× ಭಾಷೆ ಯುರೋಪ್ ರಷ್ಯನ್ ಬೆಲರೂಸಿಯನ್ ಉಕ್ರೇನಿಯನ್ ಪೋಲಿಷ್ ಸರ್ಬಿಯನ್ ಬಲ್ಗೇರಿಯನ್ ಸ್ಲೋವಾಕಿಯನ್ ಜೆಕ್ ರೊಮೇನಿಯನ್ ಮೊಲ್ಡೋವಿಯನ್ ಅಜೆರ್ಬೈಜಾನ್ ಅರ್ಮೇನಿಯನ್ ಜಾರ್ಜಿಯನ್ ಅಲ್ಬೇನಿಯನ್ ಅವರ್ ಬಾಷ್ಕೀರ್ ಟಾಟರ್ ಚೆಚೆನ್ ಸ್ಲೋವೇನಿಯನ್ ಕ್ರೊಯೇಷಿಯನ್ ಎಸ್ಟೋನಿಯನ್ ಲಟ್ವಿಯನ್ ಲಿಥುವೇನಿಯನ್ ಹಂಗೇರಿಯನ್ ಫಿನ್ನಿಶ್ ನಾರ್ವೇಜಿಯನ್ ಸ್ವೀಡಿಷ್ ಐಸ್ಲ್ಯಾಂಡಿಕ್ ಗ್ರೀಕ್ ಮೆಸಿಡೋನಿಯನ್ ಜರ್ಮನ್ ಬವೇರಿಯನ್ ಡಚ್ ಡ್ಯಾನಿಶ್ ವೆಲ್ಷ್ ಗೇಲಿಕ್ ಐರಿಶ್ ಫ್ರೆಂಚ್ ಬಾಸ್ಕ್ ಕೆಟಲಾನ್ ಇಟಾಲಿಯನ್ ಗೆಲಾಸಿಯನ್ ರೋಮಾನಿ Bosnian Kabardian ಉತ್ತರ ಅಮೆರಿಕ ಇಂಗ್ಲಿಷ್ ದಕ್ಷಿಣ ಅಮೇರಿಕ ಸ್ಪ್ಯಾನಿಶ್ ಪೋರ್ಚುಗೀಸ್ ಗೌರಾನಿ ಕ್ವಿಚುವಾನ್ ಅಯ್ಮಾರಾ ಮಧ್ಯ ಅಮೇರಿಕಾ ಜಮೈಕಾದ ನಹುವಲ್ ಕೀಚಿ ಕ್ಯೆಕ್ಚಿ ಹೈಟಿ ಪೂರ್ವ ಏಷ್ಯಾ ಚೀನೀ ಜಪಾನೀಸ್ ಕೊರಿಯನ್ ಮಂಗೋಲಿಯನ್ ಉಯಿಘರ್ ಮಾಂಗ್ Tibetian ಆಗ್ನೇಯ ಏಷ್ಯಾ ಮಲೇಷಿಯನ್ ಬರ್ಮೀಸ್ ಗದ್ದ ನೇಪಾಳಿ ಸೆಬುವಾನೋ ಟ್ಯಾಗಲಾಗ್ ಕಾಂಬೋಡಿಯನ್ ಥಾಯ್ ಇಂಡೋನೇಷಿಯನ್ ವಿಯೆಟ್ನಾಮೀಸ್ ಜಾವಾನೀಸ್ ಲಾವೋ ಇಬಾನ್ ಐಯು ಮಿಯೆನ್ ಕಚಿನ್ ಲಾಹು Aceh Balinese Bugis Pampanga Sasak Shan Waray ದಕ್ಷಿಣ ಏಷ್ಯಾ ಹಿಂದಿ ಒಡಿಯಾ ಅವಧಿ ಮಿಜೊ ಕನ್ನಡ ಮಲಯಾಳಂ ಮರಾಠಿ ಗುಜರಾತಿ ತಮಿಳು ತೆಲುಗು ಪಂಜಾಬಿ ಕುರುಖ್ ಅಸ್ಸಾಮೀಸ್ ಮೈಥಿಲಿ ಬೆಂಗಾಲಿ ಉರ್ದು ಸಿಂಹಳ ಡೋಗ್ರಿ ಹರ್ಯಾನ್ವಿ ಮೈತೇಯಿ ಕೊಂಕಣಿ ಸಂತಾಲಿ ಸಿಂಧಿ ಕೋಯಾ ಥಾಡೋ ಸಂಸ್ಕೃತ ದೇವನಾಗರಿ Adilabad Gondi Ahirani ಬಲೂಚಿ Bundeli Chhattisgarhi Garhwali Kangri Kumaoni Mewari Munda Sadri Seraiki Shekhawati Sylheti Bagri Bhilali Bodo Braj Tulu ಮಧ್ಯ ಏಷ್ಯಾ ಕಿರ್ಗಿಜ್ ಉಜ್ಬೆಕ್ ತಾಜಿಕ್ ತುರ್ಕಮೆನ್ ಕಝಾಕಿಸ್ತಾನ್ ಕಾರಕಲ್ಪಕ್ ಮಧ್ಯ ಪೂರ್ವ ಟರ್ಕಿಶ್ ಹೀಬ್ರೂ ಅರೇಬಿಕ್ ಪರ್ಷಿಯನ್ ಕುರ್ದಿಶ್ Mazanderani ಪಾಷ್ಟೋ ಕಾಪ್ಟಿಕ್ ಆಫ್ರಿಕಾ ಆಫ್ರಿಕಾನ್ಸ್ ಷೋಸಾ ಜುಲು ಎನ್ಡೆಬೆಲೆ ಸೋಥೋ ಅಂಹರಿಕ್ ವಲಾಯಟ್ಟಾ ನೈಜೀರಿಯನ್ ಮೊಸ್ಸಿ ಇಕಾ ಡಿಂಕಾ ಕಬೈಲ್ ಎವ್ ಸ್ವಾಹಿಲಿ ಮೊರಾಕೊ ಸೊಮಾಲಿಯನ್ ಶೋನಾ ಮಡಗಾಸ್ಕರ್ ಇಗ್ಬೊ ಲಿಂಗಲ ಬೌಲೆ ಸಿಸ್ವತಿ ಸೋಂಗಾ ತ್ವಾನಾ ಗ್ಯಾಂಬಿಯಾ ಯೊರುಬಾ ಕಂಬಾ ಕಿನ್ಯಾರ್ವಾಂಡಾ ಹೌಸಾ ಚೆವಾ ಲುವೋ ಮಕುವಾ ಡ್ಯುಲಾ ಫುಲ್ಫುಲ್ಡೆ ಕಲೆಂಜಿನ್ ಕಿಕುಯು ಕಿಕ್ವಾಂಗೋ ಕಿರುಂಡಿ ಕ್ರಿಯೋ ನೈಜೀರಿಯನ್ ಪಿಡ್ಜಿನ್ ಒರೊಮೊ ಟಿಶಿಲುಬಾ ತ್ಶಿವೆಂದಾ ಟ್ವಿ ಉಂಬುಂಡು ಲುಗ್ಬಾರಾ ಲುಗುರು ಪ್ಯುಲರ್ ಗುಸ್ಸಿ ಮಾಸಾಯಿ ತುರ್ಕಾನಾ ಮೊಬಾ ನ್ಯೂಯರ್ ಶಿಲುಕ್ ತಮಾಷೆಕ್ ಮಕೊಂಡೆ Bemba Fon Hadiyya Ibibio Kimbundu Kimiiru Lango Liberian Kreyol Lomwe Mende Morisyen Ndau Nyankole Sena Sidamo Soga Songe Sukuma Tarifit Teso Tiv Zande Dagbani Edo Kituba ಆಸ್ಟ್ರೇಲಿಯಾ ಖಂಡ ನ್ಯೂಜಿಲ್ಯಾಂಡ್ ಪಪುವಾ ನ್ಯೂ ಗಿನಿಯಾ ಹಳೆಯ ಭಾಷೆಗಳು ಅರಾಮಿಕ್ ಲ್ಯಾಟಿನ್ ಎಸ್ಪೆರಾಂಟೊ 1 1 1 KNCL ೨೦೧೬ [2016] ಕನ್ನಡ ಸಮಕಾಲಿಕ ೨೦೨೨ [2022]ಇಂಡಿಯನ್ ರಿವೈಜ್ಡ್ ೨೦೧೯ [2019]ಕನ್ನಡ ಸತ್ಯವೇದವು ೨೦೧೬ [2016]KNCL ೨೦೧೬ [2016]BSI ೨೦೧೬ [2016]ಪರಿಶುದ್ದ ಬೈಬಲ್ ೧೯೯೭ [1997]1 1 1 ಯೆಜೆಕಿಯೇಲನ ಆದಿಕಾಂಡವಿಮೋಚನಾಕಾಂಡಯಾಜಕಕಾಂಡಸಂಖ್ಯಾಕಾಂಡಧರ್ಮೋಪದೇಷಕಾಂಡಯೊಹೋಶುವನ್ಯಾಯಸ್ಥಾಪಕರುರೂತಳುಸಮುವೇಲನು ೧ಸಮುವೇಲನು ೨ಅರಸುಗಳು ೧ಅರಸುಗಳು ೨ಕ್ರಾನಿಕಲ್ಸ್ ೧ಕ್ರಾನಿಕಲ್ಸ್ ೨ಎಜ್ರನುನೆಹೆಮೀಯಾಎಸ್ತೆರಳುಯೋಬನಕೀರ್ತನೆಗಳುಜ್ಞಾನೋಕ್ತಿಗಳುಉಪದೇಷಕಪರಮಗೀತೆಯೆಶಾಯನಯೆರೆಮೀಯನ ಗ್ರಂಥಪ್ರಲಾಪಗಳುಯೆಜೆಕಿಯೇಲನದಾನಿಯೇಲನಹೊಶೇಯನಯೊವೇಲನಆಮೋಸನಓಬದ್ಯನಯೋನನಮೀಕನನಹೂಮನಹಬಕ್ಕೂಕನಜೆಫನ್ಯನಹಗ್ಗಾಯನಜೆಕರ್ಯನಮಲಾಕಿಯನ--- --- ---ಮತ್ತಾಯನುಮಾರ್ಕನುಲೂಕನುಯೊವಾನ್ನನುಪ್ರೇಷಿತರರೋಮನರಿಗೆಕೊರಿಂಥಿಯರಿಗೆ ೧ಕೊರಿಂಥಿಯರಿಗೆ ೨ಗಲಾತ್ಯರಿಗೆಎಫೆಸಿಯರಿಗೆಫಿಲಿಪಿಯರಿಗೆಕೊಲೊಸ್ಸೆಯರಿಗೆಥೆಸೆಲೋನಿಯರಿಗೆ ೧ಥೆಸೆಲೋನಿಯರಿಗೆ ೨ತಿಮೊಥೇಯನಿಗ ೧ತಿಮೊಥೇಯನಿಗ ೨ತೀತನಿಗೆಫಿಲೆಮೋನನಿಗೆಹಿಬ್ರಿಯರಿಗೆಯಕೋಬನುಪೇತ್ರನು ೧ಪೇತ್ರನು ೨ಯೊವಾನ್ನನು ೧ಯೊವಾನ್ನನು ೨ಯೊವಾನ್ನನು ಮೂರುಯೂದನುಪ್ರಕಟನೆ1 1 1 ೨೪ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭೨೮೨೯೩೦೩೧೩೨೩೩೩೪೩೫೩೬೩೭೩೮೩೯೪೦೪೧೪೨೪೩೪೪೪೫೪೬೪೭೪೮1 1 1 : ೧ ೧೨೩೪೫೬೭೮೯೧೦೧೧೧೨೧೩೧೪೧೫೧೬೧೭೧೮೧೯೨೦೨೧೨೨೨೩೨೪೨೫೨೬೨೭1 1 1 ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೨೪ ಟಿಪ್ಪಣಿಗಳನ್ನು ಉಳಿಸಿ ೧ [1]ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವೇಶ್ವರಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು.೨ [2]“ನರಪುತ್ರನೇ, ಈ ದಿನದ ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬಿಲೋನಿನ ಅರಸನು ಜೆರುಸಲೇಮಿಗೆ ಮುತ್ತಿಗೆ ಹಾಕಿದ್ದಾನೆ.೩ [3]ಈ ದ್ರೋಹಿವಂಶಕ್ಕೆ ದೃಷ್ಟಾಂತಕೊಟ್ಟು ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿಸು;೪ [4]ಮಾಂಸಖಂಡಗಳನ್ನು, ತೊಡೆ ಮುಂದೊಡೆ ಮೊದಲಾದ ಒಳ್ಳೆಯ ಖಂಡಗಳನ್ನೆಲ್ಲಾ ಅದರಲ್ಲಿ ಒಟ್ಟಿಗೆ ಹಾಕು, ಉತ್ತಮವಾದ ಎಲುಬುಗಳನ್ನು ಅದರಲ್ಲಿ ತುಂಬಿಸು.೫ [5]ಹಿಂಡಿನಲ್ಲಿ ಶ್ರೇಷ್ಠವಾದುದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳನ್ನು ಅದರಲ್ಲಿ ಬೇಯಿಸು.”೬ [6]ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಆರಿಸಿ, ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು.೭ [7]ಜೆರುಸಲೇಮ್ ನಗರ ಸುರಿಸಿದ ರಕ್ತ ಅದರಲ್ಲೇ ನಿಂತಿದೆ. ಧೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ, ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ.೮ [8]ಆ ರಕ್ತದಿಂದ ರೋಷವೆದ್ದು ಮುಯ್ಯಿಗೆ ಮುಯ್ಯಿ ತೀರಿಸಲೆಂದು, ಅದನ್ನು ನಾನು ಇಂಗಗೊಡಿಸದೆ ಬರೀ ಬಂಡೆಯ ಮೇಲೆ ನಿಲ್ಲಿಸಿದ್ದೇನೆ.೯ [9]ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.೧೦ [10]ತುಂಬಾ ಸೌದೆ ಹಾಕು, ಬೆಂಕಿಯನ್ನುರಿಸು, ಮಾಂಸವನ್ನು ತೀರಾ ಬೇಯಿಸು, ಸಾರನ್ನು ಮಂದಮಾಡು, ಎಲುಬುಗಳು ಬೆಂದುಹೋಗಲಿ.೧೧ [11]ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಣ ಕಲ್ಮಷವು ಕರಗಿ ಕಿಲುಬು ಇಲ್ಲವಾಗುವಂತೆ, ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.೧೨ [12]ಅದು ನನಗೆ ಕೇವಲ ಪ್ರಯಾಸವನ್ನೂ ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ್ದ ಕಿಲುಬು ಹೋಗಲಿಲ್ಲ. ಬೆಂಕಿಯಿಂದಲೂ ನೀಗಲಿಲ್ಲ.೧೩ [13]ಅಂತೆಯೇ ನಿನ್ನ ಲಂಪಟತನ ಅಸಹ್ಯವಾಗಿರುವುದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ಹರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನೂ ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವೆ.೧೪ [14]ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ; ಇದು ನಡೆದೇ ತೀರುವುದು, ನಾನು ನೆರವೇರಿಸುವೆನು; ಹಿಂತೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು; ಇದು ಸರ್ವೇಶ್ವರನಾದ ದೇವರ ನುಡಿ.”೧೫ [15]ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು -೧೬ [16]“ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು. ಆದರೂ ನೀನು ಗೋಳಾಡಬೇಡ, ಅಳಬೇಡ, ಕಣ್ಣೀರು ಸುರಿಸಬೇಡ.೧೭ [17]ಸದ್ದಿಲ್ಲದೆ ಮೊರೆಯಿಡು, ವಿಯೋಗದುಃಖ ತೋರಿಸಬೇಡ. ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”೧೮ [18]“ಹೀಗೆ ಆಜ್ಞೆಯಾಗಲು, ನಾನು ಪ್ರಾತಃಕಾಲದಲ್ಲಿ ಜನರಿಗೆ ಪ್ರವಾದಿಸಿದೆನು; ಸಾಯಂಕಾಲಕ್ಕೆ ನನ್ನ ಪತ್ನಿ ತೀರಿಹೋದಳು; ಮಾರನೆಯ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ನಡೆದುಕೊಂಡೆನು.೧೯ [19]ಜನರು, “ನೀನು ಹೀಗೆ ಮಾಡುವುದರಿಂದ ನಾವು ತಿಳಿಯತಕ್ಕದ್ದೇನು? ತಿಳಿಸುವುದಿಲ್ಲವೋ?’ ಎಂದು ನನ್ನನ್ನು ಕೇಳಿದರು.೨೦ [20]ಅದಕ್ಕೆ ನಾನು ಹೀಗೆ ಹೇಳಿದೆ: “ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದ್ದಾರೆ -೨೧ [21]ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.೨೨ [22]ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ,೨೩ [23]ಗಾರಿಗೆಯನ್ನು ತಿನ್ನದೆ, ರುಮಾಲನ್ನು ಸುತ್ತಿಕೊಂಡು, ಕೆರಗಳನ್ನು ಮೆಟ್ಟಿಕೊಂಡು ಇರುವಿರಿ; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ. ಆದರೆ ನಿಮ್ಮ ಅಧರ್ಮದಿಂದ ಕ್ಷೀಣವಾಗಿ ನರಳುವಿರಿ. ಒಬ್ಬರೆದುರಿಗೆ ಒಬ್ಬರು ನರಳುವಿರಿ.೨೪ [24]ಈ ವಿಷಯದಲ್ಲಿ ಯೆಜೆಕಿಯೇಲನು ನಿಮಗೆ ಮುಂಗುರುತಾಗಿರುವನು. ಅವನು ಮಾಡಿದಂತೆಯೇ ಎಲ್ಲವನ್ನು ಮಾಡುವಿರಿ; ಇದು ಸಂಭವಿಸುವಾಗ ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.೨೫ [25]“ನರಪುತ್ರನೇ, ಅವರಿಗೆ ಬಲಾಧಾರವೂ ನೇತ್ರಾನಂದವೂ ಆದ ಅವರ ಇಷ್ಟು ಸುಂದರ ಆಲಯವನ್ನೂ ಹೃದಯೋಲ್ಲಾಸವಾದ ಅವನ ಗಂಡು ಹೆಣ್ಣುಮಕ್ಕಳನ್ನೂ ನಾನು ನಿರ್ಮೂಲಮಾಡುವ ದಿನದಲ್ಲಿ೨೬ [26]ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದೇ ಬರುವನು. ನಡೆದ ಸಂಗತಿಯನ್ನು ನೀನು ಕಿವಿಯಾರೆ ಕೇಳುವಂತೆ ನಿನಗೆ ತಿಳಿಸುವನು.೨೭ [27]ಆ ದಿನದಲ್ಲಿ ತಪ್ಪಿಸಿಕೊಂಡವನಿಗಾಗಿ ನೀನು ಬಾಯಿಬಿಡುವೆ, ನಿನ್ನ ಮೂಕತನವನ್ನು ಕಳೆದುಕೊಂಡು ಮಾತಾಡುವೆ; ಹೀಗೆ ನೀನು ಅವರಿಗೆ ಗುರುತಾಗುವೆ. ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”Kannada Bible (KNCL) 2016 Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. worldwide ಕನ್ನಡ ಬೈಬಲ್ (KNCL) 2016 ಯೆಜೆಕಿಯೇಲನ ೨೪ 00:00:00 00:00:00 0.5x 2.0x https://beblia.bible:81/BibleAudio/kannadakncl/ezekiel/024.mp3 48 24