× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೧೭ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೧೭ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ:೨ [2]“ನರಪುತ್ರನೇ, ನೀನು ಇಸ್ರಯೇಲ್ ವಂಶದವರಿಗೆ ಈ ಸಾಮತಿಯನ್ನು ಒಗಟಾಗಿ ಹೇಳು -೩ [3]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಗಲ ಹಾಗು ಉದ್ದವಾದ ರೆಕ್ಕೆಗಳುಳ್ಳ ವಿವಿಧ ವರ್ಣದ ಗರಿಗಳಿಂದ ಕೂಡಿದ ದೊಡ್ಡ ಹದ್ದೊಂದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ತುದಿಯ ರೆಂಬೆಯನ್ನು ಕಿತ್ತಿತು;೪ [4]ತುಟ್ಟತುದಿಯ ಚಿಗುರುಗಳನ್ನು ಕಚ್ಚಿ ವಾಣಿಜ್ಯ ದೇಶಕ್ಕೆ ತೆಗೆದುಕೊಂಡುಹೋಗಿ ಬಹುಮಂದಿ ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು.೫ [5]ಆಮೇಲೆ ಅದು ಆ ದೇವದಾರು ಇದ್ದ ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂಮಿಯಲ್ಲಿ ನೆಟ್ಟು ನೀರವಂಜಿಯ ಹಾಗೆ ಬೆಳೆಸಿತು.೬ [6]ಅದು ಗುಜ್ಜಾಗಿ ಬೆಳೆದು ದ್ರಾಕ್ಷಾಲತೆಯಾಗಿ ವಿಶಾಲವಾಗಿ ಹರಡಿಕೊಂಡು, ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ, ಅದರ ಕೆಳಗೂ ಬೇರು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು.೭ [7]“ಆದರೆ ಅಗಲವಾದ ರೆಕ್ಕೆಗಳುಳ್ಳ ಗರಿತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆ ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.೮ [8]ಅದು ಸೊಂಪಾದ ಲತೆಯಾಗಿ ರೆಂಬೆಗಳನ್ನು ಹರಡಿಸಿ, ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.”೯ [9]“ಈ ಮಾತನ್ನು ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅದು ಯಾವಾಗಲು ಸಮೃದ್ಧವಾಗಿಯೆ ಇರುವುದೇ? ಅದನ್ನು ನಾಟಿದ ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಫಲವನ್ನು ಕಡಿದುಬಿಡುವುದು. ಆಗ ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದನ್ನು ಬೇರುಸಹಿತ ಕೀಳಲು ಹೆಚ್ಚು ಬಲಬೇಕಾಗಿಲ್ಲ, ಬಹುಜನರ ಅಗತ್ಯವಿಲ್ಲ೧೦ [10]ನಾಟಿಕೊಂಡಿದ್ದ ಆ ಲತೆ ಸಮೃದ್ಧವಾಗಿಯೇ ಇರುವುದೇ? ಮೂಡಣಗಾಳಿ ಬಡಿಯುವಾಗ ಅದು ಖಂಡಿತವಾಗಿ ಬಾಡುವುದಲ್ಲವೆ? ಬೆಳೆದ ಪಾತಿಯಲ್ಲಿಯೇ ಅದು ಒಣಗಿಹೋಗುವುದಲ್ಲವೆ?”೧೧ [11]ಸರ್ವೇಶ್ವರ ದಯಪಾಲಿಸಿದ ಇನ್ನೊಂದು ವಾಣಿ:೧೨ [12]“ದ್ರೋಹಿವಂಶದ ಈ ಜನರಿಗೆ ಹೀಗೆ ಹೇಳು - ಇದರ ಅರ್ಥ ನಿಮಗೆ ತಿಳಿಯಲಿ; ಇಗೋ, ಬಾಬಿಲೋನಿನ ಅರಸನು ಜೆರುಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದ;೧೩ [13]ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಪ್ಪಂದಮಾಡಿ ಅವನಿಂದ ಆಣೆಯಿಡಿಸಿದ.೧೪ [14]ಅವನ ರಾಜ್ಯ ಏಳಿಗೆಗೆ ಬಾರದೆ ಗುಜ್ಜಾಗಿದ್ದು ಒಪ್ಪಂದಕ್ಕೆ ಬದ್ಧವಾಗಿರುವುದರಿಂದಲೇ ಅದು ನಿಲ್ಲದೆಂದು ಆ ದೇಶದ ಬಲಿಷ್ಠರನ್ನು ಗಡೀಪಾರುಮಾಡಿದ.೧೫ [15]ಆದರೆ ಅವನು ಬಾಬಿಲೋನಿನ ಅರಸನ ವಿರುದ್ಧ ದಂಗೆಯೆದ್ದು ಕುದುರೆಗಳನ್ನೂ ಬಹುಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಈಜಿಪ್ಟಿಗೆ ರಾಯಭಾರಿಗಳನ್ನು ಕಳುಹಿಸಿದ. ಆದರೂ ಇವನು ಗೆಲ್ಲುವನೇ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೇ? ಒಪ್ಪಂದವನ್ನು ಮೀರಿದವನು ತಪ್ಪಿಸಿಕೊಂಡಾನೇ?೧೬ [16]“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇಮಕಗೊಂಡನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಪ್ಪಂದವನ್ನು ಮೀರಿದನೋ, ಆ ಅರಸನ ಬಳಿಯಲ್ಲೆ, ಅಂದರೆ ಬಾಬಿಲೋನೆಂಬ ಅವನ ವಾಸಸ್ಥಾನದಲ್ಲೆ, ಇವನು ಸಾಯುವುದು ಖಂಡಿತ.೧೭ [17]ಫರೋಹನೂ ಅವನ ಮಹಾಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹುಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಬುರುಜುಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗದು.೧೮ [18]ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಪ್ಪಂದವನ್ನೂ ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಭಾಷೆಮಾಡಿ ಪ್ರಯೋಜನವೇನು? ಅದನ್ನೆಲ್ಲಾ ಮುರಿದುಬಿಟ್ಟನಲ್ಲವೇ? ಇವನು ನನ್ನಿಂದ ಪಾರಾಗನು.೧೯ [19]“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಯ ಮೇಲೆ ಹೊರಿಸುವೆನು.೨೦ [20]ನಾನು ಅವನಿಗೆ ನನ್ನ ಬಲೆಯೊಡ್ಡುವೆನು; ನಾನು ಹಾಕಿದ ಉರುಳಿನಲ್ಲಿ ಸಿಕ್ಕಿಬೀಳುವನು. ಅವನನ್ನು ಬಾಬಿಲೋನಿಗೆ ತಂದು, ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.೨೧ [21]ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲ ಕಡೆಯ ಗಾಳಿಗೆ ತೂರಿಬಿಡುವೆನು; ಈ ಮಾತನ್ನು ಆಡಿದವನು ಸರ್ವೇಶ್ವರನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”೨೨ [22]ಸರ್ವೇಶ್ವರನಾದ ದೇವರ ವಾಣಿಯಿದು; ನಾನೇ ನೆಡುವೆನು ರೆಂಬೆಯೊಂದನು ಎತ್ತರದ ದೇವದಾರು ಮರದ ಮೇಲಿಂದ ತಂದು ತುಟ್ಟತುದಿಯ ಚಿಗುರುಗಳಲ್ಲೊಂದನ್ನು ತಂದು ಅತಿ ಕೋಮಲವಾದುದನ್ನು ಚಿವುಟಿ ತಂದು, ನೆಡುವೆನದನು ಉನ್ನತೋನ್ನತವಾದ ಪರ್ವತದಲ್ಲಿ.೨೩ [23]ಹೌದು, ನೆಡುವೆನು ಇಸ್ರಯೇಲಿನಾ ಪರ್ವತಾಗ್ರದಲ್ಲಿ. ಆಗುವುದದು ಸೊಂಪಾದ ದೇವದಾರು ಮರ, ರೆಂಬೆಗಳನದು ಹರಡಿಕೊಂಡು ಕೊಡುವುದು ಫಲ. ಸಕಲವಿಧ ಪಕ್ಷಿಗಳು ವಾಸಿಸುವುವು ಅದರಲ್ಲಿ.೨೪ [24]ಆಶ್ರಯ ಪಡೆವುವು ಅದರ ರೆಂಬೆಗಳ ನೆರಳಲಿ, ಆಗ ತಿಳಿವುವು ವನದ ವೃಕ್ಷಗಳು: ಎತ್ತರವಾದ ಮರಗಳ ತಗ್ಗಿಸುವವನು ತಗ್ಗಾದುದನು ಎತ್ತರಪಡಿಸುವವನು ಹಸುರಾದುದನು ಒಣಗಿಸುವವನು ಒಣಗಿದುದನು ಚಿಗುರಿಸುವವನು ಸರ್ವೇಶ್ವರ ನಾನೇ ಎಂದು ಇದ ನುಡಿದವ ನಾನು, ನುಡಿದುದನು ನಡೆಸುವವ ನಾನು.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೧೭ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/017.mp3 48 17