಜನರನ್ನು ಹಿಡಿಯುತ್ತಾರೆ.೨೭ [27]ಪಂಜರಗಳಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸ ವಂಚನೆಯಿಂದ ಬಂದ ಆದಾಯಗಳು ತುಂಬಿವೆ. ಇದರಿಂದ ದೊಡ್ಡ ಹಣವಂತರಾಗಿ ಇದ್ದಾರೆ.೨೮ [28]ಕೊಬ್ಬಿ ಮೆರೆಯುತ್ತಿದ್ದಾರೆ. ಕೆಟ್ಟ ಕಾರ್ಯಗಳಲ್ಲಂತೂ ನಿಸ್ಸೀಮರಾಗಿದ್ದಾರೆ. ಅನಾಥರ ಏಳಿಗೆಗಾಗಿ ಅವರ ಪಕ್ಷ ಹಿಡಿದು ವಾದಿಸುವುದಿಲ್ಲ. ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸುವುದಿಲ್ಲ.೨೯ [29]“ನಾನು ಇವುಗಳಿಗಾಗಿ ಇವರನ್ನು ದುಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪ ತೀರಿಸದೆ ಇರುವೆನೋ? ಇದು ಸರ್ವೇಶ್ವರನಾದ ನನ್ನ ನುಡಿ.೩೦ [30]ಭೀಕರವಾದ ಹಾಗೂ ಅಸಹ್ಯವಾದ ಘಟನೆಗಳು ನಾಡಿನಲ್ಲಿ ನಡೆದುಬಂದಿವೆ.೩೧ [31]ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆರೆಮೀಯನ ಗ್ರಂಥ ೫ 00:00:00 00:00:00 0.5x 2.0x https://beblia.bible:81/BibleAudio/kannadakncl/jeremiah/005.mp3 52 5