× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ KSB ೨೦೨೨IRV ೨೦೧೯BSIJV ೨೦೧೬KNCL ೨೦೧೬BSI ೨೦೧೬ERV ೨೦೦೭1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೨೧ ಟಿಪ್ಪಣಿಗಳನ್ನು ಉಳಿಸಿ ೧ [1]ಸರ್ವೇಶ್ವರ ನನಗೆ ಈ ವಾಣಿಯನ್ನು ದಯಪಾಲಿಸಿದರು -೨ [2]“ನರಪುತ್ರನೇ, ನೀನು ಜೆರುಸಲೇಮಿಗೆ ಅಭಿಮುಖನಾಗಿ, ಅಲ್ಲಿನ ಪವಿತ್ರಸ್ಥಳಗಳ ಕಡೆಗೆ ಮಾತಾಡುತ್ತಾ, ಇಸ್ರಯೇಲ್ ನಾಡಿನ ಪ್ರಸ್ತಾಪವನ್ನೆತ್ತಿ ಆ ನಾಡಿಗೆ ಹೀಗೆ ಪ್ರವಾದಿಸು:೩ [3]ಸರ್ವೇಶ್ವರ ಇಂತೆನ್ನುತ್ತಾರೆ - ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಿಬಿಡುವೆನು.೪ [4]ನಾನು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗ ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು;೫ [5]ಆಗ ಸರ್ವೇಶ್ವರನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ ಎಂಬುದು ಎಲ್ಲ ನರಮಾನವರಿಗೂ ತಿಳಿಯುವುದು; ಅದು ಪುನಃ ಒರೆಗೆ ಸೇರದು.೬ [6]ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.೭ [7]‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”೮ [8]ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:೯ [9]“ನರಪುತ್ರನೇ, ಪ್ರವಾದಿಸು ಸರ್ವೇಶ್ವರ ಹೀಗೆನ್ನುತ್ತಾರೆಂದು:೧೦ [10]ಆಹಾ ಖಡ್ಗ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ! ಸಾಣೆ ಹಿಡಿದಿದೆ ಹತಿಸುವಂತೆ, ಮಸೆದಿದೆ ಮಿಂಚುವಂತೆ. ಸಂಭ್ರಮಿಸಲಾದೀತೆ ‘ನಮ್ಮ ಕುಮಾರನ ರಾಜದಂಡ’ ಎಂದು? ಮಿಕ್ಕ ದಂಡಗಳನ್ನೆಲ್ಲ ಧಿಕ್ಕರಿಸುವಂಥ ದಂಡವೆಂದುಕೊಂಡು?೧೧ [11]ಬಳಕೆಗೆ ಸಿದ್ಧವಿರಲೆಂದು ಕೊಡಲಾಗಿದೆ ಆ ಖಡ್ಗ ಮಸೆಯಲಿಕ್ಕೆ ಮಸೆದು, ಸಾಣೆ ಹಿಡಿದು, ಸಜ್ಜಾಗಿದೆ ಅದು ಹತ್ಯಗಾರನ ಹಿಡಿತಕ್ಕೆ.೧೨ [12]ನರಪುತ್ರನೇ, ಕೂಗು, ಗೋಳಾಡು, ಬಡಿದುಕೋ ಎದೆ! ಎರಗಿದೆ ಆ ಖಡ್ಗ ನನ್ನ ಜನರ ಮೇಲೆ ಇಸ್ರಯೇಲಿನ ಅರಸರೆಲ್ಲರ ಮೇಲೆ ತುತ್ತಾಗುವರು ಅದಕ್ಕೆ ಜನನಾಯಕರು ಜನರೊಂದಿಗೆ.೧೩ [13]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಸಂಭವಿಸಿದೆ ಪರಿಶೋಧನೆ ಏನು ಗತಿ, ರಾಜದಂಡವೇ ನಾಶವಾದರೆ!೧೪ [14]ನರಪುತ್ರನೇ, ಪ್ರವಾದಿಸು, ಚಪ್ಪಾಳೆ ಬಡಿ, ಹತಿಸುವುದಾ ಖಡ್ಗ ಇಮ್ಮಡಿ ಮುಮ್ಮಡಿ. ಪ್ರಜೆಯನ್ನು ಸಂಹರಿಸುವುದಾ ಖಡ್ಗ ಅಧಿಪತಿಯನ್ನೇ ಸುತ್ತಲು ಬೀಸಿ ಹತಿಸುವುದಾ ಖಡ್ಗ.೧೫ [15]ನೀರಾಗುವುದು ಜನರ ಹೃದಯ, ಎಡವಿ ಬೀಳುವರು ಬಹುಜನ. ಪುರದ್ವಾರಗಳಿಗೇ ತಂದಿರುವೆನು ಹತಿಸುವಾ ಖಡ್ಗವ. ಮಿನುಗುತಿಹುದದು ಮಿಂಚಿನಂತೆ ಹರಿತವಿದೆ ವಧೆಗಾಗುವ ಕತ್ತಿಯಂತೆ.೧೬ [16]ಖಡ್ಗವೇ, ಏಕಾಗ್ರವಾಗಿ ಹೋಗು ಬಲಕೆ ಸಜ್ಜಾಗಿ ಸಾಗು ಎಡಕೆ ಹೊರಡು ನಿನ್ನ ಮುಖವಿದ್ದ ಕಡೆಗೆ.೧೭ [17]ನಾನೂ ರೋಷ ತೀರಿಸಿಕೊಳ್ವೆ ಚಪ್ಪಾಳೆ ತಟ್ಟಿ ಇದು ಸರ್ವೇಶ್ವರನಾದ ನನ್ನ ನುಡಿ.”೧೮ [18]ಸರ್ವೇಶ್ವರ ನನಗೆ ಮತ್ತೊಂದು ವಾಣಿಯನ್ನು ದಯಪಾಲಿಸಿದರು - “ನರಪುತ್ರನೇ,೧೯ [19]ಬಾಬಿಲೋನಿನ ಅರಸನ ಖಡ್ಗ ಬರುವುದಕ್ಕೆ ಎರಡು ದಾರಿಗಳುಳ್ಳ ನಕ್ಷೆಯನ್ನು ಬರೆ; ಅವೆರಡು ದಾರಿಗಳು ಒಂದೇ ದೇಶದಿಂದ ಹೊರಟಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.೨೦ [20]ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ ಜುದೇಯದಲ್ಲಿ ಕೋಟೆಕೊತ್ತಲಗಳಿಂದ ಕೂಡಿದ ಜೆರುಸಲೇಮಿಗೂ ಆ ಖಡ್ಗ ಬರುವುದಕ್ಕೆ ದಾರಿಗಳನ್ನು ಮಾಡು.೨೧ [21]ಮಾರ್ಗ ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಪ್ರಾರಂಭದಲ್ಲಿ ಬಾಬಿಲೋನಿನ ಅರಸ ಶಕುನ ನೋಡಲು ನಿಂತಿರುವನು. ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆ ಕೇಳಿ, ಹಸ್ತರೇಖೆಯನ್ನು ಪರೀಕ್ಷಿಸಿದ್ದಾನೆ.೨೨ [22]ಜೆರುಸಲೇಮ್ ಗುರುತಿನ ಬಾಣ ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ಬಾಯಿತೆರೆದು ಸಂಹಾರ ಧ್ವನಿಮಾಡಿ, ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ದಿಬ್ಬಹಾಕಿ, ಒಡ್ಡು ಕಟ್ಟಬೇಕೆಂಬ ಸೂಚನೆ ಅದರಿಂದ ಬಂದಿತು.೨೩ [23]ಆದರೆ ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸೆಯಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವರು ತನ್ನ ಕೈಗೆ ಸಿಕ್ಕಿಬೀಳಲೆಂದು ಅವರ ಅಧರ್ಮವನ್ನು ಅವನು ಬೆಳಕಿಗೆ ತರುವನು.೨೪ [24]ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಿಮ್ಮ ಅಪರಾಧಗಳು ಬೆಳಕಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ಪ್ರತ್ಯಕ್ಷವಾಗಿ, ನೀವು ನಿಮ್ಮ ಅಧರ್ಮವನ್ನು ನನ್ನ ನೆನಪಿಗೆ ತಂದಿರುವಿರಿ; ಆದಕಾರಣ ಶತ್ರುವಿನ ಕೈಗೆ ಸಿಕ್ಕಿಬೀಳುವಿರಿ.೨೫ [25]ಇಸ್ರಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ, ನಿನಗೆ ಸಮಯವು ಸಮೀಪಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.೨೬ [26]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿನ್ನ ರುಮಾಲನ್ನು ಕಿತ್ತುಬಿಡು, ಕಿರೀಟವನ್ನು ತೆಗೆದುಹಾಕು. ಎಲ್ಲವೂ ಮೊದಲಿದ್ದ ಹಾಗೆ ಇರುವುದಿಲ್ಲ; ಕೆಳಗಿರುವುದನ್ನು ಮೇಲೆ ಸೇರಿಸಲಾಗುವುದು, ಮೇಲಿರುವುದನ್ನು ಕೆಳಕ್ಕಿಳಿಸಲಾಗುವುದು.೨೭ [27]ಧ್ವಂಸ, ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.೨೮ [28]“ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲೂ ಅವರು ಮಾಡುವ ದೂಷಣೆಯ ವಿಷಯದಲ್ಲೂ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ಖಡ್ಗ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ; ಮಿಂಚುವಂತೆ ಪೂರ್ಣ ಮಸೆಯಲಾಗಿದೆ.೨೯ [29]ಅಮ್ಮೋನೇ, ನಿನ್ನ ಜೋಯಿಸರು ಮಿಥ್ಯೆಯನ್ನು ಕಲ್ಪಿಸಿಕೊಂಡು ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಸಮೀಪಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು; ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಬೀಳುವೆ.೩೦ [30]ಕತ್ತಿಯನ್ನು ಒರೆಗೆ ಸೇರಿಸು. ನೀನು ಹುಟ್ಟಿದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ, ನಿನಗೆ ನ್ಯಾಯತೀರಿಸುವೆನು.೩೧ [31]ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಕಾರಿ, ಕ್ರೂರಿಗಳನ್ನು ಹಾಳುಮಾಡುವುದರಲ್ಲಿ ಗಟ್ಟಿಗರಾದವರ ಕೈಗೆ ಸಿಕ್ಕಿಸುವೆನು.೩೨ [32]ನೀನು ಅಗ್ನಿಗೆ ಆಹುತಿಯಾಗುವೆ; ನೀನು ರಕ್ತ ನಾಡಿನಲ್ಲೆಲ್ಲಾ ಇಂಗಿರುವುದು; ನೀನು ಇನ್ನು ನೆನಪಿಗೆ ಬರುವುದಿಲ್ಲ; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.”Kannada Bible (KNCL) 2016 No Data ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೨೧ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/021.mp3 48 21